Actor Yash: ಬಾಡಿಗಾರ್ಡ್‌ ಶ್ರೀನಿವಾಸ್‌ ಹುಟ್ಟುಹಬ್ಬ ಸಂಭ್ರಮದಲ್ಲಿ ಪಾಲ್ಗೊಂಡ ಯಶ್‌; ಫೋಟೊ ಗ್ಯಾಲರಿ ಇಲ್ಲಿದೆ - Vistara News

ಸ್ಯಾಂಡಲ್ ವುಡ್

Actor Yash: ಬಾಡಿಗಾರ್ಡ್‌ ಶ್ರೀನಿವಾಸ್‌ ಹುಟ್ಟುಹಬ್ಬ ಸಂಭ್ರಮದಲ್ಲಿ ಪಾಲ್ಗೊಂಡ ಯಶ್‌; ಫೋಟೊ ಗ್ಯಾಲರಿ ಇಲ್ಲಿದೆ

Actor Yash: ಸದ್ಯ ʼಟಾಕ್ಸಿಕ್‌ʼ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿರುವ ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಾಡಿಗಾರ್ಡ್‌ ಶ್ರೀನಿವಾಸ್‌ ಅವರ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.

VISTARANEWS.COM


on

yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ (Actor Yash) ಸದ್ಯ ಬಹು ನಿರೀಕ್ಷಿತ ʼಟಾಕ್ಸಿಕ್‌ʼ (Toxic) ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ʼಕೆಜಿಎಫ್‌ʼ ಸರಣಿ ಚಿತ್ರಗಳ ಯಶಸ್ಸಿನ ಬಳಿಕ ಯಶ್‌ ನಟಿಸುತ್ತಿರುವ ಸಿನಿಮಾ ಇದಾಗಿರುವುದರಿಂದ ಸಹವಾಗಿಯೇ ಕುತೂಹಲ ಗರಿಗೆದರಿದೆ. ಈ ಮಧ್ಯೆ ಅವರು ತಮ್ಮ ಜತೆ ಸದಾ ಇರುವ ಬಾಡಿಗಾರ್ಡ್ ಶ್ರೀನಿವಾಸ್‌ ಅವರ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದಾರೆ. ಶ್ರೀನಿವಾಸ್‌ ಈ ಫೋಟೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ʼʼಇಂದು ನನ್ನ ಹುಟ್ಟುಹಬ್ಬ ಅತ್ಯಂತ ಆನಂದದಿಂದ ಕೂಡಿತ್ತು! ಯಶ್ ಅಣ್ಣ, ಸ್ನೇಹಿತರು ಹಾಗೂ ಕುಟುಂಬ ಸದಸ್ಯರು ನನಗೆ ಅನೇಕ ಹಾರೈಕೆಗಳನ್ನು ಹಂಚಿದ್ದಾರೆ. ಇದು ನನ್ನ ಜೀವನದ ಅಮೂಲ್ಯ ದಿನ. ನಿಮ್ಮ ಪ್ರೇಮ ಮತ್ತು ಆಶೀರ್ವಾದಗಳು ನನಗೆ ಅತ್ಯಂತ ಸುಖಕರʼʼ ಎಂದು ಬರೆದುಕೊಂಡಿದ್ದಾರೆ. ಯಶ್‌ ಅವರ ಸರಳತೆಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Jodi No 1: ಜೋಡಿ ನಂ. 1ನಲ್ಲಿ ಗೆದಿದ್ದು ಯಾರು? ಅದ್ಧೂರಿಯಾಗಿ ನಡೀತು ಗ್ರ್ಯಾಂಡ್‌ ಫಿನಾಲೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Rashmika Mandanna: ಧನುಷ್‌ -ರಶ್ಮಿಕಾ ಅಭಿನಯದ ಸಿನಿಮಾವೊಂದರ ದೃಶ್ಯ ಲೀಕ್‌!

