For Registration Movie : ಸಂಬಂಧಗಳು ರಿಜಿಸ್ಟರ್ ಆಗುವಂತಹ ಸಿನಿಮಾ ʻFor Regn' ಟ್ರೈಲರ್‌ ಔಟ್‌! - Vistara News

ಸ್ಯಾಂಡಲ್ ವುಡ್

For Registration Movie : ಸಂಬಂಧಗಳು ರಿಜಿಸ್ಟರ್ ಆಗುವಂತಹ ಸಿನಿಮಾ ʻFor Regn’ ಟ್ರೈಲರ್‌ ಔಟ್‌!

For Registration Movie : ವಾಲಗದ ಮೂಲಕ ಇಡೀ ಚಿತ್ರತಂಡ ಸುದ್ದಿಗೋಷ್ಠಿಗೆ ಎಂಟ್ರಿ ಕೊಟ್ಟಿದ್ದು, ವಿಶೇಷವಾಗಿತ್ತು. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

VISTARANEWS.COM


on

For Registration Movie Trailer Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘‘ಫಾರ್ ರಿಜಿಸ್ಟ್ರೇಷನ್”(For Registration Movie) ಸ್ಯಾಂಡಲ್‌ವುಡ್‌ನಲ್ಲಿ ಹಲವು ವಿಚಾರಗಳಿಂದ ಸದ್ದು ಮಾಡುತ್ತಿರುವ ಹೊಸ ಸಿನಿಮಾ. ಪೃಥ್ವಿ ಅಂಬಾರ್ ಹಾಗೂ ಮಿಲನ ನಾಗರಾಜ್ ನಟಿಸಿರುವ ಬಹುನಿರೀಕ್ಷಿತ ಚಿತ್ರದ ಮೊದಲ ನೋಟ ಅನಾವರಣಗೊಂಡಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದ ಸಂಘದಲ್ಲಿ ಟ್ರೈಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ವಾಲಗದ ಮೂಲಕ ಇಡೀ ಚಿತ್ರತಂಡ ಸುದ್ದಿಗೋಷ್ಠಿಗೆ ಎಂಟ್ರಿ ಕೊಟ್ಟಿದ್ದು, ವಿಶೇಷವಾಗಿತ್ತು. ನಿರ್ದೇಶಕರಾದ ಶಶಾಂಕ್ ಹಾಗೂ ಚೇತನ್ ಕುಮಾರ್ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಟ್ರೈಲರ್‌ ಬಿಡುಗಡೆ ಬಳಿಕ ಮಾತನಾಡಿ ನಟ ಪೃಥ್ವಿ ಅಂಬಾರ್ ಮಾತನಾಡಿ, ʻʻಫಾರ್ ರಿಜಿಸ್ಟ್ರೇಷನ್ ಎರಡು ಸಹಪಾಠಿಗಳ ಪ್ರಯತ್ನ ಇದು. ಇಬ್ಬರು ನವೀನ್ ಅವರ ಕನಸಿನ ಕೂಸು ಇದು. ತುಂಬಾ ಹಾರ್ಡ್ ವರ್ಕ್ ಆಗಿದೆ. ಈ ಚಿತ್ರಕ್ಕಾಗಿ. ಫಾರ್ ರಿಜಿಸ್ಟ್ರೇಷನ್ ಬಗ್ಗೆ ಗೊತ್ತಿರಬಹುದು. ಜಾಗ, ಗಾಡಿ ಅದು ಇದು ಅಂತಾ. ಮನಸ್ಸಿನಲ್ಲಿ ಸಂಬಂಧಗಳು ರಿಜಿಸ್ಟ್ರೇಷನ್ ಆಗಬೇಕು ಎನ್ನುವುದು ನಮ್ಮ ಆಸೆ. ಟ್ರೈಲರ್‌ ನೋಡಿದ್ದೀರಾ? ತುಂಬಾ ಚೆನ್ನಾಗಿ ಮೂಡಿಬಂದಿದೆ. ಈ ಸಿನಿಮಾ ಎಲ್ಲರಿಗೂ ಹತ್ತಿರವಾಗುತ್ತದೆ. ಎಲ್ಲಾ ಪಾತ್ರ ವರ್ಗವದವರು ಅದ್ಭುತವಾಗಿ ನಟಿಸಿದ್ದಾರೆʼʼ ಎಂದು ತಿಳಿಸಿದರು.

ಇದನ್ನೂ ಓದಿ: For Registration Movie : ಸಂಬಂಧಗಳು ರಿಜಿಸ್ಟರ್ ಆಗುವಂತಹ ಸಿನಿಮಾ ʻFor Regn’ ಟ್ರೈಲರ್‌ ಔಟ್‌!

