’ಸತ್ಯಮಂಗಳ’ನಾಗಿ ಬಂದ 'ಅಗ್ನಿಸಾಕ್ಷಿ' ಖಳನಾಯಕ; ಮುನಿಕೃಷ್ಣ ಚಿತ್ರಕ್ಕೆ ರಾಗಿಣಿ ಸಾಥ್‌ - Vistara News

ಸ್ಯಾಂಡಲ್ ವುಡ್

’ಸತ್ಯಮಂಗಳ’ನಾಗಿ ಬಂದ ‘ಅಗ್ನಿಸಾಕ್ಷಿ’ ಖಳನಾಯಕ; ಮುನಿಕೃಷ್ಣ ಚಿತ್ರಕ್ಕೆ ರಾಗಿಣಿ ಸಾಥ್‌

Sathyamangala: ನಟ ಮುನಿಕೃಷ್ಣ ಅಭಿನಯದ ʼಶುಭಮಂಗಳʼ ಚಿತ್ರದ ಟೈಟಲ್‌ ಲಾಂಚ್‌ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ನಟಿ ರಾಗಿಣಿ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

VISTARANEWS.COM


on

sathyamangala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹೀರೋ ಅಂದ್ರೆ ಹ್ಯಾಂಡ್ಸಮ್ ಆಗಿ ಇರಬೇಕು, ಜಿಮ್ ಮಾಡಿ ಫಿಟ್ ಆಗಿ ಇರಬೇಕು. ಈ ಗುಣಗಳಿದ್ದವರು ಮಾತ್ರ ಹೀರೋ ಆಗೋದಿಕ್ಕೆ ಸಾಧ್ಯ ಎಂಬ ಕಾಲವೆಲ್ಲ ಹೋಗಿ ಆಯ್ತು. ಈಗ ನಟನಾ ಪ್ರತಿಭೆ ಇರುವವರು ಯಾರು ಬೇಕಾದರೂ ಹೀರೋ ಆಗಬಹುದು. ಈಗ ಯಾಕೆ ಈ ಮಾತು ಅಂತೀರಾ? ʼಅಗ್ನಿಸಾಕ್ಷಿʼ ಧಾರಾವಾಹಿಯಲ್ಲಿ ಖಳನಾಯಕ ಮುರುಗನ ಪಾತ್ರದಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ಮುನಿಕೃಷ್ಣ ಮತ್ತೊಮ್ಮೆ ನಿಮ್ಮ ಮುಂದೆ ಬರುತ್ತಿದ್ದಾರೆ. ʼಕೊಡೆ ಮುರುಗʼ ಎಂಬ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಅವರೀಗ ʼಸತ್ಯಮಂಗಳʼ (Sathyamangala) ಸಿನಿಮಾದಲ್ಲಿ ಹೀರೋ ಆಗಿ ಬಣ್ಣ ಹಚ್ಚಿದ್ದಾರೆ.

ಮುನಿಕೃಷ್ಣ ಅವರನ್ನು ಹೀರೋ ಆಗಿ ಆಯ್ಕೆ ಮಾಡಿದ್ದಕ್ಕೆ ಕಾರಣ ಏನು ಅನ್ನೋದನ್ನು ನಿರ್ದೇಶಕ ಆರ್ಯನ್ ಪ್ರತಾಪ್ ತಿಳಿಸಿದ್ದಾರೆ. ಪ್ರತಿ ಸೂಪರ್ ಸ್ಟಾರ್ ಅವರ ಮೊದಲ ಸಿನಿಮಾಕ್ಕೆ ನಿರ್ದೇಶಕರು ಬೆಂಬಲ ಕೊಟ್ಟಿದ್ದಕ್ಕೆ ಅವರ ಆ ಸ್ಥಾನಕ್ಕೆ ಬರಲು ಸಾಧ್ಯವಾಗುತ್ತದೆ. ಅದೇ ರೀತಿ ಮುನಿಕೃಷ್ಣ ಅವರ ಸಿನಿಮಾ ಮೇಲಿನ ಪ್ರೀತಿ, ಡೆಡಿಕೇಷನ್ ದೊಡ್ಡದಿದೆ. ಹೀಗಾಗಿ ಅವರಿಗೆ ಅವಕಾಸ ನೀಡಿದೆ ಎಂದು ಹೇಳಿದ್ದಾರೆ

