Site icon Vistara News

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Actor Darshan support by anchor hemalatha

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ (Actor Darshan) ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ 14ದಿನಗಳ ವರೆಗೆ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹಲವರು ನಟನ ಬೆಂಬಲಕ್ಕೆ ನಿಂತಿದ್ದರು. ನಟಿ ಸಂಜನಾ ಗಲ್ರಾನಿ ಅವರು ಕೂಡ ಸ್ಪಷ್ಟ ಅಭಿಪ್ರಾಯ ನೀಡಿ ದರ್ಶನ್ ತೂಗುದೀಪ ಬೆಂಬಲಕ್ಕೆ ನಿಂತಿದ್ದರು. ಇದರ ಬೆನ್ನಲ್ಲೇ ಕನ್ನಡದ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ಮೃತ ರೇಣುಕಾಸ್ವಾಮಿಯನ್ನು ಹೀರೋ ಮಾಡುವುದನ್ನು ನಿಲ್ಲಿಸಿ ಎಂದು ಬರೆದುಕೊಂಡಿದ್ದಾರೆ.

ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಸ್ಟಿರುವ ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…
ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಹಲ್ಲೆಗೆ ಬಳಸಿದ್ದ ʻಪೊಲೀಸ್ ಲಾಠಿʼ ಪತ್ತೆ! ʻಡಿ ಗ್ಯಾಂಗ್‌ʼಗೆ ಸಿಕ್ಕಿದ್ದು ಹೇಗೆ?

ಇನ್ನು ಈ ಹಿಂದೆ ಬಿಗ್‌ಬಾಸ್‌ ಸ್ಪರ್ಧಿ ಇಶಾನಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು, ದರ್ಶನ್ ಸರ್ ತಪ್ಪು ಮಾಡಿದ್ದರೆ ಅವರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಇಶಾನಿ, ನಿಜಕ್ಕೂ ಇದು ಅಘಾತಕಾರಿ ಸುದ್ದಿ. ಒಬ್ಬ ಅಣ್ಣನ ರೂಪದಲ್ಲಿ ನಾನು ಕಂಡ ದರ್ಶನ್ ಸರ್ ನಿಜಕ್ಕೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಕೇಳಿದಾಗ ನಂಬಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌, ಪ್ರದೋಷ್‌ನಿಂದ ಮೂರು ಪಿಸ್ತೂಲ್‌ ವಶಕ್ಕೆ

ರೇಣುಕಾಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ (Actor Darshan) ಮತ್ತು ಆತನ ಸಹಚರ ಪ್ರದೋಷ್‌ ಬಗ್ಗೆ ಮತ್ತೊಂದು ಕುತೂಹಲಕಾರಿ ವಿಚಾರ ಬೆಳಕಿಗೆ ಬಂದಿದೆ. ಇಬ್ಬರ ಬಳಿಯೂ ಪರವಾನಗಿ ಹೊಂದಿದ ಪಿಸ್ತೂಲ್‌ಗಳಿದ್ದು Licenced Pistol), ಲೋಕಸಭೆ ಚುನಾವಣೆ (Lok Sabha Election 2024) ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ (deposit) ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

ದರ್ಶನ್ ಬಳಿ ಎರಡು ಯುಎಸ್ ಮೇಡ್ ಪಿಸ್ತೂಲ್‌ಗಳು, ಪ್ರದೋಷ್ ಬಳಿ ಒಂದು ಲೈಸೆನ್ಸ್ ಪಿಸ್ತೂಲ್‌ ಇವೆ. ಕಳೆದ ಲೋಕಸಭಾ ಚುನಾವಣಾ ವೇಳೆ ಲೈಸೆನ್ಸ್ ಪಡೆದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಪೊಲೀಸರಿಗೆ ಒಪ್ಪಿಸಬೇಕಿತ್ತು. ಆದರೆ ಚುನಾವಾಣೆ ವೇಳೆ ಶಸ್ತ್ರಾಸ್ತ್ರ ಠೇವಣಿಯಿಂದ ದರ್ಶನ್ ಮತ್ತು ಪ್ರದೋಷ್ ವಿನಾಯಿತಿ ಪಡೆದಿದ್ದರು.

ಬೆಂಗಳೂರು ನಗರಾದ್ಯಂತ 7830 ಗನ್ ಲೈಸೆನ್ಸ್ ಪರವಾನಗಿದಾರರಿದ್ದಾರೆ. ಈ ಪೈಕಿ ದರ್ಶನ್ ಮತ್ತು ಪ್ರದೋಷ್ ಸೇರಿ 277 ಜನರಿಗೆ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ನೀಡಲಾಗಿತ್ತು. ಉಳಿದ 7553 ಪರವಾನಗಿ ಹೊಂದಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ಠೇವಣಿ ಇರಿಸಿಕೊಂಡಿದ್ದರು. ಆದರೆ ನಟ ದರ್ಶನ್ ಮತ್ತು ಪ್ರದೋಷ್ ಪಿಸ್ತೂಲ್ ವಾಪಸ್ ಮಾಡದೇ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದಿದ್ದಾರೆ.

ಬೆಂಗಳೂರಿನ 277 ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಪಡೆದವರಲ್ಲಿ ದರ್ಶನ್ ಮತ್ತು ಪ್ರದೋಷ್‌ಗೂ ವಿನಾಯಿತಿ ನೀಡಲಾಗಿದ್ದು, ಬೆಂಗಳೂರು ಪೊಲೀಸ್ ಕಮೀಷನರ್ ಅವರಿಂದಲೇ ವಿನಾಯಿತಿ ನೀಡಿ ಆದೇಶ ದೊರೆತಿದೆ. ಕಮೀಷನರ್ ಬಿ. ದಯಾನಂದ ಶಸ್ತ್ರಾಸ್ತ್ರ ಠೇವಣಿ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿದ್ದರು. ಅತಿ ಗಣ್ಯರಿಗೆ ನೀಡುವ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿಯಲ್ಲಿ ನಟ ದರ್ಶನ್ ಮತ್ತು ಪ್ರದೋಷ್ ಕೂಡ ಅವಕಾಶ ಪಡೆದಿದ್ದು, ಕಳೆದ ಮಾರ್ಚ್ 27ರಂದು ವಿನಾಯಿತಿ ನೀಡಿ ಕಮೀಷನರ್ ದಯಾನಂದ್ ಆದೇಶ ನೀಡಿದ್ದರು.

Exit mobile version