ಬೆಂಗಳೂರು: ಉಡುಪಿಯ ಕಾಪು ಮಾರಿಗುಡಿ ದೇವಾಲಯಕ್ಕೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಶ್ರೀದೇವಿಯಲ್ಲಿ (kapu mariyamma) ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ನಂತರ ಭರದಿಂದ ಸಾಗುತ್ತಿರುವ ಕಾಮಗಾರಿ ವೀಕ್ಷಿಸಿದ ನಟ ಪ್ರಕಾಶ್ ರೈ ಅವರು ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿಯನ್ನು ಪಡೆದರು. ಇದೀಗ ಪ್ರಕಾಶ್ ರಾಜ್ ಅವರು ಈ ಬಗ್ಗೆ ಟೀಕೆಗೆ ಗುರಿಯಾಗುತ್ತಿದ್ದಾರೆ. ʻʻಹಿಂದೂ ದೇವತೆಗಳಿಗೆ ಮರ್ಯಾದೆ ಕೊಡದವನು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇಕೆ? ಆಡಳಿತ ಮಂಡಳಿ ದೇವಾಲಯದ ಒಳಗೆ ಬಿಟ್ಟಿದ್ದು ತಪ್ಪು. ಗೋ ಮೂತ್ರ ಹಾಕಿ ಸಿಂಪಡಿಸಿʼʼಎಂದು ಕಮೆಂಟ್ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ ನೆಟ್ಟಿಗರು.
ಕರಾವಳಿಯಲ್ಲಿ ಉಡುಪಿಯ ಕೃಷ್ಣನ ದೇವಾಲಯ ಬಿಟ್ಟರೆ ಕಾಪು ಮಾರಿಯಮ್ಮ ದೇವಾಲಯವೇ ಸುಪ್ರಸಿದ್ಧ ಎಂಬುದು ಅಲ್ಲಿಯ ನಂಬಿಕೆ. ಈ ದೇವಾಲಯದಲ್ಲಿ ವರ್ಷಕೊಮ್ಮೆ ಜಾತ್ರೆ ನಡೆಯುತ್ತದೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದೀಗ ಪ್ರಕಾಶ್ ರಾಜ್ ಭೇಟಿ ಕೊಟ್ಟಿದ್ದಾರೆ. ಹೊಸ ಮಾರಿಗುಡಿ ನಿರ್ಮಾಣದ ಕಾರ್ಯ ಕೂಡ ಆಗುತ್ತಿದೆ. ಪ್ರಕಾಶ್ ರಾಜ್ ಕಾಮಗಾರಿ ವೀಕ್ಷಣೆಯನ್ನು ಮಾಡಿದರು. ಇಳಕಲ್ಲಿನ ಕಲಾತ್ಮಕ ಶೈಲಿಯ ಕೆತ್ತನೆಗಳ ಬಗ್ಗೆ ಮಾಹಿತಿ ಪಡೆದರು. ಕೆತ್ತನೆ ಶೈಲಿ ನೋಡಿ ಬಹಳ ಖುಷಿ ಪಟ್ಟರು. ದಕ್ಷಿಣ ಭಾರತದಲ್ಲೇ ವಿಶಿಷ್ಟವಾಗಿ ಮೂಡಿಬರುತ್ತಿರುವ ದೇಗುಲದ ಕಲಾ ಪ್ರಕಾರಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭ ದೇವಳದ ಜೀರ್ಣೋದ್ಧಾರದ ಆರ್ಥಿಕ ಸಮಿತಿಯ ಶೈಲಪುತ್ರಿ ತಂಡದ ಸಂಚಾಲಕ ರಾಧಾರಮಣ ಶಾಸ್ತ್ರೀ, ಗುತ್ತಿಗೆದಾರ ಪ್ರಶಾಂತ್ ಶೆಟ್ಟಿ, ಕುಂದಾಪುರ ಮತ್ತು ಸ್ವಚ್ಛತಾ ಸಮಿತಿಯ ಮುಖ್ಯ ಸಂಚಾಲಕ ಅನಿತ್ ಶೆಟ್ಟಿ ಕಾಪು ಉಪಸ್ಥಿತರಿದ್ದರು.
ಇದನ್ನೂ ಓದಿ: Prakash Raj: ಉದಯನಿಧಿ ಸ್ಟಾಲಿನ್ ಮಾತನಾಡಿದ್ದರಲ್ಲಿ ತಪ್ಪೇನಿದೆ; ಮತ್ತೊಮ್ಮೆ ಸಮರ್ಥಿಸಿಕೊಂಡ ಪ್ರಕಾಶ್ ರಾಜ್!
