‘ರಂಗೋಲಿ’, ‘ಮನೆಯೊಂದು ಮೂರು ಬಾಗಿಲು’, ‘ಬದುಕು’ ಮುಂತಾದ ಧಾರಾವಾಹಿಗಳನ್ನು ಪ್ರೇಕ್ಷಕರು ಮನಗೆದ್ದ ಸಿರಿ ಬಿಗ್ ಬಾಸ್ (BBK Season 10) ಈಗ ಮದುವೆಯಾಗಿದ್ದಾರೆ. ಇನ್ನೂ (Actress Siri) ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳನ ನಡುವೆ ಅವರು ಸದ್ದಿಲ್ಲದೇ, ಸಿಂಪಲ್ ಆಗಿ ಹಸೆ ಮಣೆ ಏರಿದ್ದರು. ಈಗ ಪತಿ ಜೊತೆ ಇರೋ ಫೋಟೋಗಳನ್ನು ಸಿರಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
‘ಪ್ರೀತಿ ಏನೆಂದು ನನಗೆ ತಿಳಿದಿದ್ದರೆ ಅದಕ್ಕೆ ಕಾರಣ ನೀನು’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಪತಿ ಮೇಲಿರುವ ಪ್ರೀತಿ ಎಂಥದ್ದು ಎಂಬುದನ್ನು ಅವರು ಬರೆದುಕೊಂಡಿದ್ದಾರೆ.
ಜೂನ್ 13ರಂದು ಸಿರಿ ಹಾಗೂ ಪ್ರಭಾಕರ್ ಬೋರೇಗೌಡ ಅವರ ಮದುವೆ ನೆರವೇರಿತ್ತು. ಚಿಕ್ಕಬಳ್ಳಾಪುರ ಬಳಿ ಇರುವ ಭೋಗ ನಂದೀಶ್ವರ ದೇವಾಲಯದಲ್ಲಿ ಈ ವಿವಾಹ ಜರುಗಿತ್ತು.
ಇದನ್ನೂ ಓದಿ: Kalki 2898 AD: ‘ಪಿಕೆ’, ʻಗದರ್ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!
. ಸಿರಿ ಅವರಿಗೆ ಈಗ 40 ವರ್ಷ ವಯಸ್ಸು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಕಲರ್ಸ್ ಕನ್ನಡದ ʻರಾಮಾಚಾರಿʼ ಧಾರಾವಾಹಿಯಲ್ಲಿ ನಟಿ ಬಣ್ಣ ಹಚ್ಚಿದ್ದರು. ಈಗ ಪರಭಾಷೆಯ ಕಿರುತೆರೆಯಲ್ಲಿಯೂ ಮಿಂಚುತ್ತಿದ್ದಾರೆ. ಕೆಲ ಸಿನಿಮಾಗಳಲ್ಲಿ ಕೂಡ ಸಿರಿ ಅವರು ನಟಿಸಿದ್ದಾರೆ. 30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿ ಯಾಕೆ ಮದುವೆಯಾಗಲಿಲ್ಲ ಎಂದು ನೆಟ್ಟಿಗರು ನಟಿಗೆ ಹಲವು ಬಾರಿ ಪ್ರಶ್ನೆ ಮಾಡಿದ್ದೂ ಇದೆ.