Dhruva Sarja: 'ಸಿ' ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ! - Vistara News

ಸ್ಯಾಂಡಲ್ ವುಡ್

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Dhruva Sarja: ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ.

VISTARANEWS.COM


on

dhruva sarja support C Cinema Kanda Kanda Video Song Release
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: `ಸಿ’..ಅಂದ್ರೆ ಇಲ್ನೋಡಿ ಅಂತಲ್ಲ, ಹಾಗಂತ ಸಮುದ್ರದ ಬಗ್ಗೆ ಹೇಳ್ತಾ ಇದ್ದೇವೆ ಅಂತನೂ (Dhruva Sarja) ಅಂದ್ಕೊಬೇಡಿ… ‘ಸಿ’ ಸ್ಯಾಂಡಲ್ ವುಡ್‌ನಲ್ಲಿ ರಿಲೀಸ್‌ಗೆ ಸಿದ್ಧವಾಗಿರುವ ಹೊಸ ಸಿನಿಮಾ. ಈಗಾಲೇ ಚಂದನವನದಲ್ಲಿ ʻಶ್ʼ..ʻಸೈʼ..ʻಎʼ..ʻಓಂʼ…ಹೀಗೆ ಒಂದೇ ಅಕ್ಷರದ ಹೆಸರಿನ ಹಲವು ಸಿನಿಮಾಗಳು ಬಂದು ಹೋದವು. ಇದೀಗ ಅದೇ ಸಾಲಿಗೆ ‘ಸಿ’ ಎನ್ನುವ ಮತ್ತೊಂದು ಸಿನಿಮಾ ಕೂಡ ಸೇರಿಕೊಳ್ಳುತ್ತಿರುವುದು ವಿಶೇಷ..

ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನದ ‘ಸಿ’ ಸಿನಿಮಾ ಶೂಟಿಂಗ್ ಮುಗಿಸಿ ಪ್ರಮೋಷನ್‌ನಲ್ಲಿ ಬ್ಯುಸಿಯಾಗಿದೆ. ಎಲೆಕ್ಷನ್ ಬಿಸಿ ಕಮ್ಮಿಯಾಗುತ್ತಿದ್ದಂತೆ ಥಿಯೇಟರ್‌ಗೆ ಲಗ್ಗೆ ಇಡಲು ಸಜ್ಜಾಗಿರುವ ‘ಸಿ’ ಸಿನಿಮಾ ಇದೀಗ ಹಾಡಿನ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ‘ಸಿ’ ಸಿನಿಮಾದ ಅಪ್ಪ ಮಗಳ ಬಾಂಧವ್ಯದ ಹಾಡು ಈಗ ಗಾನ ಪ್ರಿಯರ ಗಮನ ಸೆಳೆಯುತ್ತಿದೆ. ಕಿರಣ್ ಸುಬ್ರಮಣಿ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಮಿಂಚಿದ್ದಾರೆ. ಅಪ್ಪ ಮಗಳ ಬಾಂಧವ್ಯದ ಹಾಡಿನಲ್ಲಿ ಕಿರಣ್ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದೀಗ ಈ ಸುಂದರ ಹಾಡನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರಿಲೀಸ್ ಮಾಡಿರುವುದು ವಿಶೇಷ. ಮುದ್ದು ಮಗಳ ಜತೆ ಸಂಭ್ರಮಿಸುತ್ತಿರುವ ಧ್ರುವ ಸಿ ಸಿನಿಮಾದ ಸುಂದರ ಹಾಡನ್ನು ರಿಲೀಸ್ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಂದಹಾಗೆ ʻಕಂದಾ…ಕಂದಾʼ ಎನ್ನುವ ಸಾಲಿನಿಂದ ಪ್ರಾರಂಭವಾಗುವ ಈ ಹಾಡನ್ನು ಹೃದಯ ಶಿವ ಬರೆದಿದ್ದು, ಗಾಯಕ ವಾಸುಕಿ ವೈಭವ್ ಹಾಡಿದ್ದಾರೆ.

ಇದನ್ನೂ ಓದಿ: Dhruva Sarja: ವಿಮಾನ ದುರಂತ: ಕೂದಲೆಳೆ ಅಂತರದಿಂದ ಪಾರಾದ ಧ್ರುವ ಸರ್ಜಾ!

