ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಮೇಲೆ ಕೂಡ ನೂರೆಂಟು ಅನುಮಾನ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಕೊಲೆ ಮಾಡಿದ ಶೆಡ್ ಇಂದು ಕೂಡಾ ಪೊಲೀಸ್ ವಶಕ್ಕೆ ಇರಲಿದೆ.
ಪಟ್ಟಣಗೆರೆ ವಿನಯ್ ಶೆಡ್‌ನಲ್ಲಿ ಇಂದು ಕೂಡ ಪೊಲೀಸರು ಮಾಹಿತಿಕಲೆ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆನ್ನಲೆ ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ದರ್ಶನ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಅದೇಷ್ಟೋ ಜನರಿಗೆ ಈ ಶೆಡ್‌ನಲ್ಲಿಯೇ ಚಿತ್ರಹಿಂಸೆ ನೀಡಲಾಗಿತ್ತು ಎನ್ನಲಾಗಿದೆ. ದರ್ಶನ್ ವಿರುದ್ಧ ಮಾತನಾಡಿದವರಿಗೆ ಇದೇ ಶೆಡ್ ನಲ್ಲಿ ಕರೆತಂದು ʻಡಿ ಗ್ಯಾಂಗ್ʼ ಹೊಡೆಯುತ್ತಿದ್ದರು ಎನ್ನಲಾಗಿದೆ. ಬಡ್ಡಿ ದುಡ್ಡು ಕಟ್ಟದ, ಲೋನ್ ಪಾವತಿ ಮಾಡದವರಿಗೆ ಕೂಡ ಇದೇ ಶೆಡ್‌ನಲ್ಲಿ ʻಡಿ ಗ್ಯಾಂಗ್ʼ ನರಕ ತೋರಿಸುತ್ತಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಬೆನ್ನಲೆ ಮತ್ತಷ್ಟು ಕೇಸ್‌ಗಳು ರಿವೀಲ್ ಆಗಬಹುದು ಎನ್ನಲಾಗಿದೆ. ಪೊಲೀಸರು ವಶಪಡಿಸಿಕೊಂಡ ಸಿಸಿ ಕ್ಯಾಮರೆ ದೃಶ್ಯಗಳ ಪರಿಶೀಲನೆ ಆಗುತ್ತಿದೆ. ಆರೋಪಿ ವಿನಯ್ ಸೇರಿದಂತೆ ಇತರೆ ಆರೋಪಿಗಳನ್ನು ಮತಷ್ಟು ತೀವ್ರವಾಗಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿ ಮಾದರಿಯಲ್ಲಿಯೇ ಹಲವು ಜನರಿಗೆ ಗ್ಯಾಂಗ್ ಚಿತ್ರಹಿಂಸೆ ನೀಡಿತ್ತಾ ಎಂಬುದುರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಪೊಲೀಸರು.
ಇದನ್ನೂ ಓದಿ: Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್ ಪುತ್ರ; ಫಾದರ್ಸ್ ಡೇಗೆ ಭಾವುಕ ಪೋಸ್ಟ್!
ಇಂದಿನಿಂದ ಮತ್ತೊಂದು ಹಂತದ ತನಿಖೆಗೆ ಮುಂದಾಗಿದ್ದಾರೆ ಪೊಲೀಸರು. ಎವಿಡೆನ್ಸ್‌ಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಪೊಲೀಸರು ನಡೆಸುತ್ತಿದ್ದಾರೆ . ಆರೋಪಿಗಳ ಬಳಿ ಇದ್ದ ಹತ್ತು ಮೊಬೈಲ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮೊಬೈಲ್‌ನಲ್ಲಿ ಕೆಲ ಸ್ಫೋಟಕ ವಿಚಾರಗಳು ಪತ್ತೆಯಾಗಿವೆ. ವೆಪನ್ ಗಳು, 30 ಲಕ್ಷ ರೂ. ಹಣ, ಕಾರುಗಳು ಸೇರಿ ಹಲವು ವಸ್ತುಗಳು ಜಪ್ತಿಯಾಗಿವೆ. ಈಗಾಗಲೇ ಆರೋಪಿಗಳನ್ನು ವಿಚಾರಣೆ ಮಾಡಿ ಪೊಲೀಸರು ಹೇಳಿಕೆ ದಾಖಲಿಸಿಕೊಂಡಿದ್ದಾರೆ.
ಪ್ರಶ್ನೆಗಳ ಸುರಿಮಳೆ
ಶರಣಾಗಿರುವ ಆರೋಪಿಗಳನ್ನು ಡ್ರಿಲ್ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.