Site icon Vistara News

Chandan Shetty Movie : ವಿದ್ಯಾರ್ಥಿ ವಿದ್ಯಾರ್ಥಿನಿಯರೇ… ಈ ವಿಆರ್‌ ಪೋಸ್ಟರ್‌ ನೋಡಿ!

Chandan Shetty Movie Vidryarthi Vidyarthiniyare

ಬೆಂಗಳೂರು: ಇದು ರಾಜ್ಯದ ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ (College Students) ಸಂಬಂಧಿಸಿದ ಸುದ್ದಿ! ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಸಿನಿಮಾದ ಕಡೆಗೆ ಸೆಳೆಯುವ ಸುದ್ದಿ! ವಿದ್ಯಾರ್ಥಿ ವಿದ್ಯಾರ್ಥಿನಿಯರೇ.. (Vidyarthi Vidyarthiniyare) ಎಂಬ ಸಿನಿಮಾದ ಸುದ್ದಿ. ಆರಂಭದಿಂದಲೂ ಬೇರೆ ಬೇರೆ ರೀತಿಯಲ್ಲಿ ಸುದ್ದಿ ಮಾಡುತ್ತಿದ್ದ ಈ ಸಿನಿಮಾ ಟೀಮ್‌ ಇದೀಗ ಹೊಸ ಗಿಫ್ಟ್‌ನೊಂದಿಗೆ ಬಂದಿದೆ. ಅದುವೇ ಚಂದನ್‌ ಶೆಟ್ಟಿ ಅಭಿನಯದ ಚಿತ್ರದ (Chandan Shetty Movie) ವಿಆರ್‌ ಪೋಸ್ಟರ್‌ (VR Poster) ಮತ್ತು ಮೋಷನ್‌ ಪೋಸ್ಟರ್‌!

ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ (Niveditha Gowda) ಬಿಡುಗಡೆಗೊಳಿಸಿದ್ದಾರೆ!

ಚಂದನ್‌ ಶೆಟ್ಟಿ ಯಾವ ಗೆಟಪ್ಪಿನಲ್ಲಿದ್ದಾರೆ ನೋಡಿ!

ಅರುಣ್ ಅಮುಕ್ತ ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿಯ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್ಪಿನ ಸುತ್ತ ಒಟ್ಟಾರೆ ಕಥೆಯ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ.

Chandan Shetty Movie :ಹೊಸ ಜಮಾನಾದ ಹುಡುಗರಿಗೆ ಕನೆಕ್ಟ್‌ ಆಗುವ ಪೋಸ್ಟರ್‌

ಈ ವಿಆರ್ ಪೋಸ್ಟರ್ (ವರ್ಚುವಲ್ ರಿಯಾಲಿಟಿ ಪೋಸ್ಟರ್) ಅಂತೂ ಈಗಿನ ಜನರೇಷನ್ನಿನ ಹುಡುಗರಿಗೆ ನೇರಾನೇರ ಕನೆಕ್ಟಾಗುವಂತಿದೆ. ಚಂದನ್ ಶೆಟ್ಟಿಯ ಗೆಟಪ್ಪು ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆಯನ್ನು ಒಳಗೊಂಡಿರಬಹುದಾ? ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರಿನಲ್ಲಿ ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲ್ಕು ಪಾತ್ರಗಳು ಎದುರುಗೊಂಡಿದ್ದವು. ಚಂದನ್ ಪಾತ್ರ ಕೈಯಲ್ಲಿ ವಿಆರ್ ಅನ್ನು ಹಿಡಿದುಕೊಂಡಿದೆ. ಇದೆಲ್ಲವನ್ನೂ ಕಂಡ ಪ್ರೇಕ್ಷಕರಿಗೆ ಇದೊಂದು ಈ ಕಾಲಮಾನದ ಆವೇಗ ಬಚ್ಚಿಟ್ಟುಕೊಂಡಿರುವ ಕಥೆಯೆಂಬ ವಿಚಾರವನ್ನು ದಾಟಿಸಿದೆ. ನಿಖರವಾಗಿ ಹೇಳಬೇಕೆಂದರೆ, ಈ ವಿಆರ್ ಪೋಸ್ಟರ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರತ್ತ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುವಂತಿದೆ.

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ.

ಇದನ್ನು ಓದಿ : Actor Darshan: ಮೊದಲ ಬಾರಿ ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ ದರ್ಶನ್‌!

ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟ ತಲುಪಿಕೊಂಡಿದೆ.

Exit mobile version