Ghatashraddha Movie: ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಪ್ರಶಸ್ತಿ! - Vistara News

ಸ್ಯಾಂಡಲ್ ವುಡ್

Ghatashraddha Movie: ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಪ್ರಶಸ್ತಿ!

Ghatashraddha Movie: ಭಾರತೀಯ ಸಿನಿಮಾದ ಶತಮಾನೋತ್ಸವ ಸಂಧರ್ಭದಲ್ಲಿ ಶತಮಾನದ 20 ಶ್ರೇಷ್ಠ ಚಿತ್ರಗಳಲ್ಲಿ ಒಂದೆಂದು ಪರಿಗಣಿತವಾದ ಈ ಚಿತ್ರ ಅನೇಕ ಅಂತಾರಾಷ್ಟೀಯ ಮನ್ನಣೆ ಗಳಿಸಿತ್ತು. ಇದೀಗ ಅದಕ್ಕೆ ಪುನರುಜ್ಜೀವನ (ರೆಸ್ಟೋರೇಷನ್)ದ ಅವಕಾಶ ಸಿಕ್ಕಿದೆ.

VISTARANEWS.COM


on

Girish Kasaravalli first film Ghatashraddha is another feather
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗಿರೀಶ್ ಕಾಸರವಳ್ಳಿಯವರು 1978ರಲ್ಲಿ ನಿರ್ದೇಶಿಸಿದ್ದ ಡಾ.ಯು. ಆರ್. ಅನಂತಮೂರ್ತಿಯವರ ಕತೆ ಆಧರಿಸಿದ ಚಿತ್ರ ʻಘಟಶ್ರಾದ್ಧʼ ಹಲವು ಪ್ರಥಮಗಳನ್ನು ಕನ್ನಡಕ್ಕೆ ತಂದುಕೊಟ್ಟ ಚಿತ್ರ. 90 ವರ್ಷಗಳ ಕನ್ನಡ ಚಿತ್ರ ಇತಿಹಾಸದಲ್ಲಿ ಕನ್ನಡದ ಆರು ಚಿತ್ರಗಳಿಗೆ ಮಾತ್ರ ರಾಷ್ಟ್ರಪತಿಗಳ ಸ್ವರ್ಣ ಕಮಲ ಲಭ್ಯವಾಗಿದ್ದು, ಅವುಗಳಲ್ಲಿ ನಾಲ್ಕು ಕಾಸರವಳ್ಳಿ ನಿರ್ದೇಶನದ ಚಿತ್ರಗಳಾಗಿವೆ. ʻಘಟಶ್ರಾದ್ಧʼ ಆ ಸರಣಿಯಲ್ಲಿ ಮೊದಲನೆಯದು. ಭಾರತೀಯ ಸಿನಿಮಾದ ಶತಮಾನೋತ್ಸವ ಸಂದರ್ಭದಲ್ಲಿ ಶತಮಾನದ 20 ಶ್ರೇಷ್ಠ ಚಿತ್ರಗಳಲ್ಲಿ ಒಂದೆಂದು ಪರಿಗಣಿತವಾದ ಈ ಚಿತ್ರ ಅನೇಕ ಅಂತಾರಾಷ್ಟ್ರೀಯ ಮನ್ನಣೆ ಗಳಿಸಿತ್ತು. ಇದೀಗ ಅದಕ್ಕೆ ಪುನರುಜ್ಜೀವನದ ಅವಕಾಶ ಸಿಕ್ಕಿದೆ.

ಜಾಗತಿಕ ಸಿನಿಮಾದ ಶ್ರೇಷ್ಠ ನಿರ್ದೇಶಕರೊಲ್ಲೊಬ್ಬರಾದ ಹಾಲಿವುಡ್ ಚಿತ್ರರಂಗದ ಮಾರ್ಟಿನ್ ಸ್ಕಾರ್ಸೆಸಿಯವರ ಸಿನಿಮಾ ಫೌಂಡೇಷನ್ ಮತ್ತು ಶಿವೇಂದ್ರ ಸಿಂಗ್ ಅವರ ಫಿಲ್ಮ್ ಹೆರಿಟೇಜ್ ಫೌಂಡೇಷನ್ ಜಂಟಿಯಾಗಿ ಕೈಗೆತ್ತಿಕೊಂಡಿರುವ ಈ ಪ್ರಾಜೆಕ್ಟ್‌ಗೆ ಕೈಜೋಡಿಸಿದ ಸಂಸ್ಥೆ ಹಾಲಿವುಡ್ ಚಿತ್ರರಂಗದ ಸ್ಟಾರ್‌ವಾರ್ಸ್ ಚಿತ್ರ ಸರಣಿಯ ನಿರ್ದೇಶಕ ಜಾರ್ಜ್ ಲ್ಯೂಕಾಸ್ ತಮ್ಮ ಪತ್ನಿಯ ಜತೆ ಸೇರಿ ರೂಪಿಸಿದ ಹಾಬ್ಸನ್- ಲ್ಯೂಕಾಸ್ ಫೌಂಡೇಶನ್.

ಮಾರ್ಟಿನ್ ಸ್ಕಾರ್ಸೆಸಿಯವರ ಸಿನಿಮಾ ಫೌಂಡೇಷನ್‌ನ ವಿಶ್ವ ಸಿನಿಮಾ ಪ್ರಾಜೆಕ್ಟ್‌ನಲ್ಲಿ ಜಾಗತಿಕ ಸಿನಿಮಾ ರಂಗದಲ್ಲಿನ ಶ್ರೇಷ್ಠ ಚಿತ್ರಗಳನ್ನು ಹುಡುಕಿ ಅವುಗಳ ಪುನರುಜ್ಜೀವನ ಮಾಡುತ್ತಿದೆ. ಆ ಯೋಜನೆಯಲ್ಲಿ ಭಾರತದಿಂದ ಆಯ್ಕೆಯಾದ ಮೂರನೆಯ ಚಿತ್ರ ಘಟಶ್ರಾದ್ಧ. ಈಗಾಗಲೇ ಅವರು ಅರವಿಂದನ್ ನಿರ್ದೇಶನದ ಮಲಯಾಳಂ ಚಿತ್ರ ‘ತಂಪ್’ ಹಾಗೂ ಅರಿಭಾಮ್ ಶ್ಯಾಂ ಶರ್ಮ ಅವರ ಮಣಿಪುರಿ ಭಾಷೆಯ ‘ಇಶಾನು’ ಚಿತ್ರಗಳ ಪುನರುಜ್ಜೀವನವನ್ನು ಕೈಗೆತ್ತಿಕೊಂಡಿತ್ತು. ಈ ಎರಡೂ ಚಿತ್ರಗಳೂ ಈ ವರ್ಷದ ಕ್ಯಾನೆ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿದ್ದವು.

ಇದನ್ನೂ ಓದಿ: Ballari News : ಕನ್ನಡದ ಒಳ್ಳೆಯ ಚಿತ್ರಗಳು ಕನ್ನಡಿಗರಿಗೆ ಮುಟ್ಟಬೇಕು: ಗಿರೀಶ್ ಕಾಸರವಳ್ಳಿ

