Site icon Vistara News

Kannada New Movie: ಪ್ರೇಮಿಗಳ ದಿನ ಮುಗಿದ್ಮೇಲೆ ಕೆಟಿಎಂ ಸವಾರಿ; `ದಿಯಾ’ ದೀಕ್ಷಿತ್ ಹೊಸ ಚಿತ್ರ!`

After Valentine Day the KTM ride begins

ಬೆಂಗಳೂರು: ದೀಕ್ಷಿತ್ ಶೆಟ್ಟಿ (Kannada New Movie) ಅವರು ‘ದಿಯಾ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಇದೊಂದು ಸ್ಯಾಡ್ ಎಂಡಿಂಗ್ ಲವ್‌ ಸ್ಟೋರಿ. ಈಗ ಅವರು ‘ಕೆಟಿಎಂ’ ಸಿನಿಮಾ ಮೂಲಕ ತೆರೆಮೇಲೆ ಬರುವುದಕ್ಕೆ ರೆಡಿ ಆಗಿದ್ದಾರೆ. ಈ ಸಿನಿಮಾದಲ್ಲೂ ಪ್ರೀತಿ, ಪ್ರೇಮ ಹಾಗೂ ಲವ್ ಫೇಲ್ಯೂರ್ ಇದೆ. ಒಂದು ಕಥೆಯಲ್ಲಿ ಎರಡು ಲವ್‌ ಸ್ಟೋರಿಗಳನ್ನು ಬೆರೆಸಲಾಗಿದೆ. ಫೆಬ್ರವರಿ 16ರಂದು ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ಬೆಂಗಳೂರಿನ ರೇಣುಕಾಂಬಾ ಸ್ಟುಡಿಯೊದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ನಾಯಕ ದೀಕ್ಷಿತ್ ಶೆಟ್ಟಿ ಮಾತನಾಡಿ ʻʻ3 ಹಾಡುಗಳು ರಿಲೀಸ್ ಆಗಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಟ್ರೈಲರ್‌ಗೆ ಒಂದೂ ನೆಗೆಟಿವ್ ಕಮೆಂಟ್‌ ಬಂದಿಲ್ಲ. ಎಲ್ಲರೂ ಬಹಳ ಇಷ್ಟಪಟ್ಟಿದ್ದಾರೆ. ದಿಯಾ, ದಸರಾ ಹೀಗೆ ಪ್ರತಿ ಸಿನಿಮಾದಲ್ಲಿ ರಂಜಿಸಿಕೊಂಡು ಬರುತ್ತಿದ್ದೇನೆ. ಈ ಸಿನಿಮಾಗೆ ಜೀವ ಕೊಟ್ಟು ಮಾಡಿದ್ದೇನೆ ಸರ್. ಬರೀ ಬೆವರಿನ ಜತೆಗೆ ರಕ್ತನೂ ಸುರಿಸಿದ್ದೇನೆ. ತುಂಬಾ ಪ್ರಾಮಾಣಿಕವಾದ ಪ್ರಯತ್ನ. ಟ್ರೈಲರ್‌ ಮೂಲಕ ಭರವಸೆ ಮೂಡಿಸಿದ್ದೇವೆ ಎಂಬ ನಂಬಿಕೆ ಇದೆ. ಆ ಕಾರಣಕ್ಕಾದರೂ ದಯವಿಟ್ಟು ಸಿನಿಮಾ ಬಂದು ನೋಡಿ. ನಿಮಗೆ ನಿರಾಸೆಯಾಗುವುದಿಲ್ಲ. ದಯವಿಟ್ಟು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿʼʼ ಎಂದರು.