ʼಸತ್ಯಮಂಗಳʼ ಸಿನಿಮಾದ ಟೈಟಲ್ ಬಿಡುಗಡೆಯಾಗಿದೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಚಿಕ್ಕ ಹಳ್ಳಿಯೊಂದರಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಗಿಣಿ ವಿಶೇಷ ಅತಿಥಿಯಾಗಿ ಆಗಮಿಸಿ, ಟೈಟಲ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಕೋರಿದರು. ʼಕಾರಂಜಿʼ ಹಾಗೂ ʼಚೆಲುವೆಯೇ ನಿನ್ನ ನೋಡಲುʼ ಚಿತ್ರಗಳಿಗೆ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿರುವ ಆರ್ಯನ್ ಪ್ರತಾಪ್, ಕನ್ನಡ 90/11, ತಮಿಳಿನ ಹೇರ್ ಕೆನಾರ್ ಕಿರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಏಳು ಅಂತಾರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡಿದೆ. ಮಣಿರತ್ನಂ ಸಾರಥ್ಯದ ʼಅಲೈ ಪಾಯುತೇʼ, ʼರಾವಣ್ʼಗೆ ಅಸಿಸ್ಟೆಂಟ್ ಡೈರೆಕ್ಷರ್ ಆಗಿ, ಹಾಲಿವುಡ್ ವಿಲ್ ಸ್ಮಿತ್ ಬಳಗದಲ್ಲಿಯೂ ದುಡಿದಿರುವ ಆರ್ಯನ್ ಪ್ರತಾಪ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ʼಸತ್ಯಮಂಗಳʼ ಸಿನಿಮಾಕ್ಕೆ ಅ ಕಥೆವರೇ ಬರೆದಿರುವುದು ವಿಶೇಷ. ಫಸ್ಟ್ ಫಿಲ್ಮಂ ಎವರ್ ಮೇಡ್ ಸ್ಕ್ರಿಪ್ಟ್ ಸೀನ್ ಸಾಹಸಕ್ಕೆ ಗಿನ್ನಿಸ್ ಬುಕ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಅಡ್ವೆಂಚರ್ಸ್ ಥ್ರಿಲ್ಲಿಂಗ್ ಕಹಾನಿಯ ʼಸತ್ಯಮಂಗಳʼ ಸಿನಿಮಾದಲ್ಲಿ ದಿ ಗ್ರೇಟ್ ಖಲಿ, ಬಾಲಿವುಡ್ ಅರ್ಬಾಜ್ ಖಾನ್, ಕನಕ್ ಪಾಂಡೆ, ಶರಣ್ಯ, ಸಂಜಯ್ ಕುಮಾರ್ ರವಿ ಕಹಳೆ, ವಿಜಯ್ ಚಿಂದೂರ್, ಮಂತೇಶ್ ಹಿರೇಮಠ್, ಜಿಜಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಹೂವಿನ ಹಡಗಲಿ ಶಾಸಕ ಕೃಷ್ಣ ನಾಯಕ್ ಅರ್ಪಿಸುವ ಈ ಚಿತ್ರವನ್ನು ಎಎಸ್‌ಎ ಪ್ರೊಡಕ್ಷನ್ ಮತ್ತು ಐರಾ ಪ್ರೊಡಕ್ಷನ್‌ ಅಡಿ ಶಂಕರ್ ಬಿ. ಹಾಗೂ ಮುನಿಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರಶೇಖರ್ ಕೆ.ಎಸ್. ಕ್ಯಾಮೆರಾ, ವೀರ್ ಸಮರ್ಥ್ ಸಂಗೀತ, ಎಂ.ಎನ್. ವಿಶ್ವ ಸಂಕಲನ, ಪೀಟರ್ ಹೈನ್ಸ್ ಸ್ಟಂಟ್, ಚಿನ್ನಿ ಪ್ರಕಾಶ್ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

ಇದನ್ನೂ ಓದಿ: Milana Nagaraj: ನೀರೊಳಗೆ ಪೃಥ್ವಿ ಅಂಬಾರ್ -ಮಿಲನಾ ನಾಗರಾಜ್ ಡ್ಯುಯೆಟ್‌!

