Actor Dwarakish: ದ್ವಾರಕೀಶ್ ನಿಧನಕ್ಕೆ ಮುದ್ದು ಶ್ವಾನದ ಮೂಕ ವೇದನೆ - Vistara News

ಸ್ಯಾಂಡಲ್ ವುಡ್

Actor Dwarakish: ದ್ವಾರಕೀಶ್ ನಿಧನಕ್ಕೆ ಮುದ್ದು ಶ್ವಾನದ ಮೂಕ ವೇದನೆ

Actor Dwarakish:  ದ್ವಾರಕೀಶ್‌  ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 11.30ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಹಲವು ಗಣ್ಯರು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ದುಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮಗ ಸಂತೋಷ್ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Dwarakish Passed Away pain of a pet dog
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ, ನಟ, ಹಾಸ್ಯ ಕಲಾವಿದ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಛಾಪು ಮೂಡಿಸಿದ್ದ ದ್ವಾರಕೀಶ್‌ (81) (Actor Dwarakish) ಅವರು ಮಂಗಳವಾರ (ಏಪ್ರಿಲ್‌ 16) ನಿಧನರಾಗಿದ್ದಾರೆ. ಬಹುಮುಖ ಪ್ರತಿಭೆ, ಗಮನ ಸೆಳೆಯುವ ವ್ಯಕ್ತಿತ್ವ ಹೊಂದಿದ್ದ ದ್ವಾರಕೀಶ್‌ ಅವರು ಸ್ನೇಹಜೀವಿಯೂ ಆಗಿದ್ದರು. ಹಾಸ್ಯ ನಟನ ಸಾವಿನಿಂದ ನಿವಾಸದಲ್ಲಿ ನೀರವ ಮೌನ ಅವರಿಸಿದೆ. ದ್ವಾರಕೀಶ್ ಸಾಕು ನಾಯಿ ತನ್ನ ಮಾಲೀಕನ ನಿಧನ ಕಂಡು ಮೂಕ ವೇದನೆ ಅನುಭವಿಸುತ್ತಿದ್ದ ದೃಶ್ಯ ನಿವಾಸದ ಬಳಿ ಕಂಡು ಬಂದಿದೆ. ಈ ವಿಡಿಯೊ ವೈರಲ್‌ ಆಗುತ್ತಿದೆ.

ನಾಯಿಯ ಮೂಕ ವೇದನೆಯನ್ನು ಕಂಡ ಯೋಗಿ ದ್ವಾರಕೀಶ್ ಅವರು, ಮುದ್ದಿನ ನಾಯಿಯನ್ನು ಸಂತೈಸುವ ಕೆಲಸ ಮಾಡಿದ್ದಾರೆ. ದ್ವಾರಕೀಶ್‌  ಅಂತಿಮ ದರ್ಶನಕ್ಕೆ ಇಂದು ಮಧ್ಯಾಹ್ನ 11.30ರವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಕಲ್ಪಿಸಲಾಗಿದೆ. ಹಲವು ಗಣ್ಯರು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Actor Dwarakish: ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್!

ಸಾವಿನಲ್ಲೂ ಸಾರ್ಥಕತೆ

ದ್ವಾರಕೀಶ್ (Dwarakish) ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ನೇತ್ರದಾನ ಮಾಡಿದ್ದರು. ಈಗ ದ್ವಾರಕೀಶ್ ಕೂಡ ತಮ್ಮ ಸಾವಿನ ನಂತರ ಇತರರ ಬಾಳಿಗೆ ಬೆಳಕಾಗಿದ್ದಾರೆ.

ದ್ವಾರಕೀಶ್ ಕಣ್ಣನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದ್ದಾರೆ. ಕುಟುಂಬದ ಸಮ್ಮತಿಯ ಮೇರೆಗೆ ಡಾ.ಶೈಲಜಾ ನೇತೃತ್ವದಲ್ಲಿ ನೇತ್ರ ಕಸಿ ಕಾರ್ಯ ನಡೆದಿದೆ.

