Site icon Vistara News

Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Chandan Shetty divorce main reason social nedia craze

ಬೆಂಗಳೂರು: ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ವಿಚ್ಛೇದನ ಕೋರಿ ಬೆಂಗಳೂರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ

.ಪರಸ್ಪರ ಒಪ್ಪಿಗೆ ಮೇರೆಗೆ ಕಿರುತೆರೆ ದಂಪತಿ ಚಂದನ್ ಶೆಟ್ಟಿ ನಿವೇದಿತಾ ಗೌಡ ವಿಚ್ಛೇದನ ಕೋರಿ ಬೆಂಗಳೂರಿನ ಫ್ಯಾಮಿಲಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನು ಚೆಂದವಾಗಿದ್ದ ಜೋಡಿ ಬೇರೆಯಾಗಲು ಕಾರಣ ನಿವೇದಿತಾ ಅವರಿಗಿದ್ದ ಸೋಷಿಯಲ್‌ ಮೀಡಿಯಾ ಕ್ರೇಜ್‌ ಎಂದು ಹೇಳಲಾಗುತ್ತಿದೆ. ಸೋಷಿಯಲ್‌ ಮೀಡಿಯಾವೇ ಇಬ್ಬರ ಬದುಕಿನಲ್ಲಿ ವಿಲನ್‌ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜೋಡಿ ಒಟ್ಟಿಗೆ ರೀಲ್ಸ್‌ ಮಾಡಿ ಸಾಕಷ್ಟು ಕ್ರೇಜ್‌ ಪಡೆದುಕೊಂಡಿತ್ತು. ಇತ್ತೀಚೆಗೆ ನಿವೇದಿತಾ ಒಬ್ಬರೇ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು. ಹೀಗಾಗಿ ಅವರ ಫ್ಯಾನ್ಸ್‌ ಜೋಡಿ ಬೇರೆಯಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದರು.

ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್‌ ಶೆಟ್ಟಿ ಅವರು ನಿವೇದಿತಾ ಗೌಡ ಪ್ರಪೋಸ್‌ ಮಾಡಿದ್ದೂ ವಿವಾದಕ್ಕೆ ಕಾರಣವಾಗಿತ್ತು. ಸಾಕಷ್ಟು ಮಂದಿ ಇದಕ್ಕೆ ಟೀಕೆ ವ್ಯಕ್ತಪಡಿಸಿದ್ದರು. ಬಿಗ್‌ ಬಾಸ್‌ ಐದನೇ ಸೀಸನ್‌ನಲ್ಲಿ ಚಂದನ್‌ ಗೌಡ ಹಾಗೂ ನಿವೇದಿತಾ ಗೌಡ ಮೊದಲ ಬಾರಿಗೆ ಭೇಟಿಯಾಗಿದ್ದರು. ಮೊದಲಿಗೆ ಬಿಗ್‌ಬಾಸ್‌ನಲ್ಲಿ ನಿವೇದಿತಾಳನ್ನು ತನ್ನ ತಂಗಿ ಎಂದೇ ಹೇಳುತ್ತಿದ್ದ ಚಂದನ್‌ ಗೌಡ ಬಳಿಕ ಮದುವೆಯಾಗಿದ್ದರು.

ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಜೋಡಿ!

ನಟಿ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು. ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು. 2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದರು. ಗಾಯಕ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿಯೂ ನಟಿಸಿದ್ದಾರೆ. ಚಂದನ್ ಶೆಟ್ಟಿ ಅವರ ಮೊದಲ ಸಿನಿಮಾದ ಶೀರ್ಷಿಕೆ ‘ಎಲ್ರ ಕಾಲೆಳೆಯುತ್ತೆ ಕಾಲ’.

Exit mobile version