ʼಸತ್ಯಮಂಗಳʼ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ದಾಂಡೇಲಿ, ಮಲೆ ಮಹಾದೇಶ್ವರ ಬೆಟ್ಟ, ಶ್ರೀಲಂಕಾ, ಕಟ್ಮುಂಡು, ಬ್ಯಾಂಕಾಕ್‌ ಭಾಗದಲ್ಲಿ ಚಿತ್ರೀಕರಣ ನಡೆಸಲಾಗುತ್ತಿದೆ. ಈಗಾಗಲೇ ಚಿತ್ರತಂಡ 10 ದಿನಗಳ ಕಾಲ ಬ್ಯಾಂಕಾಕ್‌ನಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದಿದೆ. ವಿಶೇಷ ಅಂದರೆ ʼಸತ್ಯಮಂಗಳʼ ಸಿನಿಮಾದಲ್ಲಿ ಪಾಂಡಿಚೇರಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ನಟಿಸಿದ್ದಾರೆ. ಯಾವ ಪಾತ್ರ ಅನ್ನೋದನ್ನು ಚಿತ್ರತಂಡ ಗುಟ್ಟು ಬಿಟ್ಟು ಕೊಟ್ಟಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

Uttarakaanda Movie: ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Uttarakaanda Movie Shivarajkumar Visits Savadatti Yallamma Temple After Uttarakaanda Movie
Koo

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸವದತ್ತಿ ಯಲ್ಲಮ್ಮ (Savadatti Yallamma) ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಲಭ್ಯವಾಗಿವೆ. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ “ಶ್ರೀರಾಮ್”, “ಮೈಲಾರಿ” ಮುಂತಾದ (Uttarakaanda Movie) ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸವದತ್ತಿ ಯಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ “ಉತ್ತರಕಾಂಡ‌”ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿದ್ದಾರೆ.

ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್,ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ,ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿದ್ದಾರೆ.

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ‌. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ನಾಯಕಿ ಯಾರು?

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

Sandalwood News : ಚಿತ್ರರಂಗದ ಸಮಸ್ಯೆ ಬಗೆಹರಿಸಲು ಗೋವಾಕ್ಕೆ ಹೋದ ನಿಯೋಗದೊಳಗೆ ಜಟಾಪಟಿ!

Kannada Producers: ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ.

VISTARANEWS.COM


on

Kannada producers
Koo

ಬೆಂಗಳೂರು: ಕನ್ನಡ ಚಲನಚಿತ್ರ ಕ್ಷೇತ್ರ (Sandalwood News) ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲೆಂದು ಗೋವಾಗೆ ಹೋಗಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber), ನಿರ್ಮಾಪಕರ ಸಂಘ (Kannada Producers) ಹಾಗೂ ನಿರ್ದೇಶಕರ ಸಂಘದ ಪದಾಧಿಕಾರಿಗಳಲ್ಲಿ ಕೆಲವು ಪರಸ್ಪರ ಗಲಾಟೆ ಮಾಡಿಕೊಂಡ ಪ್ರಸಂಗ ವರದಿಯಾಗಿದೆ. ಸಣ್ಣದಾಗಿ ಆರಂಭಗೊಂಡ ವಾಗ್ವಾದ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿದ್ದು ಪರಸ್ಪರ ಹೊಡೆದಾಡಿಕೊಂಡ ಬಳಿಕ ಪ್ರತ್ಯೇಕವಾಗಿ ಬೆಂಗಳೂರಿಗೆ ತಿರುಗಿ ಬಂದಿದ್ದಾರೆ. ಈ ಮೂಲಕ ಸಮಸ್ಯೆಯನ್ನು ಬಗೆಹರಿಸಲೆಂದು ಹೋದವರು ಹೊಸ ಸಮಸ್ಯೆ ಸೃಷ್ಟಿಸಿಕೊಂಡು ಬಂದಿದ್ದಾರೆ.