Rashmika Mandanna: ಧನುಷ್‌ ಹಾಗೂ ರಶ್ಮಿಕಾ ನಟಿಸುತ್ತಿರುವ ದೃಶ್ಯವೊಂದರ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ವಿಡಿಯೊದಲ್ಲಿ ರಶ್ಮಿಕಾ ಬಿಳಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ.

VISTARANEWS.COM


on

Leaked video Dhanush and Rashmika Mandanna D 51
Koo

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಅತ್ಯಂತ ಬೇಡಿಕೆ ಇರುವ ನಟಿ. ಧನುಷ್‌​ ನಟನೆಯ 51ನೇ ಸಿನಿಮಾವನ್ನು ‘ಡಿ 51’ (D 51 Movie) ಎಂದು ಕರೆಯಲಾಗುತ್ತಿದೆ. ಈ ಚಿತ್ರಕ್ಕೆ ರಶ್ಮಿಕಾ ನಾಯಕಿ. ನಿರ್ದೇಶಕ ಶೇಖರ್ ಕಮ್ಮುಲ ಅವರ ಈ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಧುನುಷ್‌ ಹಾಗೂ ರಶ್ಮಿಕಾ ನಟಿಸುತ್ತಿರುವ ದೃಶ್ಯವೊಂದರ ವಿಡಿಯೊ ಒಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ. ವಿಡಿಯೊದಲ್ಲಿ ರಶ್ಮಿಕಾ ಬಿಳಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ.

ಇದೇ ಮೊದಲ ಬಾರಿಗೆ ಧನುಷ್ ಮತ್ತು ರಶ್ಮಿಕಾ ಮಂದಣ್ಣ ಜತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ವರದಿಯ ಪ್ರಕಾರ ಇದೊಂದು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಲೀಕ್ ವಿಡಿಯೊ

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಸ್ಯಾಂಡಲ್ ವುಡ್

Actor Yash: ಕರುವಿಗೆ ಬಾಟಲ್ ಹಾಲು ಕುಡಿಸಿದ ರಾಕಿಂಗ್ ಫ್ಯಾಮಿಲಿ!

Actor Yash: ಒಂದು ಫೋಟೋದಲ್ಲಿ ರಾಧಿಕಾ ಪಂಡಿತ್ ಅವರ ತಂದೆ ತಾಯಿ ಮೊಮ್ಮಗಳು ಐರಾ ಯಶ್ ಜತೆಗಿರುವುದನ್ನು ಕಾಣಬಹುದು. ಅವರು ಮೊಮ್ಮಕ್ಕಳ ಜತೆ ಕರುವಿನ ಜತೆ ಸಮಯ ಕಳೆದಿದ್ದಾರೆ

VISTARANEWS.COM


on

Actor Yash spending time with family
Koo
Actor Yash

ರಾಧಿಕಾ ಪಂಡಿತ್‌ (Actor Yash) ಆಗಾಗ ತಮ್ಮ ಫ್ಯಾಮಿಲಿ ಜತೆ ಸಮಯ ಕಳೆದಿರುವ ಫೋಟೊವನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ.

Actor Yash

ಒಂದು ಫೋಟೋದಲ್ಲಿ ರಾಧಿಕಾ ಪಂಡಿತ್ ಅವರ ತಂದೆ, ತಾಯಿ, ಮೊಮ್ಮಗಳು ಐರಾ, ಯಶ್ ಜತೆಗಿರುವುದನ್ನು ಕಾಣಬಹುದು. ಅವರು ಮೊಮ್ಮಕ್ಕಳ ಜತೆ ಕರುವಿನ ಜತೆ ಸಮಯ ಕಳೆದಿದ್ದಾರೆ

Actor Yash
ಇನ್ನೊಂದು ಫೋಟೋದಲ್ಲಿ ಐರಾ ಯಶ್ ಮುದ್ದಾಗಿ ಕರುವಿಗೆ ಹಾಲು ಕುಡಿಸುತ್ತಿರುವುದು ಕಂಡುಬಂದಿದೆ. ಯಶ್ ಮಕ್ಕಳು ಕರುವನ್ನು ಮುದ್ದಿಸಿ ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Actor Yash: ಅಭಿಮಾನಿಯ ಕಾಲಿನ ಮೇಲೆ ಯಶ್ ಬೆಂಗಾವಲು ಪಡೆ ವಾಹನದ ಚಕ್ರ!

