Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್! - Vistara News

ಸ್ಯಾಂಡಲ್ ವುಡ್

Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

Golden Star Ganesh: ದ್ವಾಪರ ಹಾಡಿನಿಂದಲೇ ಕುತೂಹಲ ಹುಟ್ಟಿಸಿದ ಕೃಷ್ಣಂ ಪ್ರಣಯ ಸಖಿ ಸಿನಿಮಾ, ನಾಳೆ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವ ಕಾತುರದಲ್ಲಿ ಸಿನಿರಸಿಕರು ಇದ್ದಾರೆ.

VISTARANEWS.COM


on

Golden Star Ganesh krishnam pranaya sakhi Fans show House Full
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ ನಾಳೆ (ಆಗಸ್ಟ್‌ 15) ಅದ್ಧೂರಿಯಾಗಿ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳುಗಳು ಬಿಡುಗಡೆಯಾಗಿ ಸಖತ್‌ ಕ್ರೇಜ್‌ ಹುಟ್ಟು ಹಾಕಿದೆ. ಇದೀಗ ಬಿಡುಗಡೆಯ ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿದೆ. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯಲು ಮುಂದಾಗಿದ್ದಾರೆ ಗಣೇಶ್‌.

20006 ರಲ್ಲಿ ಮುಂಗಾರು ಮಳೆ ಸಾಂಗ್ಸ್ ಸೂಪರ್ ಹಿಟ್ ಕಂಡಿದ್ದು, ಇಂದು ಕೃಷ್ಣಂ ಪ್ರಣಯ ಸಖಿ ಸೂಪರ್‌ ಡೂಪರ್‌ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಿದ್ದಾರೆ ಫ್ಯಾನ್ಸ್.‌ ದ್ವಾಪರ ಹಾಡಿನಿಂದಲೇ ಕುತೂಹಲ ಹುಟ್ಟಿಸಿದ ಕೃಷ್ಣಂ ಪ್ರಣಯ ಸಖಿ ಸಿನಿಮಾ, ನಾಳೆ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವ ಕಾತುರದಲ್ಲಿ ಸಿನಿರಸಿಕರು ಇದ್ದಾರೆ. ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಶೋ ಹೌಸ್ ಫುಲ್ ಆಗಿದೆ. ರಾಜ್ಯಾದ್ಯಂತ 300ಕ್ಕೂ ಹೆಚ್ಚು ಪ್ರದರ್ಶನಕ್ಕೆ ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Actor Darshan: ಆರೋಪಿ ಪವಿತ್ರಾಗೌಡಗೆ (Pavithra Gowda) ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ.

VISTARANEWS.COM


on

Actor Darshan case Renukaswamy blood found on Pavitra Gowda's slippers, beer bottle
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ (Actor Darshan) ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ ಸಿಕ್ಕಂತಾಗಿದೆ. ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹತ್ತಾರು ಸಾಕ್ಷಿಗಳು ಹೊರಬರುತ್ತಿವೆ. ಆರೋಪಿ ಪವಿತ್ರಾಗೌಡಗೆ (Pavithra Gowda) ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿಯ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ ಎನ್ನಲಾಗಿದೆ.

ಪವಿತ್ರಾಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.
ಪಟ್ಟಣಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ ಬಳಿಕ ಆರೋಪಿಗಳು ಅಲ್ಲೇ ಪಾರ್ಟಿ ಮಾಡಿ ಕುಷ್ಕ ತಿಂದಿದ್ದರು. ಇದರಲ್ಲಿ ಒಂದು ಬಿಯರ್ ಬಾಟಲಿ ಮೇಲೆ ರಕ್ತದ ಕಲೆ ಪತ್ತೆಯಾಗಿದೆ. ಆರೋಪಿಯೊಬ್ಬನ ಫಿಂಗರ್ ಪ್ರಿಂಟ್ ಕೂಡ ಇದ್ದು, ತನಿಖೆ ನಡೆಯುತ್ತಿದೆ. ಸದ್ಯ ಬಿಯರ್ ಬಾಟಲಿಯನ್ನು ಪ್ರಮುಖ ಸಾಕ್ಷಿಯಾಗಿ ಮಾಡಿರುವ ಪೊಲೀಸರು, ಇನ್ನೂ ಹೆಚ್ಚಿನ ಸಾಕ್ಷಿಗಳ ಹುಡುಕಾಟದಲ್ಲಿದ್ದಾರೆ.

ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

ಇದನ್ನೂ ಓದಿ: Actor Darshan: ಹೋಮ-ಹವನ ಮಾಡ್ತಿರೋದು ದರ್ಶನ್‌ ಬಿಡುಗಡೆಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್

ನಟ ದರ್ಶನ್ (Actor Darshan) ಬಿಡುಗಡೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ಆ. 13 ಮತ್ತು 14 ರಂದು ಚಿತ್ರೋದ್ಯಮದ ಒಳಿತಿಗಾಗಿ ಕಲಾವಿದರ ಸಂಘದಿಂದ ಹೋಮ-ಹವನ ಮಾಡಲಾಗುತ್ತಿದೆ ಎಂದು ತಿಳಿಸಿದ್ದರು. ಕಲಾವಿದರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಸಾಕಷ್ಟು ಸಾವು, ನೋವು ಎಲ್ಲಾ ಸಂಭವಿಸಿದೆ. ಚಿತ್ರರಂಗದಲ್ಲೂ ಹಲವರನ್ನು ನಾವು ಕಳೆದುಕೊಂಡಿದ್ದೇವೆ. ಚಿತ್ರರಂಗದ ಉಳಿವಿಗಾಗಿ, ಏಳಿಗೆಗಾಗಿ ಪೂಜೆ ಮಾಡೋಣ ಅಂತ ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದರು.

Continue Reading

ಸಿನಿಮಾ

Independence day 2024: ವಿಜಯ್ ಪ್ರಕಾಶ್‌ ಹೊಸ ಸಾಂಗ್‌ ಔಟ್‌; ಭಾರತೀಯ ಸೇನೆಗೆ ಹಾಡನ್ನು ಅರ್ಪಿಸಿದ ಹೊಸಬರ ತಂಡ!

Independence day 2024: ವಿಜಯ್ ಪ್ರಕಾಶ್ ಅವರ ಸುಂದರ ಗಾಯನದೊಂದಿಗೆ ಭರತ್ ಕುಮಾರ್ ಜನಾರ್ದನ ಅವರು ಬರೆದು ನಿರ್ದೇಶಿಸಿರುವ ಈ ಹಾಡನ್ನು ಸತ್ಯ ರಾಧಾಕಿರ್ಷ್ಣ ಸಂಗೀತ ಸಂಯೋಜಿಸಿದ್ದಾರೆ.

VISTARANEWS.COM


on

Independence day 2024 Nanna Deshavu Kannada Video Song Vijay Prakash
Koo

ಬೆಂಗಳೂರು: ಆಗಸ್ಟ್ 15 ರಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ (Independence day 2024) ನಡೆಯಲಿದೆ. ಈ ದಿನ ಇಡೀ ದೇಶ ತ್ರಿವರ್ಣ ಧ್ವಜಗಳಿಂದ ರಾರಾಜಿಸುತ್ತಿರುತ್ತದೆ.  ಸ್ವಾತಂತ್ರ್ಯದಿನದ ಸಂಭ್ರಮ ಎಲ್ಲಡೆ ಮನೆ ಮಾಡಿದೆ.  ಇನ್ನು ಆಗಸ್ಟ್​ 15ರಂದು ಕೆಂಪು ಕೋಟೆ ಜನರಿಂದ ತುಂಬಿ ತುಳುಕುತ್ತಿರುತ್ತದೆ.  ಇದೀಗ ಹೊಸ ಚಿತ್ರ ತಯಾರಕರ ತಂಡವು ‘ನನ್ನ ದೇಶವು’ (Nanna Deshavu) ಎಂಬ ಕನ್ನಡ ದೇಶಭಕ್ತಿಯ ಗೀತೆಯನ್ನು ಬಿಡುಗಡೆ ಮಾಡಿದೆ. ಈ ಹಾಡಿನಲ್ಲಿ ಭಾರತದ ವೈವಿಧ್ಯಮಯ ಸಂಸ್ಕೃತಿ, ಭವ್ಯವಾದ ಭೂದೃಶ್ಯಗಳು, ಇತಿಹಾಸ ಮತ್ತು ಭಾರತದ ಹಿರಿಮೆಯನ್ನು ಎತ್ತಿ ತೋರಿಸುವಂತಿದೆ. ‘ನನ್ನ ದೇಶವು’ ಹಾಡು ಕನ್ನಡ ಚಿತ್ರರಂಗದ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಲ್ಲಿ ಮೂಡಿ ಬಂದಿದೆ.