ಸಂಘದ ಪದಾಧಿಕಾರಿಗಳೆಲ್ಲರೂ ಬಸ್​​ ಮೂಲಕ ಗೋವಾಕ್ಕೆ ಪ್ರಯಾಣ ಮಾಡಿದ್ದರು. ಹಿಬೀಸ್ ರೆಸಾರ್ಟ್​​ನಲ್ಲಿ ಸೋಮವಾರ ರಾತ್ರಿ (ಮೇ 27ರಂದು) ಸಭೆ ಆಯೋಜಿಸಲಾಗಿತ್ತು. ಅಲ್ಲಿ ವಿಚಾರವೊಂದರ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಮಾತಿಗೆ ಮಾತು ಬೆಳೆದು ಗಲಾಟೆ ಆರಂಭವಾಗಿದೆ. ಕೊನೆಗದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ನಿರ್ಮಾಪಕರಾದ ರಥಾವರ ಮಂಜುನಾಥ್, ಎ.ಗಣೇಶ್ ಹಾಗೂ ಸತೀಶ್ ಆರ್ಯ ನಡುವೆ ವಾಗ್ವಾದ ನಡೆದಿದೆ ಎಂದು ವರದಿಯಾಗಿದೆ.

ಗಲಾಟೆ ಮಾಡಿದ ಬಳಿಕ ಮೂವರನ್ನು ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಕಳುಹಿಸಲಾಗಿದೆ. ಗೋವಾ ಟ್ರಿಪ್‌ಗೆ ಹೋದ ನಿಯೋಗದ ಸದಸ್ಯರು, ಪದಾಧಿಕಾರಿಗಳು ಬುಧವಾರ ಬೆಂಗಳೂರಿಗೆ ವಾಪಸಾಗಲಿದ್ದಾರೆ. ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಎನ್.ಎಂ.ಸುರೇಶ್, ಉಮೇಶ್ ಬಣಕಾರ್, ಆಸ್ಕರ್ ಕೃಷ್ಣ, ಭಾಮಾ ಹರೀಶ್, ಭಾಮಾ ಗಿರೀಶ್, ಟೇಸಿ ವೆಂಕಟೇಶ್ ಈ ಪ್ರವಾಸದಲ್ಲಿದ್ದರು.

ಇದನ್ನೂ ಓದಿ: Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

ಗಲಾಟೆ ಯಾವ ಕಾರಣಕ್ಕೆ ನಡೆಯಿತು ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ, ಪಾರ್ಟಿ ಮಾಡುವ ವೇಳೆ ಮಾತಿಗೆ ಬೆಳೆದು ಗಲಾಟೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಈ ವಿಚಾರ ಟೀಕೆಗೆ ಒಳಗಾಗಿದ್ದು ಅಲ್ಲಿಗೆ ಹೋಗಿ ಗಲಾಟೆ ಮಾಡಿ ಬರುವ ಅನಿವಾರ್ಯತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʼಕೋಟಿʼ ಚಿತ್ರಕ್ಕೆ ಕಿಚ್ಚನ ಬಲ; ಹೊಸ ಪೋಸ್ಟರ್‌ ರಿಲೀಸ್‌

Kannada New Movie: ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರ ಕೋಟಿಯ ಇನ್ನೊಂದು ಪೋಸ್ಟರ್‌ ರಿಲೀಸ್‌ ಆಗಿದೆ. ಅದ್ದೂರಿ ಕಾರ್ಯಕ್ರಮದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪೋಸ್ಟರ್‌ ರಿಲೀಸ್‌ ಮಾಡಿ ಶುಭ ಹಾರೈಸಿದರು. ಪರಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ, ಮೋಕ್ಷಾ‌ ಕುಶಾಲ್, ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಮತ್ತಿತರರು ನಟಿಸಿದ್ದಾರೆ. ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ʼಕೋಟಿʼ ಸಿನಿಮಾದ ಪ್ರೀ ರಿಲೀಸ್ ವಿಶೇಷ ಟೀವಿ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ‘ಕೋಟಿ ಮನರಂಜನೆ’ ಎಂದು ಕರೆಯಲಾಗಿದ್ದು, ಕಾರ್ಯಕ್ರಮದಲ್ಲಿ ಸಿನಿಮಾದ ತಾರಾಬಳಗವೇ ತುಂಬಿತ್ತು. ʼಕೋಟಿʼಯ ನಾಯಕ ಡಾಲಿ ಧನಂಜಯ ಸೇರಿದಂತೆ ನಾಯಕಿ ಮೋಕ್ಷಾ‌ ಕುಶಾಲ್ ಮತ್ತು ಹಿರಿಯ ತಾರೆಗಳಾದ ತಾರಾ ಅನುರಾಧ, ರಂಗಾಯಣ ರಘು, ರಮೇಶ್ ಇಂದಿರಾ, ಸರ್ದಾರ್ ಸತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು (Kannada New Movie).

