ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಿರೂಪಕಿ ಅಪರ್ಣಾ (Anchor Aparna) ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು. ಅಪರ್ಣಾ ಅವರ ತಂದೆ ಸಿನಿಮಾ ಪತ್ರಕರ್ತರಾಗಿದ್ದರು. ಹೀಗಾಗಿ ಸಹಜವಾಗಿಯೇ ಅವರಿಗೆ ಪುಟ್ಟಣ್ಣ ಕಣಗಾಲ್ ಅವರ ಪರಿಚಯವಿತ್ತು. ಒಮ್ಮೆ ಪುಟ್ಟಣ್ಣ ಕಣಗಾಲ್ ನಿರ್ದೇಶಿಸುತ್ತಿದ್ದ ‘ಮಸಣದ ಹೂವು’ ಸಿನಿಮಾದಲ್ಲಿ ಅವಕಾಶ ನೀಡುವಂತೆ ಅಪರ್ಣಾ ಅವರನ್ನು ಕರೆದುಕೊಂಡು ಅವರ ತಂದೆ ಹೋಗಿದ್ದರು. ಆಗ ಅಪರ್ಣ ತಂದೆಗೆ ಪುಟ್ಟಣ್ಣ ಕಣಗಾಲ್ ನಾವು ಸಿನಿಮಾದವರು ಕೆಟ್ಟವರು ಎಂದು ಹೇಳಿದ್ದರು.
ಪುಟ್ಟಣ್ಣ ಕಣಗಾಲ್ ಯಾಕೆ ಹೀಗೆ ಹೇಳಿದ್ದರು ಎನ್ನೋದನ್ನು ಅಂದು ಬಾಲ ನಟನಾಗಿ ಗುರುತಿಸಿಕೊಂಡಿದ್ದ ರಾಜೇಶ್ ಸಂದರ್ಶನವೊಂದರಲ್ಲಿ ರಿವೀಲ್ ಮಾಡಿದ್ದರು.
ʻಮಸಣದ ಹೂವುʼ ಸಿನಿಮಾ ಅವಕಾಶ ಕೇಳಲು ಅಪರ್ಣಾ ಅವರು ಪುಟ್ಟಣ್ಣ ಕಣಗಾಲ್ ಹತ್ತಿರ ತಂದೆ ಜತೆ ಬಂದಿದ್ದರು. ಪುಟ್ಟಣ್ಣ ಹೇಳಿದ್ದು ಹೀಗೆ. ʻʻಸಿನಿಮಾ ನಮ್ಮ ಹೆಣ್ಣು ಮಕ್ಕಳಿಗೆ ಬೇಡ. ಸಿನಿಮಾದವರು ನಾವು ಎಷ್ಟು ಕೆಟ್ಟವರು ಅಂದರೆ, ತೆಳ್ಳಗಿರುವ ಬಟ್ಟೆ ಹಾಕಿಸಿ, ಹಿಂದೆ ಲೈಟ್ ಹಾಕಿಸಿ, ತೊಡೆ ಶೇಪ್ ಕಾಣಿಸುವಂತೆ ಶೂಟ್ ಮಾಡುತ್ತೇವೆ. ಕೆಟ್ಟವರು ನಾವುʼʼಎಂದಿದ್ದರು ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!
ಅಪರ್ಣಾ ಅವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.