Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ! - Vistara News

ಸ್ಯಾಂಡಲ್ ವುಡ್

Chandan Shetty: ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

Chandan Shetty: ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

VISTARANEWS.COM


on

Chandan Shetty Students Party Video Song Vidyarthi Vidyarthiniyare Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ (Vidyarthi Vidyarthiniyare Movie) ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್ ಅಮುಕ್ತ, ಚಂದನ್ ಶೆಟ್ಟಿ, ಚೇತನ್ ಕುಮಾರ್ (Chandan Shetty) ಹಾಜರಿದ್ದ ಈ ವೇದಿಕೆಯಲ್ಲಿ ಒಟ್ಟಾರೆ ಸಿನಿಮಾ ರೂಪುಗೊಂಡಿದ್ದರ ಬಗ್ಗೆ, ಸದರಿ ಪಾರ್ಟಿ ಸಾಂಗ್ ನ ವಿಶೇಷತೆಗಳ ಬಗ್ಗೆ ಒಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ.

ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

ವಿಜೇತ್ ಕೃಷ್ಣ, ಚಂದನ್ ಶೆಟ್ಟಿ ಮತ್ತು ಚೇತನ್ ಕುಮಾರ್ ದಶಕದ ಹಿಂದೆ ರೂಂ ಮೇಟ್ ಗಳಾಗಿದ್ದರಂತೆ. ಈ ಹಿಂದೆ ವಿಜೇತ್ ಮತ್ತು ಚಂದನ್ ಶೆಟ್ಟಿ ಸಮಾಗಮದಲ್ಲಿ ಒಂದೇ ಒಂದು ಪೆಗ್ಗಿಗೆ ಎಂಬ ಹಾಡು ಬಂದಿತ್ತು. ಅದು ಸೂಪರ್ ಹಿಟ್ ಆಗಿತ್ತು. ಈ ಹಾಡೂ ಅದೇ ರೀತಿ ಹಿಟ್ಟಾಗಲೆಂಬ ಆಶಯವನ್ನ ಚಂದನ್ ಶೆಟ್ಟಿ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ: Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

ಇನ್ನುಳಿದಂತೆ ಸಾಹಿತ್ಯ ಬರೆದಿರುವ ಚೇತನ್ ಕುಮಾರ್ ಅವರಿಗೆ ವಿಜೇತ್ ಕೃಷ್ಣ ಅವರ ಸಂಗೀತ ಅಂದ್ರೆ ಇಷ್ಟವಂತೆ. ಆ ಪ್ರೀತಿಯಿಂದಲೇ ಈ ಹಾಡು ಬರೆದಿದ್ದೇನೆಂದಿರುವ ಚೇತನ್, ಇದೂ ಜನಮನ ಗೆಲ್ಲಲೆಂದು ಹಾರೈಸಿದ್ದಾರೆ. ಈ ವೇದಿಕೆಯಲ್ಲಿ ಸದರಿ ಹಾಡಿನಲ್ಲಿ ನಟಿಸಿರುವ ಮನೋಜ್ ವಿವಾನ್, ಮನಸ್ವಿ, ಭಾವನಾ ಅಪ್ಪು, ಅಮರ್ ಕೂಡಾ ಹಾಜರಿದ್ದರು.

ವೆರೈಟಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ.

ಚಂದನ್ ಶೆಟ್ಟಿ , ಅಮರ್, ಭಾವನಾ, ಮನಸ್ವಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

Actor Darshan: ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

VISTARANEWS.COM


on

Actor Darshan crying In Jail while seeing wife and son
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Actor Darshan) ಬಂಧನವಾಗಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಸೋಮವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭೇಟಿಯಾದರು. ಇವರಷ್ಟೇ ಅಲ್ಲದೇ ದರ್ಶನ್‌ ಆಪ್ತ ವಿನೋದ್‌ ಪ್ರಭಾಕರ್‌ ಕೂಡ ಸ್ನೇಹಿತರ ಜತೆ ಆಗಮಿಸಿ ಭೇಟಿ ಮಾಡಿದರು. ಈ ವೇಳೆ ದರ್ಶನ್‌ ಅವರು ಮಗನ್ನು ನೋಡಿ ಕಣ್ಣೀರಿಟ್ಟರು. ಮಗ ವಿನೀಶ್ ಹಾಗೂ ಪತ್ನಿ ವಿಜಯಲಕ್ಷ್ಮಿ ನೋಡುತ್ತಿದ್ದಂತೆ ದರ್ಶನ್ ಭಾವುಕರಾದರು.

ಮಗನನ್ನು ತಬ್ಬಿಕೊಂಡು ಕೆಲ ಹೊತ್ತು ದರ್ಶನ್‌ ಕಣ್ಣೀರಿಟ್ಟರು. ಪತ್ನಿ ಬಳಿ ನಡೆದ ಘಟನೆಯ ಬಗ್ಗೆ ದರ್ಶನ್‌ ಕೆಲ ಮಾತುಗಳನ್ನಾಡಿದರು. ಕಾನೂನು ಹೋರಾಟದ ಬಗ್ಗೆ ಪತ್ನಿ ದರ್ಶನ್‌ಗೆ ಮಾಹಿತಿ ನೀಡಿದರು. ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮೀ ಧೈರ್ಯ ತುಂಬಿದರು. . ಮಗ ವಿನೀಶ್ ನನ್ನು ತಬ್ಬಿಕೊಂಡೇ ಅಳುತ್ತಾ ಮಾತನಾಡಿದ್ದಾರೆ. ಅರ್ಧ ಘಂಟೆಯ ಭೇಟಿಯಲ್ಲಿ ದರ್ಶನ್ ಭಾವುಕದಿಂದಲೇ ಮಾತನಾಡಿದರು. ಪತ್ನಿ ವಿಜಯಲಕ್ಷ್ಮಿಗಿಂತ ಹೆಚ್ಚಿನ ಸಮಯವನ್ನು ಮಗನ ಜೊತೆಗೆ ಕಳೆದರು.

