ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದಾರೆ. ಈ ಪ್ರಕರಣದ ಬಗ್ಗೆ ರಾಮ್ ಗೋಪಾಲ್ ವರ್ಮಾ ಈ ಹಿಂದೆ ʻʻದರ್ಶನ್ ಅವರು ಕೊಲೆ ಕೇಸ್ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆʼʼ ಎಂಬರ್ಥದಲ್ಲಿ ಮಾತನಾಡಿದ್ದರು. ಆದರೀಗ ಹೊಸ ಟ್ವೀಟ್ ಶೇರ್ ಮಾಡಿ ʻʻರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು, ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆʼʼಎಂದು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ರಾಮ್ ಗೋಪಾಲ್ ವರ್ಮಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ ರೇಣುಕಾ ಸ್ವಾಮಿಯ ಮೇಲೆ ದರ್ಶನ್ ದಾಳಿ ಮಾಡಿರುವುದು ಆನೆ ಶ್ವಾನದ ಮೇಲೆ ದಾಳಿ ಮಾಡಿದಂತೆ. ಶ್ವಾನ ಅನ್ನೋದು ಅವಹೇಳನಕಾರಿಯಾಗಿ ಅಲ್ಲ. ಆದರೆ ಗಾತ್ರದಲ್ಲಿ ಮಾತ್ರ. ನಾಯಿ ಬೊಗಳಿತು ಎಂದು ಆನೆ ಹೋಗಿ ದಾಳಿ ಮಾಡಿದರೆ ಏನಾಗಬಹುದು? ಖಂಡಿತವಾಗಿಯೂ ಸಾವೇ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ. ದರ್ಶನ್ ಅವರನ್ನು ಆನೆ ಎಂದು ಕರೆದಿದ್ದು, ರೇಣುಕಾ ಸ್ವಾಮಿಯನ್ನು ಶ್ವಾನ (ಗಾತ್ರದಲ್ಲಿ) ಎಂದು ಕರೆದಿದ್ದಾರೆ.
ಈ ಹಿಂದೆ ಆರ್‌ಜಿವಿ ಎಕ್ಸ್‌ನಲ್ಲಿ ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್‌ಜಿವಿ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್ ಡೇಟ್ ಅನೌನ್ಸ್ ಮಾಡಿದ ದುನಿಯಾ ವಿಜಯ್; ಸ್ಟಾರ್ ಹಿರೋ ಸಿನಿಮಾ ಜತೆ ಕ್ಲ್ಯಾಶ್?
ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್ ನಟ ಕಟ್ಟರ್ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದರು.
ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?
ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್ ಸೇರಿ ಹಲ್ಲೆ ಮಾಡಿದ್ದರು.
ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್ ಸಹ ಹಲ್ಲೆ ಮಾಡಿದ್ದಾರೆ.