ದ್ವಾರಕೀಶ್ ಅವರ ಮರಣದ ನಂತರ ಕುಟುಂಬಸ್ಥರಿಗೆ ಕರೆ ಮಾಡಿದಾಗ 10 ನಿಮಿಷದಲ್ಲಿ ನೇತ್ರದಾನ ಮಾಡಲು ಅನುಮತಿ ನೀಡಿದ್ದಾರೆ. ಮೃತಪಟ್ಟ 14 ಘಂಟೆಯೊಳಗೆ ಕಣ್ಣು ದಾನ ಮಾಡಬಹುದು. ಸಂಪೂರ್ಣ ಕಣ್ಣುನ್ನು ಈಗಾಗಲೇ ತೆಗೆದುಕೊಂಡಿದ್ದೇವೆ ಎಂದು ವೈದ್ಯೆ ಶೈಲಜಾ ಮಾತನಾಡಿದ್ದಾರೆ. ಇದರಿಂದ 10 ಜನಕ್ಕೆ ಈ ಕಣ್ಣುಗಳಿಂದ ಅನುಕೂಲವಾಗಲಿದೆ. ಪಟಾಕಿಯಲ್ಲಿ ಕಣ್ಣಿಗೆ ಹಾನಿಯಾದವರಿಗೆ ಹಾಗೂ ಪೂರ್ಣ ಅಂಧತ್ವ ಇರುವವರಿಗೆ ಅನುಕೂಲವಾಗುತ್ತದೆ ಎಂದು ಡಾ.ಶೈಲಜಾ ಮಾಹಿತಿ ನೀಡಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ 11:30ರವರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದ್ವಾರಕೀಶ್‌ ದರ್ಶನದ ಬಳಿಕ ಬೆಂಗಳೂರಿನ ಚಾಮರಾಜನಗರ ಟಿಆರ್ ಮಿಲ್ ಪಕ್ಕದ ಸಾರ್ವಜನಿಕ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಬ್ರಾಹ್ಮಣ ಸಂಪ್ರದಾಯದಂತೆ ವಿಧಿವಿಧಾನ ನೆರವೇರಲಿದೆ. ದುಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ ಮಗ ಸಂತೋಷ್ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Rishab Shetty: ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು.

VISTARANEWS.COM


on

Rishab Shetty Shivamma Yarehanchinala Official Trailer out
Koo

ಬೆಂಗಳೂರು:  ರಿಷಬ್ ಶೆಟ್ಟಿ (Rishab Shetty) ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ (Shivamma Movie) ವಿಶ್ವಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ‘ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿತ್ತು. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. ಜಯಶಂಖರ್ ಆರ್ಯರ್ ನಿರ್ದೇಶನದ ‘ಶಿವಮ್ಮ’ ಸಿನಿಮಾ ಜೂನ್ 14ಕ್ಕೆ ತೆರೆಗೆ ಬರ್ತಿದೆ. ಸದ್ಯ ಟ್ರೈಲರ್ ಬಿಡುಗಡೆ ಆಗಿದೆ. ಯರೆಹಂಚಿನಾಳ ಎನ್ನುವ ಊರಿನಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ.

ಯರೆಹಂಚಿನಾಳದ ಸರ್ಕಾರಿ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದ ಶಿವಮ್ಮ ಕುಟುಂಬ ಪೋಷಣೆಗಾಗಿ ಊರೆಲ್ಲಾ ಸಾಲ ಮಾಡುತ್ತಾಳೆ. ಶಿವಮ್ಮ, ಕೊನೆಗೆ ಶಾಲಾ ಶಿಕ್ಷಕರ ಬಳಿಯೂ ಸಾಲ ಮಾಡಿ ಸಮಸ್ಯೆ ಎದುರಿಸುತ್ತಾಳೆ. ಬಳಿಕ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರ ಮಾಡಲು ಹೋಗಿ ಸಮಸ್ಯೆ ಎದುರಿಸುತ್ತಾಳೆ ಎನ್ನುವ ಕಥೆಯನ್ನು ಎಳೆ ಎಳೆಯಾಗಿ ಹೇಳಲಾಗಿದೆ.

