ಪ್ರಜ್ವಲ್ ದೇವರಾಜ್ (Prajwal Devaraj) ನಟನೆಯ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾ ನಟಿ ಸುನೈನಾ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೀಗ ಸುನೈನಾ ಸದ್ದಿಲ್ಲದೇ ಎಂಗೇಜ್ ಆಗಿದ್ದಾರೆ.
ಸುನೈನಾ ಈಗ ಮದುವೆಗೆ ಸಿದ್ಧರಾಗಿದ್ದಾರೆ. ಕದ್ದು ಮುಚ್ಚಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸುನೈನಾ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ರೆಜಿನಾ’ ಅನ್ನೋ ತಮಿಳು ಸಿನಿಮಾದಲ್ಲಿ ನಟಿಸಿದ್ದರು. ‘ಕುಮಾರ್ Vs ಕುಮಾರಿ’ ಅನ್ನೋ ತೆಲುಗು ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.
ಇದನ್ನೂ ಓದಿ: Kotee Movie Kannada: ಕಿಚ್ಚ ಸುದೀಪ್ಗೆ ‘ಕೋಟಿ’ ಸಿನಿಮಾದ ಮೊದಲ ಟಿಕೆಟ್!
2008ರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾದಲ್ಲಿ ಗಂಗೆಯ ಪಾತ್ರದಲ್ಲಿ ಮಿಂಚಿದ್ದರು. ಇದೇ ಅವರ ಕೊನೆಯ ಕನ್ನಡ ಸಿನಿಮಾ.