ಈ ಬಗ್ಗೆ ನಟ ಧ್ರುವ ಸರ್ಜಾ ಮಾತನಾಡಿ ʻʻಸಿ ಎಂದರೆ ಕ್ರೈಂ. ಹೊಸ ತಂಡ ಸೇರಿ ಒಳ್ಳೆಯ ಸಿನಿಮಾ ಮಾಡಿದೆ. ಹೊಸಬರಿಗೆ ಸಪೋರ್ಟ್‌ ಮಾಡಿ. ಚಿತ್ರತಂಡಕ್ಕೆ ಶುಭವಾಗಲಿʼʼಎಂದರು.

ನಿರ್ದೇಶಕ, ನಾಯಕ ಕಿರಣ್ ಅವರಿಗೆ ಇದು ಮೊದಲ ಸಿನಿಮಾ. ಹಾಗಂತ ಸಿನಿಮಾರಂಗ ಏನು ಹೊಸದೇನಲ್ಲ. ಈಗಾಗಲೇ ಅನೇಕ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಇದೀಗ ʻಸಿʼ ಸಿನಿಮಾ ಮೂಲಕ ಮೊದಲ ಬಾರಿಗೆ ಸ್ವಾತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ.

ಸಿ ಸಿನಿಮಾ ತಂದೆ- ಮಗಳ ಬಾಂಧವ್ಯದ ಜತೆಗೆ ಮೆಡಿಕಲ್ ಮಾಫಿಯಾದ ಬಗ್ಗೆ ಇದೆ. ಎಜಿಎಸ್ ಪ್ರೊಡಕ್ಷನ್ ನಡಿ ನಿರ್ದೇಶಕ, ನಾಯಕ ಕಿರಣ್ ಅವರ ತಂದೆ ಸುಬ್ರಮಣಿ ಅವರು ನಿರ್ಮಾಣ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

Actor Darshan: ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

VISTARANEWS.COM


on

Actor Darshan aryvardhan Guruji told RR nagar vasthu
Koo

ಬೆಂಗಳೂರು: ತಮ್ಮ ಭಿನ್ನ, ವಿಭಿನ್ನ ಹೇಳಿಕೆಯ ಮೂಲಕವೇ ಸದಾ ಚಾಲ್ತಿಯಲ್ಲಿರುವ ಬಿಗ್‌ ಬಾಸ್‌ ಮಾಜಿ ಖ್ಯಾತಿಯ ಆರ್ಯವರ್ಧನ್‌ ಗುರೂಜಿ (Aryavardhan Guruji) ದರ್ಶನ್ ಮೇಲೆ ಕೇಸ್​ ಬೀಳಬಹುದು ಎಂದು ಅಂದಾಜಿಸಿದ್ದರೇ? ಖಂಡಿತಾ ಇಲ್ಲ. ಆದರೆ, ಆರ್​ಆರ್​ ನಗರದ ವಾಸ್ತು ಸರಿಯಿಲ್ಲ. ಅಲ್ಲಿನವರಿಗೆ ಕೇಸುಗಳು ಬೀಳ್ತವೆ ಎಂದು ಹೇಳಿದ್ದರು. ಈಗ ಕೊಲೆ ಕೇಸ್​ನಲ್ಲಿ ಜೈಲು ಸೇರಿರುವ ದರ್ಶನ್ ಮನೆಯಿರುವುದು ಆರ್​ಆರ್​​ನಗರದಲ್ಲಿ ಆಗಿರುವ ಕಾರಣ ಗುರೂಜಿಯ ಭವಿಷ್ಯ ಒಂದು ಮಟ್ಟಿಗೆ ಸತ್ಯವಾಗಿದೆ. ಹಿಂದೆ ಯಾವತ್ತೋ ಅವರು ಹೇಳಿದ ಮಾತು ಇದೀಗ ದರ್ಶನ್​ ಜೈಲು ಸೇರುತ್ತಿದ್ದಂತೆ ವೈರಲ್ ಆಗಿದೆ. ಆರ್ಯವರ್ಧನ್ ಅವರು ಆರ್​ಆರ್​ ನಗರ ವಾಸ್ತು ಕುರಿತಾಗಿ ನೀಡಿದ ಸೂಪರ್‌ ಡೂಪರ್‌ ವಿಡಿಯೊ ವೈರಲ್‌ ಆಗುತ್ತಿದೆ. ಕೀರ್ತಿ ಇಎನ್‌ಟಿ ಕ್ಲಿನಿಕ್‌ ಯ್ಯೂಟ್ಯೂಬ್‌ ಚಾನೆಲ್‌ನಲ್ಲಿ ಈ ಹಿಂದೆ ಆರ್ಯವರ್ಧನ್‌ ಗುರೂಜಿ ನೀಡಿದ ಸಂದರ್ಶನ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ದರ್ಶನ್‌ ಕೇಸ್‌ಗೂ ಆರ್ಯವರ್ಧನ ಗುರೂಜಿ ಭವಿಷ್ಯಕ್ಕೂ ಲಿಂಕ್‌ ಇರಲೂಬಹುದು ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಈಗಾಗಲೇ ಅರೆಸ್ಟ್‌ ಆಗಿದ್ದಾರೆ. ದರ್ಶನ್‌ ಮನೆ ಇರುವುದು ಆರ್‌ಆರ್‌ನಗರದಲ್ಲಿ . ರೇಣುಕಾ ಸ್ವಾಮಿ ಹತ್ಯೆ ಆಗಿರುವುದು ಇದೇ ಆರ್‌ಆರ್‌ನ ಆಸುಆಸುಪಾಸಿನಲ್ಲಿ. ಇದೀಗ ಇದೇ ಆರ್‌ಆರ್‌ ನಗರದ ವಾಸ್ತು ಬಗ್ಗೆ ಆರ್ಯವರ್ಧನ್‌ ಗುರೂಜಿ ಭವಿಷ್ಯ ನುಡಿದಿದ್ದ ವಿಡಿಯೊವನ್ನು ಯಾರೋ ವೈರಲ್‌ ಮಾಡಿದ್ದಾರೆ. ಇದೀಗ ಈ ಭವಿಷ್ಯ ಸತ್ಯ ವಿರಬಹುದು ಎನ್ನುತ್ತಿದ್ದಾರೆ ನೆಟ್ಟಿಗರು.