Jungrus Studios ಯೂಟ್ಯೂಬ್ ಚಾನೆಲ್‌ನಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ. ವಿಜಯ್ ಪ್ರಕಾಶ್ ಅವರ ಸುಂದರ ಗಾಯನದೊಂದಿಗೆ ಭರತ್ ಕುಮಾರ್ ಜನಾರ್ದನ ಅವರು ಬರೆದು ನಿರ್ದೇಶಿಸಿರುವ ಈ ಹಾಡನ್ನು ಸತ್ಯ ರಾಧಾಕಿರ್ಷ್ಣ ಸಂಗೀತ ಸಂಯೋಜಿಸಿದ್ದಾರೆ. ಲೇಹ್ ಲಡಕ್, ಕಾಶ್ಮೀರ, ಹಂಪಿ, ಸಾಗರ, ಶಿವಮೊಗ್ಗ, ಬೆಂಗಳೂರು, ಶಿವನಸಮುದ್ರ ಮುಂತಾದ ಭಾರತದ ವಿವಿಧ ಸ್ಥಳಗಳಲ್ಲಿ ಹಾಡನ್ನು ಚಿತ್ರೀಕರಿಸಲಾಗಿದೆ. ದೇಶಕ್ಕಾಗಿ ಅವಿರತವಾಗಿ ದುಡಿಯುವ ಮತ್ತು ತ್ಯಾಗ ಮಾಡುವ ಭಾರತೀಯ ಸೇನೆಗೆ ಈ ಹಾಡನ್ನು ಅರ್ಪಿಸಲಾಗಿದೆ.

ಇದನ್ನೂ ಓದಿ: Independence Day 2024: ಬ್ರಿಟಿಷ್‌ ಕಾಲದ ಚಿನ್ನದ ನಾಣ್ಯದಿಂದ ಹಿಡಿದು ಸ್ವತಂತ್ರ ಭಾರತದ ರೂಪಾಯಿವರೆಗಿನ ಇತಿಹಾಸ ಕುತೂಹಲಕರ!

ಭಾರತದಾದ್ಯಂತ ಈ ಬಾರಿ 78ನೇ ಸ್ವಾತಂತ್ರ್ಯ ದಿನವನ್ನು (Independence day 2024) ಆಚರಿಸಲು ಸಿದ್ಧತೆಗಳು ಜೋರಾಗಿವೆ. ಈ ದಿನ ಎಲ್ಲರ ಚಿತ್ತ ಕೆಂಪುಕೋಟೆಯ (delhi Red Fort) ಮೇಲಿರುತ್ತದೆ. ಯಾಕೆಂದರೆ ಇಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಧ್ವಜಾರೋಹಣ ನಡೆಸಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಆಗಸ್ಟ್‌ 15ರಂದು ಬೆಳಗ್ಗೆ 7.30ಕ್ಕೆ ರಾಷ್ಟ್ರಧ್ವಜವನ್ನು ಹಾರಿಸಿ, ಆ ಬಳಿಕ ದೇಶವನ್ನು ಉದ್ದೇಶಿಸಿ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣ ಮಾಡಲಿದ್ದಾರೆ.

ಸ್ವಾತಂತ್ರ್ಯ ದಿನದ ನೇರ ಪ್ರಸಾರ ಎಲ್ಲಿ?

ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ನೇರ ಪ್ರಸಾರ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಲಾಗುತ್ತದೆ. ವಿಸ್ತಾರ ನ್ಯೂಸ್‌ ಟಿವಿ ಮತ್ತು ವಿಸ್ತಾರ ನ್ಯೂಸ್‌ ಯುಟ್ಯೂಬ್‌ ಚಾನೆಲ್‌ ಮೂಲಕವೂ ಮೋದಿಯವರ ಭಾಷಣ ನೇರ ಪ್ರಸಾರ ನೋಡಬಹುದು.

ಅಲ್ಲದೇ ಕಾರ್ಯಕ್ರಮವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯೂಟ್ಯೂಬ್ ಚಾನೆಲ್‌ ಜೊತೆಗೆ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಾದ ಎಕ್ಸ್‌ನಲ್ಲಿ @PIB_India ಮತ್ತು PMO ಟ್ವಿಟರ್ ಹ್ಯಾಂಡಲ್ ಮೂಲಕವೂ ಪ್ರಸಾರ ಮಾಡಲಾಗುತ್ತದೆ.

Continue Reading

ಸ್ಯಾಂಡಲ್ ವುಡ್

Sandalwood Industry: ಕಲಾವಿದರ ಸಂಘದಲ್ಲಿ ಚಿತ್ರರಂಗದ ಏಳಿಗೆಗಾಗಿ ನೆರವೇರುತ್ತಿದೆ ವಿಶೇಷ ಪೂಜೆ

Sandalwood Industry: 8 ಜನರ ಪುರೋಹಿತರ ತಂಡ ವಿಶೇಷ ಹೋಮ ಹವನ ನಡೆಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 600 ಜನ ಪಾಲ್ಗೊಂಡಿದ್ದಾರೆ. ಊಟದ ವ್ಯವಸ್ಥೆಗಾಗಿ 50 ಜನ ಬಾಣಸಿಗರು ನೇಮಕವಾಗಿದೆ. ಸುಮಾರು 150ಕ್ಕೂ ಜನರಿಗೆ ತಿಂಡಿಯ ವ್ಯವಸ್ಥೆ ಆಗಿದೆ. 600ಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.

VISTARANEWS.COM


on

Sandalwood Industry Actors Assosiation Special Pooje
Koo

ಬೆಂಗಳೂರು: ಕೋವಿಡ್ ನಂತರ ಬ್ಯಾಕ್ ಟು ಬ್ಯಾಕ್ ಸಂಕಷ್ಟಕ್ಕೆ ಸಿಲುಕಿರುವ ಸ್ಯಾಂಡಲ್‌ವುಡ್‌, ಹೋಮ ಹವನದ ಮೊರೆ ಹೋಗಿದೆ. ಕನ್ನಡ ಚಿತ್ರರಂಗದ ಒಳಿತಿಗಾಗಿ (Sandalwood Industry) ವಿಶೇಷ ಹೋಮ ಹವನ ಮಾಡಲಾಗುತ್ತಿದೆ. ಗಣಪತಿ ಹೋಮ, ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಹಾಗೂ ನಾಗದರ್ಶನ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಬೆಳಿಗ್ಗೆ 7.30ರಿಂದ 11.30ರವರೆಗೆ ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಆಗಿದೆ. ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್‌ ಅಣ್ಣಮ್ಮಯ್ಯ ನೆರವೇರಿಸಿದ್ದಾರೆ.

8 ಜನರ ಪುರೋಹಿತರ ತಂಡ ವಿಶೇಷ ಹೋಮ ಹವನ ನಡೆಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 600 ಜನ ಪಾಲ್ಗೊಂಡಿದ್ದಾರೆ. ಊಟದ ವ್ಯವಸ್ಥೆಗಾಗಿ 50 ಜನ ಬಾಣಸಿಗರು ನೇಮಕವಾಗಿದೆ. ಸುಮಾರು 150ಕ್ಕೂ ಜನರಿಗೆ ತಿಂಡಿಯ ವ್ಯವಸ್ಥೆ ಆಗಿದೆ. 600ಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.