ಈ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದದ್ದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಅದ್ಭುತ ಲೈಟಿಂಗ್ ಮತ್ತು ಕೋರಿಯಾಗ್ರಫಿಯ‌ ಮೂಲಕ ಆದ ಕಿಚ್ಚನ ಎಂಟ್ರಿಯ ನೋಡಿ ಅಭಿಮಾನಿಗಳ ಕೇಕೆ ಮತ್ತು ಶಿಳ್ಳೆಗಳ‌ ಸದ್ದು ಮುಗಿಲ‌‌ ಮುಟ್ಟಿತ್ತು. ಸುದೀಪ್ ಅವರು ಸುಮಾರು ಒಂದು ತಾಸಿಗೂ ಹೆಚ್ಚಿನ ಕಾಲ ವೇದಿಕೆಯ ಮೇಲಿದ್ದು ನೆರೆದಿದ್ದವರನ್ನು ರಂಜಿಸಿದರು. ನಿರೂಪಕ ಅಕುಲ್ ಬಾಲಾಜಿ ಮತ್ತು ಸುದೀಪ್ ಮಾತುಕತೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಡುವಂತಿತ್ತು. ಸುದೀಪ್ ʼಕೋಟಿʼ ಚಿತ್ರದ ಹೊಸ ಪೋಸ್ಟರನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ ಕೋರಿದರು.

ʼಕೋಟಿʼಯ ನಾಯಕಿ ‘ಮೋಕ್ಷಾ’ ಅವರ ಡಾನ್ಸ್‌ಗೆ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರೆಯಿತು. ʼಕೋಟಿʼಯ ಇತರ ನಟ ನಟಿಯರಿಂದ ವಿಶೇಷ ಕಾರ್ಯಕ್ರ‌ಮಗಳು ಮತ್ತು ಗಿಚ್ಚಿ ಗಿಲಿಗಿಲಿ ತಂಡದಿಂದ ಹೊಟ್ಟೆ ಹುಣ್ಣಾಗಿಸುವ ಹಾಸ್ಯ ಕಾರ್ಯಕ್ರಮ ನಡೆದವು.

ಧನಂಜಯ ಅವರಿಗಾಗಿ ಮಕ್ಕಳು ಮಾಡಿದ ವಿಶೇಷ ಡಾನ್ಸ್ ‘ಕೋಟಿ ಮನರಂಜನೆ’ಯ ಪ್ರಮುಖ ಆಕರ್ಷಣೆಗಳಲ್ಲೊಂದಾಗಿತ್ತು. ಧನಂಜಯ ಅವರು ಮಕ್ಕಳ ನೃತ್ಯವನ್ನು ಮೆಚ್ಚಿ ವೇದಿಕೆಯ ಮೇಲೆ ಬಂದು ಮಕ್ಕಳ ಜತೆ ಸೆಲ್ಫಿ ತೆಗೆದುಕೊಂಡರು. ಈ ಚಿತ್ರದ ಸಂಗೀತ ಸಂಯೋಜಕರಾದ ವಾಸುಕಿ ವೈಭವ್ ‘ಕೋಟಿ’ ಸಿನಿಮಾದ ಹಾಡುಗಳನ್ನು ಹಾಡಿದರು. ʼಕೋಟಿʼಯ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಯೋಗರಾಜ್ ಭಟ್ “ಕನ್ನಡದ ಜನತೆಗಾಗಿ ಯಾರೇ ಕಷ್ಟಪಟ್ಟರೂ ನಾಡಿನ ಜನತೆ ಅವರ ಕೆಲಸವನ್ನು ಗೆಲ್ಲಿಸುತ್ತಾರೆ” ಎಂದು ಹೇಳಿದರು.‌

