ಬೆಂಗಳೂರು: ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ (Duniya Vijaj) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಇಂದು ಸಿನಿಮಾದ ಮುಹೂರ್ತ ನೆರವೇರಿದೆ/ ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ.
ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.
ಈಗಾಗಲೇ ಸಿನಿಮಾದ ಪೋಸ್ಟರ್ ರಿವೀಲ್ ಆಗಿದೆ. ಕತ್ತಿ ಹಾಗೂ ಕೊಡಲಿ ಹಿಡಿದು ದುನಿಯಾ ವಿಜಯ್ ನಿಂತಿದ್ದಾರೆ. ‘ಇದು ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ’ ಎನ್ನುವ ಲೈನ್ ಕೂಡ ಇದೆ. ಈ ಚಿತ್ರಕ್ಕೆ ರಚಿತಾ ರಾಮ್ ನಾಯಕಿ ಎನ್ನಲಾಗಿದೆ.ಜಡೇಶ್ ಹಂಪಿ ಅವರಿಗೆ ನಿರ್ದೇಶನದಲ್ಲಿ ಅನುಭವ ಇದೆ. ‘ರಾಜಹಂಸ’, ‘ಜಂಟಲ್‍ಮ್ಯಾನ್’, ‘ಗುರು ಶಿಷ್ಯರು’ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದರು. ದುನಿಯಾ ವಿಜಯ್ ಮುಂದಿನ ಸಿನಿಮಾಗೆ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನೂ ಓದಿ: Duniya Vijay: ಸೈಕ್ ಸಾಂಗ್ ಬಗ್ಗೆ ʻಬ್ಯಾಡ್ ಬಾಯ್ʼ ದುನಿಯಾ ವಿಜಯ್ ಹೇಳಿದ್ದೇನು?
ದುನಿಯಾ ವಿಜಯ್ (Duniya Vijay) ಸದ್ಯ ‘ಭೀಮ’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿರುವ ವಿಜಯ್ ರಿಲೀಸ್ ತಯಾರಿಯಲ್ಲಿದ್ದಾರೆ. ದುನಿಯಾ ವಿಜಯ್ ನಿರ್ದೇಶಿಸಿ ನಟಿಸುತ್ತಿರುವ “ಭೀಮʼ ಸಿನಿಮಾ ಕೆಲಸಗಳು ಕೊನೆಯ ಹಂತ ತಲುಪುತ್ತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಮಾಡಿಕೊಳ್ಳುತ್ತಿದೆ.
ಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.