ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭವನ್ನು ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹೊಸ ಕಟ್ಟಡವನ್ನು ಉದ್ಘಾಟಿಸಿದರು. ಈ ವೇಳೆ ಸಿದ್ದರಾಮಯ್ಯ (Inaugurate Film Producers Association Building) ಅವರು ʻʻಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜತೆ ಮಾತನಾಡುತ್ತೇವೆ. ರಾಜ್‌ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ʼʼಎಂದರು.
ಸಿದ್ದರಾಮಯ್ಯ ಮಾತನಾಡಿ ʻʻನಿನ್ನೆ ದೆಹಲಿಗೆ ಹೋಗಿದ್ದೆ.. ಇವತ್ತು ಈ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಕಡಿಮೆ ಇತ್ತು. ಕನ್ನಡ ಚಿತ್ರರಂಗದ ಮೇಲೆ ನನಗೆ ಅಪಾರ ಗೌರವ ಇದೆ. ಮಿಸ್ ಮಾಡದೇ ಬರಬೇಕು ಎಂದು ಬಂದೆ. ಕನ್ನಡ ಚಿತ್ರರಂಗದ ಬೆಳವಣಿಗೆಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನಮ್ಮಿಂದ ಇರುತ್ತದೆ. ಚಿತ್ರಮಂದಿರಗಳು, ಸಬ್ಸಿಡಿ ಬಗ್ಗೆ ಗಮನ ಹರಿಸಿ ಆರ್ಥಿಕ ನೆರವು ನೀಡುತ್ತೇವೆ. ಜತೆಗೆ ಕನ್ನಡದಲ್ಲಿ ಒಟಿಟಿ ವೇದಿಕೆ ತರಲು, ಸಂಬಂಧ ಪಟ್ಟವರ ಜತೆ ಮಾತನಾಡುತ್ತೇವೆ. ಡಾ.ರಾಜ್‍ಕುಮಾರ್ ಕನಸಿನಂತೆ ಖಂಡಿತಾ ಒಂದು ಫಿಲ್ಮ್ ಸಿಟಿ ನಿರ್ಮಾಣ ಮಾಡುತ್ತೇವೆ. ಕನ್ನಡ ಭಾಷೆಯ ಚಿತ್ರಗಳಿಗೆ ಸರ್ಕಾರ ಸಹಾಯ ಮಾಡುತ್ತದೆ. ಫಿಲ್ಮಿ ಸಿಟಿಗೆ ಜಾಗ ಕೊಟ್ಟಿದ್ದೆ ನಮ್ಮ ಸರ್ಕಾರ. ನೂರು ಎಕೆರೆಗೂ ಹೆಚ್ಚು ಜಮೀನು ಕೊಟ್ಟಿದ್ದೇವೆ.ʼʼಎಂದರು.
ಈ ಕಾರ್ಯಕ್ರಮದಲ್ಲಿ ಜಗ್ಗೇಶ್, ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು. ಹೊಂಬಾಳೆ ಫಿಲಂಸ್, ಆರ್.ಎಸ್. ಗೌಡ, ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ಕಟ್ಟಡ ನಿರ್ಮಾಣ ಜವಾಬ್ದಾರಿ ಹೊತ್ತು ನೆರವಾಗಿದ್ದಾರೆ. ದಕ್ಷಿಣ ಭಾರತದಲ್ಲಿ ನಿರ್ಮಾಪಕರಿಗೆ ಎಂದೇ ಸ್ವಂತ ಕಟ್ಟಡ ಹೊಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಸಾರಾ ಗೋವಿಂದು ತಿಳಿಸಿದರು.
ಇದನ್ನೂ ಓದಿ: Kalki 2898 AD: ಮೂರನೇ ದಿನ ಭರ್ಜರಿ ಗಳಿಕೆ ಕಂಡ ‘ಕಲ್ಕಿ 2898 ಎಡಿ’ ಸಿನಿಮಾ !
ನಿರ್ಮಾಪಕರ ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ರಮೇಶ್ ಯಾದವ್, ಎಂ.ಜಿ. ರಾಮಮೂರ್ತಿ, ಆರ್.ಎಸ್. ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣದ ಸಮಿತಿಯ ಅಧ್ಯಕ್ಷರಾಗಿ ಸಾರಾ ಗೋವಿಂದು ಅವರು ಕೆಲಸ ಮಾಡಿದ್ದಾರೆ. ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ದ (Kannada Film Producers Association) ನೂತನ ಕಟ್ಟಡ ಶಿವಾನಂದ ಸರ್ಕಲ್ ಬಳಿ ಇದೆ.