ಬೆಂಗಳೂರು: ಬಿಗ್ಬಾಸ್ ಕನ್ನಡದ 10ನೇ ಆವೃತ್ತಿಯಲ್ಲಿ ಡ್ರೋನ್ ಪ್ರತಾಪ್ (Drone Prathap) ರನ್ನರ್ ಅಪ್ ಆಗಿರುವುದು ಗೊತ್ತೇ ಇದೆ. ಡ್ರೋನ್ ಪ್ರತಾಪ್ ʻಬಿಗ್ ಬಾಸ್ʼ ಶೋದಲ್ಲಿ ಬಿಬಿಎಂಪಿ ಅಧಿಕಾರಿಯಾಗಿರುವ ಪಶುವೈದ್ಯ ಡಾ. ಪ್ರಯಾಗ್ ಎಚ್ ಎಸ್ (HS Prayag) ಮೇಲೆ ಆರೋಪ ಮಾಡಿದ್ದರು. ತಮ್ಮ ಬಗ್ಗೆ ಅನಗತ್ಯ ಆರೋಪಗಳನ್ನು ಮಾಡಿರುವ ಡ್ರೋನ್ ಪ್ರತಾಪ್ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಿ ನೋಟಿಸ್ ಕಳುಹಿಸಿದ್ದರು ಪ್ರಯಾಗ್. ಇದಾದ ಬಳಿಕ ಲೈಸೆನ್ಸ್ ಪಡೆಯದೇ ಡ್ರೋನ್ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್ ಪ್ರತಾಪ್ (Drone Prathap Controversy) ವಂಚಿಸುತ್ತಿದ್ದಾರೆ ಎಂದು ಕಳೆದ ಫೆಬ್ರವರಿಯಲ್ಲಿ ಪ್ರತಾಪ್ ವಿರುದ್ದ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್ ಹಾಗೂ ತಂಡ ದೂರು ದಾಖಲಿಸಿತ್ತು. ಇದೀಗ ಡ್ರೋನ್ ಪ್ರತಾಪ್ (Drone Prathap Issue) ಕಳ್ಳಾಟವನ್ನು ಬಟಾಬಯಲು ಮಾಡಿದ್ದಾರೆ ಪ್ರಯಾಗ್. ಡ್ರೋನ್ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್ ತಂಡ ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದೆ.
ಡ್ರೋನ್ ತಯಾರಿಸಲು, ಹಾರಿಸಲು ಅನುಮತಿ ಇಲ್ಲ!
ಡ್ರೋನ್ ಪ್ರತಾಪ್ (Drone Prathap) ವಿರುದ್ಧ ಆರ್.ಆರ್.ನಗರ ಠಾಣೆಯಲ್ಲಿ ಪ್ರಯಾಗ್ ಹಾಗೂ ತಂಡ ಲೈಸೆನ್ಸ್ ಪಡೆಯದೇ ಡ್ರೋನ್ ಹಾರಿಸುವುದು ಹಾಗೂ ಪರವಾನಗಿ ಇಲ್ಲದ ಡ್ರೋನ್‌ಗಳನ್ನು ಜನರಿಗೆ ಮಾರಾಟ ಮಾಡುವ ಮೂಲಕ ಡ್ರೋನ್ ಪ್ರತಾಪ್ ವಂಚಿಸುತ್ತಿದ್ದಾರೆ ಎಂದು ದೂರು ದಾಖಲಿಸಿದ್ದರು. ಪ್ರತಾಪ್ ಅವರ ʻಡ್ರೋನಾರ್ಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಡಿಜಿಸಿಎ (ನಾಗರೀಕ ವಿಮಾನಯಾನ ಇಲಾಖೆ) ಅಧಿಕೃತವಾಗಿ ಪರವಾನಗಿ ಹೊಂದಿಲ್ಲ. ಜತೆಗೆ ಹೆಸರು ಸಹ ಇಲ್ಲ ಎಂದು ಈ ಮುಂಚೆಯೇ ಡಿಜಿಸಿಎ ಅಧಿಕೃತ ವೆಬ್‌ಸೈಟ್‌ನಿಂದ ಸ್ಪಷ್ಟವಾಗಿತ್ತು. ಡ್ರೋನ್ ಪ್ರತಾಪ್‌ಗೆ ಡ್ರೋನ್ ಲೈಸೆನ್ಸ್ ಇದೆಯಾ ಎಂದು ಆರ್.ಟಿ.ಐನಲ್ಲಿ ಅರ್ಜಿ ಸಲ್ಲಿಸಿದ್ದರು ಪ್ರಯಾಗ್. ಜತೆಗೆ ಡಿಜಿಸಿಎ(ಡೈರೆಕ್ಟರ್ ಜನರಲ್ ಸಿವಿಲ್ ಏವಿಯೇಷನ್)ಗೆ ಆರ್‌ಟಿಐನಲ್ಲಿ ಮಾಹಿತಿ ಕೋರಲಾಗಿತ್ತು.