ಈ ಸಾಲಿನ ಬಿ.ವಿ.ಕಾರಂತ ಪ್ರಶಸ್ತಿ ಪಡೆದ ಖ್ಯಾತ ರಂಗಕರ್ಮಿ ಸದಾನಂದ ಸುವರ್ಣ ನಿರ್ಮಿಸಿದ ಈ ಚಿತ್ರಕ್ಕೆ ಎಸ್.ರಾಮಚಂದ್ರ ಐತಾಳ್‌ರ ಛಾಯಾಗ್ರಹಣ, ಬಿ.ವಿ.ಕಾರಂತರ ಸಂಗೀತ. ಕೆ.ವಿ.ಸುಬ್ಬಣ್ಣನವರ ಕಲಾನಿರ್ದೇಶನ ಇದ್ದು ಮೀನಾ, ಅಜಿತ್ ಕುಮಾರ್, ನಾರಾಯಣ ಭಟ್, ಬಿ. ಸುರೇಶ ಮೊದಲಾದವರ ಅಭಿನಯವಿತ್ತು.
ಈ ಚಿತ್ರದ ಪುನರುಜ್ಜೀವನ ಮಾಡಲು ಕಾಸರವಳ್ಳಿಯವರ ಚಿತ್ರಗಳ ಬಗ್ಗೆ ವಿಶೇಷ ಒಲವು ಇರುವ ಶಿವೇಂದ್ರ ಸಿಂಗ್ ಅವರ ಫಿಲ್ಮ್ ಹೆರಿಟೇಜ್ ಫೌಂಡೇಷನ್‌ನ ಶ್ರಮ ಉಲ್ಲೇಖಾರ್ಹವಾಗಿದೆ. ಕಾಸರವಳ್ಳಿಯವರು ತಮ್ಮೆಲ್ಲ ಚಿತ್ರಗಳ ಹಾಗೂ ಚಿತ್ರ ಸಾಮಗ್ರಿಗಳನ್ನು ಈ ಫೌಂಡೇಷನ್‌ಗೆ ನೀಡಿದ್ದು ಆ ಸಂಸ್ಥೆ ಆ ಸಾಮಗ್ರಿಗಳನ್ನು ಎಚ್ಚರದಿಂದ ಸಂರಕ್ಷಿಸುವ ಹೊಣೆ ಹೊತ್ತಿದೆ.

ಸುಮಾರು 8 ತಿಂಗಳ ಕಾಲ ಹಿಡಿಯುವ ಈ ಪುನರುಜ್ಜೀವನ ಕೆಲಸವನ್ನು ವಿಶ್ವದ ಪ್ರತಿಷ್ಠಿತ ಸಿನಿಮಾ ಪುನರುಜ್ಜೀವನ ಸಂಸ್ಥೆಯಾದ ಇಟಲಿಯ ಲ ಇಮ್ಯಾಜಿನ್ ರಿಟ್ರೋವಟ ಕೈಗೆತ್ತಿಕೊಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

Martin Movie: ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಸಿನಿಮಾ ಶೂಟಿಂಗ್‌ ಆರಂಭವಾಗಿ ಮೂರು ವರ್ಷವಾದರೂ ಮುಗಿಯುವುದು ನಾನಾ ಕಾರಣಕ್ಕೆ ತಡವಾಗುತ್ತಲೇ ಬಂದಿದೆ. ಇದೀಗ ಚಿತ್ರದ ವಿಎಫ್‌ಎಕ್ಸ್‌ಗಾಗಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

VISTARANEWS.COM


on

Martin Movie
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿರುವ ನಡುವೆ ಚಿತ್ರ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ ಎದುರಾಗಿದೆ. ಚಿತ್ರದ ವಿಎಫ್‌ಎಕ್ಸ್‌ಗಾಗಿ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಕಂಪನಿಗೆ ನಿರ್ಮಾಪಕ ನೀಡಿದ್ದ 2.5 ಕೋಟಿ ರೂ.ಗಳಲ್ಲಿ ನಿರ್ದೇಶಕ ಎ.ಪಿ. ಅರ್ಜುನ್‌ 50 ಲಕ್ಷ ರೂ. ಕಮಿಷನ್‌ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೀಗಾಗಿ ನಿರ್ದೇಶಕನ ಬಂಧನ ಸಾಧ್ಯತೆ ಇದೆ ಎಂಬ ಮಾತುಗಳು ಚಂದನವನದ ಅಂಗಳದಲ್ಲಿ ಕೇಳಿಬರುತ್ತಿವೆ.

ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಸರ್ಜಾ ಅವರ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದಿದ್ದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಇತ್ತೀಚೆಗೆ ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ್ದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದರು. ಆದರೆ, ಇದೀಗ ವಿಚಾರಣೆ ವೇಳೆ ನಿರ್ದೇಶಕ ಅರ್ಜುನ್‌ಗೆ ಕಮಿಷನ್ ನೀಡಿರುವುದಾಗಿ ಆರೋಪಿ ಸುನಿಲ್ ರೆಡ್ಡಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Samantha Ruth Prabhu: ಆ.1ಕ್ಕೆ ‘ಸಿಟಾಡೆಲ್’ ಬಿಗ್‌ ಅಪ್‌ಡೇಟ್‌ : ಸಮಂತಾ ಫ್ಯಾನ್ಸ್‌ಗೆ ಸಿಗಲಿದೆ ಗುಡ್‌ ನ್ಯೂಸ್‌!

ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯ ರೆಡ್ಡಿಯನ್ನು ಬಂಧಿಸಿದ್ದರು. ಆದರೆ, ವಿಎಫ್‌ಎಕ್ಸ್ ಕೆಲಸವನ್ನು ತಮಗೆ ನೀಡಲು ನೀಡಲು ಅರ್ಜುನ್ ನಮ್ಮಿಬ್ಬರಿಂದ 50 ಲಕ್ಷ ರೂ. ಕಮಿಷನ್ ಪಡೆದಿದ್ದಾರೆ ಎಂದು ಸುನಿಲ್ ಆರೋಪಿಸಿದ್ದಾರೆ. ಇನ್ನು ಅಕ್ಟೋಬರ್ 11ಕ್ಕೆ ವಿಶ್ವದಾದ್ಯಂತ ‘ಮಾರ್ಟಿನ್’ ಬಿಡುಗಡೆಗೆ ತಯಾರಿ ನಡೆದಿದ್ದು, ನಟ ಧ್ರುವ ಸರ್ಜಾ ಡಬ್ಬಿಂಗ್ ಮಾಡುವಾಗಲೂ ನಿರ್ದೇಶಕ ಅರ್ಜುನ್ ಗೈರಾಗಿದ್ದರು. ಈ ಹಿಂದೆಯೂ ಮಾರ್ಟಿನ್ ಚಿತ್ರತಂಡದಲ್ಲಿ ಮನಸ್ತಾಪಗಳಿವೆ ಎಂಬ ಮಾತುಗಳು ಕೇಳಿಬಂದಿದ್ದವು. ಇದೀಗ ನಿರ್ಮಾಪಕ ಉದಯ್ ಮೆಹ್ತಾ ಹಾಗೂ ನಿರ್ದೇಶಕ ಎ.ಪಿ. ಅರ್ಜುನ್ ನಡುವೆ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಎನ್ನಲಾಗಿದೆ.

ದರ್ಶನ್ ನಾಯಕನಾಗಿ ನಟಿಸಿದ ಐರಾವತ ಚಿತ್ರದ ಮೇಕಿಂಗ್ ಸೇರಿ ಅರ್ಜುನ್ ವಿರುದ್ಧ ಈ ಹಿಂದೆ ಇದೇ ರೀತಿಯ ಆರೋಪಗಳು ಕೇಳಿಬಂದಿತ್ತು. ಅರ್ಜುನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಮತ್ತು ದರ್ಶನ್ ನಡುವೆ ಭಿನ್ನಾಭಿಪ್ರಾಯದ ವದಂತಿಗಳು ಕೇಳಿಬಂದಿದ್ದವು.

ಇದನ್ನೂ ಓದಿ | Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದರು. ಇಷ್ಟಾದರೂ ಇದೀಗ ಸಿನಿಮಾ ಅಕ್ಟೋಬರ್ 11ಕ್ಕೆ ಮಿಂಚಲು ರೆಡಿಯಾಗಿದೆ. ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: “ಪೌಡರ್” ತಂಡದಿಂದ ಹೊರ ಬಿತ್ತು ಹೊಸ ಹಾಡು; “ಪರಪಂಚವೇ ಘಮ ಘಮ”!