Actor Yash

ಐರಾ ಪಿಂಕ್ ಬಣ್ಣದ ಫ್ರಾಕ್ ಧರಿಸಿ ಕ್ಯೂಟ್ ಆಗಿ ಕಾಣಿಸಿದರೆ ಯಥರ್ವ್ ಬ್ಲೂ ಶಾರ್ಟ್ಸ್ ಶರ್ಟ್ ಧರಿಸಿ ಕೂಲ್ ಆಗಿದ್ದರು.

Actor Yash

ಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. 

Continue Reading

ಸ್ಯಾಂಡಲ್ ವುಡ್

Actor Yash: ಅಭಿಮಾನಿಯ ಕಾಲಿನ ಮೇಲೆ ಯಶ್ ಬೆಂಗಾವಲು ಪಡೆ ವಾಹನದ ಚಕ್ರ!

Actor Yash: ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

VISTARANEWS.COM


on

Actor Yash Fan Got Injured After His Escort Vehicle
Koo

ಬೆಂಗಳೂರು: ಯಶ್ ಬರ್ತ್​​ಡೇ (Actor Yash) ದಿನ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಕಟೌಟ್ ನಿಲ್ಲಿಸುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಮೂವರು ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರ್ಘಟನೆಯ ಕಹಿ ನೆನಪು ಹಸಿಯಾಗಿ ಇರುವಾಗಲೇ ಮತ್ತೊಂದು ಅಂಥದ್ದೇ ಘಟನೆ ನಡೆದಿದೆ. ನಟ ಯಶ್​ ಬೆಂಗಾವಲು ವಾಹನ ಹರಿದು ಅಭಿಮಾನಿಗೆ ಗಾಯ ಆಗಿದೆ. ಬಳ್ಳಾರಿಯ ಹೊರವಲಯದ ಬಾಲಾಜಿ ಕ್ಯಾಂಪ್​ನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿಯ ಅಮೃತೇಶ್ವರ ಸ್ಫಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ಯಶ್‌ ಆಗಮಿಸಿದ್ದರು. ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದರು. ಯಶ್ ಅವರನ್ನು ಬೆನ್ನುಹತ್ತಿ ಬಂದಿದ್ದರು ಫ್ಯಾನ್ಸ್. ಈ ವೇಳೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ವಸಂತ ಎಂಬ ಯುವಕನ ಕಾಲಿನ ಮೇಲೆ ಬೆಂಗಾವಲು ಪಡೆಯ ವಾಹನ ಹರಿದಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ಗದಗ ಘಟನೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಕೆಲವು ಯುವಕರು ಸೇರಿ ಬೃಹತ್‌ ಗಾತ್ರದ ಕಟೌಟ್‌ ರೂಪಿಸಿ ಅದನ್ನು ಕಟ್ಟುವ ಹಂತದಲ್ಲಿ ಅದು ವಿದ್ಯುತ್‌ ತಂತಿಗೆ ಸ್ಪರ್ಶಿಸಿತ್ತು. ಇದರಿಂದ ಹನುಮಂತ ಹರಿಜನ (21), ಮುರಳಿ ನಡುವಿನಮನಿ (20) ಮತ್ತು ನವೀನ್ ಗಾಜಿ (19) ಎಂಬ ಮೂವರು ಯುವಕರು ಮೃತಪಟ್ಟರೆ, ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬುವವರು ಗಾಯಗೊಂಡಿದ್ದರು. ಇದಾದ ಬಳಿಕ ಯಶ್‌ ಅವರು ಮೃತಪಟ್ಟ ಮೂವರು ಅಭಿಮಾನಿಗಳ (Actor Yash) ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಇದನ್ನೂ ಓದಿ: Actor Yash: ಕಿರಾಣಿ ಅಂಗಡಿಯಲ್ಲಿ ಮಗಳಿಗೆ ಚಾಕ್ಲೇ‌ಟ್‌ ಕೊಡಿಸಿದ ಯಶ್‌; ಐಸ್‌ಕ್ಯಾಂಡಿ ಸವಿದ ರಾಧಿಕಾ!

ಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ʼಕೆಜಿಎಫ್‌ 2ʼ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರಬಂದಿದ್ದು, ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ ಎಂದು ವರದಿಯೊಂದು ತಿಳಿಸಿದೆ (Toxic Movie Update).

Continue Reading

ಸ್ಯಾಂಡಲ್ ವುಡ್

Actor Darshan: ಎದೆಯ ಮೇಲೆ ದರ್ಶನ್ ಟ್ಯಾಟೂ ಹಾಕಿಸಿಕೊಂಡ ಮಹಿಳಾ ಅಭಿಮಾನಿ!

Actor Darshan: ದರ್ಶನ್ ಪರ ವಿರುದ್ಧ ಏನೇ ಆದರೂ ಅದರ ಬಗ್ಗೆ ತಮ್ಮ ಖಾತೆಯಲ್ಲಿ ಚರ್ಚೆ ಮಾಡುತ್ತಾರೆ. ದರ್ಶನ್ ಪರ ಧ್ವನಿ ಎತ್ತುತ್ತಾರೆ. ಸಾಲು ಸಾಲು ದರ್ಶನ್‌ ಅವರ ಸಿನಿಮಾಗಳ ಹಾಡಿನ ರೀಲ್ಸ್‌ ಹಂಚಿಕೊಂಡಿದ್ದಾರೆ ಮಂಗಳಾ.

VISTARANEWS.COM


on

Actor Darshan fan mangala gets tattoo
Koo

ಚಾಲೆಂಜಿಂಗ್‌ ಸ್ಟಾರ್‌ (Actor Darshan) ನಟ ದರ್ಶನ್ ಅಭಿಮಾನಿಯಾಗಿರುವ ಮಂಗಳಾ ಅವರು ಎದೆಯ ಮೇಲೆ ಟ್ಯಾಟೂ ಹಾಕಿಸಿಕೊಂಡಿರುವ ಫೋಟೋ ವೈರಲ್ ಆಗಿದೆ.

ಕೆಲವು ದಿನಗಳ ಹಿಂದೆಯಷ್ಟೇ ಚಾಲೆಂಜಿಂಗ್​ ಸ್ಟಾರ್​’ ದರ್ಶನ್​ ಅವರ ಅಭಿಮಾನಿಯಾಗಿರುವ ಅಭಿಷೇಕ್​ ಅವರು ಮೈಮೇಲೆ ತಮ್ಮ ನೆಚ್ಚಿನ ನಟನ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡಿದ್ದರು. ಫೆ 16ರಂದು ದರ್ಶನ್​ ಅವರ ಜನ್ಮದಿನ ಆ ಪ್ರಯುಕ್ತ ಗಿಫ್ಟ್​ ರೂಪದಲ್ಲಿ ಅಭಿಷೇಕ್​ ಅವರು ಈ ಟ್ಯೂಟೂ ಹಾಕಿಸಿಕೊಂಡಿದ್ದರು. ಇದು ಸಖತ್‌ ಸುದ್ದಿಯಾಗಿತ್ತು.

