Site icon Vistara News

Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

Actor Darshan Police To Serve Notice To sandalwood comedy actor

ಬೆಂಗಳೂರು: ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ (Actor Darshan) ಸೇರ್‌ 19 ಮಂದಿ ಅರೆಸ್ಟ್‌ ಆಗಿದ್ದಾರೆ. ಹಲವರು ಈ ಕೇಸ್‌ನಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಇದೀಗ ವಿಶೇಷ ಎಂದರೆ ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯನಟ ಚಿಕ್ಕಣ್ಣಗೂ ನೋಟಿಸ್​ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ದರ್ಶನ್‌ ಶೆಡ್‌ಗೆ ಹೋಗುವ ಮೊದಲು ವಿನಯ್ ಒಡೆತನದ ಸ್ಟೋನಿಬ್ರೂಕ್ ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಹಾಸ್ಯ ನಟ ಚಿಕ್ಕಣ್ಣ ಹಾಗೂ , ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು ಪಟ್ಟಣಗೆರೆ ಶೆಡ್​ಗೆ. ಪಾರ್ಟಿ ಮುಗಿಸಿ ಬಂದು ಹಲ್ಲೆಗೈದು ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಪಾರ್ಟಿಯಲ್ಲಿ ದರ್ಶನ್ ಜತೆ ಭಾಗಿಯಾದ ಹಿನ್ನೆಲೆಯಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ನೋಟಿಸ್​ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎನ್ನಲಾಗಿದೆ. ನೋಟಿಸ್​ ನೀಡಲು ಅನ್ನಪೂರ್ಣೇಶ್ವರಿನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೊಲೆ ವಿಚಾರವಾಗಿ ಸ್ಟೋನಿಬ್ರೂಕ್ ನಲ್ಲಿ ಏನಾದ್ರು ಚರ್ಚೆಯಾಗಿತ್ತ ಎನ್ನುವ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಹೇಳಲಾಗುತ್ತಿದೆ. ನಾಳೆ ಹಾಜರಾಗುವಂತೆ ಖ್ಯಾತ ಹಾಸ್ಯ ನಟನಿಗೆ ನೊಟೀಸ್ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನಲಾಗಿದೆ. ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗುವ ಕೆಲವೇ ಗಂಟೆ ಮುಂಚಿತವಾಗಿ ನಡೆದಿದ್ದ ಪಾರ್ಟಿ ಇದಾಗಿತ್ತು. ಇಂದು ಸಂಜೆ ವೇಳೆಗೆ ಹಾಸ್ಯನಟನಿಗೆ ನೋಟಿಸ್ ನೀಡಲು ಪೊಲೀಸರ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಇದನ್ನೂ ಓದಿ: Actor Darshan: ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

ಆ ಭಯಾನಕ ಶೆಡ್!‌

ರೇಣುಕಾಸ್ವಾಮಿ ಕೊಲೆಯಾದ ಪಟ್ಟಣಗೆರೆಯ ಆ ಶೆಡ್ ಬಗ್ಗೆ ಇದೀಗ ಇನ್ನಿತರ ಕೆಲವು ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಇಲ್ಲಿ ಅದೆಷ್ಟೋ ಕನ್ನಡ ಚಿತ್ರ ನಿರ್ಮಾಪಕರು ಕೂಡ ಗೂಸಾ ತಿಂದಿದ್ದಾರೆ ಎಂಬುದು ಬಯಲಾಗಿದೆ. ತನಗೆ ಆಗದವರು, ತನ್ನ ವಿರೋಧಿಗಳು ಹಾಗೂ ಪೇಮೆಂಟ್‌ ಮಾಡದ ನಿರ್ಮಾಪಕರನ್ನು ಅಟ್ಯಾಕ್ ಮಾಡಲು ದರ್ಶನ್‌ ಬಳಸುತ್ತಿದ್ದ ಜಾಗವೇ ಈ ಶೆಡ್ ಎನ್ನಲಾಗಿದೆ.

ನಟ ದರ್ಶನ್ ಎಷ್ಟೋ ಮಂದಿಗೆ ಇಲ್ಲೇ ಹಲ್ಲೆ ಮಾಡಿ, 2ರಿಂದ 3 ದಿನಗಳ ಕಾಲ ಇಲ್ಲೇ ಇರಿಸಿಕೊಳ್ಳುತ್ತಿದ್ದ. ಕಳಿಸಿಕೊಡುವಾಗ ಬ್ಯಾಂಡೇಜ್ ಹಾಕಿಸಿ ಕೈಗೆ ಹಣ ಕೊಟ್ಟು ಕಳುಹಿಸುತ್ತಿದ್ದ ಎಂದು ಕೆಲವರು ಇದೀಗ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ. ದರ್ಶನ್‌ ಕಾರು ಇಲ್ಲಿಗೆ ಆಗಾಗ ಬಂದು ಹೋಗುತ್ತಿದ್ದುದನ್ನು ಕೆಲವು ಸ್ಥಳೀಯರು ಗಮನಿಸಿದ್ದಾರೆ. ದರ್ಶನ್‌ಗೆ ಇನ್ನೆಷ್ಟು ಕರಾಳ ಮುಖಗಳಿವೆ ಎಂದು ಪೊಲೀಸರೇ ಇದೀಗ ಬೆಚ್ಚಿ ಬೀಳುವಂತಾಗಿದೆ.

Exit mobile version