Actor Yash: ಅಭಿಮಾನಿಯ ಕಾಲಿನ ಮೇಲೆ ಯಶ್ ಬೆಂಗಾವಲು ಪಡೆ ವಾಹನದ ಚಕ್ರ! - Vistara News

ಸ್ಯಾಂಡಲ್ ವುಡ್

Actor Yash: ಅಭಿಮಾನಿಯ ಕಾಲಿನ ಮೇಲೆ ಯಶ್ ಬೆಂಗಾವಲು ಪಡೆ ವಾಹನದ ಚಕ್ರ!

Actor Yash: ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

VISTARANEWS.COM


on

Actor Yash Fan Got Injured After His Escort Vehicle
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಶ್ ಬರ್ತ್​​ಡೇ (Actor Yash) ದಿನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಕಟೌಟ್ ನಿಲ್ಲಿಸುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯ ಕಹಿ ನೆನಪು ಹಸಿಯಾಗಿ ಇರುವಾಗಲೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್‌ ಆಗಮಿಸಿದ್ದರು. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಯಶ್ ಅವರನ್ನು ಬೆನ್ನುಹತ್ತಿ ಬಂದಿದ್ದರು ಫ್ಯಾನ್ಸ್. ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಗದಗ ಘಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್‌ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರಬಂದಿದ್ದು, ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ (Toxic Movie Update).

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Yuva Rajkumar: ಯುವ ಅಭಿಮಾನಿಗಳಿಗೆ ನಿರಾಸೆ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್‌

Yuva Rajkumar: ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಯುವ ರಾಜ್‌ಕುಮಾರ್ ʼಯುವʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟಿದ್ದಾರೆ. ಮೊದಲ ಸಿನಿಮಾದಲ್ಲೇ ಗಮನ ಸೆಳೇದಿರುವ ಅವರಿಗೆ ಈಗಾಗಲೇ ಸಾಕಷ್ಟು ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಏಪ್ರಿಲ್‌ 23ರಂದು ಯುವ ಅವರ ಹುಟ್ಟುಹಬ್ಬ. ಹೀಗಾಗಿ ಭರ್ಜರಿ ಆಚರಣೆಗೆ ಅಭಿಮಾನಿಗಳು ಸಿದ್ಧತೆ ನಡೆದಿದ್ದರು. ಆದರೆ ಇದೀಗ ಅವರಿಗೆ ನಿರಾಸೆಯಾಗಿದೆ. ಈ ವೇಳೆ ತಾವು ಊರಲ್ಲಿ ಇರುವುದಿಲ್ಲ ಎಂದು ಯುವ ತಿಳಿಸಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ʼಯುವʼ (Yuva Movie) ಕನ್ನಡ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಯುವ ರಾಜ್‌ಕುಮಾರ್ (Yuva Rajkumar) ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ವರನಟ ಡಾ. ರಾಜ್‌ ಕುಮಾರ್‌ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗದಲ್ಲಿ ಮಿಂಚಲು ಸಜ್ಜಾಗಿದೆ. ಬಾಕ್ಸ್‌ ಆಫೀಸ್‌ನಲ್ಲಿ ಯಶಸ್ಸು ಗಳಿಸಿದ್ದ ʼಯುವʼ ಸಿನಿಮಾ ಇದೀಗ ಒಟಿಟಿಯಲ್ಲಿಯೂ ರಿಲೀಸ್‌ ಆಗಿ ಗಮನ ಸೆಳೆಯುತ್ತಿದೆ. ಈ ಮಧ್ಯೆ ಯುವ ಅಭಿಮಾನಿಗಳಿಗೆ ಬೇಸರ ಸುದ್ದಿಯೊಂದು ಹೊರ ಬಿದ್ದಿದೆ. ಮಂಗಳವಾರ (ಏಪ್ರಿಲ್‌ 23) ಯುವ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಆಚರಿಸಲು ಅವರ ಅಭಿಮಾನಿಗಳಿ ನಿರ್ಧರಿಸಿದ್ದರು. ಆದರೆ ಈ ವೇಳೆ ತಾವು ಊರಲ್ಲಿ ಇರುವುದಿಲ್ಲ ಎಂದು ಯುವ ತಿಳಿಸಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಯುವ, ಮುಂದಿನ ವಾರದಿಂದ ತಾವು ಊರಿನಲ್ಲಿ ಇರುವುದಿಲ್ಲ. ಹೀಗಾಗಿ ಹುಟ್ಟುಹಬ್ಬವನ್ನು ಅಭಿಮಾನಿಗಳ ಜತೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ದೊಡ್ಮನೆ ಹುಡುಗನ ಬರ್ತ್ ಡೇ ಸೆಲೆಬ್ರೇಶನ್ ಮಾಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಬೇಸರ ಉಂಟಾಗಿದೆ. ಚುನಾವಣೆಯೂ ಇದಕ್ಕೆ ಕಾರಣ ಎನ್ನಲಾಗಿದೆ.

