Site icon Vistara News

Filmfare South 2024: ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್; `ಡೇರ್​ಡೆವಿಲ್ ಮುಸ್ತಫಾ’ ಬೆಸ್ಟ್‌ ಫಿಲ್ಮ್‌, ರಕ್ಷಿತ್ ಶೆಟ್ಟಿ ಅತ್ಯುತ್ತಮ ನಟ!

Filmfare South 2024 Daredevil Mustafa is the best film, Rakshit Shetty is the best actor

ಬೆಂಗಳೂರು: ಫಿಲ್ಮ್‌ಫೇರ್ ದಕ್ಷಿಣ 2024 (Filmfare South 2024) ಪ್ರಶಸ್ತಿ ಆಗಸ್ಟ್ 03ರದು ಬೆಂಗಳೂರಿನಲ್ಲಿಯೇ ಅದ್ಧೂರಿಯಾಗಿ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ಮಮ್ಮುಟಿ, ವಿಕ್ರಂ, ಬ್ರಹ್ಮಾನಂದಂ, ಸಿದ್ಧಾರ್ಥ್, ನಟಿ ಕೀರ್ತಿ ಸುರೇಶ್ ಇನ್ನೂ ಹಲವಾರು ಮಂದಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿದ್ದರು. 2024ರ ಫಿಲ್ಮ್‌ಫೇರ್‌ ಅವಾರ್ಡ್ಸ್‌ ಸೌತ್‌ 2024ಕ್ಕೆ ಹಲವು ಸಿನಿಮಾಗಳು ಮತ್ತು ಕಲಾವಿದರನ್ನು ನಾಮನಿರ್ದೇಶನಗೊಳಿಸಲಾಗಿತ್ತು. ಈ ಕುರಿತ ಸಂಪೂರ್ಣ ಪಟ್ಟಿ ಪ್ರಕಟವಾಗಿದೆ. ನಾಮನಿರ್ದಶನಗೊಂಡ ಪಟ್ಟಿಯಲ್ಲಿ ಡೇರ್ ಡೆವಿಲ್ ಮುಸ್ತಫಾ, ಕಾಟೇರ, ಕೌಸಲ್ಯ ಸುಪ್ರಜಾ ರಾಮ, ಸಪ್ತ ಸಾಗರದಾಚೆ ಎಲ್ಲೋ ಸಿನಿಮಾಗಳು ಸೇರಿದ್ದವು. ಕನ್ನಡದ ಪಟ್ಟಿ ಇಲ್ಲಿವೆ.

ಅತ್ಯುತ್ತಮ ಸಿನಿಮಾ: ಡೇರ್​ಡೆವಿಲ್ ಮುಸ್ತಫಾ

ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೋ)

ಅತ್ಯುತ್ತಮ ನಟಿ: ಸಿರಿ ರವಿಕುಮಾರ್ (ಸ್ವಾತಿ ಮುತ್ತಿನ ಮಳೆ ಹನಿಯೇ)

ಅತ್ಯುತ್ತಮ ನಿರ್ದೇಶಕ: ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಸಿನಿಮಾ ವಿಮರ್ಶಕರ ಆಯ್ಕೆ: ಪಿಂಕಿ ಎಲ್ಲಿ?

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಮೈಸೂರು ಪೂರ್ಣ (ಆರ್ಕೆಸ್ಟ್ರಾ ಮೈಸೂರು)

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಇದನ್ನೂ ಓದಿ: Raayan Movie: ಎಂಟೇ ದಿನಕ್ಕೆ ‘100 ಕೋಟಿ ಕ್ಲಬ್‌’ ಸೇರಿದ ಧನುಷ್ ನಟನೆಯ’ರಾಯನ್‌’ ಸಿನಿಮಾ!

ಅತ್ಯುತ್ತಮ ಪೋಷಕ ನಟ: ರಂಗಾಯಣ ರಘು (ಟಗರು ಪಲ್ಯ)

ಅತ್ಯುತ್ತಮ ಪೋಷಕ ನಟಿ: ಸುಧಾ ಬೆಳವಾಡಿ (ಕೌಸಲ್ಯ ಸುಪ್ರಜಾ ರಾಮ)

ಅತ್ಯುತ್ತಮ ಹೊಸ ನಟ: ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫ)

ಅತ್ಯುತ್ತಮ ಹೊಸ ನಟಿ: ಅಮೃತಾ ಪ್ರೇಮ್ (ಟಗರು ಪಲ್ಯ)

ಅತ್ಯುತ್ತಮ ಹಾಡುಗಳು: ಚರಣ್ ರಾಜ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಸಾಹಿತ್ಯ: ಬಿಆರ್​ ಲಕ್ಷ್ಮಣರಾವ್ (ಯಾವ ಚುಂಬಕ, ಚೌಕಬಾರ)

ಅತ್ಯುತ್ತಮ ಗಾಯಕ: ಕಪಿಲ್ ಕಪಿಲನ್ (ನದಿಯೇ: ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕಿ: ಶ್ರೀಲಕ್ಷ್ಮಿ ಬೆಲಮಣ್ಣು (ಕಡಲನು ಕಾಣ ಹೊರಟ: ಸಪ್ತ ಸಾಗರದಾಚೆ ಎಲ್ಲೊ)

ಜೀವಮಾನ ಸಾಧನೆ: ಹಿರಿಯ ನಟ ಶ್ರೀನಾತ್‌.

Exit mobile version