5 ಜನ ಮುತ್ತೈದೆಯರು ಬಂದು ಬಂದು ದೀಪ ಹಚ್ಚಿದ ನಂತರ ಪೂಜೆ ಶುರುವಾಗಿದೆ. ದೊಡ್ಡಣ್ಣ ದಂಪತಿ ಪೂಜೆ ನೇರವೇರಿಸಿದ್ದಾರೆ.  ಚಿತ್ರರಂಗ ಎಂಬ ಉದ್ಯಮಕ್ಕೆ ನಾಗದೇವರು ಅಧಿಪತಿ. ಅಂಥ ನಾಗದೇವರನ್ನು ಆರಾಧನೆ ಮಾಡುವುದಕ್ಕಾಗಿ ಆಶ್ಲೇಷಾ ಬಲಿ ಹಾಗೂ ನಾಗದರ್ಶನ ಮಾಡಲಾಗುತ್ತದೆ. ಇದಕ್ಕಾಗಿಯೇ ನಾಗಪಾತ್ರಿಗಳು ಭಾಗವಹಿಸಿದ್ದಾರೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಲೈಟ್ ಬಾಯ್ ನಿಂದ ಮೊದಲುಗೊಂಡು ಪ್ರೊಡಕ್ಷನ್ ನಲ್ಲಿ ಕೆಲಸ ಮಾಡುವವರ ತನಕ. ಸೌಂಡ್ ಎಂಜಿನಿಯರ್ ನಿಂದ ಮೊದಲುಗೊಂಡು ಸಂಗೀತದ ನಿರ್ದೇಶಕರ ತನಕ ಈ ಚಲನಚಿತ್ರ ಪರಿಶ್ರಮದಲ್ಲಿ ಇರುವ ಎಲ್ಲರಿಗೂ ಒಳಿತಾಗಲಿ ಎಂಬ ಉದಾತ್ತ ಧ್ಯೇಯದಿಂದ ಈ ಪೂಜಾ ಕೈಂಕರ್ಯವನ್ನು ಮಾಡಲಾಗುತ್ತಿದೆ.

ಈ ಪೂಜೆಯನ್ನು ನಟ ದರ್ಶನ್ ಅವರಿಗಾಗಿಯೇ ಮಾಡಲಾಗುತ್ತಿದೆ ಎಂಬ ಚರ್ಚೆ ವಿಪರೀತ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ.ಜೂನಿಯರ್ ಆರ್ಟಿಸ್ಟ್ ಗಳೋ, ಡ್ಯೂಪ್ ಕಲಾವಿದರೋ, ಕಂಠದಾನ ಮಾಡುವವರಿಂದ ನಾಯಕ ನಟ- ನಟಿಯರು, ನಿರ್ಮಾಪಕರು, ಸಾಹಸ ಕಲಾವಿದರು ಹೀಗೆ ಎಷ್ಟೋ ವಿಭಾಗದಲ್ಲಿ ದುಡಿಯುತ್ತಿರುವ ಎಲ್ಲರಿಗೂ ಒಳಿದಾಗಲಿ ಎನ್ನುವ ದೃಷ್ಟಿಯಿಂದ ಈ ಹೋಮ ನೆರವೇರುತ್ತಿದೆ.

ಆ.11ರಂದು ಕಲಾವಿದರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಕ್‌ಲೈನ್ ವೆಂಕಟೇಶ್ (Rockline Venkatesh) ಮಾತನಾಡಿʻʻಕೋವಿಡ್ ನಂತರ ಸಿನಿಮಾರಂಗದಲ್ಲಿ ಉಂಟಾದ ಸಮಸ್ಯೆಗಳನ್ನು ಎದುರಿಸಲು ಇಂಥದ್ದೊಂದು ಪೂಜೆ ಮಾಡಲು ಯೋಚಿಸಿದೆವು. ಆದರೆ, ಆಗಿರಲಿಲ್ಲ. ಕೋವಿಡ್ ನಂತರ ಚಿತ್ರರಂಗದಲ್ಲಿ ಸಾಕಷ್ಟು ಸಾವು, ನೋವಿನ ಘಟನೆಗಳು ನಡೆದಿದೆ. ಈಗ ಕನ್ನಡ ಚಿತ್ರರಂಗದಲ್ಲಿ ದೊಡ್ಡವರು ಅಂತ ಯಾರೂ ಇಲ್ಲ. ಹೀಗಾಗಿ ನಾವು ದೇವರ ಮೊರೆ ಹೋಗುತ್ತಿದ್ದೇವೆ ಎಂದಿದ್ದರು.