ಯುವ ರಾಜ್‌ಕುಮಾರ್‌ ಹೇಳಿದ್ದೇನು?

ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ ಯುವ, ʼʼಎಲ್ಲರಿಗೂ ನಮಸ್ಕಾರ. ಮೊದಲನೆಯದಾಗಿ ʼಯುವʼ ಚಿತ್ರವನ್ನು ಪ್ರೀತಿಯಿಂದ ಸ್ವೀಕರಿಸಿ, ಆಶೀರ್ವಾದ ಮಾಡಿದ್ದಕ್ಕೆ ಧನ್ಯವಾದಗಳು. ಮುಂದಿನ ವಾರ ನಾನು ಊರಿನಲ್ಲಿ ಇರೋದಿಲ್ಲ. ಆ ಕಾರಣದಿಂದ ಹುಟ್ಟುಹಬ್ಬವನ್ನು ನಿಮ್ಮ ಜತೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿ ದಯವಿಟ್ಟು ಕ್ಷಮಿಸಿ. ನೀವು ಎಲ್ಲಿದ್ದರೂ ಹೃತ್ಫೂರ್ವಕವಾಗಿ ಹಾರೈಸಿದರೆ ಅದು ನನಗೆ ತಲುಪುತ್ತದೆ. ಆದಷ್ಟು ಬೇಗ ನಿಮ್ಮೆಲ್ಲರನ್ನು ಮತ್ತೆ ಭೇಟಿಯಾಗುತ್ತೇನೆʼʼ ಎಂದು ಹೇಳಿದ್ದಾರೆ.

ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ʼಯುವʼ ಚಿತ್ರಕ್ಕೆ ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್​ರಾಮ್ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಯುವ ರಾಜ್​ಕುಮಾರ್ ಜತೆಗೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಸುಧಾರಾಣಿ, ಹಿತಾ ಚಂದ್ರಶೇಖರ್ ಮೊದಲಾದವರು ನಟಿಸಿರುವ ಈ ಸಿನಿಮಾ ಮಾರ್ಚ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿತ್ತು. ಎಲೆಕ್ಷನ್ ಅಬ್ಬರದ ಮಧ್ಯೆಯೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿತ್ತು. ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಸದ್ಯ ʼಯುವʼ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಹೀಗಿದ್ದರೂ ಥಿಯೇಟರ್‌ಗಳಲ್ಲಿ ಇನ್ನೂ ಸಿನಿಮಾ ಪ್ರದರ್ಶನ ಕಾಣುತ್ತಿರುವುದು ವಿಶೇಷ.  ಯುವ ರಾಜ್‌ಕುಮಾರ್ ಹುಟ್ಟುಹಬ್ಬದಂದು ಅವರ ಹೊಸ ಸಿನಿಮಾ ಘೋಷಣೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಅವರ ಮುಂದಿನ ಚಿತ್ರದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Continue Reading

ಕರ್ನಾಟಕ

Actor Sri Murali: ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟು; ಆಸ್ಪತ್ರೆಗೆ ದಾಖಲು

Actor Sri Murali: ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದೆ.

VISTARANEWS.COM


on

Actor Sri Murali
Koo

ಬೆಂಗಳೂರು: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ರೋರಿಂಗ್‌ ಸ್ಟಾರ್‌ ಶ್ರೀಮುರಳಿ (Actor Sriimurali) ಅವರ ಬಹುನಿರೀಕ್ಷಿತ ‘ಬಘೀರ’ ಚಿತ್ರದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಒಂದೂವರೆ ನಿಮಿಷದ ಆಕ್ಷನ್ ಪ್ಯಾಕ್ಡ್ ಟೀಸರ್ ರಿಲೀಸ್ ಆಗಿ ಸದ್ದು ಮಾಡಿತ್ತು. ಚಿತ್ರದಲ್ಲಿ ರಗಡ್‌ ಲುಕ್‌ನಲ್ಲಿ ಶ್ರೀ ಮುರುಳಿ ಮಿಂಚಿದ್ದಾರೆ.