ನಟಿ ಮಿಲನಾ ನಾಗರಾಜ್ ಮಾತನಾಡಿ, ʻʻನವೀನ್ ಸರ್ ಮನೆಗೆ ಬಂದು ಕಥೆ ವಿವರಿಸಿದರು. ತುಂಬಾ ತಯಾರಿಯಿಂದ ಬಂದಿದ್ದರು. ಫಸ್ಟ್ ಆಫ್ ಕಥೆ ಹೇಳಿ ನಿಲ್ಲಿಸಿಬಿಟ್ಟರು. ಕಂಟಿನ್ಯೂ ಮಾಡಿ ಎಂದಾಗ ನೀವು ಸಿನಿಮಾ ಒಪ್ಪಿಕೊಂಡರೇ ಕಥೆ ಹೇಳುವುದು ಎಂದರು. ಸರಿ ಸರ್ ಯೋಚನೆ ಮಾಡಿ ಹೇಳುತ್ತೇನೆ ಎಂದೆ. ಆಮೇಲೆ ಸಿನಿಮಾ ಮಾಡುತ್ತೇನೆ ಬಂದು ಕಥೆ ಹೇಳಿ ಅಂದಾಗ ಕಥೆ ಹೇಳಿದರು. ಒಂದು ರೀತಿ ಬ್ಲ್ಯಾಕ್‌ ಮೇಲ್‌ ಮಾಡಿ ಹೋಗಿದ್ದರು. ನಿರ್ಮಾಪಕರಾದ ನವೀನ್ ಸರ್ ಬಹಳ ಫ್ಯಾಷನೆಟೇಡ್ ನಿರ್ಮಾಪಕರು. ಬಹಳಷ್ಟು ಇಂಟರ್ ವ್ಯೂಗಳಲ್ಲಿಯೂ ಹೇಳಿದ್ದೇನೆ. ಟೈಟಲ್ ಕೊಡುವುದರಿಂದ ಹಿಡಿದು ಕಥೆಯಲ್ಲಿ ಸಂಪೂರ್ಣವಾಗಿ ಕುತಿದ್ದಾರೆ. ಪ್ರತಿ ಶಾರ್ಟ್, ಸೀನ್ಸ್ ತೊಡಗಿಸಿಕೊಳ್ಳುತ್ತಿದ್ದಾರೆ. ನನಗೆ ಮನಸ್ಸು ಪೂರ್ತಿಯಾಗಿ ಸಿನಿಮಾ ಗೆಲ್ಲಬೇಕು. ಇಂತಹ ನಿರ್ದೇಶಕರು, ನಿರ್ಮಾಪಕರು ಗೆಲ್ಲಬೇಕುʼʼ ಎಂದರು.

ಫಾರ್ ರಿಜಿಸ್ಟ್ರೇಷನ್ ಟ್ರೈಲರ್‌

ನಿರ್ಮಾಪಕರಾದ ನವೀನ್ ರಾವ್ ಮಾತನಾಡಿ, ʻʻಬಹಳ ಪ್ರೀತಿಯಿಂದ ಮಾಡಿರುವ ಸಿನಿಮಾವಿದು. ಎರಡು ತಿಂಗಳು ಚರ್ಚೆ ಬಳಿಕ ಕಥೆ ರೆಡಿ ಮಾಡಿಕೊಂಡೆವು. ಕಥೆ ಡಿಮ್ಯಾಂಡ್ ಮಾಡಿದಾಗ ನಾವು ಮೊದಲ ಭೇಟಿಯಾಗಿದ್ದು ಮಿಲನಾ ಮೇಡಂ ಅವರನ್ನು. ಅವರಿಗೆ ಕಥೆ ಹೇಳಿದೆವು. ಆ ನಂತರ ಪೃಥ್ವಿ ಸರ್ ಭೇಟಿ ಮಾಡಿ ಕಥೆ ಹೇಳಿದೆವು. ಎಲ್ಲಾ ಕಲಾವಿದರು ಸಹಕಾರದಿಂದ ಈ ಚಿತ್ರವಾಗಿದೆ. ಎಲ್ಲರೂ ಶ್ರಮಪಟ್ಟು ಸಿನಿಮಾ ಮಾಡಿದ್ದೇವೆ. ನನ್ನ ಕುಟುಂಬಸ್ಥರು ಸಪೋರ್ಟ್ ಆಗಿವೆ ನಿಂತಿದ್ದಾರೆ. ಕೃಷ್ಣ ಸರ್ ಮೇಡಂ..ಸಿನಿಮಾಗೆ ಸ್ಟ್ರೇಂಥ್ ಆಗಿದ್ದರು. ಇದೇ 23ಕ್ಕೆ ಸಿನಿಮಾ ರಿಲೀಸ್ ಮಾಡುತ್ತೇವೆ. ನೀವು ಎಲ್ಲರೂ ಸಹಕಾರ ಕೊಡಬೇಕು. ಈ ಚಿತ್ರದ ಬಳಿಕ ಮತ್ತೊಂದು ಚಿತ್ರಕ್ಕೆ ರೆಡಿಯಾಗುತ್ತಿದ್ದೇವೆʼ ಎಂದರು.