ಇದನ್ನೂ ಓದಿ: Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಕಪ್ಪು ಬಣ್ಣದ ಕಿಯಾ ಕಾರಿನಲ್ಲಿ ಆಗಮಿಸಿದ್ದರು. ಮೊದಲು ಜೈಲಿನ ಚೆಕ್ ಪೋಸ್ಟ್ ಸಮೀಪ ಕಾರು ನಿಲ್ಲಿಸಲಾಗಿತ್ತು. ಆಗ ಮಾಧ್ಯಮಗಳ ಕ್ಯಾಮೆರಾ ಕಂಡು ವಿಜಯಲಕ್ಷ್ಮಿ, ವಿನೀಶ್ ವಾಪಸ್ ತೆರಳಿದರು. ನಂತರ ಬೇರೊಂದು ಕಾರಿನಲ್ಲಿ ಜೈಲಿನ ಬಳಿ ಬಂದರು. ಆಗ ಮಾಧ್ಯಮಗಳ ಕಣ್ತಪ್ಪಿಸಿ ಜೈಲಿನ ಒಳಗೆ ದರ್ಶನ್‌ ಪತ್ನಿ, ಪುತ್ರನನ್ನು ಪೊಲೀಸರು ಕರೆದೊಯ್ದರು.

ಇನ್ನು ಜೈಲಿನಲ್ಲಿದ್ದರೂ ನಟ ದರ್ಶನ್‌ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾಗಿದೆ. ಸಾಮಾನ್ಯ ಕೈದಿಗಳನ್ನು ಭೇಟಿಯಾಗಲು ಬಂದರೆ ನೂರೊಂದು ಕಂಡಿಷನ್ಸ್‌ ವಿಧಿಸುವ ಪೊಲೀಸರು, ಸೆಲೆಬ್ರಿಟಿ, ರಾಜಕಾರಣಿಗಳು, ಬಲಾಢ್ಯರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ದರ್ಶನ್‌ ಪತ್ನಿ, ಪುತ್ರ ಭೇಟಿ ಮಾಡಿ ಹೊರಟ ಬಳಿಕ, ನಟ ವಿನೋದ್ ಪ್ರಭಾಕರ್ ಅವರು ಸ್ನೇಹಿತರ ಜತೆ ತೆರಳಿ ದರ್ಶನ್ ಅವರನ್ನು ಭೇಟಿ ಮಾಡಿ ನಿರ್ಗಮಿಸಿದರು. ನಂತರ ಮಾತನಾಡಿದ ವಿನೋದ್ ಪ್ರಭಾಕರ್ ಅವರು, ಮೃತ ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವನ್ನು ಬರಿಸುವ ಶಕ್ತಿ ಭಗವಂತ ನೀಡಲಿ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.

ದರ್ಶನ್ ಅವರನ್ನು ಭೇಟಿ ಮಾಡಿ ನಾಲ್ಕು ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬದಂದು ಭೇಟಿ ಮಾಡಿದ್ದೆ. ಮಾಧ್ಯಮಗಳಲ್ಲಿ ಬರುವುದನ್ನು ನೋಡಿ ವಿಚಾರ ತಿಳಿದುಕೊಂಡೆ, ಪೊಲೀಸ್ ಸ್ಟೇಷನ್ ಹತ್ತಿರ ಹೋಗಿ ಭೇಟಿಯಾಗಲು ಪ್ರಯತ್ನಪಟ್ಟೆ, ಆದರೆ ಸಾಧ್ಯವಾಗಿರಲಿಲ್ಲ. ಇಂದು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಭೇಟಿ ಮಾಡಿದ್ದೇನೆ. ದರ್ಶನ್ ಅವರು ಮೌನವಾಗಿದ್ದರು, ಏನ್ ಟೈಗರ್ ಅಂತ ಹೇಳಿದರು ಅಷ್ಟೇ… ಅವರಿಗೆ ಶೆಕ್ ಹ್ಯಾಂಡ್ ಮಾಡಿ ಬಂದೆ ಎಂದು ತಿಳಿಸಿದರು.

