Site icon Vistara News

Golden Star Ganesh: ಗಣೇಶ್​​ಗೆ ಶುರುವಾಗಿದೆ ಗೋಲ್ಡನ್ ಟೈಮ್:  ಫ್ಯಾನ್ಸ್ ಶೋ ಹೌಸ್ ಫುಲ್!

Golden Star Ganesh krishnam pranaya sakhi Fans show House Full

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ ನಾಳೆ (ಆಗಸ್ಟ್‌ 15) ಅದ್ಧೂರಿಯಾಗಿ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳುಗಳು ಬಿಡುಗಡೆಯಾಗಿ ಸಖತ್‌ ಕ್ರೇಜ್‌ ಹುಟ್ಟು ಹಾಕಿದೆ. ಇದೀಗ ಬಿಡುಗಡೆಯ ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಪೇಯ್ಡ್ ಪ್ರೀಮಿಯರ್ ಶೋ ಹೌಸ್ ಫುಲ್ ಆಗಿದೆ. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆಯಲು ಮುಂದಾಗಿದ್ದಾರೆ ಗಣೇಶ್‌.

20006 ರಲ್ಲಿ ಮುಂಗಾರು ಮಳೆ ಸಾಂಗ್ಸ್ ಸೂಪರ್ ಹಿಟ್ ಕಂಡಿದ್ದು, ಇಂದು ಕೃಷ್ಣಂ ಪ್ರಣಯ ಸಖಿ ಸೂಪರ್‌ ಡೂಪರ್‌ ಆಗುವುದರಲ್ಲಿ ಅನುಮಾನವೇ ಇಲ್ಲ ಎನ್ನುತ್ತಿದ್ದಾರೆ ಫ್ಯಾನ್ಸ್.‌ ದ್ವಾಪರ ಹಾಡಿನಿಂದಲೇ ಕುತೂಹಲ ಹುಟ್ಟಿಸಿದ ಕೃಷ್ಣಂ ಪ್ರಣಯ ಸಖಿ ಸಿನಿಮಾ, ನಾಳೆ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡುವ ಕಾತುರದಲ್ಲಿ ಸಿನಿರಸಿಕರು ಇದ್ದಾರೆ. ಒಂದು ದಿನ ಮುಂಚಿತವಾಗಿಯೇ ಫ್ಯಾನ್ಸ್ ಶೋ ಹೌಸ್ ಫುಲ್ ಆಗಿದೆ. ರಾಜ್ಯಾದ್ಯಂತ 300ಕ್ಕೂ ಹೆಚ್ಚು ಪ್ರದರ್ಶನಕ್ಕೆ ಚಿತ್ರತಂಡ ಪ್ಲ್ಯಾನ್‌ ಮಾಡಿದೆ.

ಇದನ್ನೂ ಓದಿ: Golden Star Ganesh: ಸೋಷಿಯಲ್‌ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ `ಕೃಷ್ಣಂ ಪ್ರಣಯ ಸಖಿ’ ಹಾಡುಗಳು!

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

“ಮುಂಗಾರು ಮಳೆ” ಯ ನಂತರ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಜನಪ್ರಿಯತೆಗೆ ಮನ ತುಂಬಿ ಬಂದಿದೆ ಎಂದು ನಾಯಕ ಗಣೇಶ್ ತಿಳಿಸಿದ್ದಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ಆಗಸ್ಟ್ 15 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರವನ್ನು ವೀಕ್ಷಿಸಲು ಗೋಲ್ಡನ್ ಸ್ಟಾರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Exit mobile version