ದಶಕಗಳ ಕಾಲ ಕಲರ್ಸ್ ಕನ್ನಡ ಚಾನೆಲ್‌ ಮುನ್ನಡೆಸಿದ್ದ ಪರಮ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಚಾನೆಲ್‌ನ ಸಿಬ್ಬಂದಿ ವಿಶೇಷ ವಿಡಿಯೊ ಮೂಲಕ ಅವರಿಗೆ ಶುಭ ಕೋರಿದರು. ವಿಡಿಯೊದಲ್ಲಿ ತಮ್ಮ ಹಳ್ಳಿಮನೆಯ ಚಿತ್ರ ನೋಡಿದ ಪರಮ್ ಭಾವುಕರಾದರು. ಕಲರ್ಸ್ ಕನ್ನಡ ಮೂಲಕ ಯಶಸ್ಸು ಪಡೆದ ಚಂದನ್ ಶೆಟ್ಟಿ, ನಿವೇದಿತಾ ಗೌಡ, ವಿಜಯ್ ಸೂರ್ಯ, ರಕ್ಷಿತ್, ಶೈನ್ ಶೆಟ್ಟಿ, ಮಯೂರಿ, ಅಂಕಿತಾ ಅಮರ್, ನೇಹಾ ಗೌಡ ಹಾಗೂ ಅಕುಲ್ ಬಾಲಾಜಿ ತಮ್ಮ ಮೆಂಟರ್ ‘ಪರಮ್‌’ ಅವರ ಹೊಸ ಪಯಣಕ್ಕೆ ಶುಭ ಹಾರೈಸಿದರು.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ ಹೊಸ ಸಿನಿಮಾ ಹೆಸರು ಅನೌನ್ಸ್‌! ಪರಮ್‌ ಆ್ಯಕ್ಷನ್‌ ಕಟ್‌!

ಈಗಾಗಲೇ ಪೋಸ್ಟರ್, ಟೀಸರ್, ಹಾಡುಗಳ ಮೂಲಕ ಸದ್ದು ಮಾಡುತ್ತಿರುವ ‘ಕೋಟಿ’ ಕನ್ನಡ ಇಂಡಸ್ಟ್ರಿಯ ದ್ವಿತೀಯಾರ್ಧದ ಯಶಸ್ಸಿಗೆ ಮೊದಲ ಗೆಲುವಾಗುವ ಎಲ್ಲ ಲಕ್ಷಣ ಕಾಣುತ್ತಿದೆ ಎನ್ನುವುದು ಅಭಿಮಾನಿಗಳ ಮನದಾಳ. ‘ಕೋಟಿ ಮನರಂಜನೆ’ ಕಾರ್ಯಕ್ರಮವು ಇದೇ ಜೂನ್ 2ರಂದು ಸಂಜೆ 7.30ಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಜಿಯೋ ಸ್ಟುಡಿಯೋಸ್ ನಿರ್ಮಾಣದ ‘ಕೋಟಿ’ ಸಿನಿಮಾ ಜೂನ್ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Radhika Pandit: ಅಭಿಮಾನಿಗಳ ಪ್ರಶ್ನೆ ಎದುರಿಸಲು ನಟಿ ರಾಧಿಕಾ ಪಂಡಿತ್ ಸಿದ್ಧ; ಹೊಸ ಸಿನಿಮಾ ಘೋಷಿಸ್ತಾರಾ ಸ್ಯಾಂಡಲ್‌ವುಡ್‌ ಸಿಂಡ್ರೆಲ್ಲಾ?

Radhika Pandit: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ ಸದ್ಯ ನಟನೆಯಿಂದ ವಿರಾಮ ಪಡೆದುಕೊಂಡು ಮಕ್ಕಳ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು ಸಿನಿಮಾ ರಂಗಕ್ಕೆ ಮರಳಬೇಕೆಂದು ಆಗ್ರಹಿಸುವ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಈ ಮಧ್ಯೆ ಅವರು ನೀವು ಇಂದು (ಮೇ 28) ‘ನನಗೆ ಏನಾದರೂ ಕೇಳಬಹುದು’ʼ ಎಂದು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಘೋಷಿಸಿದ್ದು, ಪ್ರಶ್ನೆ ಕೇಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