ಆದರೀಗ ಮಂಗಳ ಎಂಬುವರ ಫೋಟೊ ಭಾರಿ ಸದ್ದು ಮಾಡುತ್ತಿದೆ. ಮಂಗಳ ಮಂಗಳ 33267 ಇನ್‌ಸ್ಟಾಗ್ರಾಂ ಖಾತೆ ಹೊಂದಿರುವ ಅಭಿಮಾನಿ ಅಪ್ಪಟ ಅಭಿಮಾನಿ ಆಗಿದ್ದು, ಸಂಪೂರ್ಣವಾಗಿ ದರ್ಶನ್‌ ರೀಲ್ಸ್ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ಆಕ್ಷೇಪಾರ್ಹ ಹೇಳಿಕೆ; ನಟ ದರ್ಶನ್‌ಗೆ ಮತ್ತೊಂದು ಕೇಸ್‌ ಸಂಕಷ್ಟ

ದರ್ಶನ್ ಪರ ವಿರುದ್ಧ ಏನೇ ಆದರೂ ಅದರ ಬಗ್ಗೆ ತಮ್ಮ ಖಾತೆಯಲ್ಲಿ ಚರ್ಚೆ ಮಾಡುತ್ತಾರೆ. ದರ್ಶನ್ ಪರ ಧ್ವನಿ ಎತ್ತುತ್ತಾರೆ. ಸಾಲು ಸಾಲು ದರ್ಶನ್‌ ಅವರ ಸಿನಿಮಾಗಳ ಹಾಡಿನ ರೀಲ್ಸ್‌ ಹಂಚಿಕೊಂಡಿದ್ದಾರೆ ಮಂಗಳಾ.

ಎದೆ ಮೇಲೆ ದರ್ಶನ್ ಮುಖವನ್ನು ಟ್ಯಾಟೂ ಹಾಕಿಸಿಕೊಂಡು ಅದರಲ್ಲಿ ಡಿ-ಬಾಸ್ ಎಂದು ಬರೆಸಿಕೊಂಡಿದ್ದಾರೆ.

Continue Reading
Advertisement
Modi GDP
ಪ್ರಮುಖ ಸುದ್ದಿ21 mins ago

GDP Growth : ಜಿಡಿಪಿಯ ಭರ್ಜರಿ ಏರಿಕೆಗೆ ಮೋದಿ ಸಂತಸ; ಏನಂದ್ರು ಅವರು?

2nd PU Exam from tomorrow what are the conditions
ಶಿಕ್ಷಣ22 mins ago

2nd PU Exam: ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯು ಪರೀಕ್ಷೆ; ವಿದ್ಯಾರ್ಥಿಗಳಿಗೆ ಇಲ್ಲಿದೆ ಕಂಡಿಷನ್!

insurance
ಮನಿ-ಗೈಡ್24 mins ago

Money Guide: ಸಾಮಾನ್ಯ ವಿಮೆ v/s ಜೀವ ವಿಮೆ; ಯಾವುದು ಉತ್ತಮ? ನಿಮಗೆ ತಿಳಿದಿರಲೇಬೇಕಾದ ಮಾಹಿತಿ ಇಲ್ಲಿದೆ

Budget session Siddaramaiah
ವಿಧಾನಮಂಡಲ ಅಧಿವೇಶನ35 mins ago

Budget Session : ಬಿಜೆಪಿಯ ಜೈ ಶ್ರೀರಾಮ್‌ VS ಸಿದ್ದರಾಮಯ್ಯರ ಜೈ ಸೀತಾರಾಮ್‌!