ಆರ್ಯವರ್ಧನ್‌ ಗುರೂಜಿ ಭವಿಷ್ಯ ನುಡಿದಿದ್ದೇನು?

ʻʻಆರ್‌ಆರ್‌ನಗರ ಏರಿಯಾನೇ ವಾಸ್ತು ಸರಿಯಿಲ್ಲ. ಅಲ್ಲಿ ಹೋದವರೆಲ್ಲ ಒಂದಲ್ಲ ಒಂದು ಕೇಸ್‌ ಹಾಕಿಸಿಕೊಳ್ಳುತ್ತಾರೆ. ಎಂಟ್ರೆನ್ಸ್​ನಲ್ಲಿ ಈಶಾನ್ಯ ಮೂಲೆಯಲ್ಲಿ ಮೋರಿ ಇದೆ. ಅಲ್ಲೊಂದು ಮಾಲ್‌ ಇದೆ. ಯಾವಾಗ ನೋಡಿದ್ರು ಬೆಂಕಿ ಬಿತ್ತು ಅಂತಿರ್ತಾರೆ. ಹಾಗಾಗಿ ಆರ್​ಆರ್​ ನಗರದ ಎಂಟ್ರೆನ್ಸ್‌ ಸರಿಯಿಲ್ಲʼʼಎಂದು ಕೀರ್ತಿ ಜತೆ ಮಾತುಕತೆ ನಡೆಸಿದ್ದಾರೆ. ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ʻʻಯಾವ ಬಾಯಲ್ಲಿ ಈ ರೀತಿ ಹೇಳಿದ್ರೋ ಅದೇ ರೀತಿ ಆಗ್ತಾ ಇದೆʼʼʼಎಂದು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor darshan Arrested : ದರ್ಶನ್‌ಗೆ ಎಣ್ಣೆ ಹೊಡೆಯಲು, ಸಿಗರೇಟ್​ ಸೇದಲು ಠಾಣೆಗೇ ಶಾಮಿಯಾನ ಹಾಕಿದರೆ ಪೊಲೀಸರು?

