Site icon Vistara News

Actor Darshan: ಅಪ್ಪು ಪತ್ನಿ ಬಗ್ಗೆ ಕೀಳುಮಟ್ಟದ ಟ್ವೀಟ್‌: ದರ್ಶನ್ ಹೇಳಿದ್ದೇನು?

Actor Darshan reaction to Ashwini Puneeth Rajkumar RCB

ಬೆಂಗಳೂರು: ಈ ಬಾರಿ ಆರ್‌ಸಿಬಿ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಸೋತು, ಒಂದು ಮ್ಯಾಚ್​ ಗೆದ್ದಿದೆ. ಇದರ ಬೆನ್ನಲ್ಲೇ ದರ್ಶನ್‌ (Actor Darshan) ಕೆಲ ಫ್ಯಾನ್ಸ್‌ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ (Ashwini Puneeth Rajkumar) ಅವರನ್ನು ದೂರುತ್ತಿದ್ದಾರೆ. ‘ಗಂಡ ಇಲ್ಲದ ಮಹಿಳೆಯನ್ನು ಶುಭ ಕಾರ್ಯಕ್ಕೆ ಕರೆಸಿದ್ದು ಸರಿ ಅಲ್ಲ, ಇದಕ್ಕಾಗಿಯೇ ಆರ್​ಸಿಬಿ ಸೋಲುತ್ತಿದೆ’ ಎಂದು ‘ಗಜಪಡೆ’ (@GAJAPADE6) ಹೆಸರಿನ ಟ್ವಿಟರ್ ಅಕೌಂಟ್ ಕೀಳು ಮಟ್ಟದ ಟ್ವೀಟ್ ಮಾಡಿದೆ. ಸದ್ಯ ಈ ಸುದ್ದಿ ದರ್ಶನ್ ಅವರ ಗಮನಕ್ಕೆ ಬಂದಿದೆ.

ಈ ಪೋಸ್ಟ್ ಬಗ್ಗೆ ಡಿ ಕಂಪನಿ ತಂಡದ ಪ್ರಮುಖ ಅಡ್ಮಿನ್ ಹಾಗೂ ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ(ರಿ)ಕೇಂದ್ರ (Actor Darshan) ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪುನೀತ್ ದರ್ಶನ್ ಗೌಡ್ರು ದರ್ಶನ್ ಅವರ ಗಮನಕ್ಕೆ ಈ ಸುದ್ದಿ ಬಂದಿದ್ದು, ಈ ಬಗ್ಗೆ ಫೋನ್ ಮಾಡಿ ಮಾತನಾಡಿ ಬೇಸರ ವ್ಯಕ್ತಪಡಿಸಿದರು ಎಂದು ಮಾದ್ಯಮವೊಂದಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ.

ʻʻಈ ಪೋಸ್ಟ್ ನಟ ದರ್ಶನ್ (Actor Darshan) ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಫೋನ್ ಮಾಡಿ ಮಾತನಾಡಿ ಬೇಸರ ವ್ಯಕ್ತಪಡಿಸಿದರು. ಯಾರೇ ಆಗಿದ್ದರೂ ಈ ರೀತಿ ಮಾಡುವುದು ತಪ್ಪು. ಇದು ಯಾರು ಮಾಡಿದ್ದಾರೋ ಗೊತ್ತಿಲ್ಲ. ಈ ಬಗ್ಗೆ ವಿಚಾರಿಸಿ ಕ್ರಮ ಕೈಗೊಳ್ಳಿ. ಈ ಬಗ್ಗೆ ಗಮನ ಹರಿಸಿ. ಸೋಷಿಯಲ್ ಮೀಡಿಯಾವನ್ನು ಸರಿಯಾದ ರೀತಿಯಲ್ಲಿ ಬಳಸಬೇಕು. ತಪ್ಪಾಗಿ ಅದನ್ನು ಬಳಸಬಾರದು ” ಎಂದು ದರ್ಶನ್ ಹೇಳಿರುವುದಾಗಿ ಪುನೀತ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಕೀಳುಮಟ್ಟದ ಟ್ವೀಟ್‌: ʻದರ್ಶನ್ʼ​ ಫ್ಯಾನ್ಸ್ ವಿರುದ್ಧ ದೂರು ನೀಡಲು ಮುಂದಾದ ಅಪ್ಪು ಅಭಿಮಾನಿಗಳು!

ಆರ್​ಸಿಬಿ ಸೋಲುವುದಕ್ಕೂ, ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೂ ಏನು ಸಂಬಂಧ? ಎಂದು ಅಪ್ಪು ಫ್ಯಾನ್ಸ್‌ ಆಕ್ರೋಶ ಹೊರಹಾಕುತ್ತಿದ್ದು, ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಈ ಟ್ವೀಟ್​ನಿಂದ ಪುನೀತ್ ರಾಜಕುಮಾರ್ ಫ್ಯಾನ್ಸ್ ಸದ್ಯ ಕೋಪಗೊಂಡಿದ್ದಾರೆ. ಕಾನೂನು ಕ್ರಮಕ್ಕೆ ಅಪ್ಪು ಅಭಿಮಾನಿಗಳು ಮುಂದಾಗಿದ್ದಾರೆ. 

Exit mobile version