Kannada New Movie: ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

VISTARANEWS.COM


on

Kannada New Movie Parapancha Gama Gama Powder song out
Koo

ಬೆಂಗಳೂರು: ಬಹು ನಿರೀಕ್ಷಿತ ಹಾಸ್ಯ ಚಿತ್ರ “ಪೌಡರ್” (Kannada New Movie) ತನ್ನ ಎರಡನೇ ಗೀತೆಯಾದ “ಪರಪಂಚ ಘಮ ಘಮ” ಅನ್ನು ಬಿಡುಗಡೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದೆ. ಮೊದಲನೇ ಗೀತೆಯಾದ”ಮಿಷನ್ ಘಮ ಘಮ” ತನ್ನ ವಿಭಿನ್ನ ಟ್ಯೂನ್ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇದೀಗ “ಪರಪಂಚ ಘಮ ಘಮ” ಅದೇ ರೀತಿಯ ಛಾಪನ್ನು ಮೂಡಿಸಲು ಸಜ್ಜಾಗಿದೆ.

ಖ್ಯಾತ ಜನಪದ ಗಾಯಕ, ಬ್ಲಾಕ್ ಬಸ್ಟರ್ ಗೀತೆಗಳಾದ “ಟಗರು ಬಂತು ಟಗರು”, “ಸೂರಿ ಅಣ್ಣಾ” ಖ್ಯಾತಿಯ ಆಂಟೋನಿ ದಾಸನ್ ಈ ಹಾಡಿಗೆ ದನಿಯಾಗಿರುವುದು ವಿಶೇಷ ಸಂಗತಿ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ “ಪೌಡರ್” ಚಿತ್ರದ ಈ ಲಯ ಪ್ರಧಾನ ಗೀತೆಗೆ ದನಿಯಾಗಿರುವುದು ಸಿನಿ ಪ್ರೇಕ್ಷಕರ ಕುತೂಹಲವನ್ನು ಹೆಚ್ಚಿಸಿದೆ.

ಪೌಡರ್” ಒಂದು ಹಾಸ್ಯಭರಿತ ಚಿತ್ರವಾಗಿದೆ.ಇಬ್ಬರು ಯುವಕರು ಒಂದು ನಿಗೂಢವಾದ “ಪೌಡರ್” ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಎಳೆಯಾಗಿ ಬಿಚ್ಚಿಡುವ ಕಥೆಯೇ “ಪೌಡರ್”. ಆ ಯುವಕರು ಎಲ್ಲಾ ಸಮಸ್ಯೆಗಳನ್ನು ಮೀರಿ ನಿಲ್ಲುವರೇ? ಅವರ ಎಲ್ಲಾ ಕನಸುಗಳು ನನಸಾಹುವುದೇ? “ಪೌಡರ್” ಹಿಂದಿನ “ಪವರ್” ಅವರಿಗೆ ತಿಳಿಯುವುದೇ? ಇದುವೇ ಕಥೆಯ ಸಾರಾಂಶ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ “ಪೌಡರ್” ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿರುತ್ತಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್‌ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್.ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿರುತ್ತಾರೆ. ಈ ಚಿತ್ರವು ಇದೇ ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಮಕ್ಕಳ ಸಾಹಸ ಕಥೆಯಾಧಾರಿತ `ಭಗವತಿ’ ಚಿತ್ರಕ್ಕೆ ಚಾಲನೆ

Kannada New Movie : ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದುನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ.

VISTARANEWS.COM


on

Kannada New Movie children's adventure story-based film bhavati
Koo

ಬೆಂಗಳೂರು: `ಬಂಗಾರಿ’, ಶಿವನಪಾದ’ ಸೇರಿದಂತೆ ಹಲವಾರು (Kannada New Movie) ಚಿತ್ರಗಳನ್ನು ನಿರ್ದೇಶಿಸಿದ ಮಾಚಂದ್ರು ಅವರು ಕಥೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳುತ್ತಿರುವ ಮಕ್ಕಳ ಸಾಹಸದ ಕಥೆ ಇರುವ ಮತ್ತೊಂದು ಚಿತ್ರ ಭಗವತಿ. ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ವಿಜಯ ನಗರದ ಮಾರುತಿ ಮಂದಿರದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ವಿದ್ಯಾಧರೆ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದೆ.

ಈ ಹಿಂದೆ ಲೂಸ್ ಮಾದ ಯೋಗಿ, ರಾಗಿಣಿ ಅಭಿನಯದ ಬಂಗಾರಿ, ಬೆಟ್ಟದ ದಾರಿ, ನಡಗಲ್ಲು, ಶಿವನಪಾದ ಚಿತ್ರಗಳನ್ನು ನಿರ್ದೇಶಿಸಿದ್ದ ಮಾಚಂದ್ರು ಅವರು ಈ ಸಲ ಮಕ್ಕಳ ಸಾಹಸದ ಕಥಾನಕ‌ ಒಳಗೊಂಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಮಕ್ಕಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಿಡಿದು ನಿಂತ ಮಕ್ಕಳು ಕಾನೂನಾತ್ಮಕವಾಗಿ ಹೋರಾಟ ನಡೆಸಿ ಗೆಲ್ಲುವಂಥ ಮಕ್ಕಳ ಸಾಹಸಮಯ ಕಾಥಾಹಂದರ ಈ ಚಿತ್ರದಲ್ಲಿದೆ. ಈಗಿನ ಜನರೇಶನ್ ಕುರಿತಾದ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರದಲ್ಲಿ ಮಕ್ಕಳು ಹೇಗೆ ಹೋರಾಡಿ ಗೆಲ್ಲುತ್ತಾರೆ ಎಂಬುದನ್ನು ನಿರ್ದೇಶಕರು ರೋಚಕ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ಒಟ್ಟು ಎರಡು ಹಾಡುಗಳಿದ್ದು, ರಾಜೇಶ್ ಗೌಡ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಆಗಸ್ಟ್ 5ರಿಂದ ಆರಂಭಿಸಿ ಬೆಂಗಳೂರು, ಕನಕಪುರ ಹಾಗೂ ಮಡಿಕೇರಿಯ ಸುತ್ತಮುತ್ತ ಭಗವತಿ ಚಿತ್ರದ ಚಿತ್ರೀಕರಣ ನಡೆಯಲಿದೆ. ಇನ್ನು ಈ ಚಿತ್ರದಲ್ಲಿ ಬಾಲ ಕಲಾವಿದರಾದ ರಿಷಿಕಾ ರಾಮ್, ದೀಪಕ್ ಪಿ.ಕೆ, ಅದ್ವೈತ್ ಪ್ರೇರಣ್, ಅದೇಶ್ ಪ್ರೇರಣ್, ಅಭಿನವ್ ಸಮರ್ಥ, ವೇದಾಂತ್, ಮೇಘನಾ, ಮಾನ್ವಿ, ರೋಶಿನಿ, ತೇಜಸ್, ಸುಷ್ಮಾ, ಶ್ವೇತಾ, ವಿಷ್ಣು, ಜಿ.ಡಿ. ಹೇರಂಭ , ಭಾನು, ಮೋಹನ್ ಕುಮಾರ್ ಡಿ.ಕೆ. ಸತೀಶ್, ಶರತ್, ಹರ್ಷ. ಮುಂತಾದವರು ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಹಾಗೂ ತಾಂತ್ರಿಕ ವರ್ಗದ ಆಯ್ಕೆ ಪ್ರಕ್ರಿಯೆ ನಡೆಯುತಿದೆ.