ಅನೇಕ ಸಿನಿಮೋತ್ಸವಗಳಲ್ಲಿ ಪ್ರದರ್ಶನ

ಅನೇಕ ಸಿನಿಮೋತ್ಸವಗಳಲ್ಲಿ ಈ ಚಿತ್ರ ಪ್ರದರ್ಶನ ಕಂಡಿದೆ. ಚೀನಾದಲ್ಲಿ ನಡೆದ ‘ಹೈನಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಇರಾನ್​ನಲ್ಲಿ ನಡೆದ ‘ಫಜರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಸ್ವೀಡನ್​ನ ‘ಗೋಥೆಂಬರ್ಗ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’, ಮ್ಯುನಿಚ್​​ನ ‘ಮುಂಚಿಯನ್ ಸಿನಿಮೋತ್ಸವ, ರಷ್ಯಾದ ‘ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ’, ಸ್ಪೇನ್​ನ ‘ಇಮ್ಯಾಜಿನ್ ಇಂಡಿಯಾ’, ಕೆನಡಾದ ‘ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ’, ಮೆಲ್ಬೋರ್ನ್​ನ ‘ಇಂಡಿಯನ್ ಪಿಲ್ಮ್ ಫೆಸ್ಟಿವಲ್’, ಸ್ವಿಟ್ಜರ್​​ಲ್ಯಾಂಡ್​ನ ‘ಬ್ಲಾಕ್​ ಮೂವಿ ಫಿಲ್ಮ್​ ಫೆಸ್ಟಿವಲ್’ ಮೊದಲಾದ ಕಡೆಗಳಲ್ಲಿ ಈ ಸಿನಿಮಾ ಪ್ರದರ್ಶನ ಕಂಡಿದೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಫ್ರಾನ್ಸ್‌ನ ನಾಂಟೆಸ್‌ನಲ್ಲಿ ನೆಡೆದ ಫೆಸ್ಟಿವಲ್ 3 ಕಾಂಟಿನೆಂಟ್‌ನಲ್ಲಿ ‘ಯುವ ತೀರ್ಪುಗಾರರ ಅವಾರ್ಡ್’ ಪಡೆದುಕೊಂಡಿತ್ತು. ಈ ಚಿತ್ರವನ್ನು ಜೈ ಶಂಕರ್‌ ಆರ್ಯರ್‌ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಶರಣಮ್ಮ ಚಟ್ಟಿ, ಚೆನ್ನಮ್ಮ ಅಬ್ಬಿಗೆರೆ, ಶಿವು ಅಬ್ಬಿಗೆರೆ, ಶ್ರುತಿ ಕೊಂಡೇನಹಳ್ಳಿ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಈ ಹಿಂದೆ ಅಷ್ಟೇ ಈ ಸಿನಿಮಾಗೆ 27ನೇ ಬೂಸಾನ್‌ ಅಂತಾರಾಷ್ಟ್ರೀಯ ಪ್ರಶಸ್ತಿ (Busan International Film Festival) ಲಭಿಸಿತ್ತು. ಏಷ್ಯಾದ ಅತಿದೊಡ್ಡ ಫಿಲ್ಮ್ಸ್ ಉತ್ಸವದಲ್ಲಿ ಒಟ್ಟು 10 ಚಲನಚಿತ್ರಗಳು ಉನ್ನತ-ಪ್ರೊಫೈಲ್ ನ್ಯೂ ಕರೆಂಟ್ಸ್ ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.

ಸಿನಿಮಾದ ಕಥೆ ಏನು?

ಸರ್ಕಾರಿ ಶಾಲೆಯಲ್ಲಿ ಅಡುಗೆ ಕೆಲಸ ಮಾಡುವ 46 ವರ್ಷದ ಶಿವಮ್ಮ ಎನ್ನುವ ಮಹಿಳೆ ತನ್ನ ಪಾರ್ಶ್ವವಾಯು ಪೀಡಿತ ಪತಿಯನ್ನು ಸಾಕಿಕೊಂಡು, ತನ್ನ ಮಕ್ಕಳ ಭವಿಷ್ಯಕ್ಕಾಗಿ ನೆಟ್ವರ್ಕ್ ಮಾರ್ಕೆಟಿಂಗ್ ವ್ಯಾಪಾರವನ್ನು ಭರವಸೆಯಿಂದ ಪಾಲಿಸುವ ಹೋರಾಟದ ಕಥೆಯನ್ನು ಸಿನಿಮಾ ಮಾಡಿದ್ದಾರೆ ನಿರ್ದೇಶಕರು. ಆದಷ್ಟು ನೈಜವಾಗಿಯೇ ಇಡೀ ಸಿನಿಮಾವನ್ನು ಕಟ್ಟಿರುವುದು ಮತ್ತೊಂದು ವಿಶೇಷ.

ಚೆನ್ನಮ್ಮ ಅಬ್ಬೆಗೆರೆ, ಶಿವು ಅಬ್ಬೆಗೆರೆ, ಶ್ರುತಿ ಕೊಂಡೇನಹಳ್ಳಿ, ಚೆನ್ನಪ್ಪ ಹನ್ಸಿ, ಶಿವಾನಂದ್ ಸಾದರ್ ಚಿತ್ರದ ತಾರಾಗಣದಲ್ಲಿದ್ದಾರೆ. ವಿಕಾಸ್ ಯುಆರ್ಎಸ್ ಹಾಗೂ ಸೌಮ್ಯಾನಂದ ಸಾಹಿ ಛಾಯಾಗ್ರಹಣ ‘ಶಿವಮ್ಮ’ ಚಿತ್ರಕ್ಕಿದೆ. ಜೂನ್ 14ಕ್ಕೆ ‘ಕೋಟಿ’, ‘ಶೆಫ್ ಚಿದಂಬರ’ ಹಾಗೂ ‘ಲವ್‌ಲಿ’ ಸಿನಿಮಾಗಳ ಜೊತೆಗೆ ‘ಶಿವಮ್ಮ’ ಕಥೆ ತೆರೆಮೇಲೆ ಅನಾವರಣವಾಗಲಿದೆ.

Continue Reading

ಸ್ಯಾಂಡಲ್ ವುಡ್

Vasishta Simha: ಟ್ರೈಲರ್‌ ಲಾಂಚ್ ವೇಳೆ ರಿಷಬ್ ಶೆಟ್ಟಿ ಕಾಲಿಗೆ ಬಿದ್ದ ವಸಿಷ್ಠ ಸಿಂಹ!

Vasishta Simha: ʻಲವ್ ಲಿ’ ಚಿತ್ರದಲ್ಲಿ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

VISTARANEWS.COM


on

Vasishta Simha Lovely Kannada Film Trailer Event
Koo

ಬೆಂಗಳೂರು: ವಸಿಷ್ಠ ಸಿಂಹ ನಟನೆಯ ‘ಲವ್ ಲಿ’ ಚಿತ್ರದ ಟ್ರೈಲರ್‌ ಲಾಂಚ್ ಕಾರ್ಯಕ್ರಮಕ್ಕೆ ರಿಷಬ್ ಆಗಮಿಸಿ ಶುಭ ಕೋರಿದ್ದಾರೆ. ಹರಿಪ್ರಿಯಾ ಹಾಗೂ ರಿಷಬ್ ಶೆಟ್ಟಿ ‘ರಿಕ್ಕಿ’ ಸಿನಿಮಾದಲ್ಲಿ (Rikky Movie) ಒಟ್ಟಾಗಿ ಕೆಲಸ ಮಾಡಿದ್ದರು. ಇವರ ಮಧ್ಯೆ ಒಳ್ಳೆಯ ಪರಿಚಯ ಇದೆ. ‘ಲವ್ ಲಿ’ ಚಿತ್ರವನ್ನು ಚೇತನ್ ಕೇಶವ್ ನಿರ್ದೇಶನ ಮಾಡುತ್ತಿದ್ದು, ವಸಿಷ್ಠ ಸಿಂಹಗೆ ನಾಯಕಿಯಾಗಿ ಜಾರ್ಖಂಡ್‌ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಚಿತ್ರದಲ್ಲಿ ಪ್ರಮುಖ ರೋಲ್‌ನಲ್ಲಿ ಮಿಂಚಲಿದ್ದಾರೆ. ಟ್ರೈಲರ್‌ ಲಾಂಚ್ ವೇಳೆ ವೇದಿಕೆಯಲ್ಲಿ ರಿಷಬ್ ಅವರ ಕಾಲಿಗೆ ಬಿದ್ದರು ವಸಿಷ್ಠ ಸಿಂಹ.

ರಿಷಬ್ ಅವರ ಕಾಲಿಗೆ ಬಿದ್ದ ಬಳಿಕ ವಸಿಷ್ಠ ಅವರು ಮಾತನಾಡಿ ʻʻನಾಡಿಗೆ ಹಮ್ಮೆ ತಂದು ಕೊಟ್ಟ ಕಾಂತಾರ ಸಿನಿಮಾವನ್ನು ನೀಡಿದವರು ರಿಷಬ್‌. ನನ್ನ ಮೇಲೆ ಸಿನಿಮಾ ಪ್ರಭಾವ ಬೀರಿದೆ. ಅನುಭವ ಕೂಡ ಕೊಟ್ಟಿದೆ. ಕಾಂತಾರ 1 ಕೂಡ ಆಗ್ತಿದೆ. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕುʼʼ ಎಂದರು.

ಟ್ರೈಲರ್‌ ಲಾಂಚ್‌ಗೆ ಆಗಮಿಸಿ ರಿಷಬ್ ಮಾತನಾಡಿ ʻʻರಾಜಾಹುಲಿಯಿಂದ ಇಲ್ಲಿವರೆಗೂ ವಸಿಷ್ಠ ಸಿನಿಮಾಗಳನ್ನು ನೋಡಿಕೊಂಡು ಬಂದಿದ್ದೇನೆ. ಗೋಧಿ ಬಣ್ಣದಲ್ಲಿ ಇವರ ಬೇಸ್‌ ವಾಯ್ಸ್‌ ಕೇಳಿ, ಯಾವಾಗಲೂ ಮಿಮಿಕ್ರಿ ಮಾಡುತ್ತಿದ್ದೆ. ಚಿಟ್ಟೆ, ಕೆಜಿಎಫ್‌ ಆಯ್ತು. ಈಗ ಲವ್‌ಲಿ ಸಿನಿಮಾ ರಿಲೀಸ್‌ಗೆ ಸಜ್ಜಾಗಿದ್ದಾರೆ. ಇದು ಮಾಸ್‌ ಸಿನಿಮಾ. ನನ್ನ ಮೊದಲ ನಿರ್ದೇಶನದಲ್ಲಿ ಹರಿಪ್ರಿಯಾ ಮೊದಲ ನಾಯಕಿ ಆಗಿದ್ದರು. ಕನ್ನಡ ಚಿತ್ರರಂಗಕ್ಕೆ ವಸಿಷ್ಠ ಆಸ್ತಿ ಆಗ್ತಾರೆ.ಜೂನ್ 14ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ಥಿಯೇಟರ್ ಅಲ್ಲೇ ಸಿನಿಮಾ ನೋಡಿʼʼ ಎಂದರು.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಅವರು ಹರಿಪ್ರಿಯಾ ಅವರಿಗೆ ಚಾಕೊಲೇಟ್ ಗಿಫ್ಟ್ ನೀಡಿದ್ದಾರೆ. ಇನ್ನು ಲವ್‌ಲಿ ತಂಡ ರಿಷಬ್ ಅವರಿಗೆ ಪಾದರಕ್ಷೆಗಳನ್ನು ಬಿಟ್ಟು ವರಾಹ ವಿಗ್ರಹ ಗಿಫ್ಟ್ ಕೂಡ ನೀಡಿದ್ದಾರೆ. ಈ ವೇಳೆ ವಸಿಷ್ಠ ಪತ್ನಿ ಹರಿಪ್ರಿಯಾ ಮಾತನಾಡಿದ್ದಾರೆ. ‘ನನ್ನ ಸಿನಿಮಾಗೂ ನಾನು ಇಷ್ಟು ನರ್ವಸ್ ಆಗಿರಲಿಲ್ಲ. ನನ್ನ ಗಂಡನ ಸಿನಿಮಾಗೆ ನರ್ವಸ್ ಆಗ್ತಿದೆ’ ಎಂದರು ಹರಿಪ್ರಿಯಾ.

