Site icon Vistara News

Dhruva Sarja : ʻಮಾರ್ಟಿನ್’ ಟ್ರೈಲರ್ ಬಿಡುಗಡೆ: ಧ್ರುವ ಸರ್ಜಾ ಅಭಿಮಾನಿಗಳ ಅಬ್ಬರ ಬಲು ಜೋರು!

Dhruva Sarja martin trailer Out

ಬೆಂಗಳೂರು: ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಸಿನಿಮಾದ ಟ್ರೈಲರ್ ಬಿಡುಗಡೆ ಇಂದು (ಆಗಸ್ಟ್ 04) ವೀರೇಶ್ ಚಿತ್ರಮಂದಿರದಲ್ಲಿ ನಡೆದಿದೆ. ನಾಳೆ ಮುಂಬೈನಲ್ಲಿ ಸಿನಿಮಾದ ಟ್ರೈಲರ್ ಅಧಿಕೃತವಾಗಿ ಬಿಡುಗಡೆ ಆಗಲಿದೆ. ಆದರೆ ಅಭಿಮಾನಿಗಳಿಗೆಂದೇ ಇಂದು (ಆಗಸ್ಟ್ 04) ವಿಶೇಷವಾಗಿ ಟ್ರೈಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ಶೋನಿಂದ ಸಂಗ್ರಹವಾಗುವ ಹಣವನ್ನು ಗೋಶಾಲೆಗೆ ನೀಡುವುದಾಗಿ ಧ್ರುವ ಸರ್ಜಾ ಹೇಳಿದ್ದಾರೆ.ಟ್ರೈಲರ್ ನೋಡಲು ಟಿಕೆಟ್ ಖರೀದಿಸಿ ದೊಡ್ಡ ಸಂಖ್ಯೆಯಲ್ಲಿ ಧ್ರುವ ಅಭಿಮಾನಿಗಳು ಆಗಮಿಸಿದ್ದರು.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ನಟನೆಯ ‘ಮಾರ್ಟಿನ್’ ಸಿನಿಮಾ ಅಕ್ಟೋಬರ್ 11ಕ್ಕೆ ರಿಲೀಸ್ ಆಗುತ್ತಿದೆ. ಟ್ರೈಲರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಅವರ ಸ್ವಂತ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್’ ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ ‘ಮಾರ್ಟಿನ್’ ಪ್ರಚಾರ!

https://twitter.com/DQ_Stan5/status/1820025464544731578

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Exit mobile version