ಬೆಳ್ಳಂಬೆಳಗ್ಗೆ ಯಶ್ (Yash) ಮುಂದಿನ (Actor Yash)ಸಿನಿಮಾ ಕುರಿತು ಅಪ್‌ಡೇಟ್ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಚಿತ್ರಕ್ಕೆ ಇಂದು (ಆ.8) ಸರಳವಾಗಿ ಚಾಲನೆ ನೀಡಿದ್ದಾರೆ.
‘ಪಯಣ ಶುರುವಾಗಿದೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ‘ಟಾಕ್ಸಿಕ್’ ಸಿನಿಮಾದ ಶೂಟ್ ಇಂದಿನಿಂದ ಆರಂಭ ಆಗಿದೆ ಎಂಬುದನ್ನು ಅಧಿಕೃತ ಮಾಡಿದ್ದಾರೆ.
ಇದನ್ನೂ ಓದಿ: Actor Yash: ʻಟಾಕ್ಸಿಕ್ʼ ಪಯಣ ಶುರುವಾಗಿದೆ ಎಂದು ಗುಡ್ ನ್ಯೂಸ್ ಕೊಟ್ಟ ರಾಕಿಂಗ್ ಸ್ಟಾರ್ ಯಶ್!
ಯಶ್ ಅವರು ಇತ್ತೀಚೆಗಷ್ಟೇ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅಲ್ಲಿ ದೇವರ ದರ್ಶನ ಪಡೆದಿದ್ದರು.
ಈ ಚಿತ್ರಕ್ಕೆ ಗೀತು ಮೋಹನ್ ದಾಸ್ ನಿರ್ದೇಶನ ಮಾಡಲಿದ್ದಾರೆ. ಯಶ್ ನಟನೆಯ ಈ ಸಿನಿಮಾವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ.