Site icon Vistara News

Kannada New Movie: ʻಫಾರೆಸ್ಟ್‌ʼ ಸಿನಿಮಾ ಮೂಲಕ ರಂಜಿಸಲಿದ್ದಾರೆ ಈ ಫೇಮಸ್‌ ತಾರೆಯರು!

chandra mohan Forest Cinema Title Out

ಬೆಂಗಳೂರು: ಕನ್ನಡದಲ್ಲಿ ‌ಸದ್ದಿಲ್ಲದೇ (Kannada New Movie) ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬಿನೇಷನ್‌ನಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ತಾರೆಯರನ್ನು ಒಂದೇ ಫ್ರೇಮ್‌ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ʻಡಬ್ಬಲ್ ಇಂಜಿನ್ʼ, ʻಬ್ರಹ್ಮಚಾರಿʼ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

ಚಂದ್ರ ಮೋಹನ್ ಹೊಸ ಪ್ರಯತ್ನಕ್ಕೆ ʻಫಾರೆಸ್ಟ್ʼ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್ ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ʻಫಾರೆಸ್ಟ್ʼ ಸಿನಿಮಾದ ಆಧಾರ ಸ್ತಂಭಗಳು. ಫನ್ ಜತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದ ಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಇದನ್ನೂ ಓದಿ: Kannada New Movie: ಚಿತ್ರೀಕರಣ ಆರಂಭಿಸಿದ ಬಹುನಿರೀಕ್ಷಿತ ಚಿತ್ರ ʼಉತ್ತರಕಾಂಡʼ

ಇದನ್ನೂ ಓದಿ: Kannada New Movie: ಚಿತ್ರೀಕರಣ ಆರಂಭಿಸಿದ ಬಹುನಿರೀಕ್ಷಿತ ಚಿತ್ರ ʼಉತ್ತರಕಾಂಡʼ

ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

Exit mobile version