Site icon Vistara News

Duniya Vijay: ಕೋಟಿ ಸಿನಿಮಾದ ‘ದುನಿಯಾ ವಿಜಯ್’ ವಿಶೇಷ ಪಾತ್ರಕ್ಕೆ ಪ್ರೇಕ್ಷಕರು ಫಿದಾ

Duniya Vijay In kotee movie special Role

ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಯಾದ (Duniya Vijay) ಡಾಲಿ ಧನಂಜಯ ನಟನೆಯ ‘ಕೋಟಿ’ ಸಿನಿಮಾ ‘ಫರ್ಪ಼ೆಕ್ಟ್ ಪ್ಯಾಮಿಲಿ ಎಂಟರ್‌ಟೈನರ್’ ಆಗಿ ಹೊರಹೊಮ್ಮಿದೆ. ಚಿತ್ರ ನೋಡಿದ ಸಿನಿರಸಿಕರು “ಇದು ಇಡೀ ಕುಟುಂಬವೇ ಕೂತು ನೋಡುವ ಸಿನಿಮಾ” ಎಂದಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಥಿಯೇಟರ್ ಕಡೆ ಹೆಚ್ಚೆಚ್ಚು ಬರುತ್ತಿದ್ದು ‘ಕೋಟಿ’ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.

ಧನಂಜಯ್ – ರಮೇಶ್ ಇಂದಿರಾ – ತಾರಾ ಅವರ ನಟನೆ, ಕಲರ್ಫುಲ್ ಕ್ಲೈಮ್ಯಾಕ್ಸ್‌ಗೆ ‌ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ. ಇವೆಲ್ಲದರ ಜತೆ ‘ದುನಿಯಾ ವಿಜಯ್’ ಅವರ ವಿಶೇಷ ಕ್ಯಾಮಿಯೋಗೆ ಭರ್ಜರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ವಿಶೇಷ ಪಾತ್ರದಲ್ಲಿ ದುನಿಯಾ ವಿಜಯ್

‘ಸಲಗ’ ಮೂಲಕ ತಮ್ಮ ವೃತ್ತಿಜೀವನಕ್ಕೆ ಹೊಸ ಬಣ್ಣ ತುಂಬಿರುವ ದುನಿಯಾ ವಿಜಯ್ ‘ಕೋಟಿ’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ನೋಡಿದ ಪ್ರೇಕ್ಷಕರು ಅಚ್ಚರಿಯಿಂದಲೇ ಈ ವಿಶೇಷ ಪಾತ್ರವನ್ನು ಮೆಚ್ಚಿದ್ದಾರೆ. ಈ ಹಿಂದೆ ವಿಜಯ್ ಅವರ ‘ಸಲಗ’ ಸಿನೆಮಾದಲ್ಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು.

‘ದುನಿಯಾ ವಿಜಯ್ ಅವರ ನಟನೆ ಮತ್ತು ಆ ಒಂದು ಸನ್ನಿವೇಶ ಪ್ರೇಕ್ಷಕರನ್ನು ಭಾವುಕರನ್ನಾಗಿ ಮಾಡುತ್ತದೆ’ ಎಂದು ಪ್ರೇಕ್ಷಕರು ಸೋಷಿಯಲ್ ಮೀಡಿಯಾಗಳಲ್ಲಿ ದುನಿಯಾ ವಿಜಯ್ ಕ್ಯಾಮಿಯೋಗೆ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Dolly Dhananjay: ಮೈಸೂರಿನಲ್ಲಿ ಡಾಲಿ ಧನಂಜಯ್‌ ಅಭಿನಯದ ‘ಕೋಟಿ’ ಸಿನಿಮಾ ವೀಕ್ಷಿಸಲಿರುವ ಪ್ರತಾಪ್ ಸಿಂಹ!

“ಕೋಟಿ ಸಿನಿಮಾದಲ್ಲಿ ದುನಿಯಾ ವಿಜಯ್ ಬರುವ ಸನ್ನಿವೇಶ ನನಗೆ ತುಂಬಾ ಇಷ್ಟದ ಸನ್ನಿವೇಶಗಳಲ್ಲೊಂದು. ಥಿಯೇಟರ್ಗಳಲ್ಲಿ ಪ್ರೇಕ್ಷಕರು ತೋರಿಸುತ್ತಿರುವ ಪ್ರೀತಿ ವಿಶೇಷವಾದದ್ದು” ಎಂದು ನಿರ್ದೇಶಕ ಪರಮ್ ಹೇಳಿದರು.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್, ಅಭಿಷೇಕ್ ಶ್ರೀಕಾಂತ್, ವಿಜಯ್ ಶೋಭರಾಜ್ ಪವೂರ್ ಮುಂತಾದವರು ಅಭಿನಯಿಸಿದ್ದಾರೆ.

ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು 777 ಚಾರ್ಲಿ ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡವನ್ನು ದಶಕಗಳ ಕಾಲ ಮುನ್ನಡೆಸಿದ್ದ ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ. ʼಕೋಟಿʼ ರಾಜಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿದೆ.

Exit mobile version