Site icon Vistara News

Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

Actor Darshan Rakshak Bullet Not Celebrating His Birthday Due To Darshan Arrest

ಬೆಂಗಳೂರು: : ʻಬಿಗ್‌ಬಾಸ್ʼ ಕನ್ನಡ ಸೀಸನ್‌ 10ರಲ್ಲಿ (BBK SEASON 10) ನಟ ಬುಲೆಟ್‌ ಪ್ರಕಾಶ್‌ ಅವರ ಪುತ್ರ ರಕ್ಷಕ್‌ ಬುಲೆಟ್‌ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಎಲಿಮಿನೇಟ್‌ ಆಗಿಯೂ ಹೊರಬಂದಿದ್ದರು. ಸುದೀಪ್‌ ಬಗ್ಗೆ ಹೇಳಿಕೆಯಿಂದಾಗಿ ಟ್ರೋಲ್‌ ಆಗಿ ಕ್ಷಮೆಯೂ ಕೇಳಿದ್ದರು. ಇದೀಗ ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ಕಾರಣ ಬೇಸರಕ್ಕೆ ಒಳಗಾಗಿ ಪರೋಕ್ಷವಾಗಿ ಪೋಸ್ಟ್ ಒಂದನ್ನು ಶೇರ್‌ ಮಾಡಿದ್ದಾರೆ. ‘ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ’ ಎಂದು ಬರ್ತ್​ಡೇ ಸೆಲೆಬ್ರೇಷನ್​ ಮಾಡಿಕೊಳಲ್ಲ ಎಂದು ಹೇಳಿಕೊಂಡಿದ್ದಾರೆ. ಜೂನ್ 21 ಅವರ ಜನ್ಮದಿನ. ಈ ದಿನಾ ರಕ್ಷಕ್‌ ಸಿನಿಮಾ ಕೂಡ ಅನೌನ್ಸ್‌ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಕ್ಷಕ್‌ ಪೋಸ್ಟ್‌ನಲ್ಲಿ ʻʻಎಲ್ಲರಿಗೂ ನಮಸ್ಕಾರ ಹಾಗೂ ಫಾದರ್ಸ್ ಡೇ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೊ. ಹೀರೊ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ. ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು’ ಎಂದು ಬರೆದಿದ್ದಾರೆ.ಬುಲೆಟ್ ಪ್ರಕಾಶ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಗೆಳೆತನ ಇತ್ತು.

ಇದನ್ನೂ ಓದಿ: Actor Darshan: ಕೊಲೆಯನ್ನು ಆತುರದಲ್ಲಿ ಮಾಡಿರ್ತಾನೆ ಬಳಿಕ ಕೊರಗುತ್ತಾನೆ; ದರ್ಶನ್ ಹಳೆಯ ಸಂದರ್ಶನ ವೈರಲ್‌!

ಸುದೀಪ್‌ ವಿಚಾರವಾಗಿ ಸುದ್ದಿಯಾಗಿದ್ದ ರಕ್ಷಕ್‌

ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ʻʻಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಅನ್ನೋ ಥರ ಎಲ್ಲರೂ ಇರ್ತಾರೆʼʼಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್‌ ಫ್ಯಾನ್ಸ್‌ ಕೂಡ ರಕ್ಷಕ್‌ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಅದರಂತೆ ರಕ್ಷಕ್‌ ಕ್ಷಮೆ ಕೇಳಿದ್ದರು.

ರಕ್ಷಕ್‌ ಹೇಳಿದ್ದೇನು?

ಮಾಧ್ಯಮವೊಂದರ ಸಂದರ್ಶನವೊಂದರಲ್ಲಿ ರಕ್ಷಕ್‌ ಅವರು ಮಾತನಾಡಿʻʻ ಬಿಗ್ ಬಾಸ್ ಮನೆಯಲ್ಲಿ ಎಲ್ಲ ಸ್ಪರ್ಧಿಗಳು ಡ್ರಾಮಾ ಮಾಡ್ತಾರೆ. ಕಳಪೆ ಉತ್ತಮ ಅಂತ ಕೊಟ್ಟಮೇಲೆ ಆ ಮಾತಿನ ಮೇಲೆ ಯಾರೂ ನಿಲ್ಲುವುದಿಲ್ಲ. ಸುದೀಪ್‌ ಅವರು ಬಂದ ಮೇಲೆ ಎಲ್ಲವೂ ಬದಲಾಗುತ್ತದೆ. ಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು.. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಎನ್ನುವ ಥರ ಎಲ್ಲರೂ ಇರ್ತಾರೆ” ಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಭಾರಿ ಟೀಕೆಗೆ ಗುರಿಯಾಗಿತ್ತು.

Exit mobile version