ನಿರ್ದೇಶಕ ನವೀನ್ ದ್ವಾರಕಾನಾಥ್ ಮಾತನಾಡಿ, ʻʻಹೊಸ ಪ್ರಯತ್ನ ಮಾಡಿದ್ದೇವೆ. ಬೆನ್ನು ತಟ್ಟಿ ಹಾರೈಸಿ. ತಪ್ಪಾಗಿದ್ದರೆ ಇನ್ನೊಮ್ಮೆ ಬೆನ್ನು ತಟ್ಟಿ ಹೇಳಿ ಚೆನ್ನಾಗಿ ಮಾಡಿ ಎಂದು ಹೇಳಿ ಮಾಡೋಣಾ. ನಾನು ಈ ಚಿತ್ರವನ್ನು ನನ್ನ ಗುರುಗಳಾದ ಸಿ ಆರ್ ಸಿಂಹ ಅವರಿಗೆ ಅರ್ಪಿಸುತ್ತೇನೆʼʼ ಎಂದು ತಿಳಿಸಿದರು.

ಸಂಬಂಧ ಮಹತ್ವ ಸಾರುವ ಫಾರ್ ರಿಜಿಸ್ಟ್ರೇಷನ್ ಟ್ರೈಲರ್‌ ಸಿನಿಮಾ ಮೇಲೆ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಳತ್ತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ: Kannada New Movie: ʻಕೈಲಾಸʼ ಸಿನಿಮಾದ ಕಿಕ್ಕೇರಿಸೋ ಟ್ರಾನ್ಸ್‌ ಹಾಡು ಬಿಡುಗಡೆ

ನಿಶ್ಚಲ್ ಫಿಲ್ಮ್ಸ್‌ ಬ್ಯಾನರ್‌ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲ್ಮ್ಸ್‌ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Shakhahaari Movie: ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ ಪಕ್ಕಾ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿದೆ. ವಿಮರ್ಶಕರ ಮೆಚ್ಚುಗೆ ಪಡೆದುಕೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾವ ಒಟಿಟಿಗೆ ಲಗ್ಗೆ ಇಡುತ್ತಿದೆ. ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

VISTARANEWS.COM


on

Shakhahaari Movie In OTT amzon Prime
Koo

ಬೆಂಗಳೂರು: ರಂಗಾಯಣ ರಘು ನಟನೆಯ ʻಶಾಖಾಹಾರಿʼ ಸಿನಿಮಾ (Shakhahaari Movie) ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿತ್ತು. ನಿರ್ದೇಶಕ ಸಂದೀಪ್ ಸುಂಕದ್ ಬೇರೊಂದು ದಿಕ್ಕಿನಲ್ಲಿ ಯೋಚಿಸಿ ಹೊಸತನಕ್ಕೆ ಒತ್ತುಕೊಟ್ಟು ಸಿನಿರಸಿಕರನ್ನು ರಂಜಿಸುವಲ್ಲಿ ಗೆದ್ದಿದ್ದಾರೆ. ಪಕ್ಕಾ ಪೈಸಾ ವಸೂಲ್ ಸಿನಿಮಾ ಎನಿಸಿಕೊಂಡಿರುವ ಶಾಖಾಹಾರಿ ರೋಚಕ ತಿರುವು, ಭಾವನಾತ್ಮಕ ಸಂಬಂಧ, ಪ್ರೀತಿ, ಸ್ನೇಹ, ನಂಬಿಕೆ ಇವೆಲ್ಲವುದರ ಬಗ್ಗೆ ಬಹಳ ಸೂಕ್ಷ್ಮವಾಗಿ ಪ್ರೇಕ್ಷಕರಿಗೆ ಮುಟ್ಟಿಸಿ ಎಲ್ಲಾ ರೀತಿಯ ರಸಾನುಭವ ನೀಡಿತ್ತು. ವಿಮರ್ಶಕರ ಮೆಚ್ಚುಗೆ ಪಡೆದುಕೊಂಡು ಉತ್ತಮ ಪ್ರದರ್ಶನ ಕಾಣುತ್ತಿದ್ದ ಈ ಸಿನಿಮಾವ ಒಟಿಟಿಗೆ ಲಗ್ಗೆ ಇಡುತ್ತಿದೆ. ಮೂಲಗಳ ಪ್ರಕಾರ ʻಶಾಖಾಹಾರಿʼ ಸಿನಿಮಾ (Shakhahaari Movie OTT) ಡಿಜಿಟಲ್‌ ರೈಟ್ಸ್‌ ಅಮೆಜಾನ್‌ ಪ್ರೈಂ (Amazon Prime) ಪಾಲಾಗಿದೆ. ಮುಂದಿನ ವಾರ ಒಟಿಟಿಗೆ ಕಾಲಿಡಿದೆ ಎಂದು ವರದಿಯಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿನ ಒಂದು ಪುಟ್ಟ ಗ್ರಾಮದಲ್ಲಿ ನಡೆಯುವ ಬಲು ರೋಚಕವಾದ ಕಥೆ ‘ಶಾಖಾಹಾರಿ’ . ಈ ಸಿನಿಮಾದ ಕಥಾನಾಯಕ ಸುಬ್ಬಣ್ಣ ಭಟ್‌ ರಂಗಾಯಣ ರಘು ಒಂದು ವೆಜಿಟೇರಿಯನ್ ಹೋಟೆಲ್ ನಡೆಸುತ್ತಾನೆ. ಆದರೆ ಅಲ್ಲಿ ನಡೆಯುವ ಕೆಲವು ಘಟನೆಗಳಿಂದಾಗಿ ಶಾಕಾಹಾರಿ ಹೋಟೆಲ್‌ನ ಇಮೇಜ್ ‘ಶಾಖಾಹಾರಿ’ಯಾಗಿ ಬದಲಾಗುತ್ತದೆ. ಇಂಥ ಒಗಟಿನಂತಹ ಟೈಟಲ್‌ ಹಿಂದಿರುವ ಕಥೆ ಏನು ಎಂಬುದು ಸಿನಿಮಾದ ತಿರುಳು.