ಪ್ರಕರಣದ ಬಗ್ಗೆ ಎಲ್ಲೂ ಪ್ರತಿಕ್ರಿಯಿಸಿಲ್ಲ ಎಂಬ ಬಗ್ಗೆ ಸ್ಪಂದಿಸಿ, ಎಲ್ಲಾ ಕಡೆ ವಿನೋದ್ ಪ್ರಭಾಕರ್ ಪೋಸ್ಟ್ ಮಾಡಿಲ್ಲ, ಮಾತನಾಡಿಲ್ಲ ಎನ್ನುತ್ತಿದ್ದರು. ಪೋಸ್ಟ್ ಹಾಕಿ ಈ ಪ್ರಾಬ್ಲಮ್ ಸರಿಹೋಗುತ್ತೆ ಎಂದರೆ ನಾನೇ ಸಾವಿರ ಪೋಸ್ಟ್ ಹಾಕುತ್ತಿದ್ದೆ. ಈ ಪ್ರಕರಣ ಬಹಳ ಗಂಭೀರವಾಗಿದೆ. ಪೊಲೀಸ್ ತನಿಖೆಯಲ್ಲಿ ಕೇಸ್ ಇದೆ. ಏನು ಮಾತನಾಡಬೇಕು ಎನ್ನುವ ಕ್ಲ್ಯಾರಿಟಿ ನನಗಿಲ್ಲ. ಅದಕ್ಕೆ ಅವರನ್ನು ಭೇಟಿ ಮಾಡುವವರೆಗೆ ಮಾತನಾಡಬಾರದು ಅಂದುಕೊಂಡಿದ್ದೆ. ಕಾನೂನಿಗಿಂತ ಯಾರೂ ದೊಡ್ಡವರಿಲ್ಲ, ಎಲ್ಲರಿಗೂ ನ್ಯಾಯ ಸಿಗಲಿ ಎಂದರು.

Continue Reading

ಸ್ಯಾಂಡಲ್ ವುಡ್

Actor Darshan: ʻಸೌಂದರ್ಯ ಜಗದೀಶ್ʼ ಆತ್ಮಹತ್ಯೆಗೆ ಬಿಗ್​ ಟ್ವಿಸ್ಟ್; ದರ್ಶನ್‌, ಪವಿತ್ರಾ ವ್ಯವಹಾರವೇ ಸಾವಿಗೆ ಕಾರಣ?

Actor Darshan: ಸೌಂದರ್ಯ ಜಗದೀಶ್ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿ ಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವಿಚಾರವಾಗಿಯೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ.

VISTARANEWS.COM


on

Actor Darshan pavithra Gowda in Soundarya Jagadish case Big twist
Koo

ಬೆಂಗಳೂರು: ಕನ್ನಡ ಸಿನಿಮಾ (Actor Darshan) ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ತಮ್ಮ ನಿವಾಸದಲ್ಲಿ ಕಳೆದ ಏ.14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ವೈರಲ್‌ ಆದ ಬಳಿಕ ಅವರ ಬಗ್ಗೆ ಹಲವಾರು ಅನುಮಾನಗಳು ವ್ಯಕ್ತವಾದವು. ಕೆಲವರು ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತವಾಗಿ ನಿಧನರಾದರು ಎಂದು ಹೇಳಿಕೊಂಡರು. ಇದೀಗ ಈ ಸಾವಿನ ಕುರಿತಂತೆ ಹೊಸ ಸುದ್ದಿಯೊಂದು ಬೆಳಕಿಗೆ ಬಂದಿದೆ. ಜಗದೀಶ್‌ ಅಕೌಂಟ್‌ನಿಂದ ಕೋಟಿಗಟ್ಟಲೆ ಹಣ ಪವಿತ್ರಾ ಗೌಡ ಅಕೌಂಟ್‌ಗೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಇದೀಗ ಜಗದೀಶ್ ಸೂಸೈಡ್‌ಗೂ ಈ ಹಣದ ವರ್ಗಾವಣೆಗೂ ಸಂಬಂಧ ಇದೆಯಾ ಎನ್ನುವ ಅನುಮಾನ ಶುರುವಾಗಿದೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ದರು? ಸಾಲ ಅಂತ ಕೊಟ್ಟಿದ್ರಾ ಎಂಬುದರ ಸತ್ಯ, ತನಿಖೆಯ ನಂತರ ಬಯಲಾಗಬೇಕಿದೆ.

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್​ಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಈ ಹಿಂದೆ ಜಗದೀಶ್‌ ಬ್ಯುಸಿನೆಸ್ ಪಾರ್ಟನರ್ಸ್ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಸೌಂದರ್ಯ ಜಗದೀಶ್‌ ಮೃತಪಟ್ಟ ಒಂದು ತಿಂಗಳ ನಂತರ ಅವರ ರೂಮಿನಲ್ಲಿ ಡೆತ್‌ನೋಟ್‌ ಪತ್ತೆಯಾಗಿತ್ತು. ಸೌಂದರ್ಯ ಜಗದೀಶ್‌ ಬರೆದ ಡೆತ್‌ನೋಟ್‌ನಲ್ಲಿ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ನ ಸಹ ಪಾಲುದಾರರಿಂದ ಸುಮಾರು 60 ಕೋಟಿ ರೂ. ನಷ್ಟವಾಗಿದ್ದು, ಮೋಸ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಬರೆದಿತ್ತು. ಇದೀಗ ಸೌಂದರ್ಯ ಜಗದೀಶ್​, ದರ್ಶನ್​, ಪವಿತ್ರಾ ಗೌಡ ನಡುವೆ ಇದೇ ಹಣದ ವ್ಯವಹಾರ ನಡೆದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ಮೇಲೆ ಜಗದೀಶ್ ಪತ್ನಿ ರೇಖಾ ಆರೋಪ ಮಾಡಿದ್ದರು. ಪಾಲುದಾರರಿಂದ 60 ಕೋಟಿ ರೂ. ನಷ್ಟವಾಗಿತ್ತು ಎಂದು ಹೇಳಿಕೆ ನೀಡಿದ್ದರು. ರೇಖಾ ಜಗದೀಶ್​ ದೂರಿನ ಬೆನ್ನಲ್ಲೇ ಪಾಲುದಾರರು ಅಲರ್ಟ್ ಕೂಡ ಆಗಿದ್ದರು. ವ್ಯವಹಾರದ ದಾಖಲೆಯನ್ನು ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ.

