Site icon Vistara News

Actor Kishore: ಇದು ʻರಾಮʼ ರಾಜ್ಯವೊ ʻಹರಾಮ್ʼ ರಾಜ್ಯವೊ ಎಂದ ನಟ ಕಿಶೋರ್‌ಗೆ ಜಾಡಿಸಿದ ಜನ!

Actor Kishore

ಬೆಂಗಳೂರು: ಬಹುಭಾಷಾ ನಟ ಕಿಶೋರ್ (Actor Kishore) ಸಿನಿಮಾಗಳ ಜತೆ ಜತೆಗೆ ಮೋದಿ ವಿರುದ್ಧದ ತಮ್ಮ ಕಮೆಂಟ್‌ಗಳ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ಕಿಶೋರ್‌ ಪೋಸ್ಟ್‌ ಮುಖಾಂತರ ಟೀಕೆ ಮಾಡಿ ಜನರಿಂದ ಉಗಿಸಿಕೊಂಡಿದ್ದರು. ಇದೀಗ ಪಂಜಾಬ್‌ ಹಾಗೂ ಹರಿಯಾಣದಲ್ಲಿ ರೈತರು ನಡೆಸುತ್ತಿರುವ ಹಿಂಸಾತ್ಮಕ ದೆಹಲಿ ಚಲೋ ಪ್ರತಿಭಟನೆಯ ಕುರಿತಾಗಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ಮೋದಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

ಕಿಶೋರ್‌ ಪೋಸ್ಟ್‌ನಲ್ಲಿ ಏನಿದೆ?

ʻʻಪ್ರೀತಿಯ ದಿನದಂದು ದ್ವೇಷದ ಪ್ರತಿನಿಧಿಗಳ ಅಟ್ಟಹಾಸ ..
ಪ್ರಜೆಗಳ ಪ್ರತಿಭಟನೆಯ ದನಿಯಡಗಿಸುವುದು ಪ್ರಜಾಪ್ರಭುತ್ವವಲ್ಲವೇ ಅಲ್ಲ.
ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ದೇಶವಿಡೀ ಒಂದಾಗಿ ಬ್ರಿಟೀಷರ ವಿರುದ್ಧ ನಿಂತಾಗ ಬ್ರಿಟಿಷರ ಪರ ನಿಂತ ಜನರಿಂದ ಬೇರೇನು ನಿರೀಕ್ಷಿಸಲು ಸಾಧ್ಯ?
ನಾಡಿನ ರೈತರನ್ನು ಯೋಧರನ್ನು, ದೇಶದ್ರೋಹಿಗಳಂತೆ ನಡೆಸಿಕೊಳ್ಳುವ ಅದೇ ಹೊಲಸು ಮನೋಭಾವ. ವರ್ಷದ ಹಿಂದೆ ವರ್ಷಪೂರ್ತಿ ನಡೆದ ಹೋರಾಟದಲ್ಲಿ 700 ಜನ ರೈತರು ಪ್ರಾಣ ಬಿಟ್ಟಾಗ ನನಗಾಗಿ ಸತ್ತರೇ ಎಂದು ಕೇಳಿದವರಲ್ಲವೇ ಇವರು??. ಸೈನಿಕರ ಪಿಂಚಣಿ ಹಣ ಉಳಿಸಿ ತನ್ನ ಗೆಳೆಯರಿಗೆ ಹಂಚುವ ವ್ಯಾಪಾರಿಯಲ್ಲವೇ ಇವರು?
ರೈತರ ದಾರಿಯಲ್ಲಿ ಹಳ್ಳ ತೋಡುತ್ತಾರೆ, ಮುಳ್ಳು ಹಾಕುತ್ತಾರೆ, ಅಶ್ರುವಾಯು ಸಿಡಿಸುತ್ತಾರೆ, ಲಾಠಿಚಾರ್ಜ್ ಮಾಡುತ್ತಾರೆ, ರೈತ ಮುಖಂಡರ ಟ್ವಿಟರ್ ಬಂದ್ ಮಾಡುತ್ತಾರೆ .. ಸೈನಿಕರನ್ನು ಕೂಲಿಪಡೆಯಾಳಾಗಿಸುತ್ತಾರೆ, ದೇಶದ ಹೆಣ್ಣುಮಕ್ಕಳನ್ನು ಬೀದಿಯಲ್ಲಿ ಎಳೆದಾಡುತ್ತಾರೆ .. ಅತ್ಯಾಚಾರಿಗಳನ್ನು ಹೊರಗೆ ಸುತ್ತಲು ಬಿಟ್ಟು ಅಮಾಯಕರನ್ನು ಜೈಲಿಗೆ ತುಂಬುತ್ತಾರೆ.. ಇದು ರಾಮ ರಾಜ್ಯವೊ ಹರಾಮ್ ರಾಜ್ಯವೊ??ʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Kishore: ರಾಮ ಮಂದಿರ ಉದ್ಘಾಟನೆ ದಿನ `ಉಳ್ಳವರು ಶಿವಾಲಯವ ಮಾಡುವರು’ ಎಂದ ಕಿಶೋರ್‌! ಜನರ ಪ್ರತಿಕ್ರಿಯೆ ಏನು?

ಈ ಪೋಸ್ಟ್‌ಗೆ ಪರ ವಿರೋಧಗಳ ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ. ಕಿಶೋರ್‌ಗೆ ಮಾನಸಿಕ ಚಿಕಿತ್ಸೆ ನೀಡುವ ಅಗತ್ಯ ಇದೆ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ.

Exit mobile version