ಇದನ್ನೂ ಓದಿ: Shakhahaari Movie: ಬೆಂಗಳೂರಿನಲ್ಲೇ ಕನ್ನಡದ “ಶಾಖಾಹಾರಿʼಯನ್ನು ಕೊಂದ ಮಲಯಾಳಂ ಸಿನಿಮಾ! ಕನ್ನಡಿಗರಿಗೇ ಸವಾಲ್‌!

ಶಾಖಾಹಾರಿ ಚಿತ್ರಕ್ಕೆ ಕಥೆ, ಸಂಭಾಷಣೆ ಬರೆದು ಸಂದೀಪ್ ಸುಂಕದ್ ಆಕ್ಷನ್ ಕಟ್ ಹೇಳಿದ್ದಾರೆ. ವಿಶ್ವಜಿತ್ ರಾವ್ ಕ್ಯಾಮೆರಾ. ಶಶಾಂಕ್ ನಾರಾಯಣ್ ಸಂಕಲನ, ಮಯೂರ್ ಅಂಬೇಕಲ್ಲು ಸಂಗೀತ ಚಿತ್ರಕ್ಕೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ.ನ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಗೋಪಾಲಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಹಾಗೇ ಸುಜಯ್ ಶಾಸ್ತ್ರಿ ಈ ಸಿನಿಮಾದ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನುಳಿದಂತೆ ಪ್ರತಿಮಾ ನಾಯಕ್, ಹರಿಣಿ, ವಿನಯ್ ಯು.ಜೆ., ಶ್ರೀಹರ್ಷ ಗೋಭಟ್ಟ, ನಿಧಿ ಹೆಗ್ಡೆ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Dhanya Ramkumar: ಕಿಶನ್ ಬಿಳಗಲಿ ಜತೆ ಡಾ. ರಾಜ್​ಕುಮಾರ್ ಮೊಮ್ಮಗಳ ಡ್ಯೂಯೆಟ್‌!

Dhanya Ramkumar: ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ.

VISTARANEWS.COM


on

Dhanya Ramkumar reels with Kishen Bilagali
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ಅದೆಷ್ಟೋ ಅಭಿಮಾನಿಗಳು ಅಣ್ಣಾವ್ರ ಸಿನಿಮಾ ಹಾಡಿಗೆ ರೀಲ್ಸ್‌ ಮಾಡಿ ಶೇರ್‌ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಧನ್ಯಾ ರಾಮ್‌ಕುಮಾರ್ ತಾತನಿಗೆ ವಿಭಿನ್ನವಾಗಿ ವಿಶ್‌ ಮಾಡಿ ಟ್ರಿಬ್ಯೂಟ್ ನೀಡಿದ್ದಾರೆ. ಬಿಗ್‌ಬಾಸ್ ಖ್ಯಾತಿಯ ಕಿಶನ್ ಬಿಳಗಲಿ (Kishen Bilagali) ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆಗೆ ಹೆಜ್ಜೆ ಹಾಕಿದ್ದಾರೆ.