ಆರ್ಯವರ್ಧನ್‌ ಗುರೂಜಿ ಭವಿಷ್ಯ ನುಡಿದು ಸಾಕಷ್ಟು ಬಾರಿ ಟ್ರೋಲ್‌ ಆಗಿದ್ದಾರೆ, ಜತೆಗೆ ಈ ಮುಂಚೆ ಅವರ ಮೇಲೆ ಕಿಚ್ಚ ಫ್ಯಾನ್ಸ್‌ ಅಟ್ಯಾಕ್‌ ಕೂಡ ಮಾಡಿದ್ದರು. ವಿಸ್ತಾರ ನ್ಯೂಸ್‌ನಲ್ಲಿ ಆರ್ಯವರ್ಧನ್‌ ಗುರೂಜಿ ಅವರು ಬಿಗ್‌ ಬಾಸ್‌ ಸೀಸನ್‌ 10ರ ಬಗ್ಗೆ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದರು. ಜತೆಗೆ ಕಿಚ್ಚ ಅವರ ಕುರಿತಾಗಿಯೂ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದರು. ಸುದೀಪ್ ಅಭಿಮಾನಿಗಳ ಸಂಘದ ಅಧ್ಯಕ್ಷ ನವೀನ್ ಗೌಡ ಹಾಗೂ ಬೆಂಬಲಿಗರು ಸುದೀಪ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಗುರೂಜಿ ಅವರ ಕಚೇರಿಗೆ ನುಗ್ಗಿ ಸುದೀಪ್ ಸರ್ ಎದುರು ಬಂದು ಕ್ಷಮೆ ಕೇಳಿ ಎಂದು ಆರ್ಯವರ್ಧನ್‌ ಅವರಿಗೆ ವಾರ್ನಿಂಗ್‌ ಕೂಡ ಮಾಡಿದ್ದರು.

ಆರ್ಯವರ್ಧನ್‌ ಗುರೂಜಿ ಯಾರು?

ಆರ್ಯವರ್ಧನ್‌ ಗುರೂಜಿ ಅವರು ಸಂಖ್ಯಾಶಾಸ್ತ್ರ ತಜ್ಞರಾಗಿದ್ದಾರೆ. ಇವರು ಐಪಿಎಲ್‌ ಸಂದರ್ಭದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ಸಂಖ್ಯಾಬಲದ ಮೂಲಕ ಯಾವ ತಂಡ ಗೆಲ್ಲುತ್ತದೆ? ಸೋಲುತ್ತದೆ ಎಂಬ ಬಗ್ಗೆ ಊಹಿಸುತ್ತಿದ್ದರು. ಆದರೆ, ಅವರ ಲೆಕ್ಕಾಚಾರ ತಪ್ಪಾಗಿ ಟ್ರೋಲ್‌ಗೆ ಒಳಗಾಗುತ್ತಿದ್ದರು. ಸಾಕಷ್ಟು ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಬೆಂಬಲಿಸಿಕೊಂಡ ಬಂದಿದ್ದ ಆರ್ಯವರ್ಧನ್‌ ಅವರಿಗೆ ಸಾಕಷ್ಟು ಫಾಲೋವರ್ಸ್ ಕೂಡ ಇದ್ದಾರೆ. ಜನ್ಮದಿನಾಂಕ, ನಕ್ಷತ್ರದ ಮೇಲೆ ಆರ್ಯವರ್ಧನ್ ಅವರು ವ್ಯಕ್ತಿಗಳ ಭವಿಷ್ಯ ಹೇಳುತ್ತಾರೆ. 

Continue Reading

ಬೆಂಗಳೂರು

Actor Darshan : ರೇಣುಕಾಸ್ವಾಮಿಯನ್ನು ಕೊಂದು ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ ಫೋನ್‌ ಮಾಡಿದ್ದು ಯಾರಿಗೆ?

Actor Darshan : ಅಶ್ಲೀಲ ಮಸೇಜ್‌ ಕಳಿಸಿದ್ದಕ್ಕೆ ರೇಣುಕಾಸ್ವಾಮಿಯನ್ನು ಕೊಂದು ಹಾಕಿರುವ ಆರೋಪ ಹೊತ್ತಿರುವ ನಟ ದರ್ಶನ್‌ ಗ್ಯಾಂಗ್‌, ಕೃತ್ಯದ ಬಳಿಕ ಪೊಲೀಸ್‌ ಅಧಿಕಾರಿಯೊಬ್ಬರಿಗೆ ಕಾಲ್‌ ಮಾಡಿದ್ದರು ಎನ್ನಲಾಗಿದೆ. ಅವರ ಸೂಚನೆ ಪ್ರಕಾರವೇ ಮೃತದೇಹವನ್ನು ಕಾಮಾಕ್ಷಿಪಾಳ್ಯದಲ್ಲಿ ಬಿಸಾಡಲಾಗಿತ್ತಂತೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ (Pavitra Gowda) ಸೇರಿ ಇತರ ಆರೋಪಿಗಳ ತೀವ್ರ ವಿಚಾರಣೆಯು ನಡೆಯುತ್ತಿದೆ. ಈ ಮಧ್ಯೆ ಈ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಭಾಗಿಯಾಗಿರುವ ಗುಮಾನಿಯು ಶುರುವಾಗಿದೆ.