ಇದೀಗ ಪ್ರತಾಪ್‌ಗೆ ಡ್ರೋನ್ ತಯಾರಿಸಲು, ಹಾರಿಸಲು ಮತ್ತು ಮಾರಲು ಯಾವುದೇ ಲೈಸೆನ್ಸ್ ಇಲ್ಲ ಎಂದು ಪ್ರಯಾಗ್ ರೈಟ್ ಟೂ ಇನ್ಫಾರ್ಮೇಶನ್ (ಆರ್‌ಟಿಐ) ಮೂಲಕ ಮಾಹಿತಿ ಪಡೆದಿದ್ದಾರೆ. ಡ್ರೋನ್ ಪ್ರತಾಪ್‌ಗೆ ಯಾವುದೇ ಪರವಾನಗಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಲ್ಲಿ ಬಹಿರಂಗಪಡಿಸಿದೆ. ಈ ಬಗ್ಗೆ ಪ್ರಯಾಗ್ ಅವರು ವಿಸ್ತಾರ ನ್ಯೂಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Drone Prathap: ಡ್ರೋನ್ ಪ್ರತಾಪ್‌ರನ್ನು ಮದುವೆಯಾಗಲು ಮುಗಿಬಿದ್ದ ಹೊಸಪೇಟೆ ಯುವತಿಯರು!
ಪ್ರತಾಪ್ ವಿರುದ್ಧ ಕೇಳಿ ಬಂದಿತ್ತು ಹಲವು ಆರೋಪ!
ಪ್ರತಾಪ್ (Drone Prathap) ಅವರು ಸಾರಂಗ್ ಅವರಿಗೆ ಒಂಬತ್ತು ಡ್ರೋನ್ ನೀಡಬೇಕಿತ್ತು. ಹೀಗಾಗಿ ಸಾರಂಗ್ ಅವರು ಪ್ರತಾಪ್‌ಗೆ 35 ಲಕ್ಷದ 75 ಸಾವಿರ ನೀಡಿದ್ದರು. ಆದರೆ ಡ್ರೋನ್ ನೀಡಲು ಪ್ರತಾಪ್ ಎರಡುವರೆ ತಿಂಗಳು ಸಮಯ ತೆಗೆದುಕೊಂಡಿದ್ದರು. ಇದಾದ ಬಳಿಕ ಎರಡು ಡ್ರೋನ್ ಅನ್ನು ಸಾರಂಗ್ ಅವರಿಗೆ ಪ್ರತಾಪ್ ನೀಡಿದ್ದರು. ಇದಾದ ಮೇಲೆ ಇನ್ನರೆಡು ಡ್ರೋನ್‌ಗಳನ್ನು ಸಾರಂಗ್‌ಗೆ ಕಳುಹಿಸಿಕೊಟ್ಟಿದ್ದರು. ಆದರೆ ಸಾರಂಗ್ ಈ ಬಗ್ಗೆ ಧ್ವನಿ ಎತ್ತಿದ್ದು, ನಾಲ್ಕು ಡ್ರೋನ್‌ಗಳು ಈಗ ಕೆಲಸ ಮಾಡುತ್ತಿಲ್ಲ ಬ್ಯಾಟರಿಗಳ ಕ್ಯಾಲಿಟಿ ಸರಿಯಿಲ್ಲ. ಮತ್ತೊಂದು ಹಾರಬೇಕಾದರೆ, ಕೆಳಗಡೆ ಬಿದ್ದು ಹೋಯಿತು. ನಾವೀಗ ತುಂಬಾ ಲಾಸ್ ನಲ್ಲಿದ್ದೀವಿ ಎಂದು ಆಕ್ರೋಶ ಹೊರಹಾಕಿದ್ದರು.
