Site icon Vistara News

Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

Duniya Vijay Bheema Release Date announce

ಬೆಂಗಳೂರು: ದುನಿಯಾ ವಿಜಯ್ (Duniya Vijay) ʻಭೀಮʼ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್ 9ರಂದು ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಮೊದಲು ‘ಸಲಗ’ ಹಾಗೂ ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಚಿತ್ರ ರಿಲೀಸ್ ಆಗಿತ್ತು. ಇತ್ತೀಚೆಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಸುದೀಪ್ ಅವರು, ‘ಮ್ಯಾಕ್ಸ್’ ಚಿತ್ರ ಆಗಸ್ಟ್​ನಲ್ಲಿ ರಿಲೀಸ್ ಆಗಲಿದೆ ಎಂದಿದ್ದರು. ಹೀಗಾಗಿ, ಮತ್ತೊಮ್ಮೆ ದುನಿಯಾ ವಿಜಯ್ ಹಾಗೂ ಸುದೀಪ್ ಸಿನಿಮಾ ಮುಖಾಮುಖಿ ಆಗಲಿದೆ ಎನ್ನಲಾಗುತ್ತಿದೆ.

`ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

ಅಂದಹಾಗೆ ಭೀಮ ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಕವಿರಾಜ್ ಸಾಹಿತ್ಯ ಹಾಗೂ ದುನಿಯಾ ವಿಜಯ್ ನಟನೆ. ಈ ಮೂವರ ಕಾಂಬಿನೇಷನ್‌ನಲ್ಲಿ ಬರ್ತಿರುವ ಹಾಡಿನ ಮೇಲೆ ನಿರೀಕ್ಷೆ ಈಗಾಗಲೇ ಹೆಚ್ಚಾಗಿದ್ದು, ತೆರೆಮೇಲೆ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

Exit mobile version