ಲವ್ ಲಿ’ ಚಿತ್ರದಲ್ಲಿ ಮಾಸ್ಟರ್ ಆನಂದ್ ಪುತ್ರಿ ವಂಶಿಕಾ, ಸಾಧುಕೋಕಿಲ, ದತ್ತಣ್ಣ, ಮಾಳವಿಕಾ, ಶೋಭ್ ರಾಜ್, ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿದ್ದಾರೆ. ಲವ್ ಲಿ ಚಿತ್ರವನ್ನು ರವೀಂದ್ರ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಇದೊಂದು ಕಮರ್ಶಿಯಲ್ ಲವ್ ಸ್ಟೋರಿ ಸಿನಿಮಾ. ರೌಡಿಸಂ ಕಥಾಹಂದರ ಕೂಡ ಇದೆ. ನೈಜ ಘಟನೆಯಿಂದ ಸ್ಪೂರ್ತಿ ಪಡೆದು ಅದನ್ನು ಸಿನಿಮೀಯ ರೀತಿಯಲ್ಲಿ ಹೇಳ ಹೊರಟಿದೆ ಚಿತ್ರತಂಡ. ಎಂಟರಿಂದ ಹತ್ತು ಭಾವನೆಗಳನ್ನು ಒಮ್ಮೆಲೆ ಕ್ಯಾರಿ ಮಾಡುವ ಅವಕಾಶ ಈ ಚಿತ್ರದಲ್ಲಿ ಸಿಕ್ಕಿದೆ ಎಂದು ಹಿಂದೊಮ್ಮೆ ವಸಿಷ್ಠ ಸಿಂಹ ಹೇಳಿಕೊಂಡಿದ್ದರು.

Continue Reading

ಸಿನಿಮಾ

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Kannada New Movie: ಕನ್ನಡದ ಖ್ಯಾತ ನಿರ್ದೇಶಕ ಎಸ್‌.ನಾರಾಯಣ್‌ ಹೊಸ ಚಿತ್ರವನ್ನು ಸದ್ದಿಲ್ಲದೆ ಆರಂಭಿಸಿದ್ದಾರೆ. ಈ ನೂತನ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ. ನಾಯಕಿಯಾಗಿ ಬೃಂದಾ ಕಾಣಿಸಿಕೊಳ್ಳುತ್ತಿದ್ದು, ಚಿತ್ರಕ್ಕೆ ಶೀರ್ಷಿಕೆ ಇನ್ನಷ್ಟೇ ಅಂತಿಮವಾಗಬೇಕಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ. ಎಸ್‌.ನಾರಾಯಣ್ ನಿರ್ದೇಶನದ ʼಪ್ರೊಡಕ್ಷನ್ ನಂ. 1ʼ ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖ ಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ (Kannada New Movie). ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್. ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ಧತೆ ನಡೆಸುತ್ತಿದೆ‌.

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನ ಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧಾ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್. ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತ ರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ ʼಪ್ರೊಡಕ್ಷನ್ ನಂ. 1ʼ ಚಿತ್ರದ ಪಿ.ಆರ್.ಒ. ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Continue Reading

ಸ್ಯಾಂಡಲ್ ವುಡ್

Kannada Upcoming Movies: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಲು ಬರುತ್ತಿವೆ ಕನ್ನಡ ಸಿನಿಮಾಗಳು!

Kannada Upcoming Movies:
ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

VISTARANEWS.COM


on

Kannada Upcoming Movies KD Martin Bheema Movies
Koo

ಬೆಂಗಳೂರು: ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ.  ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ (Kannada Upcoming Movies) ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ. ಜೂನ್ 10ಕ್ಕೆ ‘ಯುಐ’ ಸಿನಿಮಾ ಅಪ್‌ಡೇಟ್ ಎನ್ನುವ ಚರ್ಚೆ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಇನ್ನು 6 ತಿಂಗಳಲ್ಲಿ 10ಕ್ಕೂ ಅಧಿಕ ಬಹುನಿರೀಕ್ಷಿತ ಸಿನಿಮಾಗಳು ತೆರೆಗೆ ಬರಲಿವೆ. ಶಿವಣ್ಣ ‘ಭೈರತಿ ರಣಗಲ್’ ಚಿತ್ರದ ಅಗಸ್ಟ್ 15ಕ್ಕೆ ರಿಲೀಸ್ ಎಂದು ಚಿತ್ರತಂಡ ಹೇಳಿದೆ. ಅಲ್ಲಿಗೆ ಉಳಿದಿರುವುದು ‘ಯುಐ’, ‘ಭೀಮ’, ‘ಮ್ಯಾಕ್ಸ್’ ಸಿನಿಮಾಗಳು ಮಾತ್ರ.

ಬಾಕ್ಸ್‌ ಆಫೀಸ್‌ನಲ್ಲಿ ʻಕೆಡಿʼ-ʻಡೆವಿಲ್‌ʼ ಕಾದಾಟ!