ʼಕೆಜಿಎಫ್ ಚಾಪ್ಟರ್ 2ʼ ಮತ್ತು ʼಕಾಂತಾರʼ ಸಿನಿಮಾಗಳ ಮೆಗಾ ಯಶಸ್ಸಿನ ನಂತರ ಹೊಂಬಾಳೆ ಫಿಲ್ಮ್ಸ್ ʼಬಘೀರʼ ಚಿತ್ರವನ್ನು ನಿರ್ಮಿಸುತ್ತಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಕಥೆ ಬರೆದಿದ್ದು, ʼಲಕ್ಕಿʼ ಸಿನಿಮಾ ಖ್ಯಾತಿಯ ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ.

ಸೂರಿ ಅವರು ಯಶ್‌ ಅವರ ʼಲಕ್ಕಿ ʼ ಚಿತ್ರದ ನಂತರ ನಾಲ್ಕು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಬರುತ್ತಿದ್ದಾರೆ. ಮಫ್ತಿ, ಭರಾಟೆ, ರಥಾವರ, ಕಂಠಿ ಚಿತ್ರಗಳಲ್ಲಿ ಅಬ್ಬರಿಸಿದ ಶ್ರೀಮುರುಳಿ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ರಕ್ಷಿತ್‌ ಶೆಟ್ಟಿ ನಟನೆಯ ʻಸಪ್ತ ಸಾಗರದಾಚೆ ಎಲ್ಲೋʼ, ಗಣೇಶ್ ನಟನೆಯ “ಬಾನ ದಾರಿಯಲ್ಲಿʼ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ರುಕ್ಮಿಣಿ ವಸಂತ್ ಈಗ “ಬಘೀರʼ ಚಿತ್ರಕ್ಕೂ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

ಈ ಬಾರಿ ಕಾಮಿಡಿ ಕಿಲಾಡಿ ಶೋನಲ್ಲಿ ಯಾರೂ ನಗಂಗಿಲ್ಲ! ಏನಿದು ಹೊಸ ಶೋ?

Comedy Khiladigalu Premier League Coming Soon

ಬೆಂಗಳೂರು: ಜೀ ಕನ್ನಡ ವಾಹಿನಿಯ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಅಂದರೆ ಅದುವೇ ʻಕಾಮಿಡಿ ಕಿಲಾಡಿಗಳುʼ ಶೋ. (Comedy Khiladigalu Premier League) “ಸೈಡ್‌ಗಿಡ್ರಿ ನಿಮ್‌ ಟೆನ್ಷನ್‌ಗಳು, ಮತ್ತೆ ಬಂದಿದ್ದಾರೆ ಕಾಮಿಡಿ ಕಿಲಾಡಿಗಳು” ಎಂಬ ಸ್ಲೋಗನ್‌ ಮೂಲಕ ವಾರಾಂತ್ಯದಲ್ಲಿ ಕರುನಾಡನ್ನೇ ನಗೆಗಡಲಲ್ಲಿ ತೇಲಿಸುವ ಕೀರ್ತಿ ಈ ಕಾರ್ಯಕ್ರಮಕ್ಕೆ ಸಲ್ಲುತ್ತದೆ. ಇದೀಗ ಸೀಸನ್‌ 5 ಪ್ರೇಕ್ಷಕರ ಮುಂದೆ ಬರುತ್ತಿದೆ. ಇದೀಗ ವಾಹಿನಿ ಹೊಸ ಪ್ರೋಮೊ ಹಂಚಿಕೊಂಡಿದ್ದು, ನೋಡಲು ತುಂಬ ವಿಶೇಷವಾಗಿದೆ. ʻಈ ಬಾರಿ ನಗುವ ಹಾಗೆ ಇಲ್ವಂತೆ. ನಕ್ಕರೆ ಲಾಸು, ನಗಿಸೋರಿಗೆ ಕೈತುಂಬಾ ಕಾಸುʼ ಎನ್ನುತ್ತಲೇ ನವರಸ ನಾಯಕ ಜಗ್ಗೇಶ್ ವೀಕ್ಷಕರಿಗೆ ಕುತೂಹಲ ಕೆರಳಿಸಿದ್ದಾರೆ.

