Site icon Vistara News

Actor Darshan: ಪವಿತ್ರಾಗೆ ಮರ್ಮಾಂಗದ ಫೋಟೊ ಕಳುಹಿಸಿದ್ರಾ ರೇಣುಕಾಸ್ವಾಮಿ? ದರ್ಶನ್​ಗೆ ತಿಳಿದಿದ್ದು ಹೇಗೆ?

Actor Darshan Renukaswamy Send His Photos To Pavitra Gowda

ಬೆಂಗಳೂರು: ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಪ್ರಕರಣದಲ್ಲಿ ಮೊತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿರುವ ಜತೆಗೆ ಕಳೆದ ಶುಕ್ರವಾರ ಮರ್ಮಾಂಗದ ಫೋಟೊ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿರುವುದಾಗಿ ವರದಿಯಾಗಿದೆ.

ಪವಿತ್ರಾ ಗೌಡ ಹಾಗೂ ದರ್ಶನ್‌ ನಡುವೆ ಇರುವ ಗಾಸಿಪ್‌ ಹೊಸದೇನಲ್ಲ. ಈ ಮುಂಚೆ ದರ್ಶನ್‌ ಪತ್ನಿ ಹಾಗೂ ಪವಿತ್ರಾ ಗೌಡ ಅವರ ನಡುವೆ ಸೋಷಿಯಲ್‌ ಮೀಡಿಯಾ ವಾರ್‌ ಕೂಡ ನಡೆದಿತ್ತು. ಇದೀಗ ದರ್ಶನ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ದರ್ಶನ್​ಗೆ ಸಹಾಯ ಮಾಡಿದ ಎಲ್ಲರೂ ಈಗ ಜೈಲು ಸೇರಿದ್ದಾರೆ. ಅಷ್ಟಕ್ಕೂ ರೇಣುಕಾ ಸ್ವಾಮಿ ಕಳುಹಿಸಿದ ಮೆಸೇಜ್ ಏನು? ಎಂಬುದರ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದೆ.

ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರ ಚೆನ್ನಾಗಿರಬೇಕು ಎಂದು ಬಯಸಿದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು.ಅಷ್ಟೇ ಅಲ್ಲದೇ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಜತೆಗೆ ಪವನ್‌ಗೂ ಕೂಡ ʻದರ್ಶನ್‌ಗೆ ಈ ವಿಷಯ ಹೇಳಬೇಡಿ. ದರ್ಶನ್‌ ಏನಾದ್ರು ಮಾಡಿಬಿಡ್ತಾನೆʼ ಎಂದು ಪವಿತ್ರಾ ಹೇಳಿದ್ದರು. ಆದರೆ ಪವನ್‌ ಈ ವಿಚಾರ ದರ್ಶನ್‌ ಅವರಿಗೆ ಹೇಳಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Actor Darshan Arrested : ದರ್ಶನ್​ನ ಅನ್​ಫಾಲೋ ಮಾಡಿ ಡಿಪಿ ಡಿಲೀಟ್‌ ಮಾಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ!

ದರ್ಶನ್‌ ಕೈವಾಡವೇನು?

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದಿಷ್ಟು ಮೂಲಗಳ ಪ್ರಕಾರ, ರೇಣುಕಾಸ್ವಾಮಿ ಮೇಲೆ ದರ್ಶನ್‌ ಅವರೇ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾಸ್ವಾಮಿ ಮೃತಪಟ್ಟಿದ್ದರು. ನಂತರ ಶವವನ್ನು ಚರಂಡಿ ಬಳಿ ಎಸೆಯಲಾಗಿತ್ತು ಎನ್ನಲಾಗಿದೆ.

ದರ್ಶನ್‌ ಅವರ ವಿರುದ್ಧ ಕೊಲೆ, ಅಪಹರಣ ಹಾಗೂ ಸಾಕ್ಷ್ಯನಾಶ ಪ್ರಕರಣಗಳ ಸಂಕಷ್ಟ ಎದುರಾಗಿದ್ದು, ಆರೋಪ ಸಾಬೀತಾದರೆ ಇವರಿಗೆ ಕಠಿಣ ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Exit mobile version