ರೇಣುಕಾಸ್ವಾಮಿ ಕೊಲೆಯಾದ ಬಳಿಕ ಆರೋಪಿಗಳು ಒರ್ವ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು ಎನ್ನಲಾಗಿದೆ. ಆರ್‌ಆರ್ ನಗರದಲ್ಲಿ ನಡೆದ ಕೊಲೆ ನಂತರ ಮೃತದೇಹವನ್ನು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದು ಯಾಕೆ? ಎಲ್ಲಿಯೂ ಜಾಗ ಇಲ್ಲವೆಂದು ಕಾಮಾಕ್ಷಿ ಪಾಳ್ಯಕ್ಕೆ ತಂದು ಹಾಕಿದ್ದರಾ ಎಂಬ ಪ್ರಶ್ನೆ ಉದ್ಭವಿಸುತ್ತದೆ.

ನಮ್ಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡೆಡ್‌ಬಾಡಿ ಹಾಕಬೇಡಿ ಎಂದಿದ್ದರಾ? ಆರೋಪಿಗಳು ಪೊಲೀಸ್‌ ಅಧಿಕಾರಿ ಸೂಚನೆ ಮೇರೆಗೆ ಮೃತದೇಹ ಕಾಮಾಕ್ಷಿಪಾಳ್ಯಕ್ಕೆ ತಂದು ಎಸೆಯಲಾಗಿದೆ. ಮೃತ ದೇಹ ಎಸೆದ ಬಳಿಕ ಸಹ ಪೊಲೀಸ್ ಅಧಿಕಾರಿ ಜತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ದೊಡ್ಡ ಮೊತ್ತಕ್ಕೆ ಡೀಲ್?‌

ದರ್ಶನ್ ಹೆಸರು ಹೊರಬಾರದಂತೆ ದೊಡ್ಡ ಮೊತ್ತಕ್ಕೆ ಮಾತುಕತೆ ನಡೆದಿತ್ತಾ? ಎಂಬ ಶಂಕೆಯು ವ್ಯಕ್ತವಾಗಿದೆ. ಜತೆಗೆ A13 ದೀಪಕ್ ಎಂಬಾತ ಪ್ರಭಾವಿ ರಾಜಕಾರಣಿ ಸಂಬಂಧಿಕನಾಗಿದ್ದಾನೆ. ಹೀಗಾಗಿ ದೀಪಕ್ ಫೋಟೋ ರಿಲೀಸ್ ಮಾಡದೇ ಗೌಪ್ಯತೆ ಕಾಪಾಡೋದಕ್ಕೂ ದೊಡ್ಡ ಮೊತ್ತದ ಹಣ ಡೀಲ್ ನಡೆದಿದೆ ಎನ್ನಲಾಗಿದೆ. ಈತನನ್ನೂ ಕೇಸ್‌ನಿಂದ ಹೊರಗಿಡಲು ಪ್ರಯತ್ನ ನಡೆದಿದ್ದು, ಈತನ ಫೋಟೊ ಸಹ ಹೊರ ಬಾರದಂತೆ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದೆ. ವ್ಯವಸ್ಥಿತವಾಗಿ ದೀಪಕ್‌ನನ್ನು ಅಪ್ರೂವರ್ ಮಾಡಿಕೊಂಡು ಕೇಸ್‌ನಿಂದ ಕೈ ಬಿಡುವ ಪ್ಲಾನ್ ನಡೆಯುತ್ತಿದೆ ಎಂದು ಪೊಲೀಸರ ತನಿಖೆ ಮೇಲೆ ಹಲವಾರು ಅನುಮಾನ ಮೂಡಿದೆ.

ಇದನ್ನೂ ಓದಿ: Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Actor Darshan: ಬಡಪಾಯಿ ಕಾರ್ಮಿಕರ ಮೇಲೆ ನಾಯಿ ಛೂ ಬಿಟ್ಟು ಹಿಂಸಿಸಿದ್ದ ದರ್ಶನ್‌ & ಗ್ಯಾಂಗ್‌!