ಇತ್ತೀಚಿಗೆ ನಟಿಯರ ಜತೆ ಕಿಶನ್ ಬಿಳಗಲಿ ಡ್ಯಾನ್ಸ್ ವಿಡಿಯೋಗಳು ಬಹಳ ಸದ್ದು ಮಾಡುತ್ತಿವೆ. ಆ ಲಿಸ್ಟ್‌ಗೆ ಇದು ಸೇರಿಕೊಂಡಿದೆ. ಚಿಕ್ಕಮಗಳೂರಿನ ಕಿಶನ್ ‘ಡ್ಯಾನ್ಸ್ ದಿವಾನೆ’ ಹಿಂದಿ ರಿಯಾಲಿಟಿ ಶೋ ವಿನ್ನರ್ ಸಹ ಆಗಿದ್ದರು. ಇದೀಗ ನಟಿ ಧನ್ಯಾ ರಾಮ್‌ಕುಮಾರ್ ಜತೆ ‘ರಾಜ ನನ್ನ ರಾಜ’ ಚಿತ್ರದ ಸೂಪರ್ ಹಿಟ್ ಗೀತೆ ʻನಿನದೇ ನೆನಪು ದಿನವೂ ಮನದಲ್ಲಿʼ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ರೆಟ್ರೋ ಲುಕ್‌ನಲ್ಲಿ ಇಬ್ಬರೂ ಮಿಂಚಿದ್ದಾರೆ. ಧನ್ಯಾ ಸೀರೆಯಲ್ಲಿ ಕಂಗೊಳಿಸಿದರೆ ಕಿಶನ್ ಬೆಲ್‌ಬಾಟಂ ಪ್ಯಾಂಟ್, ಪೋಲ್ಕಾ ಡಾಟ್ ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್‌ಕುಮಾರ್ ಹಾಗೂ ಆರತಿ ನಟನೆಯ ‘ರಾಜ ನನ್ನ ರಾಜ’ ಸಿನಿಮಾ 1976ರಲ್ಲಿ ತೆರೆಕಂಡಿತ್ತು.

ಇದನ್ನೂ ಓದಿ: Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

ಇದಕ್ಕೂ ಮುಂಚೆ ಬಿಗ್‌ಬಾಸ್‌ ಮಾಜಿ ಸ್ಪರ್ಧಿ, ಡ್ಯಾನ್ಸರ್‌ ಕಿಶನ್‌ ಬಿಳಗಲಿ (Kishen Bilagali) ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra J Achar) ಜತೆ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದರು. ಕಿಶನ್‌ ಬಿಳಗಲಿ ಈ ರೀತಿ ರೊಮ್ಯಾಂಟಿಕ್‌ ಹಾಡಿಗೆ ಸ್ಟೆಪ್ಸ್‌ ಹಾಕುವುದು ಹೊಸದೇನಲ್ಲ. ನಟಿ ನಮ್ರತಾ ಗೌಡ ಜತೆ ಈ ಹಿಂದೆ ಕೂಡ ಈ ರೀತಿ ನೃತ್ಯ ಮಾಡಿ ಪೋಸ್ಟ್‌ ಮಾಡಿದ್ದರು.

ʻನಿನ್ನ ಸನಿಹಕೆʼ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದರು ಧನ್ಯಾ. ನಿನ್ನ ಸನಿಹಕೆ ಬಳಿಕ ಧನ್ಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಹೈಡ್ & ಸೀಕ್’ ಸಿನಿಮಾಗೆ ಅನೂಪ್ ರೇವಣ್ಣ ಜತೆಗೆ ಧನ್ಯಾ ರಾಮ್‌ಕುಮಾರ್ ನಟಿಸಿದ್ದಾರೆ. ಸಿನಿಮಾ ಆಸಕ್ತಿ ಬಗ್ಗೆ ನಟಿ ಮಾಧ್ಯಮವೊಂದರಲ್ಲಿ ಮಾತನಾಡಿ ʻʻನಮ್ಮ ಕುಟುಂಬದಲ್ಲಿ ನಟಿಯಾಗುತ್ತಿರುವ ಮೊದಲ ಹುಡುಗಿ ನಾನು. ಈ ಹಿಂದೆ ಪಿಆರ್‌ ಆಗಿ ಕೆಲಸ ಮಾಡಿದೆ. ಆಗ ಇದು ನನ್ನ ಫೀಲ್ಡ್‌ ಅಲ್ಲ ಎನ್ನಿಸಿತು. ನಾನು ನಟಿಯಾಗ್ತೀನಿ ಅಂದಾಗ ನನ್ನ ಅಪ್ಪ, ಅಮ್ಮ ಇದರ ಬಗ್ಗೆ ಆಸಕ್ತಿ ತೋರಲಿಲ್ಲ. ಈಗ ಅವರಿಗೂ ಇಷ್ಟವಾಗಿದೆ. ನನಗೆ ನನ್ನ ಆಯ್ಕೆ ತಡವಾಯ್ತು ಎನ್ನಿಸುತ್ತಿಲ್ಲ. ಈ ಚಿತ್ರದ ಕಥೆ, ಪಾತ್ರ ನನಗೆ ಇಷ್ಟವಾದ ಕಾರಣ ಒಪ್ಪಿದೆ’ ಎಂದಿದ್ದರು.