ಪ್ರೇಮ್‌ ಹಾಗೂ ಧ್ರುವ ಸರ್ಜಾ (Dhruva Sarja) ಈಗಾಗಲೇ ʻಕೆಡಿʼ ಸಿನಿಮಾ ( KD movie) ಬಿಡುಗಡೆ ಯಾವಾಗ ಎಂಬುದನ್ನು ರಿವೀಲ್‌ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಕೆಡಿ ಸಿನಿಮಾ ತೆರೆ ಕಾಣುತ್ತಿದೆ. ಆದರೆ ಅದೇ ಸಮಯಕ್ಕೆ ದರ್ಶನ್‌ ಅವರ `ಡೆವಿಲ್‌’ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಮೊದಲೇ ದರ್ಶನ್‌ ಹಾಗೂ ಧ್ರುವ ನಡುವೆ ಸಂಬಂಧ ಚೆನ್ನಾಗಿಲ್ಲ. ಹೀಗಾಗಿ ಬಾಕ್ಸ್‌ ಆಫೀಸ್‌ ವಾರ್‌ ಜತೆ ಫ್ಯಾನ್ಸ್‌ ವಾರ ಕೂಡ ಆಗಬಹುದು ಎನ್ನಲಾಗುತ್ತಿದೆ.

ಇಷ್ಟೂ ದಿನ ಸಿನಿಮಾಗಳಿಲ್ಲ ಎಂದು ಪ್ರೇಕ್ಷಕರು ಕೊರಗುತ್ತಿದ್ದರು. ಇದರ ಬೆನ್ನಲ್ಲೇ ದೊಡ್ಡ ದೊಡ್ಡ ಸ್ಟಾರ್ಸ್‌ಗಳು ಸಿನಿಮಾ ರಿಲೀಸ್‌ ದಿನಾಂಕ ಘೋಷಣೆ ಮಾಡುತ್ತಿದ್ದಾರೆ. ಮತ್ತೆ ಡಿಸೆಂಬರ್‌ ತಿಂಗಳಲ್ಲಿ ಎರಡು ದುಬಾರಿ ಕನ್ನಡ ಸಿನಿಮಾಗಳ ಕಾದಾಟ ನೋಡುವ ಅವಕಾಶ ಪ್ರೇಕ್ಷಕರಿಗೆ ಇದೆ. ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ಅವರ ʻಕೆಡಿʼ ಹಾಗೂ ʻಮಾರ್ಟಿನ್‌ʼ ಸಿನಿಮಾಗಳು ರಿಲೀಸ್‌ ಆಗುತ್ತಿವೆ. ಜತೆಗೆ ನಿರ್ದೇಶಕ ಪ್ರೇಮ್ ‘ಕೆಡಿ’ ಸಿನಿಮಾವನ್ನು ಡಿಸೆಂಬರ್‌ ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಇದೇ ಡಿಸೆಂಬರ್‌ನಲ್ಲಿ ದರ್ಶನ್ ಸಿನಿಮಾ ‘ಡಿವಿಲ್’ ಕೂಡ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Kannada New Movie: ‘ಶೆಫ್​ ಚಿದಂಬರ’ ಸಿನಿಮಾ ಟ್ರೈಲರ್‌​ ಅನಾವರಣ ಮಾಡಿ ಹಾರೈಸಿದ ರಮೇಶ್ ಅರವಿಂದ್!

ಇದೀಗ ‘ಭೀಮ’ ಹಾಗೂ ‘ಯುಐ’ ಸಿನಿಮಾಗಳ ಬಗ್ಗೆ ಅಪ್‌ಡೇಟ್ ಸಿಗುವ ಸುಳಿವು ಸಿಕ್ಕಿದೆ. ಆದಷ್ಟು ಬೇಗ ‘ಭೀಮ’ ಸಿನಿಮಾ ಅನೌನ್ಸ್‌ಮೆಂಟ್ ಎಂದು ಹೇಳಲಾಗುತ್ತಿದೆ.ಜುಲೈನಲ್ಲೇ ‘ಯುಐ’ ಚಿತ್ರ ತೆರೆಗಪ್ಪಳಿಸುವ ಸಾಧ್ಯತೆಯಿದೆ. ತಪ್ಪಿದರೆ ಸೆಪ್ಟೆಂಬರ್‌ನಲ್ಲಿ ರಿಲೀಸ್ ಫಿಕ್ಸ್ ಎನ್ನಲಾಗ್ತಿದೆ. ಇನ್ನು ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಭೀಮ’ ಸಿನಿಮಾ ಕೂಡ ನಿರೀಕ್ಷೆ ಹುಟ್ಟಾಕ್ಕಿದೆ.

