ಬೆಂಗಳೂರು: ಜು.23ರಂದು ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಕರಗ ಮಹೋತ್ಸವದ ಕಾರ್ಯಕ್ರಮದಲ್ಲೂ ನಟ ದರ್ಶನ್ ಹೆಸರು ಪ್ರಸ್ತಾಪವಾಗಿದೆ. ಸಭಾ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಲು ಆಗಮಿಸ್ತಿದ್ದಂತೆ ಜನರು ಡಿ ಬಾಸ್ ಅಂತ (Actor Darshan) ಕೂಗಿದ್ದಾರೆ. ದರ್ಶನ್ ಅಭಿಮಾನಿಗಳು ಘೋಷಣೆ ಕೂಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ನನ್ನ ಭೇಟಿಗೆ ಸಮಯ ಕೇಳಿದ್ದಾರೆ. ಅವರನ್ನು ಭೇಟಿಯಾಗಿ ಮಾತನಾಡ್ತೀನಿ. ಏನಾದರೂ ತಪ್ಪಾಗಿದ್ರೆ ಸರಿಪಡಿಸಲು ಪ್ರಯತ್ನ ಮಾಡ್ತೀನಿ. ನಾವೆಲ್ಲರೂ ದೇಶದ ಕಾನೂನಿಗೆ ಬೆಲೆ ಕೊಡಲೇಬೇಕು. ಯಾರಿಗೆ ಅನ್ಯಾಯ ಆಗಿದ್ದರೂ ನಾವೆಲ್ಲರೂ ಸೇರಿ ಸರಿಪಡಿಸೋಣ ಎಂದು ಹೇಳಿದ್ದರು. ಇದೀಗ ಡಿಸಿಎಂಸಿಎಂ ಭೇಟಿ ಮಾಡಿದ್ದಾರೆ ದರ್ಶನ್ ಪತ್ನಿ ವಿಜಯಲಕ್ಷ್ಮಿ.
ಡಿಸಿಎಂ ಡಿಕೆ ಶಿವಕುಮಾರ್ ಜೊತೆ ನಟ ದರ್ಶನ್ ಕೊಲೆ ಕೇಸ್ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೇ 25 ಕ್ಕೆ ಬಗ್ಗೆ ತೀರ್ಪು ಬರಲಿದೆ. ಈ ನಡುವೆ ಡಿಕೆಶಿ ಅವರನ್ನು ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ಮಾಡಿದ್ದಾರೆ. ಇದೀಗ ಈ ನಡೆ ತೀವ್ರ ಕುತೂಹಲ ಮೂಡಿಸಿದೆ. ಡಿಕೆಶಿ ಜತೆ ಮಾತನಾಡಿ ಮನೆ ಊಟಕ್ಕೆ ಅನುವು ಕೋಡುವಂತೆ ಮನವಿ ಮಾಡಿರಬಹುದು ಎನ್ನಲಾಗಿದೆ. ದರ್ಶನ್ ಪತ್ನಿ ಜತೆ ಜೋಗಿ ಪ್ರೇಮ್ ಕೂಡ ಇದ್ದರು.
ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ
ಈ ಬಗ್ಗ ಜೋಗಿ ಪ್ರೇಮ್ ಮಾತನಾಡಿ ʻʻನಟ ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ನಾನು ದರ್ಶನ್ ವಿಚಾರ ಮಾತನಾಡೋಕೆ ಬಂದಿರಲಿಲ್ಲ ನಾನು ಆಗಾಗ ಡಿಸಿಎಂನ ಭೇಟಿ ಮಾಡೊಕೆ ಬರ್ತಾ ಇರ್ತೀನಿ. ದರ್ಶನ್ ವಿಚಾರಕ್ಕೂ ನನಗೂ ಸಂಬಂಧ ಇಲ್ಲ. ಅವರ ಪತ್ನಿ ಮತ್ತು ದರ್ಶನ್ ಸಹೋದರ ಭೇಟಿ ಮಾಡೋಕೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಸ್ಕೂಲ್ ವಿಚಾರ ಮಾತಾಡೋಕೆ ಬಂದಿದ್ದರು.ನನ್ನ ಮಗ ಅವರ ಮಗ ಇಬ್ಬರು ಒಂದೇ ಕಡೆ ಓದುತ್ತ ಇದ್ದರು. ವಿನೀಶ್ ಈಗ ಬೇರೆ ಸ್ಕೂಲ್ ಶಿಷ್ಟ್ ಆಗಿದ್ದಾನೆ. ಹಾಗಾಗಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದೇವೆ. ದರ್ಶನ್ ನನ್ನ ಸ್ನೇಹಿತ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಈ ಭೇಟಿಗೂ ಇದಕ್ಕೂ ಸಂಬಂಧ ಇಲ್ಲʼʼಎಂದಿದ್ದಾರೆ.
ಇದನ್ನೂ ಓದಿ: Actor Darshan: ಜೈಲಿಗೆ ಆಗಮಿಸಿದ ಸಾಧುಕೋಕಿಲ ಭೇಟಿ ನಿರಾಕರಿಸಿದ ದರ್ಶನ್!
ಮನೆ ಊಟ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ನಗರದ 24ನೇ ಎಸಿಎಂಎಂ ಕೋರ್ಟ್, ಆದೇಶವನ್ನು ಜುಲೈ 25ಕ್ಕೆ ಕಾಯ್ದಿರಿಸಿದೆ. ಇದರಿಂದ ಇನ್ನೂ ಮೂರು ದಿನಗಳ ಕಾಲ ನಟ ದರ್ಶನ್‌ಗೆ (Actor Darshan) ಜೈಲೂಟವೇ ಗತಿಯಾಗಿದೆ.ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂಧರ್ಬದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.