Continue Reading

ಸ್ಯಾಂಡಲ್ ವುಡ್

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Hamsalekha: ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

VISTARANEWS.COM


on

Hamsalekha NadaBrahma' has no meaning, Shankar Shanubhag sparks against Hansalekha
Koo

ಬೆಂಗಳೂರು: ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನುಭಾಗ್ ದೇಶ-ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಕೊಟ್ಟು ಜನಪ್ರಿಯರಾಗಿದ್ದಾರೆ. ಆದರೆ, ಆರಂಭದ ದಿನಗಳಲ್ಲಿ ಸಿನಿಮಾದ ಸಂಗೀತ ನಿರ್ದೇಶಕರೊಂದಿಗೂ ಕೆಲಸ ಮಾಡಿದ್ದರು. ಆ ವೇಳೆ ತಮಗೆ ಮೋಸ ಆಗಿದೆ ಎಂದು ಎಂದು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ (Hamsalekha) ವಿರುದ್ಧವೂ ಗಂಭೀರ ಆರೋಪ ಮಾಡಿದ್ದಾರೆ. ʻನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲʼʼಎಂದು ನೇರವಾಗಿಯೇ ಹೇಳಿದ್ದಾರೆ.

ಈ ಬಗ್ಗೆ ಗಾಯಕ ಶಂಕರ್ ಶಾನುಭಾಗ್ ಮಾತನಾಡಿ ʻʻಹಂಸಲೇಖ ಅವರಿಗೆ ಹೆಚ್ಚು ಕಡಿಮೆ ನಾನು 8-10 ಹಾಡುಗಳನ್ನು ಹಾಡಿದ್ದೆ. ಆದರೆ ಪೇಮೆಂಟ್‌ ಬಂದಿರಲಿಲ್ಲ. ತುಂಬ ಸಲ ಅವರ ಮುಂದೆ ಹೋಗಿ ನಿಂತೆ. ಅದು ಅಲ್ಲದೇ ಆಗ ತುಂಬ ತೊಂದರೆಯಲ್ಲಿದ್ದೆ. ಆಗ ತಂಗಿಯರ ಮದುವೆ ಬೇರೆ ಮಾಡಿಸಬೇಕಿತ್ತು.ಆಗ ಹಂಸಲೇಖರ ಬಳಿ ಪೇಮೆಂಟ್‌ ಕೇಳಿದಾಗ, ಕೊಟ್ರಾಯ್ತು ಕಣೋ! ಎನ್ನುತ್ತಿದ್ದರು. ಐದನೇ ಸಲ ಹೋದಾಗ, ಅವರ ಮೂಡ್‌ ಸರಿ ಇಲ್ಲ ಅನ್ಸತ್ತೆ.. ಎಷ್ಟು ಕೋಟಿ ಕೊಡಬೇಕೋ ನಿನಗೆ ಅಂದು ಬಿಡೋದಾ? ಆ ಮೇಲೆ ಕೈ ಮುಗಿದು ಅಲ್ಲಿಂದ ಬಂದು ಬಿಟ್ಟೆ ಎಂದರು.