Nitasha Kaul
ದೇಶ52 mins ago

Nitasha Kaul : ಬ್ರಿಟನ್​ ಲೇಖಕಿಯನ್ನು ಏರ್​ಪೋರ್ಟ್​​ನಿಂದಲೇ ವಾಪಸ್​ ಕಳಿಸಿದ್ದಕ್ಕೆ ಕಾರಣ ಕೊಟ್ಟ ಕೇಂದ್ರ ಸರ್ಕಾರ

Siddaramaiah plan behind accepting Caste Census Report Sunil Kumar reveals reason
ರಾಜಕೀಯ1 hour ago

‌Caste Census Report: ಜಾತಿ ಗಣತಿ ಸ್ವೀಕಾರದ ಹಿಂದೆ ಸಿದ್ದರಾಮಯ್ಯ ಪ್ಲ್ಯಾನ್‌ ಏನು? ಕಾರಣ ಬಿಚ್ಚಿಟ್ಟಿದ್ದಾರೆ ಸುನಿಲ್‌ ಕುಮಾರ್!

Rowdy sheeter kidnaps cricket bookie
ಕ್ರಿಕೆಟ್1 hour ago

WPL 2024 : ಮಹಿಳಾ ಐಪಿಎಲ್‌ನಲ್ಲಿ ಬೆಟ್ಟಿಂಗ್ ಕಟ್ಟಿದ ಬುಕ್ಕಿಯೇ ಕಿಡ್ನ್ಯಾಪ್‌!

GDP Growth
ಪ್ರಮುಖ ಸುದ್ದಿ1 hour ago

GDP Growth : ನಿರೀಕ್ಷೆಗೂ ಮೀರಿ ಭಾರತದ ಜಿಡಿಪಿ ಬೆಳವಣಿಗೆ; ಕಳೆದ ತ್ರೈಮಾಸಿಕದಲ್ಲಿ ಭರ್ಜರಿ ಪ್ರಗತಿ

film festival
ಸಿನಿಮಾ2 hours ago

Bengaluru Film Festival: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

BJP protest demanding action against those who shouted pro Pak slogan
ಉತ್ತರ ಕನ್ನಡ2 hours ago

Uttara Kannada News: ಪಾಕ್‌ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for February 28 2024
ಭವಿಷ್ಯ15 hours ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ2 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

Ghar Wapsi ST Somashekhar and Shivaram Hebbar to quit BJP
ರಾಜಕೀಯ2 days ago

Ghar Wapsi: ಎಸ್‌.ಟಿ. ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಬಿಜೆಪಿಗೆ ಗುಡ್‌ ಬೈ? ಇಂದೇ ರಾಜೀನಾಮೆ?

Rajyasabha Elections 42 Congress MLAs contacted by JDS candidate says DK Shivakumar
ರಾಜಕೀಯ2 days ago

Rajya sabha Election: ಕಾಂಗ್ರೆಸ್‌ನ 42 ಶಾಸಕರನ್ನು ಸಂಪರ್ಕ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್

read your daily horoscope predictions for february 27 2024
ಭವಿಷ್ಯ3 days ago

Dina Bhavishya : ಇಂದು ಆಪ್ತರಿಂದಲೇ ಈ ರಾಶಿಯವರಿಗೆ ಕಂಟಕ!

Crowd mistakes Arabic words as Quran Verses on the kurta and Pak Women mobbed
ವಿದೇಶ3 days ago

Pak Woman: ಕುರ್ತಾ ಮೇಲಿನ ಅರೇಬಿಕ್ ಪದಗಳನ್ನು ತಪ್ಪಾಗಿ ತಿಳಿದು ಮಹಿಳೆ ಮೇಲೆ ಹಲ್ಲೆಗೆ ಯತ್ನ

read your daily horoscope predictions for february 26 2024
ಭವಿಷ್ಯ4 days ago

Dina Bhavishya : ಈ ಮೂರು ರಾಶಿಯವರು ಇಂದು ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯವರು ಆಪ್ತರೊಂದಿಗೆ ಗೌಪ್ಯ ವಿಷಯವನ್ನು ಹೇಳುವಾಗ ಎಚ್ಚರ!

Video Viral Student falls under school bus He escaped with minor injuries
ವೈರಲ್ ನ್ಯೂಸ್5 days ago

Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಟ್ರೆಂಡಿಂಗ್‌