ಬೆಂಗಳೂರು: ಪ್ರೇಮ್ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಚಿತ್ರರಂಗಕ್ಕೆ ಬಂದ 12 ವರ್ಷಗಳಲ್ಲಿ ಧ್ರುವ ಸರ್ಜಾ 4 ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ ಎನ್ನುವ ಬೇಸರ ಕೆಲವರದ್ದು. ಇದೀಗ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ. ಬಾಲಿವುಡ್‌ಗೆ ಧ್ರುವ ಸರ್ಜಾ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗುತ್ತಿದೆ.
ಬಹುನಿರೀಕ್ಷಿತ ‘ವಾರ್-2’ ಚಿತ್ರದಲ್ಲಿ ಕನ್ನಡದ ನಟ ಬಣ್ಣ ಹಚ್ಚುತ್ತಾರೆ ಎನ್ನಲಾಗುತ್ತಿದೆ. ತೆಲುಗು ಮಾಧ್ಯಮಗಳಲ್ಲಿ ಕೂಡ ಇಂತಹದೊಂದು ಸುದ್ದಿ ಹರಿದಾಡುತ್ತಿದೆ. ಜ್ಯೂ. ಎನ್‌ಟಿಆರ್ ಸಹೋದರನ ಪಾತ್ರದಲ್ಲಿ ಧ್ರುವ ನಟಿಸುತ್ತಾರೆ ಎಂದು ಎಂದು ವರದಿಯಾಗುತ್ತಿದೆ. ಧ್ರುವ ಸರ್ಜಾ ಈ ಚಿತ್ರದಲ್ಲಿ ನಟಿಸುತ್ತಾರೆ, ಆ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಡುತ್ತಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ವರದಿಯ ಪ್ರಕಾರ, ಜ್ಯೂನಿಯರ್ ಎನ್‌ಟಿಆರ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಬಳಿಕ ಆದಿತ್ಯ ಚೋಪ್ರಾ ಅವರು ಅಯನ್ ಮುಖರ್ಜಿ ಅವರ ನಿರ್ದೇಶಕ್ಕೆ ಮನಸೋತು, ಈ ಸಿನಿಮಾ ಮಾಡಲು ಅವಕಾಶ ನೀಡಿದ್ದಾರೆ ಎನ್ನಲಾಗಿದೆ.
ಸಿದ್ದಾರ್ಥ್ ಆನಂದ್ ಅವರು ‘ವಾರ್’ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಯಶಸ್ಸು ಕಂಡಿತು. ಈ ಚಿತ್ರದಲ್ಲಿ ಹೃತಿಕ್ ರೋಷನ್ ಹಾಗೂ ಟೈಗರ್ ಶ್ರಾಫ್ ನಟಿಸಿದ್ದರು. ಮೊದಲ ಪಾರ್ಟ್ನಲ್ಲಿ ಟೈಗರ್ ಶ್ರಾಫ್ ಪಾತ್ರ ಕೊನೆಗೊಂಡಿದೆ. ಹೀಗಾಗಿ ‘ವಾರ್-2’ ಚಿತ್ರದಲ್ಲಿ ಹೃತಿಕ್ ಮಾಡಿರುವ ಕಬೀರ್ ಪಾತ್ರ ಮುಂದುವರಿಯುತ್ತಿದೆ. ಜ್ಯೂನಿಯರ್ ಎನ್‌ಟಿಆರ್ ಅವರು ತಮ್ಮ ಮೊದಲ ಬಾಲಿವುಡ್ ಚಿತ್ರಕ್ಕೆ ಇಷ್ಟು ದೊಡ್ಡ ಮೊತ್ತದ ಸಂಭಾವನೆ ಪಡೆಯುತ್ತಿರುವುದು ವಿಶೇಷ. ವಾರ್-2 ಪ್ಯಾನ್ ಇಂಡಿಯಾ ಚಲನಚಿತ್ರವಾಗಿದ್ದು, ಉತ್ತರ ಮತ್ತು ದಕ್ಷಿಣ ಭಾಗದ ಸೂಪರ್‌ಸ್ಟಾರ್‌ಗಳನ್ನು ಹೊಂದಿದೆ. ಕಿಯಾರಾ ಆಡ್ವಾಣಿ ಈ ಸಿನಿಮಾ ನಾಯಕಿ. ವಾರ್ 2 2025ರ ಆಗಸ್ಟ್ 14ರಂದು ಬಿಡುಗಡೆಯಾಗಲಿದೆ.
ಇದನ್ನೂ ಓದಿ: Rohit Sharma : ಬಾಲಿವುಡ್ ಸಿನಿಮಾ ಸಾಂಗ್ನಲ್ಲಿ ಕಾಣಿಸಿಕೊಂಡ ರೋಹಿತ್ ಶರ್ಮಾ
ಕೆಡಿ ಸಿನಿಮಾ
ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.
ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.