ʻʻಮೊದಲನೇದಾಗಿ ನಾದಬ್ರಹ್ಮ ಎಂಬ ಪದಕ್ಕೆ ಅರ್ಥವೇ ಇಲ್ಲ. ನಿಜವಾದ ನಾದಬ್ರಹ್ಮ ವಿಠಲ ಒಬ್ಬನೇ. ನಮ್ಮಲ್ಲಿ ಕೆಲವರಿಗೆ ಏನೋನೋ ಬಿರುದು ಕೊಡುತ್ತಾರೆ. ಏನು ಕೊಡಬೇಕು ಎಂದೇ ಅರ್ಥ ಆಗಲ್ಲ. ಆದರೆ ಅದನ್ನ ಸ್ವೀಕರಿಸುತ್ತಾರಲ್ಲ…! ಇದು ನಮ್ಮ ಚಲನಚಿತ್ರದ ದುರಂತಗಳು. ಕನ್ನಡದಲ್ಲಿ ಅಸಂಖ್ಯಾತ ಪ್ರತಿಭೆಗಳಿವೆ. ಒಳ್ಳೆಯ ಹಾಡುಗಾರರಿದ್ದಾರೆ. ತುಂಬ ಜನ ಇದ್ದಾರೆ. ಇದೀಗ ಸಂಗೀತ ಕಲಿಯಬೇಕು ಎಂತಿಲ್ಲ. ಯಾರು ಬೇಕಾದರೂ ಹಾಡುತ್ತಾರೆ. ಈ ರಿಯಾಲಿಟಿ ಶೋ ದುರಂತ ಒಂದೆರಡಲ್ಲ. ಏಳೇಳು ಜನುಮದ ಲವ್‌ ಮ್ಯೂಸಿಕ್‌ ಡೈರಕ್ಟರ್‌ ವಿ ಮನೋಹರ್‌. ಈ ಹಾಡಿನ ಟ್ರ್ಯಾಕ್‌ ಹಾಡಿದ್ದು ನಾನು. ಅದನ್ನ ಒಂದು ರಿಯಾಲಿಟಿ ಶೋನಲ್ಲಿ ಒಬ್ಬರು ಹಾಡಿದ್ದರು. ʻಮಹಾಗುರುಗಳುʼ , ಹಾಡು ಮುಗಿದ ಮೇಲೆ ಕಮೆಂಟ್‌ ಮಾಡಿದ್ದು ಹೀಗೆ. ಫ್ರಿ ಬಿಟ್ಟು ಬಿಟ್ಟೆ ಹಾಡು ಅಂತ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಸಮಯದಲ್ಲಿ ಅವರು ಇರಲೇ ಇಲ್ಲ. ಬೇರೆಯವರು ಮಾಡಿದ್ದನ್ನು ನಾನು ಮಾಡಿದೆ ಎಂದು ಹಸಿ ಸುಳ್ಳು ಹೇಳುತ್ತಾರೆ. ಆ ಹಾಡಿನ ಕ್ರೆಡಿಟ್‌ ವಿ ಮನೋಹರ್‌ಗೆ ಹೋಗಬೇಕುʼʼಎಂದರು.

ಇದನ್ನೂ ಓದಿ: Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಅವರ ಬಗ್ಗೆನೂ ಗಂಭೀರ ಆರೋಪ ಮಾಡಿದ್ದಾರೆ. ಅವಕಾಶಕ್ಕಾಗಿ ಅವರ ಕಾಲು ಹಿಡಿದು ಜಾಡಿಸಿ ಒದ್ದರು ನನಗೆ ಎಂದು ಇದೇ ಸಂದರ್ಶನದಲ್ಲಿ ಹೇಳಿದ್ದಾರೆ. ಹಾಗೇ ಮತ್ತೊಬ್ಬ ಸಂಗೀತ ನಿರ್ದೇಶಕ ಮೈಸೂರು ಮೋಹನ್ ಅವರ ಕೂಡ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ‘ನಂಜುಂಡ’ ಸಿನಿಮಾಗಾಗಿ ಇವರೊಂದಿಗೆ ಒಂದು ತಿಂಗಳು ಕೆಲಸ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಆರು ಸಾಂಗ್‌ಗಳಿಗೆ ಟ್ರ್ಯಾಕ್ ಮತ್ತು ಕೋರಸ್ ಹಾಡಿದ್ದರೂ ಇದೂವರೆಗೂ ಒಂದು ರೂಪಾಯಿ ಪೇಮೆಂಟ್ ಕೂಡ ಬಂದಿಲ್ಲ ಎಂದಿದ್ದಾರೆ. ವಿ ಮನೋಹರ್‌ ಮಾತ್ರ ಕಲಾವಿದರ ಮೇಲೆ ಹೊಟ್ಟೆ ಮೇಲೆ ಹೊಡಿಯುವ ಕೆಲಸ ಮಾಡಿಲ್ಲ ಎಂದು ಹೇಳಿದರು.

Continue Reading
Advertisement
Aadhaar Update
ವಾಣಿಜ್ಯ6 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ21 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