VISTARANEWS.COM


on

Radhika Pandit
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಾಧಿಕಾ ಪಂಡಿತ್‌ (Radhika Pandit) ಕನ್ನಡದ ಪ್ರತಿಭಾವಂತ ಕಲಾವಿದೆ. ಹಲವು ಚಿತ್ರಗಳಲ್ಲಿ ನಾಯಕಿಯಾಗಿ ಮಿಂಚಿದ ಅವರು ತಮ್ಮ ಅಭಿನಯ ಸಾಮರ್ಥ್ಯದಿಂದಲೇ ಅಭಿಮಾನಿಗಳ ಮನ ಗೆದ್ದವರು. ರಾಜ್ಯ ಪ್ರಶಸ್ತಿ ಪುರಸ್ಕೃತ ನಟಿ ಸದ್ಯ ನಟನೆಯಿಂದ ವಿರಾಮ ತೆಗೆದುಕೊಂಡಿದ್ದಾರೆ. ರಾಕಿಂಗ್‌ ಸ್ಟಾರ್‌ ಯಶ್‌ (Yash) ಜತೆ ಸಪ್ತಪದಿ ತುಳಿದ ಬಳಿಕ ಅವರು ಅಭಿನಯದಿಂದ ವಿಮುಖರಾಗಿದ್ದಾರೆ. ಅದರಲ್ಲಿಯೂ ಎರಡು ಮಕ್ಕಳಾದ ಬಳಿಕ ಅವರು ಸಿನಿಮಾ ರಂಗದಿಂದ ದೂರ ಉಳಿದು ಅವರ ಲಾಲನೆ-ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಅವರು ನಟನೆಗೆ ಮರಳಲಿದ್ದಾರಾ? ಎನ್ನುವ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣವಾಗಿದ್ದು ರಾಧಿಕಾ ಪಂಡಿತ್‌ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌. ಅದೇನು ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: Radhika Pandit: ಹೇಗಿತ್ತು ರಾಧಿಕಾ ಪಂಡಿತ್‌ ಬರ್ತಡೇ ಸೆಲೆಬ್ರೇಷನ್‌? ಇಲ್ಲಿದೆ ವಿಡಿಯೊ!

Continue Reading
Advertisement
Uttarakaanda Movie Shivarajkumar Visits Savadatti Yallamma Temple After Uttarakaanda Movie
ಸ್ಯಾಂಡಲ್ ವುಡ್10 mins ago

Uttarakaanda Movie:  ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಶಿವರಾಜ್​ ಕುಮಾರ್​

school reopen
ಪ್ರಮುಖ ಸುದ್ದಿ20 mins ago

School Reopen: ಬನ್ನಿ ಮಕ್ಕಳೇ ಶಾಲೆಗೆ! ರಜೆ ಮುಗೀತು, ಇಂದಿನಿಂದ ಕ್ಲಾಸ್‌ ಶುರು

Nawaz Sharif
ವಿದೇಶ38 mins ago

Nawaz Sharif: “ಕಾರ್ಗಿಲ್‌ ಯುದ್ಧ ನಮ್ಮಿಂದಲೇ ಆಗಿರುವ ಅತಿದೊಡ್ಡ ಪ್ರಮಾದ”- 23 ವರ್ಷಗಳ ಬಳಿಕ ತಪ್ಪೊಪ್ಪಿಕೊಂಡ ಪಾಕ್‌

prajwal revanna case mattress
ಪ್ರಮುಖ ಸುದ್ದಿ52 mins ago

Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

AC Side Effects
ಆರೋಗ್ಯ2 hours ago

AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

karnataka weather forecast
ಮಳೆ2 hours ago

Karnataka weather : ಗುಡುಗು ಸಹಿತ ಮಳೆಯೊಂದಿಗೆ 40 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

Rishab Pant
ಪ್ರಮುಖ ಸುದ್ದಿ3 hours ago

Rishabh Pant : ವಿಶ್ವಕಪ್​​ಗೆ ಮುನ್ನ ಟೀಮ್ ಇಂಡಿಯಾ ಜೆರ್ಸಿ ಧರಿಸಿದ ರಿಷಭ್ ಪಂತ್ ವಿಡಿಯೋ ಹಂಚಿಕೊಂಡ ಬಿಸಿಸಿಐ

Wildlife Sanctuaries
ಪರಿಸರ3 hours ago

Wildlife Sanctuaries: ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

T20 World Cup
ಕ್ರೀಡೆ3 hours ago

T20 World Cup : ಭಾರತ- ಪಾಕ್ ಪಂದ್ಯ ಐಸಿಸ್​ ಉಗ್ರರಿಂದ ಬಾಂಬ್ ಬೆದರಿಕೆ

namaz on road
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ನಡುರಸ್ತೆಯಲ್ಲೇಕೆ ನಮಾಜ್‌ ಮಾಡಬೇಕು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು22 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