ಇದನ್ನೂ ಓದಿ: Kannada New Movie: ʻಕೈಲಾಸʼ ಸಿನಿಮಾದ ಕಿಕ್ಕೇರಿಸೋ ಟ್ರಾನ್ಸ್‌ ಹಾಡು ಬಿಡುಗಡೆ

ನಟಿ ಸಂಜನಾ ದಾಸ್ ಮಾತನಾಡಿ, ʻʻನನ್ನ ಮೊದಲ ಕಮರ್ಷಿಯಲ್ ಸಿನಿಮಾ ಕೆಟಿಎಂ. ದೀಕ್ಷಿತ್ ಶೆಟ್ಟಿ ಅವರ ಜತೆ ನಟಿಸಬೇಕು ಎಂದಾಗ ನಾನು ಅವರಿಗೆ ಮ್ಯಾಚ್ ಆದೆ. ರೊಮ್ಯಾಂಟಿಕ್ ಸೀನ್ಸ್ ಮಾಡಬೇಕಿತ್ತು. ಹೇಗೆ ಮಾಡಬಹುದು ಎಂಬ ಭಯ ಇತ್ತು. ನಿರ್ದೇಶಕರಾದ ಅರುಣ್ ಸರ್ ರಿಹರ್ಸಲ್ ಮಾಡಿಸಿ ಆದ ಮೇಲೆ ನಾನು ಕಂಫರ್ಟ್ ಆದೆ. ನನ್ನದು ವಿಭಿನ್ನವಾದ ಪಾತ್ರ. ಟ್ರೇಲರ್ ನೋಡಿದರೆ ಅಷ್ಟು ಗೊತ್ತಾಗುವುದಿಲ್ಲ. ಸಿನಿಮಾ ನೋಡಿದ್ರೆ ಗೊತ್ತಾಗುತ್ತದೆ ನನ್ನ ಪಾತ್ರ ಏನೂ ಅನ್ನೋದು. ಈ ಪಾತ್ರಕ್ಕೆ ತುಂಬಾ ಶೇಡ್ಸ್ ಇದೆʼʼ ಎಂದು ತಿಳಿಸಿದರು.

ಕೆಟಿಎಂ ಸಿನಿಮಾದ ಹಾಡುಗಳು ಗುಂಗು ಹಿಡಿಸಿವೆ. ಟ್ರೇಲರ್ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ನಾಯಕನಾಗಿ ದೀಕ್ಷಿತ್ ಶೆಟ್ಟಿಗೆ ಸಂಜನಾ ದಾಸ್ ಹಾಗೂ ಕಾಜಲ್ ಕುಂದರ್ ನಾಯಕಿಯರಾಗಿ ಸಾಥ್ ಕೊಟ್ಟಿದ್ದಾರೆ. ಉಷಾ ಭಂಡಾರಿ, ರಘು ರಮಣಕೊಪ್ಪ, ಪ್ರಕಾಶ್ ತುಮ್ಮಿನಾಡು, ಬಾಬು ಹಿರಣ್ಣಯ್ಯ, ಶಾನಿಲ್ ಗುರು, ದೇವ್ ದೇವಯ್ಯ, ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ತಾರಾಬಳಗದಲ್ಲಿದ್ದಾರೆ.

ಅರುಣ್ ‘ಕೆಟಿಎಂ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಇವರ ಎರಡನೇ ಪ್ರಯತ್ನ. ಈ ಮೊದಲು ‘ಅಥರ್ವ’ ಹೆಸರಿನ ಸಿನಿಮಾ ನಿರ್ದೇಶನ ಮಾಡಿದ್ದರು. ಈ ಚಿತ್ರವನ್ನು ‘ಮಹಾಸಿಂಹ ಮೂವೀಸ್’ ಬ್ಯಾನರ್ ಅಡಿಯಲ್ಲಿ ವಿನಯ್ ನಿರ್ಮಾಣ ಮಾಡಿದ್ದಾರೆ. ರಕ್ಷಯ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ. ನವೀನ್ ಛಾಯಾಗ್ರಹಣ, ಚೇತನ್ ಅವರ ಸಂಗೀತ ಸಂಯೋಜನೆ, ಅರ್ಜುನ್ ಕಿಟ್ಟು ಸಂಕಲನ ಇದೆ. ಅಭಿನಂದನ್ ದೇಶಪ್ರಿಯ ಅವರು ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Exit mobile version