ಪವಿತ್ರಾ ಗೌಡ ಖರೀದಿಸಿದ ಮನೆಗೆ ದುಡ್ಡು ಕೊಟ್ಟಿದ್ರಾ ಸೌಂದರ್ಯ ಜಗದೀಶ್?

ಪವಿತ್ರಾ ಗೌಡ ಮನೆ ಖರೀದಿಗಾಗಿ ಸೌಂದರ್ಯ ಜಗದೀಶ್ 2 ಕೋಟಿ ರೂ. ಕೊಟ್ಟಿದ್ದರು ಎನ್ನಲಾಗಿದೆ. ಸೌಂದರ್ಯ ಜಗದೀಶ್ ಹಣ ಕೊಟ್ಟ ಮಾರನೇ ದಿನವೇ ಪವಿತ್ರಾ ಗೌಡ ಮನೆ ಖರೀದಿಸಿದ್ದರು. ಈ ದಾಖಲೆ ಇದೀಗ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ಈ ಎಲ್ಲ ಹಣದ ವ್ಯವಹಾರದ ದಾಖಲೆ ಪಾಲುದಾರ ಸುರೇಶ್​ ಪೊಲೀಸರಿಗೆ ನೀಡಿದ್ದಾರೆ. 2017 ನವೆಂಬರ್​ 13ರಂದು ಪವಿತ್ರಾಗೌಡಗೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು ಜಗದೀಶ್‌. ಹಾಗೇ 2018, ಜನವರಿ 23ರಂದು ಪವಿತ್ರಾಗೌಡಗೆ ಮತ್ತೆ 1 ಕೋಟಿ ರೂ. ವರ್ಗಾವಣೆ ಮಾಡಿದ್ದರು. 2018, ಜನವರಿ 24 ರಂದು ಪವಿತ್ರಾಗೌಡ ಮನೆ ಖರೀದಿಸಿದ್ದರು.

ಕೆಂಚನಹಳ್ಳಿಯಲ್ಲಿ 1. 75 ಲಕ್ಷ ರೂ. ಮೌಲ್ಯದ ಮನೆ ಖರೀದಿಸಿದ್ದ ಪವಿತ್ರಾ ಗೌಡ

RR ನಗರ ಬಳಿಯ ಕೆಂಚನಹಳ್ಳಿಯಲ್ಲಿ 1. 75 ಲಕ್ಷ ಮೌಲ್ಯದ ಮನೆಯನ್ನು ಪವಿತ್ರಾ ಗೌಡ ಖರೀದಿಸಿದ್ದರು. ಪವಿತ್ರಾಗೌಡ ಮನೆ ಖರೀದಿ ಪತ್ರದಲ್ಲಿ ಸಾಕ್ಷಿಯಾಗಿ ಸೌಂದರ್ಯ ಜಗದೀಶ್​ ಸಹಿ ಕೂಡ ಇತ್ತು. ಈ ಹಣದ ವ್ಯವಹಾರವನ್ನು ಸೌಂದರ್ಯ ಜಗದೀಶ್​ ಪಾಲುದಾರರಿಂದ ಮುಚ್ಚಿಟ್ಟಿದ್ದರು. ಸೌಂದರ್ಯ ಜಗದೀಶ್ ಆತ್ಮಹತ್ಯೆ ಬಳಿಕ ಪಾಲುದಾರರ ವಿರುದ್ಧವೇ ಪತ್ನಿ ದೂರು ನೀಡಿದ ಹಿನ್ನೆಲೆಯಲ್ಲಿ ವಹಾರದ ದಾಖಲೆಯನ್ನು ಪಾಲುದಾರರು ಕಲೆ ಹಾಕಿದರು. ಪಾಲುದಾರರಿಗೆ ಸಿಕ್ಕ ದಾಖಲೆಯಲ್ಲಿ ದರ್ಶನ್​- ಪವಿತ್ರಾ, ಜಗದೀಶ್ ವ್ಯವಹಾರ ಪತ್ತೆಯಾಗಿದೆ. ದರ್ಶನ್​ ಕಾರಣಕ್ಕೆ ಪವಿತ್ರಾಗೆ 2 ಕೋಟಿ ರೂ.ಯನ್ನು ಸೌಂದರ್ಯ ಜಗದೀಶ್ ಕೊಟ್ಟರಾ ಎಂಬ ಪ್ರಶ್ನೆ ಈಗ ಎದುರಾಗಿದೆ. ಪವಿತ್ರಾಗೌಡಗೆ ಸೌಂದರ್ಯ ಜಗದೀಶ್​ ಹಣ ಕೊಟ್ಟ ದಾಖಲೆ ಮಾತ್ರ ಲಭ್ಯವಾಗಿದೆ. ಈವರೆಗೂ ಸೌಂದರ್ಯ ಜಗದೀಶ್​ಗೆ ಪವಿತ್ರಾಗೌಡ ಹಣ ವಾಪಸ್​ ನೀಡಿಲ್ಲ. ಹೀಗಾಗಿ ದರ್ಶನ್ ಒತ್ತಡಕ್ಕೆ ಮಣಿದು, ಜಗದೀಶ್‌ ಅವರು ಪವಿತ್ರಾ ಗೌಡಗೆ ಹಣ ನೀಡಿ ಸಂಕಷ್ಟಕ್ಕೆ ಸಿಲುಕಿದರು ಎನ್ನಲಾಗುತ್ತಿದೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಇದೀಗ ಪೊಲೀಸರು ದರ್ಶನ್ ಅವರು ಸೌಂದರ್ಯ ಜಗದೀಶ್‌ಗೆ​ ಒತ್ತಡ ಹಾಕಿರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಜಗದೀಶ್ ಸೂಸೈಡ್‌ಗೂ ಇದ್ದಕ್ಕೂ ಲಿಂಕ್‌ ಇರಬಹುದಾ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಜಗದೀಶ್‌ ಯಾವ ವಿಚಾರಕ್ಕಾಗಿ ಪವಿತ್ರಾಗೆ ಹಣ ಕೊಟ್ಟಿದ್ರು?ಸಾಲ ಅಂತ ಕೊಟ್ಟಿದ್ರಾ? ಎಂಬುದರ ಸತ್ಯ ತನಿಖೆಯ ನಂತರ ಬಯಲಾಗಬೇಕಿದೆ .