ಟೀಕೆಗೆ ಗುರಿಯಾದ ರಾಜ್
ಪ್ರಕಾಶ್ ರಾಜ್ ವಿವಾದಾತ್ಮಕ ಹೇಳಿಕೆಗಳಿಂದಲೂ ಸುದ್ದಿಯಾಗುತ್ತಾರೆ. ಹಿಂದೂ ವಿರೋಧಿ ಎನ್ನುವವರು ಇದ್ದಾರೆ. ಅವರನ್ನು ದೇವಾಲಯದಲ್ಲಿ ನೋಡಿ ಕೆಲವರು ಅಚ್ಚರಿಪಟ್ಟಿದ್ದಾರೆ. ಫೋಟೊಗಳು ವೈರಲ್ ಆಗುತ್ತಿದ್ದಂತೆ ʻʻಹಿಂದೂ ದೇವತೆಗಳಿಗೆ ಮರ್ಯಾದೆ ಕೊಡದವನು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೇಕೆ? ಆಡಳಿತ ಮಂಡಳಿ ಒಳಕ್ಕೆ ಬಿಟ್ಟಿದ್ದು ತಪ್ಪು. ಗೋ ಮೂತ್ರ ಹಾಕಿ ಸಿಂಪಡಿಸಿʼʼಎಂದು ಕಮೆಂಟ್ ಮಾಡುತ್ತಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಪ್ರಕಾಶ್ ರಾಜ್
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿಕೆ ನೀಡಿರುವುದಕ್ಕೆ ಪ್ರಕಾಶ್ ಈ ಹಿಂದೆ ಬೆಂಬಲ ಸೂಚಿಸಿದ್ದರು. ಪ್ರಕಾಶ್ ರಾಜ್ ಹಿಂದು ವಿರೋಧಿ ಎಂಬ ಆರೋಪದ ಬಗ್ಗೆ ಸ್ವತಃ ಪ್ರಕಾಶ್ ರಾಜ್ ಅವರೇ ಈ ಬಗ್ಗೆ ಮಾತನಾಡಿದ್ದರು.
ಸನಾತನ ಧರ್ಮ ಎಂದರೆ ಏನು? ನಾನು ಬದಲಾಗುವುದಿಲ್ಲ ಎನ್ನುವುದು ಪ್ರಕೃತಿಗೆ ವಿರುದ್ಧ, ಕೆಲವರು ನಾನೇ ಶ್ರೇಷ್ಠ ಎನ್ನುತ್ತಾರೆ. ಕಾಗೆಗಳು ಹೆಚ್ಚಾಗಿ ಸೇರಿಕೊಂಡು ಕೋಗಿಲೆ ನಮ್ಮ ಮಾತು ಕೇಳಬೇಕು ಎನ್ನುವ ಮಾತು ಆಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಇವರು ದಾರಿ ತಪ್ಪಿಸುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರು ಯಾರೂ ಹಿಂದೂಗಳಲ್ಲಾ, ಇವರೆಲ್ಲಾ ರಾಜಕೀಯ ಲಾಭಕ್ಕಾಗಿ ದುರುದ್ದೇಶದಿಂದ ಮಾತನಾಡುತ್ತಿದ್ದಾರೆ. ಅಮಾವಾಸ್ಯೆ ಎಂದರೆ ಚೆನ್ನಾಗಿಲ್ವಂತೆ, ಆದರೆ ಚಂದ್ರಯಾನ ಮಾಡುತ್ತಾರಂತೆʼʼ ಎಂದು ವ್ಯಂಗ್ಯವಾಡಿದ್ದರು.
ʻʻನಾನು ಜನಪರ, ನಾನು ರಾಜಕೀಯ ವ್ಯಕ್ತಿ ಅಲ್ಲ. ಜೈ ಶ್ರೀರಾಮ್ ಅಂತ ಮೆರವಣಿಗೆಯಲ್ಲಿ ಯುವಕರು ಕೈಯಲ್ಲಿ ಕತ್ತಿ ಹಿಡಿದುಕೊಂಡು ಓಡಾಡುತ್ತಾರೆ ಎಂದರೆ ಏನರ್ಥ. ಅವರವರ ಧರ್ಮ, ಅವರವರ ನಂಬಿಕೆ ಅವರಿಗೆ ಬಿಟ್ಟಿದೆ, ಆದರೆ ಎಲ್ಲರೂ ಚೆನ್ನಾಗಿರಬೇಕು. ಬಸವಣ್ಣ, ಅಂಬೇಡ್ಕರ್ ಅವರು ಹೇಳಿದ್ದು ಭಾಷಣಕ್ಕಾಗಿ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಲುʼʼ ಎಂದು ತಿಳಿಸಿದ್ದರು.