ಕಾಮಿಡಿ ಕಿಲಾಡಿಗಳು ಮುಂದಿನ ಸೀಸನ್‌ ವಿಶೇಷವಾಗಿರಲಿದೆ. ​ಗನ್ ಹಿಡಿದು ಕೆಲವರು ಜಗ್ಗೇಶ್‌ ಹಿಂದೆ ನಿಂತು ಸೀರಿಯಸ್ ಆಗಿದ್ದಾರೆ. ಜಗ್ಗಣ್ಣ ನಕ್ಕು ಬಿಡಿ ಅಂದಾಗ, ಇವರೆಲ್ಲ ಗುಂಡು ಹಾರಿಸಿ ಇಡೀ ವಾತಾವರಣ ರಣರಂಗ ಮಾಡಿ ಬಿಡುತ್ತಾರೆ. ಆಗ ಒಟ್ಟಿಗೆ ನಗುತ್ತಾರೆ. ಕಾಮಿಡಿ ಶೋ ಇರುವುದು ನಗೋಕೆ ಮತ್ತು ನಗಿಸೋಕೆ. ಆದರೆ ಈ ಸಲ ನಗೋ ಹಾಗಿಲ್ಲ ಅನ್ನೋದೇ ಕಾನ್ಸೆಪ್ಟ್ ಅನಿಸುತ್ತದೆ. ಹಾಗಾಗಿಯೇ ಈ ಶೋ ಮೊದಲ ಪ್ರೋಮೊ ಇದೀಗ ವಿಶೇಷವಾಗಿಯೇ ಕಾಣಿಸುತ್ತಿದೆ. ಇದರ ಪ್ರೀಮಿಯರ್​ ಶೋ ಶೀಘ್ರದಲ್ಲಿ ಎಂದು ಹಂಚಿಕೊಳ್ಳಲಾಗಿದೆ. ಆದರೆ ಇದನ್ನ ನೋಡುವ ಪ್ರೇಕ್ಷಕರು ಮತ್ತು ನಿರ್ಣಾಯಕರು ನಗಬಹುದು ಎನ್ನುವುದನ್ನೂ ಇಂಟರೆಸ್ಟಿಂಗ್ ಆಗಿಯೇ ಜಗ್ಗೇಶ್​ ಅವರು ಹೇಳಿದ್ದಾರೆ.

ಇದನ್ನೂ ಓದಿ: Comedy khiladi Nayana: ಹೆಣ್ಣು ಮಗುವಿಗೆ ತಾಯಿಯಾದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಯನಾ!

ಸೀಸನ್ 4 ಈಗಾಗಲೇ ಮುಕ್ತಾಯಗೊಂಡಿದೆ. ಸೀಸನ್‌ 4ರ ವಿಜೇತರಾಗಿ ಹರೀಶ್ ಹಿರಿಯೂರು, ಮೊದಲನೇ ರನ್ನರ್ ಅಪ್ ಆಗಿ ಮಂಡ್ಯದ ಗಿಲ್ಲಿ ನಟ ಮತ್ತು ಎರಡನೇ ರನ್ನರ್ ಆಫ್ ಆಗಿ ಶುಭಾ ಸ್ಥಾನ ಪಡೆದಿದ್ದರು. ಒಟ್ಟು 12 ಜನ ಟಾಪ್​ ಫೈನಲಿಸ್ಟ್‌ಗಳ ನಡುವೆ ಈ ಮೂವರು ವಿಶೇಷ ಸ್ಥಾನ ಪಡೆದಿದ್ದರು.