Actor Darshan: ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಹಲವರು ಲಾಕ್‌ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟ ದರ್ಶನ್ ವಿರುದ್ಧ ಮಂಡ್ಯ ಅನ್ನದಾತರು ಸಿಡಿದೆದ್ದಿದ್ದರು.ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಕ್ರೋಶ ಹೊರಹಾಕಿದರು.

VISTARANEWS.COM


on

Darshan Old Case Coming Out darshan gang
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ವಿಚಾರದಲ್ಲಿ ದರ್ಶನ್‌ ಹಾಗೂ ಗ್ಯಾಂಗ್‌ ಈಗಾಗಲೇ ಅರೆಸ್ಟ್‌ ಆಗಿದೆ. ಇದೀಗ ನಟ ದರ್ಶನ್ (Actor Darshan) ಮತ್ತು ಗ್ಯಾಂಗ್‌ನ ಮತ್ತೊಂದು ಕರಾಳ ಮುಖ ಬಯಲಾಗಿದೆ. 10 ವರ್ಷಗಳ ಹಿಂದೆ, ಪರಿಹಾರ ಕೇಳಲು ಹೋಗಿದ್ದ ಕೂಲಿ ಕೆಲಸಗಾರನ ಮೇಲೆ ನಾಯಿ ಛೂ ಬಿಟ್ಟು ವಿಕೃತಿ ಮೆರೆದಿದ್ದರೆಂಬ ಗಂಭೀರ ಆರೋಪ ಕೇಳಿ ಬಂದಿದೆ. ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಎಂಬುವರು 10 ವರ್ಷಗಳ ಹಿಂದೆ ಪರಿಹಾರ ಕೇಳಲು ಹೋಗಿ ಕಣ್ಣು ಕಳೆದುಕೊಂಡಿದ್ದಾರೆ ಎನ್ನಲಾಗಿದೆ. ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಈ ರೀತಿ ವಿಕೃತಿ ತೋರಿಸಲಾಗಿತ್ತು ಎನ್ನಲಾಗಿದೆ.

ಏನಿದು ಘಟನೆ?

ಟಿ. ನರಸೀಪುರ ಸಮೀಪದ ತೂಗುದೀಪ ಫಾರ್ಮ್​ಹೌಸ್​ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರದ ಮಹೇಶ್ ಕೆಲಸ ಮಾಡುತ್ತಿದ್ದರು. ಕೆಲಸ ಮಾಡುವ ವೇಳೆ ಇವರಿಗೆ ಎತ್ತು ಕೊಂಬಿನಿಂದ ತಿವಿದಿತ್ತು. ಎತ್ತಿನ ಕೊಂಬು ಕಣ್ಣಿನಿಂದ ತೂರಿ ತಲೆ ಹೊರಗೆ ಬಂದಿತ್ತು. ಇದರಿಂದ ಅವರ ಕಣ್ಣು ಹೋಗಿತ್ತು. ಆ ಬಳಿಕ ದರ್ಶನ್‌ ಕಡೆಯವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮನೆಗೆ ತಂದು ಬಿಟ್ಟು ಹೋಗಿದ್ದರು. ಆ ಬಳಿಕ ದರ್ಶನ್ ಈ ಕುಟುಂಬದ ಕಡೆ ತಿರುಗಿಯೂ ನೋಡಿಲ್ಲ. ಬಳಿಕ ಕಾರ್ಮಿಕ ತನ್ನ ಸಂಬಂಧಿಕರ ಜತೆ ಪರಿಹಾರ ಕೇಳಲು ಫಾರ್ಮ್ ಹೌಸ್​ಗೆ ಹೋದರೆ ದರ್ಶನ್‌ ಗ್ಯಾಂಗ್‌ ಅವರ ಮೇಲೆ ಸಾಕುನಾಯಿ ಛೂ ಬಿಟ್ಟಿದ್ದರಂತೆ. ಮೈಸೂರಿನ ಹೊಟೇಲ್​ಗೆ ಮಾತುಕತೆಗೆ ಕರೆಸಿ ರೌಡಿಗಳಿಂದ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಒಂದು ವೇಳೆ ಈ ವಿಚಾರ ಬಾಯ್ಬಿಟ್ಟರೆ ಪರಿಸ್ಥಿತಿ ಸರಿ ಇರಲ್ಲ ಎಂದು ಬೆದರಿಕೆ ಕೂಡ ಹಾಕಿತ್ತಂತೆ ದರ್ಶನ್‌ ಟೀಂ. ಇದೀಗ ಮಹೇಶ್‌ ಅವರಿಗೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಿದೆ. ತಾಯಿ ಮತ್ತು ಹೆಂಡತಿಯಿಬ್ಬರೂ ಕೂಲಿ ಕೆಲಸ ಮಾಡಿಕೊಂಡು ಮಹೇಶ್ ಆರೈಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು

ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಹಲವರು ಲಾಕ್‌ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟ ದರ್ಶನ್ ವಿರುದ್ಧ ಮಂಡ್ಯ ಅನ್ನದಾತರು ಸಿಡಿದೆದ್ದಿದ್ದರು.ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಕ್ರೋಶ ಹೊರಹಾಕಿದರು. ದರ್ಶನ್ ಹಾಗೂ ಇತರೆ ಕನ್ನಡ ನಟರು ಡಾ.ರಾಜಕುಮಾರ್ ಆದರ್ಶ ಪಾಲಿಸಲಿ. ಕೇವಲ ಹಣಕ್ಕಾಗಿ ಕಲಾವಿದರಾಗುವುದು ಬೇಡ ಎಂದರು. ಈಗೀನ‌ ನಟರು ಪೇಯ್ಡ್ ಆಕ್ಟರ್ಸ್ ಆಗಿದ್ದಾರೆ. ಇವರಿಗೆ ಯಾವುದೇ ಮೌಲ್ಯಗಳಿಲ್ಲ.ಪೊಲೀಸ್ ಇಲಾಖೆ ಸೂಕ್ತ ಕ್ರಮವಹಿಸಬೇಕು. ತಪ್ಪಿತಸ್ಥರಿಗೆ ಕಾನೂನು ಕ್ರಮವಾಗಬೇಕು ಎಂದು ಚನ್ನಪಟ್ಟಣದಲ್ಲಿ ಡಾ.ರಾಜಕುಮಾರ್ ಅಭಿಮಾನಿಗಳು ಆಗ್ರಹಿಸಿದರು. ನಗರದ ಅಂಚೆಕಚೇರಿ ರಸ್ತೆಯಲ್ಲಿ ಡಾ. ರಾಜಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

Continue Reading

ಸ್ಯಾಂಡಲ್ ವುಡ್

Actor Darshan: ಆರಾಧನೆ ಅತಿರೇಕವಾದರೆ ದುರಂತ ಖಚಿತ; ದರ್ಶನ್​ ಬಗ್ಗೆ ರಾಮ್​ಗೋಪಾಲ್ ವರ್ಮಾ ಹೇಳಿದ್ದು ಹೀಗೆ…

Actor Darshan: ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

VISTARANEWS.COM


on

Actor Darshan case ram gopal varma Reaction
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ (Actor Darshan). ಕಸ್ಟಡಿಯಲ್ಲಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಇತರ ಆರೋಪಿಗಳನ್ನು ಪಟ್ಟಣಗೆರೆಯ ಶೆಡ್‌ಗೆ ಬುಧವಾರ ಕರೆದೊಯ್ದು ಸ್ಥಳ ಮಹಜರು ನಡೆಸಿದರು. ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ಆರ್​ಜಿವಿ ಮಾತನಾಡಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಮಾತನಾಡಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻ”ಚಿತ್ರ ನಿರ್ಮಾಪಕರು ಚಿತ್ರಕಥೆಯನ್ನು ಅಂತಿಮಗೊಳಿಸಿದ ನಂತರವೇ ಚಿತ್ರೀಕರಣವನ್ನು ಪ್ರಾರಂಭಿಸುತ್ತಾರೆ. ಚಿತ್ರೀಕರಣ ನಡೆಯುತ್ತಿರುವಾಗ ಸಾಕಷ್ಟು ಬಾರಿ ನಿರ್ಮಾಪಕರು ಬರೆಯುತ್ತಾರೆ. ಆದರೆ ದರ್ಶನ್ ಕೊಲೆ ಪ್ರಕರಣದಲ್ಲಿ, ಸಿನಿಮಾ ಬಿಡುಗಡೆ ಆದ ಬಳಿಕ ಚಿತ್ರಕಥೆ ಬರೆಯಲಾಗುತ್ತಿದೆ’ ಎಂದಿದ್ದಾರೆ. ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಭಾಗಿ ಆಗಿದ್ದು, ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಥೆ ಹೇಳುತ್ತಿದ್ದಾರೆ ಎಂಬರ್ಥದಲ್ಲಿ ಆರ್​ಜಿವಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: Actor Darshan : ನಟ ದರ್ಶನ್‌ ವಿರುದ್ಧ ಸಿಡಿದೆದ್ದ ಮಂಡ್ಯ ರೈತರು; ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನ್ನೊಂದು ಪೋಸ್ಟ್‌ನಲ್ಲಿ ʻʻವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸುತ್ತಿರುವ ಅಭಿಮಾನಿಯನ್ನು ಕೊಲ್ಲಲು ಸ್ಟಾರ್​ ನಟ ಕಟ್ಟರ್​​ ಅಭಿಮಾನಿಗಳನ್ನೇ ಬಳಿಸಿಕೊಂಡಿದ್ದಾರೆ. ಇದು ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿಯ ವಿಲಕ್ಷಣತೆಗೆ ಸೂಕ್ತ ಉದಾಹರಣೆ. ವ್ಯಕ್ತಿ ಆರಾಧನೆ ಅತಿರೇಕಕ್ಕೆ ಹೋದರೆ ಯಾವ ರೀತಿಯ ದುರಂತ ಸಂಭವಿಸಬಹುದು ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ”ಎಂದು ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಹೇಗೆ ನಡೆದಿತ್ತು?

