ಬೆಂಗಳೂರು: ಫೆಬ್ರವರಿ 29 ರಂದು ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್ (Actor Yash) ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಅವರಲ್ಲಿ ಕೆಲವು ಯಶ್ (Actor Yash) ಅವರ ಕಾರನ್ನು ಹಿಂಬಾಲಿಸಿದ್ದರು. ಈ ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿತ್ತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಆ ಯುವಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.
ಯುವಕ ಉಮೇಶ್ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತಮ್ಮ ಕಾಲ ಮೇಲೆ ಹರಿದ ಕಾರನ್ನು ಚಲಾಯಿಸುತ್ತಿದ್ದ ಚಾಲಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಕಾರಿನ ಚಾಲಕನಿಗೆ ಕಾನೂನು ರೀತಿ ಶಿಕ್ಷೆ ಆಗಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಯಶ್ ಬರ್ತ್ಡೇ (Actor Yash) ದಿನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಕಟೌಟ್ ನಿಲ್ಲಿಸುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯ ಕಹಿ ನೆನಪು ಹಸಿಯಾಗಿ ಇರುವಾಗಲೇ ಮತ್ತೊಂದು ಅಂಥದ್ದೇ ಘಟನೆ ನಡೆದಿತ್ತು. ನಟ ಯಶ್ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿತ್ತು. ಕೂಡಲೇ ಆ ಯುವಕನನ್ನು ಬಳ್ಳಾರಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಬಳಿಕ ಯುವಕ ಚೇತರಿಸಿಕೊಂಡಿದ್ದು, ತಮಗೆ ಗಾಯ ಮಾಡಿದ ಕಾರು ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Actor Yash: ಕರುವಿಗೆ ಬಾಟಲ್ ಹಾಲು ಕುಡಿಸಿದ ರಾಕಿಂಗ್ ಫ್ಯಾಮಿಲಿ!
ಗದಗ ಘಟನೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್ ಗಾತ್ರದ ಕಟೌಟ್ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.