ಪ್ರತಿ ಬಾರಿಯಂತೆ ಈ ಬಾರಿಯೂ ನವರಸನಾಯಕ ಜಗ್ಗೇಶ್‌, ನಟಿ ರಕ್ಷಿತಾ ಪ್ರೇಮ್‌ ಕಾಮಿಡಿ ಕಿಲಾಡಿಗೆ ತೀರ್ಪುಗಾರರಾಗಿರಲಿದ್ದಾರೆ ಎಂದೇ ವರದಿಯಾಗಿದೆ. ಈ ಕಾರ್ಯಕ್ರಮದ ಮೂಲಕ ಹೆಸರು ಪಡೆದವರು ಅದೆಷ್ಟೋ ಸ್ಟಾರ್‌ ನಟರ ಜತೆ, ಬೆಳ್ಳಿ ಪರದೆಯಲ್ಲಿ ಕಲಾವಿದರಾಗಿ ಮಿಂಚುತ್ತಿದ್ದಾರೆ. ಮೆಗಾ ಆಡಿಷನ್‌ನಲ್ಲಿ ಈ ಬಾರಿಯೂ ವಿವಿಧ ಭಾಗದ ಬೇರೆ ಬೇರೆ ಕಲಾವಿದರು ಆಯ್ಕೆಯಾಗಿದ್ದಾರೆ. ತಮ್ಮ ವಿಶೇಷ ಪ್ರತಿಭೆಗಳಿಂದ ನೋಡುಗರನ್ನು ರಂಜಿಸಲಿದ್ದಾರೆ.‌ ಈ ಕಾರ್ಯಕ್ರಮದ (Comedy Khiladigalu) ಎಲ್ಲ ಸೀಸನ್‌ಗಳಲ್ಲಿಯೂ ಅದ್ಭುತವಾಗಿ ನಿರೂಪಣೆ ಮಾಡಿರುವ ಮಾಸ್ಟರ್‌ ಆನಂದ್‌ ಈ ಬಾರಿಗೂ ನಿರೂಪಣೆ ಜವಾಬ್ದಾರಿಯನ್ನು ಹೊತ್ತಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Vijayalakshmi Darshan: ಬಕೆಟ್ ಸೈಜ್​​​ ಕಪ್​​​​​ ಕಾಫಿ ಕುಡಿದ ದರ್ಶನ್ ಪತ್ನಿ! ನೆಟ್ಟಿಗರ ಪ್ರತಿಕ್ರಿಯೆ ಮಜವಾಗಿದೆ!

Vijayalakshmi Darshan: ವಿಜಯಲಕ್ಷ್ಮೀ ಅವರು ಈಗ ಕೈಯಲ್ಲಿ ಹಿಡಿಯಲಾಗದಷ್ಟು ದೊಡ್ಡದಾಗಿರುವ ಕಪ್​​ನಲ್ಲಿ ಕಾಫಿ ಸವಿದಿದ್ದಾರೆ. ಇದರ ಜತೆಗೆ ಕ್ರೋಸೆಂಟ್ (Croissant) ಕೂಡಾ ತಿಂದಿದ್ದಾರೆ. ವಿಶೇಷ ಅಂದರೆ ಈ ಕ್ರೋಸೆಂಟ್ ಎತ್ತಲು ಎರಡು ಕೈ ಕೂಡ ಸಾಕಾಗುವುದಿಲ್ಲ. ಈ ಫೋಟೊ ನೋಡಿ ನೆಟ್ಟಿಗರು ಕಾಫಿಯಿಂದ ಸ್ನಾನ ಕೂಡ ಮಾಡಬಹದು ಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Vijayalakshmi Darshan relishes a generous cup of coffee
Koo

ಬೆಂಗಳೂರು: ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಆಗಾಗ ವಿವಾದಾತ್ಮಕ ಪೋಸ್ಟ್‌ಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಜತೆಗೆ ಎಂಜಾಯ್‌ ಮಾಡುತ್ತಿರುವ, ವೆಕೇಶನ್‌ ಮೂಡ್‌ನಲ್ಲಿರುವ ಫೋಟೊಗಳನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಫುಡ್‌ವನ್ನು ತುಂಬ ಇಷ್ಟಪಡುವ ವಿಜಯಲಕ್ಷ್ಮೀ ಅವರು ಈಗ ಕೈಯಲ್ಲಿ ಹಿಡಿಯಲಾಗದಷ್ಟು ದೊಡ್ಡದಾಗಿರುವ ಕಪ್​​ನಲ್ಲಿ ಕಾಫಿ ಸವಿದಿದ್ದಾರೆ. ಇದರ ಜತೆಗೆ ಕ್ರೋಸೆಂಟ್ (Croissant) ಕೂಡಾ ತಿಂದಿದ್ದಾರೆ. ವಿಶೇಷ ಅಂದರೆ ಈ ಕ್ರೋಸೆಂಟ್ ಎತ್ತಲು ಎರಡು ಕೈ ಕೂಡ ಸಾಕಾಗುವುದಿಲ್ಲ. ಈ ಫೋಟೊ ನೋಡಿ ನೆಟ್ಟಿಗರು ಕಾಫಿಯಿಂದ ಸ್ನಾನ ಕೂಡ ಮಾಡಬಹುದು ಎಂದು ಕಮೆಂಟ್‌ ಮಾಡಿದ್ದಾರೆ!