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು.

ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ 80 ಪರ್ಸೆಂಟ್ ಸಾವನ್ನಪ್ಪಿದ್ದ. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ.

ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು.

Continue Reading
Advertisement
Drowned in water
ಮಂಡ್ಯ4 mins ago

Drowned in water : ಈಜಲು ಕಾವೇರಿ ನದಿಗಿಳಿದ ಬಾಲಕರಿಬ್ಬರು ಜಲ ಸಮಾಧಿ

Agniveer Scheme
ದೇಶ13 mins ago

Agniveer Scheme: ʼಅಗ್ನಿವೀರ್‌ʼ ಯೋಜನೆಯಲ್ಲಿನ ಈ ಎಲ್ಲ ಬದಲಾವಣೆಗೆ ಭಾರತೀಯ ಸೇನೆ ಸಲಹೆ

Rajal Arora
ಕ್ರೀಡೆ15 mins ago

Rajal Arora: ಟೀಮ್​ ಇಂಡಿಯಾ ಜತೆಗಿರುವ ಏಕೈಕ ಮಹಿಳಾ ಸಿಬ್ಬಂದಿ ಯಾರು? ಇವರ ಕೆಲಸವೇನು?

Jagannath Temple
EXPLAINER23 mins ago

Jagannath Temple: 4 ವರ್ಷದ ಬಳಿಕ ಜಗನ್ನಾಥ ದೇಗುಲದ ಬಾಗಿಲು ಓಪನ್;‌ ಇದಕ್ಕೂ ಬಿಜೆಪಿ ಪ್ರಣಾಳಿಕೆಗೂ ಇದೆ ಸಂಬಂಧ!

Yuva Movie Premier On star Suvarna
ಕಿರುತೆರೆ25 mins ago

Yuva Movie: ಬರ್ತಿದೆ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ಮೂವಿ ʻಯುವ; ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶ!

Actor Darshan aryvardhan Guruji told RR nagar vasthu
ಸ್ಯಾಂಡಲ್ ವುಡ್57 mins ago

Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested : ರೇಣುಕಾ ಸ್ವಾಮಿಯ ಮರ್ಮಾಂಗಕ್ಕೆ ಬೂಟು ಕಾಲಿನಿಂದ ಒದ್ದಿದ್ದ ದರ್ಶನ್​!

Road Accident
ಕ್ರೈಂ1 hour ago

Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

IND vs USA
ಕ್ರೀಡೆ1 hour ago

IND vs USA: ಕೊಹ್ಲಿಯ ವಿಕೆಟ್​ ಪತನ ಕಂಡು ದಂಗಾದ ರೋಹಿತ್​ ಶರ್ಮ; ವಿಡಿಯೊ ವೈರಲ್​

World Anti Child Labor Day celebration in Hosapete
ವಿಜಯನಗರ2 hours ago

Vijayanagara News: ಹೊಸಪೇಟೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