Site icon Vistara News

Challenging Star Darshan: `ಸಿಂಧೂರ ಲಕ್ಷ್ಮಣ’ನಾಗಿ ಮಿಂಚಲಿದ್ದಾರೆ ದರ್ಶನ್‌; ಸಾಲು ಸಾಲು ಸಿನಿಮಾಗಳು ಅನೌನ್ಸ್‌!

Challenging Star Darshan New Film

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Challenging Star Darshan) ಅವರ ಜನುಮದಿನ ಬಂತೆಂದರೆ ಸಾಕು, ಅಭಿಮಾನಿಗಳಿಗೆ ಸಂಭ್ರಮವೋ ಸಂಭ್ರಮ. ಮಾತ್ರವಲ್ಲ ಯಾವೆಲ್ಲ ಸಿನಿಮಾ ಅನೌನ್ಸ್‌ ಮಾಡುತ್ತಾರೆ ಎಂಬುವ ತವಕ. ಇದೀಗ ಬರೋಬ್ಬರಿ ಒಂಭತ್ತು ಸಿನಿಮಾಗಳು ದರ್ಶನ್‌ ಅವರ ಕೈಯಲ್ಲಿ ಇದೆ ಎನ್ನಲಾಗಿದೆ. ಆ ಪೈಕಿ ದರ್ಶನ್ ಅವರ ಆಪ್ತ ನಿರ್ಮಾಪಕರಾದ ಶೈಲಜಾ ನಾಗ್ ಮತ್ತು ಬಿ.ಸುರೇಶ್ ಕೂಡ ಇದ್ದಾರೆ. ಖ್ಯಾತ ನಿರ್ದೇಶಕ ತರುಣ್​ ಸುಧೀರ್​ (Tharun Sudhir) ಮತ್ತು ದರ್ಶನ್​ ಅವರ ಕಾಂಬಿನೇಶನ್‌​ನಲ್ಲಿ ಈ ಸಿನಿಮಾ ಮೂಡಿಬರಲಿದ್ದು, ಇದರಲ್ಲಿ ಐತಿಹಾಸಿಕ ಕಥಾಹಂದರ ಇರಲಿದೆ. ಶೈಲಜಾ ನಾಗ್​ ಮತ್ತು ಬಿ. ಸುರೇಶ ಅವರು ನಿರ್ಮಾಣದ D 59 ಸಿನಿಮಾ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ.

ದರ್ಶನ್‌ ಅವರಿಗೆ ಐತಿಹಾಸಿಕ ಸಿನಿಮಾ ಮಾಡುವುದೆಂದರೆ ಅಚ್ಚು ಮೆಚ್ಚು. ಈ ಮೊದಲು ಸಂಗೊಳ್ಳಿ ರಾಯಣ್ಣನಾಗಿ ಅಬ್ಬರಿಸಿದ್ದ ದರ್ಶನ್ ಅವರು ಈಗ ಸಿಂಧೂರ ಲಕ್ಷ್ಮಣನ ಪಾತ್ರ ಮಾಡಲು ಒಪ್ಪಿಕೊಂಡಿದ್ದಾರೆ. ತರುಣ್​ ಸುಧೀರ್​ ಮತ್ತು ದರ್ಶನ್​ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾದಲ್ಲಿ ಸಿಂಧೂರ ಲಕ್ಷ್ಮಣನ ಕಥೆ ಇರಲಿದೆ. ದರ್ಶನ್​ ನಟನೆಯ 59ನೇ ಸಿನಿಮಾವಾಗಿ ಈ ಚಿತ್ರ ಮೂಡಿಬರಲಿದೆ.

‘ಈ ಮೊದಲು ದರ್ಶನ್​ ನಟಿಸಿದ್ದ ‘ಯಜಮಾನ’ ಮತ್ತು ‘ಕ್ರಾಂತಿ’ ಸಿನಿಮಾಗಳಿಗೆ ‘ಮೀಡಿಯಾ ಹೌಸ್​ ಸ್ಟುಡಿಯೋ’ ಸಂಸ್ಥೆಯ ಮೂಲಕ ಶೈಲಜಾ ನಾಗ್​ ಮತ್ತು ಬಿ. ಸುರೇಶ್​ ಅವರು ಬಂಡವಾಳ ಹೂಡಿದ್ದರು. ಈಗ ಮೂರನೇ ಬಾರಿಗೆ ಅವರು ದರ್ಶನ್​ ಅಭಿನಯದ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನೀಡಲಿದ್ದಾರೆ.

ಇದನ್ನೂ ಓದಿ: Challenging Star darshan: ಒಳ್ಳೆಯವರಾಗಿದ್ದು ಸಾಕು, ಇನ್ನಾದ್ರೂ ʻವಿಲನ್ʼ ಆಗೋಣ ಎಂದ ʻಡೆವಿಲ್ʼ ದರ್ಶನ್‌!

ಇದರ ಹೊರತಾಗಿ ದರ್ಶನ್ ಅವರ ಜತೆ ʻಅಂಬರೀಶʼ ಸಿನಿಮಾ ಮಾಡಿದ್ದ ಮಹೇಶ್ ಸುಖಧರೆ ಕೂಡ ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರವೊಂದನ್ನ ಘೋಷಿಸಿದ್ದಾರೆ. ಸಚ್ಚಿದಾನಂದ ಇಂಡುವಾಳ ಹೊಸ ಚಿತ್ರ ಘೋಷಿಸಿದ್ದಾರೆ, ಇದನ್ನು ತರುಣ್ ಸುಧೀರ್ ಅವರೇ ನಿರ್ದೇಶಿಸುತ್ತಿರುವುದು ವಿಶೇಷ. ರಮೇಶ್ ಪಿಳ್ಳೈ, ಮೋಹನ್ ನಟರಾಜನ್, ಕೆ.ಮಂಜುನಾಥ್, ರಘುನಾಥ್ ಸೋಗಿ, ದರ್ಶನ್ ಸಿನಿಮಾ ನಿರ್ಮಾಣ ಮಾಡಲು ಆಸಕ್ತಿಯನ್ನ ತೋರಿಸಿರುವ ಉಳಿದ ನಿರ್ಮಾಪಕರು. ಇವರ ಚಿತ್ರಕ್ಕೆ ಯಾರು ನಿರ್ದೇಶಕರು ಯಾರೆಂಬುದು ತಿಳಿದು ಬಂದಿಲ್ಲ.

ʻಜಗ್ಗು ದಾದಾʼ ಚಿತ್ರವನ್ನು ಮಾಡಿದ್ದ ರಾಘವೇಂದ್ರ ಹೆಗ್ಡೆ ಅವರು ದರ್ಶನ್‌ ಜತೆ ಸಿನಿಮಾ ಮಾಡಲಿದ್ದಾರೆ. ದರ್ಶನ್ ಕೈಯಲ್ಲಿ ʻಡೆವಿಲ್ʼ ಹಾಗೂ ಪ್ರೇಮ್ ನಿರ್ದೇಶನದಲ್ಲಿ ಕೆ.ವಿ.ಎನ್ ಸಂಸ್ಥೆ ನಿರ್ಮಾಣದಲ್ಲಿ ಸಿನಿಮಾ ಮೂಡಿಬರಲಿದೆ.

Exit mobile version