Continue Reading

ಸ್ಯಾಂಡಲ್ ವುಡ್

Rajkumar Birth Anniversary: ಆತ್ಮಹತ್ಯೆಗೆ ಯತ್ನಿಸಿ ಅಡ್ಮಿಟ್‌ ಆದಾಗ ಅಣ್ಣಾವ್ರು ಆಶೀರ್ವಾದ ಮಾಡಿದ್ದರೆಂದ ಜಗ್ಗೇಶ್‌!

Rajkumar Birth Anniversary: ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

VISTARANEWS.COM


on

Rajkumar Birth Anniversary ​​Jaggesh said that Rajkumar blessed him when he was admitted due to suicide attempt
Koo

ಬೆಂಗಳೂರು: ಡಾ. ರಾಜ್​ಕುಮಾರ್ ಅವರ ಜನ್ಮದಿನ (Rajkumar Birth Anniversary) ಹಿನ್ನೆಲೆಯಲ್ಲಿ ನವರಸ ನಾಯಕ ಜಗ್ಗೇಶ್ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿದ್ದಾರೆ. ಡಾ. ರಾಜ್​ಕುಮಾರ್ (Dr Rajkumar) ಹಾಗೂ ಜಗ್ಗೇಶ್ ಕುಟುಂಬದ ನಡುವೆ ಒಳ್ಳೆಯ ಬಾಂಧವ್ಯ ಇದೆ. ಅದೇ ರೀತಿ ಪುನೀತ್‌ ಜತೆಗೂ ಇದೆ. ಈ ಸಂದರ್ಭದಲ್ಲಿ ಜಗ್ಗೇಶ್‌ ಅವರು ಹಳೆಯ ಘಟನೆಯೊಂದನ್ನು ನೆನಪಿಸಿಕೊಂಡರು.

‘ತರ್ಲೆ ನನ್ಮಗ’ ಸಿನಿಮಾ ಮೂಲಕ ಜಗ್ಗೇಶ್‌ ಖ್ಯಾತಿ ಗಳಿಸಿದ್ದರು. 1994ರ ಸಮಯದಲ್ಲಿ ಅವರ ಸಿನಿಮಾಗಳು ಫ್ಲಾಪ್ ಆದವು. ಇದರಿಂದ ಬೇಸರಗೊಂಡ ಜಗ್ಗೇಶ್ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಆ ವೇಳೆ ಅವರಿಗೆ ಆತ್ಮಸ್ಥೈರ್ಯ ತುಂಬಿದ್ದು ಅಣ್ಣಾವ್ರು ಎಂದು ಹೇಳಿಕೊಂಡರು.

ಜಗ್ಗೇಶ್‌ ಮಾತನಾಡಿ ʻʻನಮ್ಮ ತಂದೆ ಹಾಗೂ ರಾಜ್ ಕುಮಾರ್ ಅವರ ಮೂಗು ಸೇಮ್ ಇದೆ. ನನಗೆ ರಾಜಣ್ಣ ಅಂದ್ರೆ ಪಂಚ ಪ್ರಾಣ. ನಾನು ಅವರಲ್ಲಿ ಕಂಡಿದ್ದು ಏನಂದ್ರೆ ತಂದೆಯ ವಾತ್ಸಲ್ಯ. ನಾನು ಹೊಸದಾಗಿ ಮನೆ ಕಟ್ಟಿದೀನಿ ಬರ್ಬೇಕು ಅಂದಾಗ, ಸುಮಾರು 11 ಗಂಟೆಗೆ ಬಂದು ಆಶೀರ್ವದಿಸಿದ್ರು. ಮಧ್ಯಾಹ್ನ 3 ಗಂಟೆವರೆಗೂ ಕೂತು ಮಾತನಾಡಿದ್ರು. ಅನೇಕ ನೆನಪುಗಳು, ಒಡನಾಟ ಇವೆʼ ಎಂದರು.