Continue Reading

ಬೆಂಗಳೂರು

Kannada New Movie: ತೆರೆಗೆ ಬರಲು ಸಿದ್ಧವಾಗಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ʼಸ್ವಪ್ನ ಮಂಟಪʼ ಚಿತ್ರ

Kannada New Movie: `ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದು, ಈ ಸಿನಿಮಾವು ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣಪತ್ರ ನೀಡಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಬಾಬು ನಾಯ್ಕ್ ಅವರು ತಮ್ಮ ಮಲೈ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಾಣ ಮಾಡಿರುವ ʼಸ್ವಪ್ನ ಮಂಟಪʼ ಚಿತ್ರವು (Kannada New Movie) ಜುಲೈ 31ರಂದು ಸೆನ್ಸಾರ್‌ ಆಗಿದೆ. ಸೆನ್ಸಾರ್‌ ಮಂಡಳಿಯು ಈ ಚಿತ್ರದ ಆಶಯ ಮತ್ತು ಅಭಿವ್ಯಕ್ತಿ ವಿಧಾನವನ್ನು ಮೆಚ್ಚಿ ʼಯುʼ ಪ್ರಮಾಣ ಪತ್ರ ನೀಡಿದೆ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

`ಸ್ವಪ್ನ ಮಂಟಪ’ ಚಿತ್ರವನ್ನು ಬರಗೂರು ರಾಮಚಂದ್ರಪ್ಪನವರು ತಮ್ಮದೇ ಕಾದಂಬರಿಯನ್ನು ಆಧರಿಸಿ ಚಿತ್ರಕತೆ, ಸಂಭಾಷಣೆ, ಗೀತೆ ರಚನೆ ಮಾಡುವುದರ ಜತೆಗೆ ನಿರ್ದೇಶನ ಮಾಡಿದ್ದಾರೆ.

`ಸ್ವಪ್ನ ಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ಮಹತ್ವ ಮತ್ತು ಸಂರಕ್ಷಣೆಯ ಅಗತ್ಯವನ್ನು ಪ್ರತಿಪಾದಿಸುವ ಕಥಾ ವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನ ಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ ಕಥಾ ನಾಯಕ ಮತ್ತು ನಾಯಕಿ ಒಂದಾಗಿ ಜನರನ್ನು ಸಂಘಟಿಸಿ ಪಾರಂಪರಿಕ ಚಾರಿತ್ರಿಕ ಮಂಟಪವನ್ನು ಉಳಿಸುತ್ತಾರೆ. ಸಾಂಕೇತಿಕವಾದ ಈ ಕಥಾವಸ್ತುವು ಪಾರಂಪರಿಕ ಸ್ಥಳಗಳ ರಕ್ಷಣೆ ವಿಷಯದಲ್ಲಿ ಪ್ರಾತಿನಿಧಿಕವೂ ಆಗುತ್ತದೆ.

ಕಥಾ ನಾಯಕರಾಗಿ ವಿಜಯ ರಾಘವೇಂದ್ರ ಮತ್ತು ನಾಯಕಿಯಾಗಿ ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇಬ್ಬರೂ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿರುವುದು ಒಂದು ವಿಶೇಷ, ಉಳಿದ ತಾರಾಗಣದಲ್ಲಿ ಸುಂದರರಾಜ್, ಶೋಭಾ ರಾಘವೇಂದ್ರ, ರಜಿನಿ, ಸುಂದರರಾಜ ಅರಸು, ಅಂಬರೀಶ್ ಸಾರಂಗಿ, ರಾಜಪ್ಪ ದಳವಾಯಿ, ವೆಂಕಟರಾಜು, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ಶಿವಲಿಂಗ ಪ್ರಸಾದ್, ಭಾರತಿ ರಮೇಶ್, ಗುಂಡಿ ರಮೇಶ್ ಮುಂತಾದವರು ಇದ್ದಾರೆ.