ಈ ಹಿಂದೆ ಜಗದೀಶ್‌ ಪತ್ನಿ ಆರೋಪಿಸಿದ್ದೇನು?

ಪತಿ ಸೌಂದರ್ಯ ಜಗದೀಶ್‌ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಒಂದು ವಾರದ ಹಿಂದೆ ಸುರೇಶ್‌ ಹಾಗೂ ಹೊಂಬಣ್ಣ ನಿರಂತರವಾಗಿ ಫೋನ್‌ ಮಾಡಿದ್ದರು. ಇವರ ಕರೆ ಬಂದಾಗ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದು, ಇದರಿಂದ ಮನನೊಂದು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಗದೀಶ್‌ ಪತ್ನಿ ಶಶಿರೇಖಾ ಆರೋಪಿಸಿದ್ದರು.

ಬ್ಯುಸಿನೆಸ್‌ ಪಾರ್ಟ್ನಸ್‌ಗಳಿಂದ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಪತಿ ಸೌಂದರ್ಯ ಜಗದೀಶ್‌ ಸಾವಿಗೆ ಸುರೇಶ್‌, ಹೊಂಬಣ್ಣ ಹಾಗೂ ಸೌಂದರ್ಯ ಕನ್‌ಸ್ಟ್ರಕ್ಷನ್ಸ್‌ ಕಂಪೆನಿಯ ಮ್ಯಾನೇಜರ್‌ ಸುದೀಂದ್ರ ಕಾರಣ ಎಂದು ಪತ್ನಿ ಶಶಿರೇಖಾ ದೂರು ನೀಡಿದ್ದಾರೆ. ಸದ್ಯ ಈ ಡೆತ್‌ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್‌ಐಆರ್ ದಾಖಲಾಗಿತ್ತು.

Continue Reading

ಸಿನಿಮಾ

Actor Darshan: ಪವಿತ್ರಾ ಬಗ್ಗೆ ಗೊತ್ತಿಲ್ಲ ಆದರೆ ʻದರ್ಶನ್‌ʼ ದಾಂಪತ್ಯದಲ್ಲಿ ಹುಳಿ ಹಿಂಡಿದ್ದೇ ನಿಖಿತಾ ಎಂದ ಓಂ ಪ್ರಕಾಶ್!

Actor Darshan: ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು. ಮುಂಚೆ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan case om prakash say darshan life villion Nikhita
Koo

ಬೆಂಗಳೂರು: ನಟ ದರ್ಶನ್‌ (Actor Darshan) ಅವರು ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನಲ್ಲಿ ಇರುವುದು ಗೊತ್ತೇ ಇದೆ. ದರ್ಶನ್ (Darshan) ಜೊತೆ ಹಲವಾರು ಹಿಟ್ ಸಿನಿಮಾಗಳನ್ನು ಕೊಟ್ಟ ನಟ, ನಿರ್ದೇಶಕ, ನಿರ್ಮಾಪಕ ಓಂ ಪ್ರಕಾಶ್ ರಾವ್ (Om Prakash Rao) ಅವರು 10 ವರ್ಷಗಳಿಂದ ದರ್ಶನ್ ಅವರನ್ನು ಮಾತನಾಡಿಸಿಲ್ಲ. ಈಗ ಮಾಧ್ಯಮದ ಮುಂದೆ ದರ್ಶನ್‌ ಕುರಿತಾಗಿ ಹಲವು ವಿಚಾರಗಳನ್ನು ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ದರ್ಶನ್‌ ದಾಂಪತ್ಯದಲ್ಲಿ ನಟಿ ನಿಖಿತಾ ತುಕ್ರಾಲ್ ಹುಳಿ ಹಿಂಡಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಇದೀಗ ನಿರ್ದೇಶಕ ಓಂ ಪ್ರಕಾಶ್ ರಾವ್ ಮಾತನಾಡಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ದರ್ಶನ್ 28 ದಿನಗಳ ಕಾಲ ಜೈಲು ಸೇರುವಂತಾಗಿತ್ತು.ಒಂದ್ಕಾಲದಲ್ಲಿ ದರ್ಶನ್‌ಗೆ ಓಂ ಪ್ರಕಾಶ್ ಬಹಳ ಆಪ್ತರಾಗಿದ್ದರು. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಹಿಟ್ ಸಿನಿಮಾಗಳು ಬಂದಿತ್ತು. ನಾವಿಬ್ಬರು ದೂರಾಗಲೂ ನಿಖಿತಾ ಕಾರಣ ಎಂದಿದ್ದಾರೆ. ಮಾತ್ರವಲ್ಲ ದರ್ಶನ್‌ ಕುಟುಂಬಕ್ಕೂ ನಿಖಿತಾ ಅವರು ಹುಳಿ ಹಿಂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಓಂ ಪ್ರಕಾಶ್ ರಾವ್ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿ ʻʻದರ್ಶನ್‌ ತುಂಬ ಒಳ್ಳೆಯ ವ್ಯಕ್ತಿ. ವಿಜಯಲಕ್ಷ್ಮಿ ಕೂಡ ಅಪ್ಪಟ ಚಿನ್ನ. ಇವರಿಬ್ಬರ ಸಂಸಾರದಲ್ಲಿ ಹುಳಿ ಹಿಂಡಬೇಡ , ಹೋಗಬೇಡಿ ಎಂದು ನಿಖಿತಾಗೆ ನಾನು ಹೇಳಿದ್ದೆ. ನೀವು ಜಾಸ್ತಿ ಮುನ್ನುಗ್ಗುತ್ತಿದ್ದೀರ ಹೋಗ್ಬೇಡಿ ಎಂದಿದ್ದೆ. ಇದೇ ತಪ್ಪಾಯ್ತು. ಇವತ್ತಿನ ಪರಿಸ್ಥಿತಿಯಲ್ಲಿ ವಿಜಯಲಕ್ಷ್ಮಿ ಮೇಡಂ, ಅವರ ಮಗ ವಿನೀಶ್ ಇದನ್ನೆಲ್ಲಾ ಹೇಗೆ ಫೇಸ್ ಮಾಡ್ತಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ ಅವರ ಸಂಸಾರ ಚೆನ್ನಾಗಿ ಆಗಬೇಕುʼʼಎಂದರು. ʻʻನನಗೆ ಪವಿತ್ರಾ ಬಗ್ಗೆ ಗೊತ್ತಿಲ್ಲ. ದರ್ಶನ್‌ ಜೀವನದಲ್ಲಿ ಬಂದಿರೋದು ಗೊತ್ತಿಲ್ಲ. ಗೊತ್ತಿಲ್ಲದೇ ವಿಚಾರವನ್ನು ಮಾತನಾಡುವುದು ತಪ್ಪುʼʼಎಂದು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

