Site icon Vistara News

Darshan Arrested: ಇದು ʻಸಪ್ತ ಶೆಡ್ಡಿನಾಚೆ SSE side ‘D’! ಟ್ರೋಲ್‌ ಆದ್ರು ದರ್ಶನ್‌-ಪವಿತ್ರಾ!

Darshan Arrested troll of pavithra darshan in SSE A

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಎರಡನೇ ಆರೋಪಿಯಾಗಿರುವ ನಟ ದರ್ಶನ್‌ (Darshan Arrested) ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು ಎರಡು ದಿನ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನು ಪ್ರಕರಣದಲ್ಲಿ ಎ1 ಆಗಿರುವ ಪವಿತ್ರಾ ಗೌಡ ಸೇರಿ ಒಟ್ಟು 11 ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ನ್ಯಾಯಾಲಯಕ್ಕೆ ಪೊಲೀಸರು ಎರಡು ರಿಮ್ಯಾಂಡ್‌ ಅರ್ಜಿಗಳನ್ನು ಸಲ್ಲಿಸಿದ ಕಾರಣ ನ್ಯಾಯಾಲಯವು ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ಹಾಗೂ ನ್ಯಾಯಾಂಗ ಬಂಧನಕ್ಕೆ ವಹಿಸಿದೆ. ಇದರ ಬೆನ್ನಲ್ಲೇ, ಪವಿತ್ರಾ ಗೌಡ ಹಾಗೂ ದರ್ಶನ್‌ ಅವರನ್ನು ನೆಟ್ಟಿಗರು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿತ್ತು. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದರು. ಈ ಸಿನಿಮಾದಲ್ಲಿ ಒಂದು ಸನ್ನಿವೇಶವಿದೆ. ಜೈಲಿನಲ್ಲಿ ನಾಯಕ ನಾಯಕಿ ದೂರವಾಗುವ ಒಂದು ಸನ್ನಿವೇಶ. ಇದೇ ಸನ್ನಿವೇಶ ಇಟ್ಟುಕೊಂಡು ಇದೀಗ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಟ್ರೋಲ್‌ ಮಾಡಲಾಗುತ್ತಿದೆ.

ʻಮನು ನನ್ನ ಸಮುದ್ರ ನೀನುʼ ಎಂಬ ಡೈಲಾಗ್‌ ಸಿನಿಮಾದಲ್ಲಿದೆ. ಇದೀಗ ʻಸಪ್ತ ಶೆಡ್ಡಿನಾಚೆʼ ಎಂದು ದರ್ಶನ್‌ ಹಾಗೂ ಪವಿತ್ರಾ ಕುರಿತು ಟ್ರೋಲ್‌ ಮಾಡುತ್ತಿದ್ದಾರೆ ನೆಟ್ಟಿಗರು. ಮಾತ್ರವಲ್ಲ AI ಬಳಸಿ ದರ್ಶನ್‌ ಹಾಗೂ ಪವಿತ್ರಾ ಫೋಟೊ ಕೂಡ ಎಡಿಟ್‌ ಮಾಡಲಾಗಿದೆ.

ಇದನ್ನೂ ಓದಿ: Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

ಈಗಾಗಲೇ ಪವಿತ್ರಾ ಗೌಡ ಸೇರಿ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌ ಮಾಡಲಾಗಿದೆ. ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ , ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ.

ಪವಿತ್ರಾ ಗೌಡ, ಪವನ್, ರಾಘವೇಂದ್ರ, ನಂದೀಶ್, ಜಗದೀಶ್, ಅನುಕುಮಾರ್, ನಾಗರಾಜ್, ಲಕ್ಷ್ಮಣ್, ದೀಪಕ್, ಕೇಶವ್ ,ರವಿ ಕಾರ್ತಿಕ್‌ ಜೈಲುಪಾಲಾಗಲಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿ ಗ್ಯಾಂಗ್ ಒಂದು ದಿನ ಕಾಲ ಕಳೆದಿದೆ. ನಿನ್ನೆ ಜೈಲಿಗೆ ಆರೋಪಿಗಳು ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಇಂದು ಎಲ್ಲಾ ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್‌ವನ್ನು ಜೈಲಾಧಿಕಾರಿಗಳು ಹತ್ತು ಗಂಟೆಯ ಬಳಿಕ ನೀಡಲಿದ್ದಾರೆ. ರಾತ್ರಿ 11 ಗಂಟೆಯ ಸುಮಾರಿಗೆ ಪವಿತ್ರಾ ನಿದ್ದೆಗೆ ಜಾರಿದ್ದರು. ಸರಿಯಾಗಿ ನಿದ್ರೆ ಮಾಡದೆ ಆಗಾಗ ಎದ್ದು ಕುಳಿತು ಪವಿತ್ರಾ ಗೌಡ ಯೋಚನೆ ಮಾಡಿದ್ದರು ಎನ್ನಲಾಗಿದೆ. ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಜೈಲೂ ಹಕ್ಕಿಯಾಗಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮುಂಜಾನೆ 5 ಗಂಟೆಗೆ ಎದ್ದು ಜೈಲಿನ ಬ್ಯಾರಕ್‌ನಲ್ಲಿ ವಾಕಿಂಗ್ ಕೂಡ ಮಾಡಿದ್ದಾರೆ. ಜೈಲಿನ ಸಿಬ್ಬಂದಿ ನೀಡಿದ ಕಾಪಿಯನ್ನು ಪವಿತ್ರಾ ಕುಡಿದಿದ್ದಾರೆ. ಕಾಫಿ ಕುಡಿದು ಬಳಿಕ ನ್ಯೂಸ್ ಪೇಪರ್ ಓದಿದ್ದರು ಪವಿತ್ರಾ.

ಇನ್ನು ನಿನ್ನೆ ಕೋರ್ಟ್​ನಲ್ಲಿ ವಿಚಾರಣೆ ಮುಗಿಸಿ ಪವಿತ್ರಾ ಪೊಲೀಸ್​ ವ್ಯಾನ್​ ಹತ್ತಿದಾಗ ಅವರನ್ನು ನೋಡಲು ಪುತ್ರಿ ಖುಷಿ ಗೌಡ (Pavithra Gowda Daughter Kushi Gowda) ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್​ ವ್ಯಾನ್​ನ ಪಕ್ಕದಲ್ಲಿ ನಿಂತು ಮಾತನಾಡಿದರು.

Exit mobile version