Site icon Vistara News

Kannada New Movie: ‘ದಿಲ್ ಮಾರ್’ ಸಿನಿಮಾಗೆ ಡಿಂಪಲ್ ಹಯಾತಿ ನಾಯಕಿ

dimplehayathi Kannada New Movie

ಬೆಂಗಳೂರು: ಕೆಜಿಎಫ್ (Kannada New Movie) ರೈಟರ್ ಚಂದ್ರಮೌಳಿ ಅವರು ನಿರ್ದೇಶನದ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ದಿಲ್ ಮಾರ್ ಸಿನಿಮಾ ಮೂಲಕ ಚೊಚ್ಚಲ ಬಾರಿ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ ನಾಯಕಿಯಾಗಿ ನಟಿಸಿದ್ದಾರೆ.

ಡಿಂಪಲ್ ಹಯಾತಿ ಅವರಿಗೆ ಇದು ಮೊದಲ ಚಿತ್ರವಾಗಿದ್ದು, ಒಳ್ಳೆಯ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಯುವ ಪ್ರತಿಭೆ ರಾಮ್ ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.

ಇದನ್ನೂ ಓದಿ; Kannada New Movie: ಸುಚೇಂದ್ರ ಪ್ರಸಾದ್‌ ನಿರ್ದೇಶನದ ಮಾವು-ಬೇವು ಸಿನಿಮಾ ಮೆಚ್ಚಿದ ಕವಿ ಬಿ.ಆರ್. ಲಕ್ಷ್ಮಣರಾವ್

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರುತ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದ ಬಳಿಕ ಟ್ರೈಲರ್‌ ರಿಲೀಸ್ ಮಾಡುವ ಮೂಲಕ ಪ್ರಮೋಷನ್‌ಗೆ ಕಿಕ್ ಸ್ಟಾರ್ಟ್ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದು, ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿರುವ ದಿಲ್ ಮಾರ್ ಮೇ ಕೊನೆಯ ವಾರ ತೆರೆಗೆ ಬರಲಿದೆ.

Exit mobile version