Site icon Vistara News

Actor Darshan: ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು; ಧೈರ್ಯ ತುಂಬಿದ ವಿಜಯಲಕ್ಷ್ಮಿ!

Actor Darshan Son Vineesh Cried In Jail

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ (Actor Darshan) ಜೈಲಿನಲ್ಲಿ ಇದ್ದಾರೆ. ಸದ್ಯ ಜೈಲಲ್ಲಿ ದರ್ಶನ್ ಚಡಪಡಿಕೆ ಮುಂದುವರಿದಿದೆ.ಊಟ ಸೇರದೆ ನಿದ್ದರೆ ಬಾರದೇ ದರ್ಶನ್‌ ಕಂಗಾಲಾಗಿದ್ದಾರೆ. ಜೈಲಿನಲ್ಲಿರುವ ದರ್ಶನ್‌ ಅವರನ್ನು ಈವರೆಗೆ ಮೂರು ಬಾರಿ ಕುಟುಂಬ ಭೇಟಿ ಮಾಡಿದೆ. ನಿನ್ನೆ ದರ್ಶನ್ ಪತ್ನಿ, ಮಗ ಸೇರಿದಂತೆ ಕುಟುಂಬಸ್ಥರು ಭೇಟಿ ಮಾಡಿದ್ದರು. ದರ್ಶನ್ ಭೇಟಿಯಾಗಿ ವಿಜಯಲಕ್ಷ್ಮಿ ಧೈರ್ಯ ತುಂಬಿ ಬಂದಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ವಿನೀಶ್‌ ಕಣ್ಣೀರು ಹಾಕಿದ್ದಾನೆ.

ಬಟ್ಟೆ, ಹಣ್ಣುಗಳನ್ನು ನೀಡಿದ್ದರು. ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಬಾವುಕರಾಗಿದ್ದಾರೆ. ಪತ್ನಿಯ ಬಳಿ ಜೈಲೂಟ ಮಾಡಲು ಆಗುತ್ತಿಲ್ಲ ಎಂದು ದರ್ಶನ್‌ ಹೇಳಿದ್ದಾರೆ. ವಕೀಲರ ಮೂಲಕ ಕೋರ್ಟ್​​ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ ಎಂದು ದರ್ಶನ್​ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ. ಸದ್ಯ ಮನೆ ಊಟ ಕೊಡುವ ಬಗ್ಗೆ ಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಜುಲೈ 18ರಂದು ಈ ಬಗ್ಗೆ ನಿರ್ಧಾರ ಆಗಲಿದೆ.

ಹೊರಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪತ್ನಿಯ ಬಳಿ ಕೇಳಿ ತಿಳಿದುಕೊಳ್ಳುತ್ತಿದ್ದಾರೆ ದಚ್ಚು. ಜಾಮೀನು ಪ್ರಕ್ರಿಯೆ ಬಗ್ಗೆಯೂ ಕುಟುಂಬಸ್ಥರ ಜತೆಗೆ ಚರ್ಚೆ ಮಾಡಿದ್ದಾರೆ. ಮಗನನ್ನ ತೊಡೆಯ ಮೇಲೆ ಕೂರಿಸಿಕೊಂಡು ಕೆಲಹೊತ್ತು ದರ್ಶನ್‌ ಮಾತನಾಡಿಸಿದ್ದಾರೆ. ಮಗನನ್ನು ಕಂಡು ಕೊಂಚ ನಿರಾಳವಾಗಿದ್ದಾರೆ. ಮತ್ತೆ ರಾತ್ರಿಯಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ. ಒಂದು ಕಡೆ ಜಿಮ್‌ನಲ್ಲಿ ವರ್ಕೌಟ್ ಇಲ್ಲ, ಸರಿಯಾದ ಆಹಾರ ಕೂಡ ಇಲ್ಲ. ಇದರಿಂದ ತೂಕ ಕಳೆದುಕೊಂಡು ಮಾನಸಿಕವಾಗಿ ದರ್ಶನ್ ಕುಗ್ಗಿ ಹೋಗುತ್ತಿದ್ದಾರೆ. ಇತರ ಜೈಲು ಸಿಬ್ಬಂದಿ ಜೊತೆ ಅವರು ಬರೆಯುತ್ತಿಲ್ಲ.

ಇದನ್ನೂ ಓದಿ: Actor Darshan: ದರ್ಶನ್‌ಗೆ ಬಟ್ಟೆ, ಹಣ್ಣು ಕೊಟ್ಟ ಅಕ್ಕ-ಬಾವ, ಸ್ನ್ಯಾಕ್ಸ್‌ ವಾಪಸ್‌; ತಾಯಿ ಕಂಡು ಪವಿತ್ರಾ ಗೌಡ ಕಣ್ಣೀರು

ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲೂಟದಿಂದಾಗಿ ಫುಡ್‌ ಪಾಯಿಸನಿಂಗ್‌ ಹಾಗೂ ಅತಿಸಾರ ಆಗುತ್ತಿದೆ. ಮನೆಯೂಟ ತರಿಸಿಕೊಳ್ಳಲು ಅನುಮತಿ ನೀಡಬೇಕು ಎಂದು ದರ್ಶನ್‌ ಪರ ವಕೀಲರು ಹೈಕೋರ್ಟ್‌ಗೆ (High Court) ರಿಟ್‌ ಅರ್ಜಿ (Writ Petition) ಸಲ್ಲಿಸಿದ್ದಾರೆ.

ಮನೆ ಊಟದ ಜೊತೆಗೆ ಹಾಸಿಗೆ, ಪುಸ್ತಕ ತರಿಸಿಕೊಳ್ಳಲು ಕೂಡ ನಟ ದರ್ಶನ್ ಕೋರಿದ್ದಾರೆ. ದರ್ಶನ್ ಪರ ವಕೀಲರು ಸಲ್ಲಿಸಿರುವ ರಿಟ್ ಅರ್ಜಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಬಟ್ಟೆ, ಚಮಚ (cutlery), ಮನೆಯಲ್ಲಿ ತಯಾರಿಸಿದ ಆಹಾರ, ಹಾಸಿಗೆ, ಪುಸ್ತಕ ಇವುಗಳನ್ನೆಲ್ಲಾ ಮನೆಯಿಂದ ಪಡೆಯಲು ಜೈಲು ಅಧಿಕಾರಿಗಳು ಅನುಮತಿಸಿಲ್ಲ. ಜೈಲಿನಲ್ಲಿ ನೀಡುತ್ತಿರುವ ಊಟ ದರ್ಶನ್‌ಗೆ ಜೀರ್ಣವಾಗುತ್ತಿಲ್ಲ. ಜೈಲಿನ ಊಟ ಸೇವಿಸಿದಾಗ ಅತಿಸಾರ ಆಗುತ್ತಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

Exit mobile version