ವಿಜಯಲಕ್ಷ್ಮಿ ದರ್ಶನ್ ಅವರ ಈ ಬಕೆಟ್ ಸೈಜ್ ಕಪ್ ಕಾಫಿ ಮತ್ತು ಬಿಗ್ ಸೈಜ್ ಕ್ರೋಸೆಂಟ್ ಫೋಟೊ ವೈರಲ್‌ ಆಗಿದೆ. ʻಒಂದು ಕಪ್ ಕಾಫಿ ತಗೊಂಡರೆ, ಒಂದು ತಿಂಗಳು ಚಿಂತೆ ಇಲ್ಲʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರುʻ ಕಾಫಿ ಎಷ್ಟು ಬೇಕು ನಿಮಗೆ ಕುಡಿಯಿರಿ. ಹಾಗೆ ನಮ್ಮ ಬಾಸ್​ಗೂ ಸ್ವಲ್ಪ ಉಳಿಸಿʼ ಎಂಬ ಮನವಿಯನ್ನೂ ಮಾಡಿಕೊಂಡಿದ್ದಾರೆ.

ವಿಜಯಲಕ್ಷ್ಮಿ ಅವರ ಜತೆ ವಿನೀಶ್ ಮತ್ತು ದರ್ಶನ್ ಅವರು ಕೂಡ ಈ ಫೋಟೊದಲ್ಲಿ ಇದ್ದಿದ್ದರೆ ಆಗ ಪರ್ಫೆಕ್ಟ್ ಫ್ಯಾಮಿಲಿ ಫೋಟೊ ಆಗ್ತಿತ್ತು ಅನ್ನುವ ಅಭಿಪ್ರಾಯವನ್ನೂ ಕೂಡ ಇದೇ ಸಮಯದಲ್ಲಿ ಅನೇಕರು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Darshan Thoogudeepa: ದರ್ಶನ್‌ ಜತೆಗಿನ ಫೋಟೊ ಹಂಚಿಕೊಂಡ ಪವಿತ್ರಗೌಡ; ವಿಜಯಲಕ್ಷ್ಮಿ ಕೆಂಡಾಮಂಡಲ!

ಪಾರ್ಟಿಯಲ್ಲಿ ಪತ್ನಿ ಜತೆ ಕುಣಿದು ಕುಪ್ಪಳಿಸಿದ್ದ ʻಡಿ ಬಾಸ್‌ʼ

ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ವೈಯಕ್ತಿಕ ಜೀವನ ಆಗಾಗ ಚರ್ಚೆಯಲ್ಲಿ ಇರುತ್ತದೆ. ದರ್ಶನ್ ಜತೆ 10 ವರ್ಷಗಳಿಂದ ರಿಲೇಷನ್‌ಶಿಪ್‌ನಲ್ಲಿ ಇದ್ದೆ ಎಂದು ಪವಿತ್ರಾ ಗೌಡ ಹೇಳಿಕೆ ನೀಡಿದ್ದರು. ಇದಾದ ಬಳಿಕ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಪವಿತ್ರಾ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದೇ ಹೋಯ್ತು. ಶ್ರೀರಂಗಪಟ್ಟಣದಲ್ಲಿ ನಡೆದ ಬೆಳ್ಳಿಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಪರೋಕ್ಷವಾಗಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು. ಇದೂ ಕೂಡ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದಾದ ನಂತರ ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮೀ ಜತೆ ಸ್ಟೆಪ್ಸ್‌ ಹಾಕಿರುವ ವಿಡಿಯೊ ವೈರಲ್‌ ಆಗಿತ್ತು.

ದರ್ಶನ್‌ ವಿರುದ್ಧ ಹಲವು ಕೇಸ್‌ಗಳು ದಾಖಲಾಗಿವೆ. ಇಷ್ಟೆಲ್ಲ ರಂಪಾಟ ನಡೆದಿದ್ದರೂ ಸ್ನೇಹಿತರ ಬರ್ತ್‌ಡೇ ಪಾರ್ಟಿಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜತೆ ಕುಣಿದು ಕುಪ್ಪಳಿಸಿದ್ದರು. ವಿಜಯಲಕ್ಷ್ಮಿ ಜತೆ ವೇದಿಕೆ ಏರಿ ರೊಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ್ದರು. ಆ ವಿಡಿಯೋ ಈಗ ವೈರಲ್ ಆಗುತ್ತಿದೆ. ʻಬಾಸ್- ಅತ್ತಿಗೆ ಡ್ಯಾನ್ಸ್ ಸೂಪರ್ʼ ಎಂದು ಅಭಿಮಾನಿಗಳು ಖುಷಿಯಾಗಿದ್ದರು.