ಹೇಳಿದ್ದನ್ನ ತಿರುಚಿ ನನ್ನ, ದರ್ಶನ್ ಮಧ್ಯೆ ನಿಖಿತಾ ಮನಸ್ತಾಪ ತಂದ್ರು!

ʻʻಮುಂಚೆ ದರ್ಶನ್‌ ಹಾಗೂ ನನ್ನ ಸ್ನೇಹ ಚೆನ್ನಾಗಿಯೇ ಇತ್ತು. ನಮಗೆ ಒಂದು ಜ್ಞಾನ ಇರುತ್ತೆ. ಸಡನ್‌ ಆಗಿ ಯಾರೋ ಹೇಳಿದ್ದು ಕೇಳೋದು ತಪ್ಪು. ಆದರೆ ದರ್ಶನ್‌ ಯಾರೋ ಹೇಳಿದ್ದನ್ನು ಬೇಗ ಕೇಳುತ್ತಿದ್ದ. ನನ್ನ ದರ್ಶನ್‌ ಮಧ್ಯೆ ಮನಸ್ತಾಪ ತಂದಿಟ್ಟಿದ್ದು ನಿಖಿತಾ ಎಂಬ ಕಲಾವಿದೆ. ಯಾವುದೋ ಒಂದು ವಿಷಯವನ್ನು ತಿರುಚಿ ಹೇಳಿದ್ದಾರೋ ಗೊತ್ತಿಲ್ಲ. ಎಲ್ಲರೂ ಅವರ ಅವರ ಸೇಫ್ಟಿ ನೋಡ್ಕೋತ್ತಾರೆ ಅನ್ಸತ್ತೆ. ಹಾಗೇ ನನ್ನ ದರ್ಶನ್‌ ಜತೆ ವೈಮನಸ್ಸು ಆಯ್ತು. ಆ ಬಗ್ಗೆ ತುಂಬ ಸಲ ಬೇಜಾರು ಮಾಡಿಕೊಂಡಿದ್ದು ಇದೆʼʼಎಂದರು.

ಇಂದು ಜಾಮೀನು ಅರ್ಜಿ ಸಲ್ಲಿಕೆ

ದರ್ಶನ್‌ ಸೇರಿದತೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳು ಜಾಮೀನು‌ ಕೋರಿ ಇಂದು ಎಸಿಎಂಎಂ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದರೆ ದರ್ಶನ್ ಪರ ವಾದ ಮಂಡನೆಯನ್ನು ಹಿರಿಯ ವಕೀಲ ಸಿ.ವಿ ನಾಗೇಶ್ ಮಾಡಲಿದ್ದಾರೆ.

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

Continue Reading

ಸ್ಯಾಂಡಲ್ ವುಡ್

Actor Darshan: ಇನ್ಮುಂದೆ ದರ್ಶನ್‌ ಕೈದಿ ನಂಬರ್‌ ನನ್ನ ಗಾಡಿ ಮೇಲೆ ಇರತ್ತೆ ಎಂದು ಗಳಗಳನೇ ಅತ್ತ ಅಭಿಮಾನಿ!