ಈ ಬಗ್ಗೆ ವಿಸ್ತಾರ ಜತೆ ಸಾರಂಗ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದರು. ಸಾರಂಗ್ ಮಾತನಾಡಿ ʻʻನಾನು ಇ-ಮೇಲ್ ಮೂಲಕ ವಾರ್ನಿಂಗ್ ನೀಡಿದ್ದೇನೆ ಲೋನ್ ಮೂಲಕ ದುಡ್ಡು ತಂದು, ರೈತರ ಬಳಿ ದುಡ್ಡು ಪಡೆದು ಪ್ರತಾಪ್‌ಗೆ ಕೊಟ್ಟಿದ್ದೆ. ಆದರೆ ಇಲ್ಲಿಯವರೆಗೆ ಆತ ಹಣ ಕೊಟ್ಟಿಲ್ಲ. ಅವರ ಪಿಎ ಸಾಗರ್ ನನಗೆ ಹೇಳಿದ್ದಾರೆ. ಪ್ರತಾಪ್ ಕಾರ್ ಸೇಲ್ ಮಾಡಿದ್ದಾನೆ ಅವನ ಬಳಿ ಹಣವಿಲ್ಲ ಎಂದು. ಕಾರ್ ಇರೋದು ಡ್ರೋನ್ ಪ್ರತಾಪ್ ತಂದೆಯ ಹೆಸರಿನಲ್ಲಿ. ಅವರ ಜತೆ ನನಗೆ ಸಂಪರ್ಕ ಇಲ್ಲ. ಪ್ರತಾಪ್ ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ ಬಂದು ಕೊಡ್ತಾರೆ ಎಂದು ಹೇಳಿದ್ದಾರೆ. ಹೀಗಾಗಿ ಸುಮ್ಮನ್ನಿದ್ದೇ. ಪ್ರತಾಪ್‌ಗೆ ಕಿರಣ್ ಮಾಧವ್ ಬೆಂಬಲ ನೀಡುತ್ತಿದ್ದರು. ನನಗೆ ಅವರಿಬ್ಬರು ಸೇರಿ ಬೆಂಗಳೂರಿನಲ್ಲಿ 20 ಸಾವಿರದ ಹೋಟೆಲ್ ಫೆಸಿಲಿಟಿ ನೀಡಿ ಬ್ಯುಸಿನೆಸ್ ಮಾಡಿದ್ದರು. ಈಗ ನೋಡಿದ್ರೆ ಈ ರೀತಿ ಮಾಡ್ತಿದ್ದಾರೆ. ನನಗೀಗ ಬಡ್ಡಿ ಎಲ್ಲವೂ ಸೇರಿ 83 ಲಕ್ಷ ರೂ. ಖರ್ಚಾಗಿದೆ. ನಮ್ಮದು ಸ್ಟಾರ್ಟ್ ಅಪ್ ಕಂಪನಿ. ನಮಗೆ ತುಂಬ ಕಷ್ಟ ಆಗಿದೆ ಡ್ರೋನ್ ಪ್ರತಾಪ್ ನಿಂದʼʼ ಎಂದು ಸಾರಂಗ್ ಹೇಳಿಕೆ ನೀಡಿದ್ದರು.
ಮತ್ತೊಂದೆಡೆ ಪ್ರತಾಪ್ ವಿರುದ್ಧ ಪ್ರಯಾಗ್ ರಾಜ್ (Prayag Raj) 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ವಕೀಲರು ಸ್ಪಷ್ಟ ಪಡಿಸಿದ್ದಾರೆ.