Continue Reading

ಕ್ರೈಂ

Neha Murder Case: ನೇಹಾ ಹತ್ಯೆ ಖಂಡಿಸಿದ ನಟರಾದ ದರ್ಶನ್‌, ರಿಷಬ್‌, ಶಿವಣ್ಣ

Neha Murder Case: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್‌. ರಿಷಬ್‌ ಶೆಟ್ಟಿ, ಶಿವಣ್ಣ ಪೋಸ್ಟ್‌ ಬೆನ್ನಲ್ಲೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಗ್ಗೆ ಧ್ವನಿ ಎತ್ತಿದ್ದಾರೆ. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Neha Murder Case darshan shivanna Rishab React
Koo

ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ (Neha Murder Case) ಬರ್ಬರ ಕೊಲೆ ಪ್ರಕರಣ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿ ಫಯಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸಿನಿಮಾ ತಾರೆಯರು ಕೂಡ ಧ್ವನಿ ಎತ್ತಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ನಟಿ ಪ್ರಿಯಾ ಸವದಿ, ನಟಿ ಕಾವ್ಯಾ ಶಾಸ್ತ್ರಿ, ರಚಿತಾ ರಾಮ್‌. ರಿಷಬ್‌ ಶೆಟ್ಟಿ, ಶಿವಣ್ಣ ಪೋಸ್ಟ್‌ ಬೆನ್ನಲ್ಲೇ ಇದೀಗ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಬಗ್ಗೆ ಧ್ವನಿ ಎತ್ತಿದ್ದಾರೆ. “ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ” ಎಂದು ಬರೆದುಕೊಂಡಿದ್ದಾರೆ.

ದರ್ಶನ್‌ ಪೋಸ್ಟ್‌ನಲ್ಲಿ ʻʻಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Neha Murder Case: ನೇಹಾ-ಫಯಾಜ್ ಪ್ರೀತಿಗೆ ನ್ಯಾಯ ಕೊಡಿಸಿ ಎಂದು ಪೋಸ್ಟ್ ಮಾಡಿದ ಇಬ್ಬರು ವಶಕ್ಕೆ

ರಿಷಬ್‌ ಶೆಟ್ಟಿ ಪೋಸ್ಟ್‌ನಲ್ಲಿ ʻʻನೇಹಾ ಹೀರೆಮಠ ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಲಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುಬ ಸಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ಶಿವರಾಜ್‌ ಕುಮಾರ್‌ ಅವರು ಪೋಸ್ಟ್‌ನಲ್ಲಿ ʻʻಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಬರೆದುಕೊಂಡಿದ್ದಾರೆ.

ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

ಏ.18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು (Hubballi BVB College) ಆವರಣದಲ್ಲೇ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಬರ್ಬರವಾಗಿ (Neha Murder Case) ಕೊಲೆಯಾಗಿದ್ದಳು. ಪಾಗಲ್‌ ಪ್ರೇಮಿಯ ಕೃತ್ಯಕ್ಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ಮುಂದುವರಿದಿದೆ. ಆರೋಪಿಯನ್ನು ಎನ್‌ಕೌಂಟರ್ ಮಾಡಿ ಬಿಸಾಕಿ ಎಂದು ಆಕ್ರೋಶಗಳು ಕೇಳಿಬರುತ್ತಿವೆ. ಈ ನಡುವೆ ಘಟನೆ ಬಗ್ಗೆ ಆರೋಪಿ ಫಯಾಜ್‌ ತಾಯಿ ಮಮ್ತಾಜ್ ಪ್ರತಿಕ್ರಿಯಿಸಿದ್ದು, ಫಯಾಜ್‌ಗೆ ಶಿಕ್ಷೆ ಆಗಬೇಕೆಂದು ಕಣ್ಣೀರು ಹಾಕಿದ್ದಾರೆ.