Actor Darshan: ದರ್ಶನ್‌ ಕೈದಿ ನಂಬರ್‌ 6106 ಎನ್ನುವುದು ಗೊತ್ತೇ ಇದೆ. ಇದೀಗ ದರ್ಶನ್‌ ಫ್ಯಾನ್‌ ಧನುಷ್‌ ಎಂಬುವರು ನಮಗೆ ಇದೇ ಲಕ್ಕಿ ನಂಬರ್ ಎಂದು ವಿಡಿಯೊ ಮೂಲಕ ಕಣ್ಣೀರಿಟ್ಟಿದ್ದಾರೆ. ದರ್ಶನ್ ಬಿಡುಗಡೆಯಾದರೆ 101 ತೆಂಗಿನಕಾಯಿ ಒಡೆಯುವುದಾಗಿ ಕೂಡ ಹರಕೆ ಹೊತ್ತಿದ್ದಾರೆ. ʻʻನಮ್ಮ ಬಾಸ್ ಏನೂ ತಪ್ಪೇ ಮಾಡಿಲ್ಲ. ನಮ್ಮ‌ ಬಾಸ್ ಅವರನ್ನು ನಾವು ಎಂದೂ ಬಿಟ್ಟುಕೊಡೋದಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿಲ್ಲ ಅಂದ್ರೆ ರಾಜಾರೋಷವಾಗಿ ಬರ್ತಾರೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Actor Darshan 6106 will put my vehicle told by darshan fan
Koo

ಮೈಸೂರು: ರೇಣುಕಾ ಸ್ವಾಮಿ ಕೊಲೆ (Renuka Swamy murder) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ (Parappana Agrahara) ಜೈಲು ಸೇರಿರುವ ನಟ ದರ್ಶನ್‌ನನ್ನು (Actor Darshan) ಭದ್ರತೆ ದೃಷ್ಟಿಯಿಂದ ಬೇರೆ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಗಳಿವೆ. ಇದರ ನಡುವೆ ಇದೀಗ ದಚ್ಚು ಫ್ಯಾನ್ಸ್‌ ತಮ್ಮ ಹೀರೋ ಗೆ ಈ ಗತಿ ಬಂತಲ್ಲ ಎಂದು ಕಣ್ಣೀರಿಡುತ್ತಿದ್ದಾರೆ. ದರ್ಶನ್‌ ಕೈದಿ ನಂಬರ್‌ 6106 ಎನ್ನುವುದು ಗೊತ್ತೇ ಇದೆ. ಇದೀಗ ದರ್ಶನ್‌ ಫ್ಯಾನ್‌ ಧನುಷ್‌ ಎಂಬುವರು ನಮಗೆ ಇದೇ ಲಕ್ಕಿ ನಂಬರ್ ಎಂದು ವಿಡಿಯೊ ಮೂಲಕ ಕಣ್ಣೀರಿಟ್ಟಿದ್ದಾರೆ.

ಮೈಸೂರಿನಲ್ಲಿ ದರ್ಶನ್‌ ಅಭಿಮಾನಿ ಧನುಷ್‌ ಇದೀಗ ದರ್ಶನ್‌ ಕುರಿತಾಗಿ ಕಣ್ಣೀರಿಟ್ಟು 6106 ಇನ್ಮುಂದೆ ನಮಗೆ ಇದೇ ಲಕ್ಕಿ ನಂಬರ್ ಎಂದಿದ್ದಾರೆ. ಮಾತ್ರವಲ್ಲ ಇನ್ಮುಂದೆ ಆ ನಂಬರ್ ನಮ್ಮ ಗಾಡಿ ಮೇಲೆ ಇರುತ್ತೆ ಎಂದೂ ಹೇಳಿಕೊಂಡಿದ್ದಾರೆ. ದರ್ಶನ್‌ಗೆ ನೀಡಿರುವ ಈ ನಂಬರ್‌ವನ್ನು ಆರ್ ಟಿಒನಲ್ಲಿ ರಿಜಿಸ್ಟರ್ ಮಾಡಿಸಲು ಅಭಿಮಾನಿ ಮುಂದಾಗಿದ್ದಾರೆ. ದರ್ಶನ್ ಜೈಲುವಾಸ ನೆನೆದು ಗಳಗಳನೆ ಕಟ್ಟೀರಿಟ್ಟಿದ್ದಾರೆ. ಶೀಘ್ರವಾಗಿ ದರ್ಶನ್‌ ಬಿಡುಗಡೆಗೆ ಆಗಬೇಕು ನಾಡ ಅಧಿದೇವತೆ ಚಾಮುಂಡಿಯಲ್ಲಿ ಹರಕೆ ಕೂಡ ಹೊತ್ತಿದ್ದಾರೆ ಧನುಷ್‌. ದರ್ಶನ್ ಬಿಡುಗಡೆಯಾದರೆ 101 ತೆಂಗಿನಕಾಯಿ ಒಡೆಯುವುದಾಗಿ ಕೂಡ ಹರಕೆ ಹೊತ್ತಿದ್ದಾರೆ. ʻʻನಮ್ಮ ಬಾಸ್ ಏನೂ ತಪ್ಪೇ ಮಾಡಿಲ್ಲ. ನಮ್ಮ‌ ಬಾಸ್ ಅವರನ್ನು ನಾವು ಎಂದೂ ಬಿಟ್ಟುಕೊಡೋದಿಲ್ಲ. ಕಾನೂನು ಎಲ್ಲರಿಗೂ ಒಂದೇ. ತಪ್ಪು ಮಾಡಿಲ್ಲ ಅಂದ್ರೆ ರಾಜಾರೋಷವಾಗಿ ಬರ್ತಾರೆʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Actor Darshan: ಪರಪ್ಪನ ಅಗ್ರಹಾರದಿಂದ‌ ದರ್ಶನ್ ಬೇರೆ ಜೈಲಿಗೆ ಶಿಫ್ಟ್? ಇಂದು ಜಾಮೀನು ಅರ್ಜಿ ಸಲ್ಲಿಕೆ