ಭೀಮ’ ಸಿನಿಮಾ

ʻಭೀಮ’ ಸಿನಿಮಾದ ಬಗ್ಗೆ ಹೇಳುವುದಾದರೆ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದರೆ, ನಾಯಕಿಯಾಗಿ ರಂಗಭೂಮಿ ಕಲಾವಿದೆ ಅಶ್ವಿನಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಸಾರ್ಥಕ್ ಈ ಸಿನಿಮಾಗೆ ಬಂಡವಾಳ ಹೂಡಿಸಿದ್ದಾರೆ. ಸಲಗ ಬಳಿಕ ದುನಿಯ ವಿಜಯ್ ಆ್ಯಕ್ಷನ್ ಕಟ್ ಹೇಳುತ್ತಿರುವ 2ನೇ ಸಿನಿಮಾ ಇದಾಗಿದೆ. ಸಲಗ ಸಕ್ಸೆಸ್‌ನಲ್ಲಿರುವ ವಿಜಿ “ಭೀಮʼ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್, ಕಲ್ಯಾಣಿ, ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ, ವಿನೋದ್, ಗೌತಮ್ ಸಾಹಸ, ಧನು ನೃತ್ಯ ಭೀಮನಿಗಿದೆ.
ಕೃಷ್ಣ ಸಾರ್ಥಕ್, ಜಗದೀಶ್ ಗೌಡ ನಿರ್ಮಾಣ ಮಾಡಿರುವ ʼಭೀಮʼ ಚಿತ್ರರಂಗದಲ್ಲಿ ದೊಡ್ಡ ನಿರೀಕ್ಷೆಯನ್ನ ಹುಟ್ಟಿಸಿದೆ.

ಭೈರತಿ ರಣಗಲ್

ʻಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ (Bhairathi Ranagal) ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವರಾಜ್‌ಕುಮಾರ್‌. ವೇದ ಸಿನಿಮಾ ಬಳಿಕ ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ. ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ. ಭೈರತಿ ರಣಗಲ್ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು. ರವಿ ಬಸ್ರೂರು ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

Continue Reading
Advertisement
Bangalore Rain
ಕರ್ನಾಟಕ2 mins ago

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Karnataka Rain
ಮಳೆ21 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Rishab Shetty Shivamma Yarehanchinala Official Trailer out
ಸ್ಯಾಂಡಲ್ ವುಡ್24 mins ago

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Mira Road Tragedy
ಕ್ರೀಡೆ29 mins ago

Mira Road Tragedy: ಸಿಕ್ಸರ್​ ಬಾರಿಸಿ ಮರು ಕ್ಷಣವೇ ಪ್ರಾಣ ಕಳೆದುಕೊಂಡ ಕ್ರಿಕೆಟಿಗ​; ದುರಂತ ವಿಡಿಯೊ ವೈರಲ್​

Shivamogga Lok Sabha Constituency
ಶಿವಮೊಗ್ಗ35 mins ago

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Pakistan Army
ವಿದೇಶ36 mins ago

Pakistan Army: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳಾ ಬ್ರಿಗೇಡಿಯರ್ ಆಗಿ ಇತಿಹಾಸ ಬರೆದ ಡಾ. ಹೆಲೆನ್ ಮೇರಿ

Self Harming
ಕ್ರೈಂ48 mins ago

Self Harming: ಐಎಎಸ್‌ ದಂಪತಿ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

mlc election nomination
ಪ್ರಮುಖ ಸುದ್ದಿ55 mins ago

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

Snake Rescue Snakes spotted in heavy rain
ಮಳೆ57 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Riyan Parag
ಕ್ರಿಕೆಟ್1 hour ago

Riyan Parag: ಟಿ20 ವಿಶ್ವಕಪ್​ ನೋಡಲಾರೆ ಎಂದ ‘ಹಾಟ್​ ಫೇವರಿಟ್’ ರಿಯಾನ್​ ಪರಾಗ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ57 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