ಇದನ್ನೂ ಓದಿ: Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

ʻʻ94ನೇ ಇಸವಿಯಲ್ಲಿ ನನ್ನ ಸಿನಿಮಾಗಳು ಫ್ಲಾಪ್ ಆದ ಸಮಯದಲ್ಲಿ ನಾನು ಆತ್ಮಹತ್ಯೆ ಪ್ರಯತ್ನ ಮಾಡಿದ್ದೆ. ಮಣಿಪಾಲ್ ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ರು. ಅಣ್ಣಾವ್ರು ಬಂದು ತಲೆ ಮೇಲೆ ಕೈ ಇಟ್ಟು ಒಳ್ಳೇದು ಆಗ್ಲಿ ಎಂದು ಆಶೀರ್ವಾದ ಮಾಡಿದ್ದರು. ಯಾವುದೇ ಕಾರಣಕ್ಕೂ ಅತಿಯಾದ ಆಸೆ ಬೇಡ. ಜಗತ್ತನ್ನು ಮೆಚ್ಚಿಸಿ ಬದುಕೋಕೆ ಹೋಗ್ಬಾರ್ದು ಎಂದು ನನಗೆ ದೊಡ್ಡ ಮಾನಸಿಕ ಧೈರ್ಯ ಕೊಟ್ಟಿದ್ದು ರಾಜ್ ಕುಮಾರ್. ಅಣ್ಣಾವ್ರ ಆಶೀರ್ವಾದದಿಂದ ನನ್ನ ಸಿನಿಮಾಗಳು ಹಿಟ್ ಆದವು. ರಾಜ್ ಕುಮಾರ್ ಅವರ ಕಡೆಯ ಜರ್ನಿಯಲ್ಲಿ ನಾನಿದ್ದೆ. ಅವರ ಮೃತದೇಹದ ಜತೆಗೆ ನಾನು ಇಡೀ ದಿನ ಇದ್ದೆʼʼ ಎಂದರು.

ಇದನ್ನೂ ಓದಿ: PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

ಈಗಾಗಲೇ ದೊಡ್ಮನೆ ಕುಟುಂಬ ರಾಜ್ ಕುಮಾರ್ ಸಮಾಧಿಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಬದುಕಿದ್ದಾಗ ನೇತ್ರದಾನದ ಮೂಲಕ ಜಾಗೃತಿ ಮೂಡಿಸಿದ್ದ ರಾಜ್‌ಕುಮಾರ್‌, ತಮ್ಮ ನಿಧನದ ಬಳಿಕ ಕಣ್ಣುಗಳನ್ನು ದಾನ ಮಾಡಿದ್ದರು. ಈಗ ಪ್ರತಿ ವರ್ಷದಂತೆ, ಸಮಾಧಿ ಬಳಿ ನೇತ್ರದಾನ ನೋಂದಣಿ, ರಕ್ತದಾನ, ಅನ್ನದಾನದ ಕಾರ್ಯಗಳು ನಡೆಯಲಿವೆ. ಪುಣ್ಯಭೂಮಿಗೆ ಬರುವ ಅಭಿಮಾನಿಗಳಿಗೆ ಅಭಿಮಾನಿಗಳಿಂದಲೇ ಅನ್ನದಾನ ನೆರವೇರಲಿದೆ. ಅಷ್ಟೇ ಅಲ್ಲ ಬೆಂಗಳೂರಿನ ಪ್ರತಿ ಗಲ್ಲಿ ಗಲ್ಲಿಗಳಲ್ಲಿರುವ ಡಾ. ರಾಜ್‌ ಪ್ರತಿಮೆಗಳಿಗೂ ಇಂದು ವಿಶೇಷ ಅಲಂಕಾರ ಆಗುತ್ತಿದೆ. ಜತೆಗೆ ಅನ್ನ ಸಂತರ್ಪಣೆಯಂಥ ಕಾರ್ಯಕ್ರಮಗಳು ನಡೆಯಲಿವೆ.

Continue Reading

ಸಿನಿಮಾ

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

Harshika Poonacha: ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

VISTARANEWS.COM


on

Harshika Poonacha bhuvan ponnanna met pralhad joshi
Koo

ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ (Harshika Poonacha) ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಏ.24) ಹುಬ್ಬಳ್ಳಿಯಲ್ಲಿ ಸಚಿವ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದೊರಕಿಸಿ ಕೊಡುವಂತೆ ಸಚಿವರೆದುರು ಮೊರೆ ಇಟ್ಟರು. ದಂಪತಿ ಜತೆ ನಾವಿದ್ದೇವೆ ಎಂದು ಜೋಶಿಯವರು ಧೈರ್ಯ ತುಂಬಿದರು.

ಬೆಂಗಳೂರಿನ ಫ್ರೆಜರ್ ಟೌನ್‌ನಲ್ಲಿ ನಡೆದ ದೌರ್ಜನ್ಯ ಘಟನೆ ಬಳಿಕ ನಟಿ ಹರ್ಷಿಕಾ ಪೂರ್ಣಚ್ಚ ಮತ್ತು ಭುವನ್ ಪೊನ್ನಣ್ಣ ದಂಪತಿ ಬುಧವಾರ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದರು. ಸೂಕ್ತ ಕ್ರಮಕ್ಕೆ ಮನವಿ ಮಾಡಿದರು.

ʻʻನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ.‌ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆʼʼ ಎಂದು ಸಚಿವರೆದುರು ಹೇಳಿದರು.

ʻʻನಮಗೆ ಆದಂತೆ ಬೇರೆ ಯಾರಿಗೂ ಈ ಘಟನೆ ಸಂಭವಿಸಿಬಾರದು. ಹೀಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆʼʼ ಎಂದು ಹರ್ಷಿಕಾ ಪೂಣಚ್ಚ ಮಾಧ್ಯಮಗಳಿಗೆ ತಿಳಿಸಿದರು.

ಇದನ್ನೂ ಓದಿ: Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

ಏನಿದು ಘಟನೆ?

ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ನಡೆದಿತ್ತು. ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ್ದರು. ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಘಟನೆ ನಡೆದಿತ್ತು. ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದರು ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದರು. ಘಟನೆ ಕುರಿತು ಹರ್ಷಿಕ ಪೂಣಚ್ಚ ಅವರು ಸೋಷಿಯಲ್‌ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಈ ಘಟನೆ ವಿರುದ್ಧ ಜನರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಸುದ್ದಿ ವೈರಲ್‌ ಆಗಿತ್ತು. ರಾಜ್ಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ಪತ್ರಿಕೆಗಳಲ್ಲೂ ಘಟನೆಯ ಕುರಿತು ವರದಿಯಾಗಿತ್ತು.

Continue Reading
Advertisement
Rahul Gandhi
ದೇಶ15 mins ago

Rahul Gandhi: ಅಮೇಥಿಯಲ್ಲಿ ರಾಹುಲ್‌ ಗಾಂಧಿ ಸ್ಪರ್ಧೆ ಖಚಿತ; ಸ್ಮೃತಿ ಇರಾನಿಗೆ ಕೈ ನಾಯಕ ಸವಾಲು!

DC vs GT
ಕ್ರೀಡೆ23 mins ago

DC vs GT: ಕೊಹ್ಲಿಯಂತೆ ಅದ್ಭುತ ಫೀಲ್ಡಿಂಗ್​ ನಡೆಸಿ ಡೆಲ್ಲಿಗೆ ಗೆಲುವು ತಂದ ಟ್ರಿಸ್ಟಾನ್ ಸ್ಟಬ್ಸ್

Heeramandi Premiere Farida Jalal rare public appearance
ಬಾಲಿವುಡ್23 mins ago

Heeramandi Premiere: ʻಹೀರಾಮಂಡಿʼ ಪ್ರೀಮಿಯರ್‌ನಲ್ಲಿ ಅಪರೂಪವಾಗಿ ಕಂಡ ʻಕಭಿ ಖುಷಿ ಕಭಿ ಗಮ್ʼ ಸಿನಿಮಾ ನಟಿ!

Murder case In davanagere
ದಾವಣಗೆರೆ23 mins ago

Murder Case : ಮನೆ ಹಾಳು ಮಾಡಿದ ಕುಡಿತ; ತಾಯಿ ಸಾವಿಗೆ, ತಂದೆಯ ಕೊಂದ ಮಗ!

Election Commission
ದೇಶ41 mins ago

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

arunachal pradesh landslide
ವೈರಲ್ ನ್ಯೂಸ್59 mins ago

Arunachal Pradesh landslide: ಅರುಣಾಚಲದಲ್ಲಿ ಭೂಕುಸಿತ, ಚೀನಾ ಗಡಿ ಪ್ರದೇಶಕ್ಕೆ ಸಂಪರ್ಕ ಬಂದ್‌

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Virender Sehwag
ಕ್ರೀಡೆ1 hour ago

Virender Sehwag: ಬಡ ದೇಶದ ಕ್ರಿಕೆಟ್​ ಲೀಗ್​ ಆಡಲ್ಲ ಎಂದ ವೀರೇಂದ್ರ ಸೆಹವಾಗ್; ಕಾರಣವೇನು?

Guru Raghavendra and Vasishta Co operative Bank fraud handed over to SIT says DK Shivakumar
ಬೆಂಗಳೂರು1 hour ago

Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

Shakhahaari Movie In OTT amzon Prime
ಸ್ಯಾಂಡಲ್ ವುಡ್1 hour ago

Shakhahaari Movie: ಒಟಿಟಿಗೆ ಎಂಟ್ರಿ ಕೊಡ್ತಿದೆ ʻಶಾಖಾಹಾರಿʼ ಸಿನಿಮಾ! ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder case CID Officer
ಹುಬ್ಬಳ್ಳಿ1 hour ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20243 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

ಟ್ರೆಂಡಿಂಗ್‌