ದರ್ಶನ್‌ನನ್ನು ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಅವಕಾಶ ಕೊಡುವಂತೆ ಎಸ್‌ಪಿಪಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ. ಒಂದು ವೇಳೆ ನ್ಯಾಯಾಲಯ ಅರ್ಜಿ ಪುರಸ್ಕರಿಸಿದರೆ ತುಮಕೂರು ಜೈಲಿಗೆ ಕಳಿಸಲಾಗುತ್ತದೆ. ಇಲ್ಲವಾದರೆ ಪರಪ್ಪನ ಅಗ್ರಹಾರದ ಭದ್ರತಾ ಸಿಬ್ಬಂದಿ ಕೊಠಡಿಯಲ್ಲೇ ನಟ ಕಾಲ ಕಳೆಯಬೇಕಾಗಿದೆ.

ಬೇರೆ ಜೈಲಿಗೆ ಶಿಫ್ಟ್‌ ಮಾಡಲು ಮನವಿ ಮಾಡಿರುವ ಕಾರಣಗಳೆಂದರೆ, ಜನಪ್ರಿಯ ನಟನಾಗಿರುವುದರಿಂದ ಹಲವರು ಪರಿಚಯವಿದ್ದು ಕೈದಿಗಳ ನಡುವೆ ಗಲಾಟೆಯಾಗುವ ಸಾಧ್ಯತೆ ಇದೆ. ಸಹ ಕೈದಿಗಳು ದರ್ಶನ್ ಮೇಲೆ ಅಟ್ಯಾಕ್ ಮಾಡಬಹುದು. ಪ್ರಕರಣದಲ್ಲಿರುವ ಹಲವು ಆರೋಪಿಗಳಿಗೆ ರೌಡಿ ಕಾಂಟ್ಯಾಕ್ಟ್ ಇರುವ ಹಿನ್ನೆಲೆಯಲ್ಲಿ, ರೌಡಿಗಳ ಮುಖಾಂತರ ಸಾಕ್ಷಿ ನಾಶ ಮಾಡುವಲ್ಲಿ ಯತ್ನಿಸುವ ಸಾಧ್ಯತೆ ಇದೆ. ಜೊತೆಗೆ ದರ್ಶನ್‌ನನ್ನು ನೋಡಲು ಕೈದಿಗಳಿಂದ ಜೈಲಿನೊಳಗೆ ಹಾಗೂ ಅಭಿಮಾನಿಗಳಿಂದ ಜೈಲಿನ ಹೊರಗೆ ದೊಂಬಿ ಆಗುವ ಸಾಧ್ಯತೆಯೂ ಇದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಬೇರೆ ಜೈಲಿಗೆ ಸ್ಥಳಾಂತರ ಮಾಡಲು ಎಸ್ಪಿಪಿ ಮನವಿ ಮಾಡಿದ್ದಾರೆ.

Continue Reading
Advertisement
Suraj Revanna Case
ಕರ್ನಾಟಕ22 mins ago

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

contaminated water
ಬೆಳಗಾವಿ31 mins ago

Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Actor Darshan crying In Jail while seeing wife and son
ಸ್ಯಾಂಡಲ್ ವುಡ್54 mins ago

Actor Darshan: ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

Union Budget 2024
ವಾಣಿಜ್ಯ55 mins ago

Union Budget 2024: ಬಜೆಟ್‌ನಲ್ಲಿ ಹೊಸ ಟ್ಯಾಕ್ಸ್‌ ಸ್ಲ್ಯಾಬ್‌ ಘೋಷಣೆ ಸಾಧ್ಯತೆ; ಯಾರಿಗೆಲ್ಲ ಅನುಕೂಲ?

road Accident
ಕ್ರೈಂ1 hour ago

Road Accident : ಚಲಿಸುತ್ತಿದ್ದಾಗಲೇ ಆಂಬ್ಯುಲೆನ್ಸ್‌ ಟಯರ್‌ ಬ್ಲಾಸ್ಟ್‌; ಬೈಕ್‌ನಿಂದ ಸ್ಕಿಡ್ ಆಗಿ ಬಿದ್ದು ವ್ಯಕ್ತಿ ಸಾವು

Physical abuse
ದೇಶ1 hour ago

Physical Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬರ್ಬರ ಕೊಲೆ; ದೇಹದ ತುಂಡುಗಳನ್ನು ರೈಲಿನಲ್ಲಿ ಪಾರ್ಸೆಲ್‌

Actor Darshan
ಕರ್ನಾಟಕ2 hours ago

Actor Darshan: ಜೈಲಿನಲ್ಲಿ ನಟ ದರ್ಶನ್‌ ಭೇಟಿಯಾದ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್‌

Water Problem
Latest2 hours ago

Bengaluru Water News: ಮಳೆಗಾಲ ಶುರುವಾದರೂ ಬೆಂಗಳೂರಿನ ಹಲವೆಡೆ ಟ್ಯಾಂಕರ್ ನೀರೇ ಗತಿ!

suraj revanna shivakumar
ಪ್ರಮುಖ ಸುದ್ದಿ2 hours ago

Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

Parliament Session 2024
ದೇಶ2 hours ago

Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