ನನ್ನ ಮಗ ಫಯಾಜ್‌ ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆ ಆಗಬೇಕು. ಆತನ ತಪ್ಪಿಗೆ ನಾನು ರಾಜ್ಯದ ಜನತೆಗೆ ಹಾಗೂ ನೇಹಾಳ ತಂದೆ-ತಾಯಿಗೂ ಕ್ಷಮೆಯಾಚಿಸುತ್ತೆನೆ. ಅವರಿಗೆ ಎಷ್ಟು ದುಃಖ ಆಗಿದ್ದೀಯೋ ಅಷ್ಟೇ ನೋವನ್ನು ನಾವು ಅನುಭವಿಸುತ್ತಿದ್ದೇವೆ. ಯಾವ ಮಕ್ಕಳು ತಪ್ಪು ಮಾಡಿದರೂ ತಪ್ಪೇ.. ನನ್ನ ಮಗ ಮಾಡಿದ ತಪ್ಪಿಗೆ ಈ ನೆಲದ ಕಾನೂನು ಏನು ಶಿಕ್ಷೆ ವಿಧಿಸುತ್ತೋ ಆ ಪ್ರಕಾರ ಶಿಕ್ಷೆ ಆಗಲಿ ಎಂದರು.

Continue Reading
Advertisement
Lok Sabha Election 2024
ಕರ್ನಾಟಕ21 mins ago

Lok Sabha Election: ಮೋದಿಯಿಂದ ಮಧ್ಯಮ ವರ್ಗದ ಬದುಕು ಹೈರಾಣಾಗಿತ್ತು, ನಾವು ಗ್ಯಾರಂಟಿ ಮೂಲಕ ಸ್ಪಂದಿಸಿದ್ದೇವೆ: ಸಿಎಂ

The Great Khal
ಪ್ರಮುಖ ಸುದ್ದಿ27 mins ago

The Great Khali : ರಾಹುಲ್ ಗಾಂಧಿ ಸುಳ್ಳ ಎಂದು ಕರೆದ ಬಿಜೆಪಿ ನಾಯಕ ದಿ ಗ್ರೇಟ್ ಖಲಿ, ಇಲ್ಲಿದೆ ವಿಡಿಯೊ

IPL 2024
ಪ್ರಮುಖ ಸುದ್ದಿ41 mins ago

IPL 2024 : ಗುಜರಾತ್​ ತಂಡಕ್ಕೆ3 ವಿಕೆಟ್​ ವಿಜಯ, ಪಂಜಾಬ್​ಗೆ ಬಿಡದ ಸೋಲಿನ ನಂಟು

belagavi Airport
ಕರ್ನಾಟಕ43 mins ago

Indigo Airlines: ಪ್ರಯಾಣಿಕರ ಲಗೇಜ್‌ ಬೆಂಗಳೂರಲ್ಲೇ ಬಿಟ್ಟು ಬೆಳಗಾವಿಗೆ ಬಂದ ವಿಮಾನ; ಮಾಜಿ ಸಿಎಂ ಬ್ಯಾಗ್‌ ಕೂಡ ಮಿಸ್ಸಿಂಗ್!‌

Viral News
ವೈರಲ್ ನ್ಯೂಸ್53 mins ago

Viral News: ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನೇತಾಡುವ ಯುವಕ; ಶಾಕಿಂಗ್‌ ವಿಡಿಯೊ ನೋಡಿ

Sportsmanship
ಕ್ರೀಡೆ1 hour ago

Sportsmanship : ಭಾರತದವರನ್ನೇ ಸೋಲಿಸಿ ತ್ರಿವರ್ಣ ಧ್ವಜವನ್ನೂ ಎತ್ತಿ ಹಿಡಿದ ಪಾಕ್ ಕರಾಟೆ ಪಟು!

DK Suresh
ಬೆಂಗಳೂರು2 hours ago

DK Suresh: ಬೆಲೆ ಏರಿಕೆ, ಜಿಎಸ್‌ಟಿ ಹೊರೆಯೇ ಮೋದಿ ಗ್ಯಾರಂಟಿ: ಡಿ.ಕೆ. ಸುರೇಶ್

soil
ಕೃಷಿ2 hours ago

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

Narendra modi
ದೇಶ2 hours ago

Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Bulldozer Justice
ದೇಶ2 hours ago

Bulldozer Justice Video: ಅತ್ಯಾಚಾರ ಎಸಗಿ ಕ್ರೂರಹಿಂಸೆ; ಆರೋಪಿ ಅಯಾನ್‌ ಪಠಾಣ್‌ ಮನೆ ಧ್ವಂಸಗೊಳಿಸಿದ ಬುಲ್ಡೋಜರ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ19 hours ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ1 day ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 day ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20241 day ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ1 day ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ2 days ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ2 days ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ3 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ5 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

ಟ್ರೆಂಡಿಂಗ್‌