ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ (Director Arrest) ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು (CCB Police) ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ (Kannada Film Industry) ಮಾತ್ರವಲ್ಲದೆ ಕಾಲಿವುಡ್ (Kollywood) ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್‌ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
ಇದನ್ನೂ ಓದಿ: Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.