Site icon Vistara News

Actor Darshan: ‘ಶಾಂತಂ ಪಾಪಂ’ ಕಿರುತೆರೆ ಶೋನಲ್ಲಿ ದರ್ಶನ್‌ ಕಥೆ? ಏನಿದು ಡೇರ್ ಡೆವಿಲ್ ದೇವದಾಸ್‌ ಡೆಡ್ಲಿ ಕಹಾನಿ?

Actor Darshan Renuka Swamy case In colorskannada shantam Paapam

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆದ ಬಳಿಕ ದರ್ಶನ್‌ (Actor Darshan) ಅವರ ಕೈದಿ ನಂಬರ್‌ ಸಖತ್‌ ಚರ್ಚೆ ಆಗಿತ್ತು. ಇದೀಗ ಈ ಮಧ್ಯೆ ಧಾರಾವಾಹಿಯಲ್ಲಿ ದರ್ಶನ್ ಕಥೆ ಬಂತೇ ಎನ್ನುವ ಪ್ರಶ್ನೆ ಮೂಡಿದೆ. ಕಲರ್ಸ್ ಕನ್ನಡದಲ್ಲಿ ‘ಶಾಂತಂ ಪಾಪಂ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ನೋಡಿದ ಅನೇಕರಿಗೆ ರೇಣುಕಾ ಸ್ವಾಮಿ ಕೊಲೆ ಕೇಸ್ ನೆನಪಾಗಿದೆ. ಇದೀಗ ಕಲರ್ಸ್‌ ಕನ್ನಡ ಪ್ರೋಮೊ ಹಂಚಿಕೊಂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಸಿನಿಮಾ ಮಾಡುತ್ತಾರಾ? ಎನ್ನುವ ಚರ್ಚೆ ನಡೀತಿತ್ತು. ಕಾರಣ ಆರ್‌ಜಿವಿ ಈ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದೀಗ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ನೆನೆಪಿಸುವ ಕಾರ್ಯಕ್ರಮ ಕಿರುತೆರೆಯಲ್ಲಿ ಪ್ರಸಾರವಾಗಿದೆ.

ರೇಣುಕಾ ಸ್ವಾಮಿ ಹತ್ಯೆ ಪ್ರಕರಣ ಹೋಲುವ ಡೇರ್ ಡೆವಿಲ್ ದೇವದಾಸ್ ಎಪಿಸೋಡ್‌ನಲ್ಲಿ ದಾಸ್ ಒಬ್ಬ ಶ್ರೀಮಂತ. ಆದರೆ ಕೊಲೆ ಆರೋಪದಲ್ಲಿ ಆತನನ್ನು ಪೊಲೀಸರು ಬಂಧಿಸುತ್ತಾರೆ. ಮದುವೆ ಆಗಿದ್ದರೂ ಖ್ಯಾತ ಉದ್ಯಮಿ ದಾಸ್ ಒಬ್ಬ ನಟಿಯ ಮೋಹಕ್ಕೆ ಸಿಲುಕಿರುತ್ತಾನೆ. ಆ ನಟಿಗೆ ಒಬ್ಬನಿಂದ ಕೆಟ್ಟ ಕೆಟ್ಟ ಮೆಸೇಜ್‌ಗಳು ಬರಲು ಆರಂಭಿಸುತ್ತದೆ. ಫೇಕ್‌ ಅಕೌಂಟ್‌ಗಳಿಂದ ಅಸಭ್ಯ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿರುತ್ತಾನೆ. ಅದನ್ನು ಆಕೆ ದಾಸ್ ಮುಂದಿಡುತ್ತಾಳೆ. ಅದನ್ನು ಕೇಳಿದ ಆತ ಕೊಲೆ ಮಾಡುತ್ತಾನೆ. ಆತನನ್ನು ಕರೆತಂದು ಒಂದು ಶೆಡ್‌ ಮುಂದೆ ಥಳಿಸುವುದನ್ನು ಪ್ರೋಮೊದಲ್ಲಿ ನೋಡಬಹುದು. ಇದೀಗ ಈ ಪ್ರೋಮೊ ಸಖತ್‌ ವೈರಲ್‌ ಆಗುತ್ತಿದೆ. ಇದು ಪಕ್ಕಾ ರೇಣುಕಾ ಸ್ವಾಮಿ ಕಥೆನೇ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

ಈ ಧಾರಾವಾಹಿ ಎಪಿಸೋಡ್ ನೋಡಿದ ಅನೇಕರು ದರ್ಶನ್ ಕಥೆಗೆ ಹೋಲಿಕೆ ಮಾಡಿಕೊಂಡಿದ್ದಾರೆ. ಆಪ್ತೆ ಪವಿತ್ರಾಗೆ ಕಿರುಕುಳ ನೀಡಿದ್ದಕ್ಕೆ ರೇಣುಕಾ ಸ್ವಾಮಿಯನ್ನು ದರ್ಶನ್ ಅವರು ಕೊಲೆ ಮಾಡಿದರು ಎನ್ನಲಾಗಿದೆ. ಈ ಆರೋಪದಲ್ಲಿ ಅರೆಸ್ಟ್ ಆಗಿ ಅವರು ವಿಚಾರಣೆ ಎದುರಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Exit mobile version