Site icon Vistara News

Darshan Arrested: `ಅಪ್ಪ, ನೀವೇ ನನ್ನ ಹೀರೊʼಎಂದ ದರ್ಶನ್‌ ಪುತ್ರ; ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌!

Darshan Arrested vinish write special message for darshan fathers day

ಬೆಂಗಳೂರು: ತಂದೆ – ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರೂ (Darshan Arrested) ಆಘಾತದ ಸಿಡಿಲು ಬಡಿಯುವುದಂತೂ ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು.  ಇವತ್ತು(ಜೂನ್ 16) ವಿಶ್ವ ತಂದೆಯಂದಿರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭ ಕೋರಿದ್ದಾನೆ. ದರ್ಶನ್‌ಗೆ ಒಬ್ಬನೇ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ತಂದೆಗೆ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ಶುಭ ಕೋರುವಂತಾಗಿದೆ.

ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದಿದ್ದ ದರ್ಶನ್‌ ಪುತ್ರ ವಿನೀಶ್

ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದ.

ಇದನ್ನೂ ಓದಿ: Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದ.

ಮೈಸೂರಲ್ಲಿ ಕೂತು ಕೇಸ್‌ ಮುಚ್ಚಿಹಾಕಲು ದರ್ಶನ್‌ ಯತ್ನ

ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆ ಸಂಬಂಧಿಸಿಂದತೆ ಬಗೆದಷ್ಟೂ ಮಾಹಿತಿ ಬಹಿರಂಗವಾಗುತ್ತಿದೆ. ದರ್ಶನ್‌ ಹಾಗೂ ಗ್ಯಾಂಗ್‌ನನ್ನು ಮತ್ತೆ 5 ದಿನ ಕಸ್ಟಡಿಗೆ ಪಡೆದಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಭಾನುವಾರ ಮೈಸೂರಿನಲ್ಲಿ (Mysore) ಸ್ಥಳ ಮಹಜರು ನಡೆಸಲಿದ್ದಾರೆ.

ಡೆವಿಲ್‌ ಸಿನಿಮಾದ ಚಿತ್ರೀಕರಣದ ಹಿನ್ನೆಲೆಯಲ್ಲಿ ದರ್ಶನ್‌ ಮೈಸೂರಿನಲ್ಲಿಯೇ ಬೀಡುಬಿಟ್ಟಿದ್ದರು. ರೇಣುಕಾಸ್ವಾಮಿ ಕೊಲೆಯ ಬಳಿಕವೂ ಮೈಸೂರಿಗೆ ತೆರಳಿದ ದರ್ಶನ್‌, ಅಲ್ಲಿಂದಲೇ ಗಣ್ಯರು ಹಾಗೂ ಆಪ್ತರಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ನಟ, ಜಿಮ್‌ನಲ್ಲಿ ವರ್ಕೌಟ್‌ ಮಾಡುವ ಮೂಲಕ ಏನೂ ನಡೆದೇ ಇಲ್ಲ ಎಂಬಂತೆ ತೋರಿಸಿಕೊಳ್ಳಲು ಪ್ರಯತ್ನ ಮಾಡಿದ್ದಾರೆ. ಇದೆಲ್ಲದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ.

ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ರ‍್ಯಾಡಿಷನ್‌ ಹೋಟೆಲ್‌, ಕುವೆಂಪು ನಗರದ ಗೋಲ್ಡ್‌ ಜಿಮ್‌ ಸೇರಿದಂತೆ ಪೊಲೀಸರು ಹಲವು ಸ್ಥಳಗಳನ್ನು ಮಹಜರು ಮಾಡಲಿದ್ದಾರೆ. ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಕರೆದುಕೊಂಡು ಹೋಗಿ ಮಹಜರು ಮಾಡಲಿದ್ದಾರೆ. ಮೈಸೂರಿನಲ್ಲಿ ದರ್ಶನ್‌ ಯಾರಿಗೆ ಕರೆ ಮಾಡಿದ್ದರು? ಯಾರ ಮೂಲಕ ಪ್ರಭಾವ ಬೀರಲು ಪ್ರಯತ್ನಿಸಿದರು ಎಂಬುದು ಸೇರಿ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Exit mobile version