Site icon Vistara News

Dhruva Sarja:  ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ! ಹೆಚ್ಚಾಗಲಿದ್ಯಾ ದರ್ಶನ್‌-ಧ್ರುವ ಸಂಘರ್ಷ?

Dhruva Sarja KD and Darshan devil will clash on box office

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Dhruva Sarja: ಮತ್ತೆ ಗುಡ್‌ ನ್ಯೂಸ್‌ ಕೊಟ್ಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

ಇನ್ನು ದರ್ಶನ್‌ ಅವರ ಡೆವಿಲ್‌ ಸಿನಿಮಾ ಕ್ರಿಸ್‌ಮಸ್‌ಗೆ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್ 25 ಬುಧವಾರ ಬರುವುದರಿಂದ ಒಂದು ವಾರ ಮುಂಚೆ ಅಥವಾ ಎರಡು ದಿನ ತಡವಾಗಿ ಸಿನಿಮಾ ರಿಲೀಸ್ ಆಗಬಹುದು. ಇನ್ನು ಕೆಡಿ ಸಿನಿಮಾ ಪ್ಯಾನ್‌ ಇಂಡಿಯಾ ಸಿನಿಮಾವಾಗಿದ್ದು, ಒಂದು ವಾರ ಮುಂಚಿತವಾಗಿಯೇ ಸಿನಿಮಾ ರಿಲೀಸ್‌ ಮಾಡಬಹುದು. ಒಂದು ವೇಳೆ ಎರಡೂ ಸಿನಿಮಾಗಳು ಒಟ್ಟಿಗೆ ರಿಲೀಸ್‌ ಆದರೆ ಥಿಯೇಟರ್‌ ಸಮಸ್ಯೆಯಾಗೋದಂತೂ ಖಚಿತ. ಕರ್ನಾಟಕದಲ್ಲಿ 500 ಥಿಯೇಟರ್‌ಗಳು ಇವೆ. ‘ಕೆಡಿ’ ಸಿನಿಮಾಗೆ ನಿರ್ಮಾಣ ಸಂಸ್ಥೆ ಕೆವಿಎನ್ ಸಿಕ್ಕಾಪಟ್ಟೆ ಹಣ ಸುರಿದಿದೆ. ಈ ಕಾರಣಕ್ಕೆ ಕಮ್ಮಿ ಅಂದರೂ 400 ಸ್ಕ್ರೀನ್‌ನಲ್ಲಾದರೂ ರಿಲೀಸ್ ಆಲೇಬೇಕು. ಮಾತ್ರವಲ್ಲ ಪ್ರೇಮ್‌ ಕೂಡ ಹೆಚ್ಚು ಥಿಯೇಟರ್‌ಗಳಲ್ಲಿ ಸಿನಿಮಾ ರಿಲೀಸ್‌ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ಕಾನ್ ಚಿತ್ರೋತ್ಸವದಲ್ಲಿ ಭಾರತೀಯ ಸಿನಿಮಾಗೆ ಪ್ರಶಸ್ತಿ; ಹೊಸ ಇತಿಹಾಸ ಸೃಷ್ಟಿ!

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಎಂಟ್ರಿ ಕೊಟ್ಟಿದ್ದರು. ರೆಟ್ರೊ ಲುಕ್‌ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದು, ಚೆಂದದ ಸೀರೆಯುಟ್ಟು ಉದ್ದದ ಜಡೆ ಮುಂದಕ್ಕೆ ಬಿಟ್ಟು, ಕೂಲಿಂಗ್ ಗ್ಲ್ಯಾಸ್ ಧರಿಸಿ ರಾಯಲ್ ಆಗಿ ಕಾಣಿಸಿಕೊಂಡಿದ್ದರು. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Exit mobile version