ಇದನ್ನೂ ಓದಿ: Tungabhadra Dam: ಜಲಾಶಯ ನಿರ್ವಹಣೆ ಕುರಿತ ಕೇಂದ್ರ ಸಮಿತಿ ಸಲಹೆಯನ್ನು ರಾಜ್ಯ ಸರ್ಕಾರ ಧಿಕ್ಕರಿಸಿದೆ; ಪ್ರಲ್ಹಾದ್‌ ಜೋಶಿ ಆರೋಪ

ಈ ಚಿತ್ರವು ಸುರೇಶ್ ಅರಸು ಸಂಕಲನ, ನಾಗರಾಜ್ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್, ಸಹ ನಿರ್ದೇಶಕರಾಗಿ, ಗೋಪಾಲಕೃಷ್ಣ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

Continue Reading
Advertisement
Viral News
Latest21 mins ago

Viral News: ರೈಲು ಬೋಗಿಯಲ್ಲಿ ನಮಾಜ್: ಮುಸ್ಲಿಂ ಪ್ರಯಾಣಿಕರನ್ನು ತರಾಟೆಗೆ ತೆಗೆದುಕೊಂಡ ಟಿಟಿಇ; ವಿಡಿಯೊ ಇಲ್ಲಿದೆ

Viral Video
Latest32 mins ago

Viral Video: ರೀಲ್ಸ್ ಅವಾಂತರ; 6ನೇ ಮಹಡಿಯಿಂದ ಬಿದ್ದ ಬಾಲಕಿ; ಅಪ್ಪನನ್ನು ಕರೆ ಎಂದು ಅಮ್ಮನ ಬಳಿ ಅಂಗಲಾಚಿದ್ದು ಯಾಕೆ?

ramanagara murder case
ಕ್ರೈಂ36 mins ago

Murder Case: ಪೂಜೆಗೆಂದು ಕರೆದೊಯ್ದು ಹೆಂಡತಿಯ ಕೊಂದ ಗಂಡ; ಕೊಲೆಯಾದಳೇಕೆ ಚಿಟ್ಟೆ ಟ್ಯಾಟೂ ಚೆಲುವೆ?

Dodda Ganesh
ಕ್ರೀಡೆ41 mins ago

Dodda Ganesh: ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

Rachael Lillis The voice of Pokémon Misty and Jessie passes away
ಸಿನಿಮಾ41 mins ago

Rachael Lillis: ಧ್ವನಿ ನಿಲ್ಲಿಸಿದ ʻಪೋಕೆಮಾನ್ʼ ತಾರೆ ರಾಚೆಲ್; ಸ್ತನ ಕ್ಯಾನ್ಸರ್‌ ವಿರುದ್ಧ ಹೋರಾಡಿ ಸೋತ ನಟಿ

Gold Rate Today
ಚಿನ್ನದ ದರ44 mins ago

Gold Rate Today: ಚಿನ್ನದ ಬೆಲೆಯಲ್ಲಿ ತುಸು ಇಳಿಕೆ; ಇಂದಿನ ಬೆಲೆ ಚೆಕ್‌ ಮಾಡಿ

Independence Day 2024 gadag students pm narendra modi
ಪ್ರಮುಖ ಸುದ್ದಿ1 hour ago

PM Narendra Modi: ಕೆಂಪುಕೋಟೆಯ ಕಾರ್ಯಕ್ರಮಕ್ಕೆ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ

Buchi Babu Tournament
ಕ್ರೀಡೆ1 hour ago

Buchi Babu Tournament: ಬುಚ್ಚಿಬಾಬು ಕ್ರಿಕೆಟ್‌ ಟೂರ್ನಿ ಆಡಲಿದ್ದಾರೆ ಸೂರ್ಯಕುಮಾರ್​, ಅಯ್ಯರ್​

Police Raid puttur mangalore
ಕ್ರೈಂ1 hour ago

Police Raid: ಹಿಂದೂ ಯುವತಿ- ಮುಸ್ಲಿಂ ಯುವಕ ಜೋಡಿಗೆ ರೂಂ ನೀಡಿದ ಲಾಡ್ಜ್‌ಗೆ ಪೊಲೀಸರ ದಾಳಿ

Actor Darshan case Renukaswamy blood found on Pavitra Gowda's slippers, beer bottle
ಸ್ಯಾಂಡಲ್ ವುಡ್1 hour ago

Actor Darshan: ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