Site icon Vistara News

Golden Star Ganesh: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಮೊದಲ ದಿನದ ಗಳಿಕೆ ಎಷ್ಟು?

Golden Star Ganesh krishnam pranaya sakhi first day collection

ಬೆಂಗಳೂರು: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾ  ಮೊದಲ ದಿನ ಉತ್ತಮ ಗಳಿಕೆ ಮಾಡಿದೆ.ಇನ್ನು, ಐಎಂಡಿಬಿಯಲ್ಲಿ 8.7 ರೇಟಿಂಗ್ ಸಿಕ್ಕಿದೆ. ಶ್ರೀನಿವಾಸ್ ರಾಜು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಲ ಸಿಕ್ಕಿದೆ.

`ಕೃಷ್ಣಂ ಪ್ರಣಯ ಸಖಿ’ ನೋಡಿದ ಅನೇಕರು ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಚಿತ್ರ ಮೊದಲದಿನ 1.25 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು Sacnilk ವೆಬ್​ಸೈಟ್ ವರದಿ ಮಾಡಿದೆ. ಇಂದು (ಆಗಸ್ಟ್ 16), ಶನಿವಾರ (ಆಗಸ್ಟ್ 17), ಭಾನುವಾರ (ಆಗಸ್ಟ್ 18) ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಸಿನಿಮಾ ತಂಡದ ಕಡೆಯಿಂದ ಇನ್ನಷ್ಟೇ ಪಕ್ಕಾ ಲೆಕ್ಕ ಬರಬೇಕಿದೆ. ಕೃಷ್ಣಂ ಪ್ರಣಯ ಸಖಿ’ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ ಸದ್ಯ (ಆಗಸ್ಟ್​ 16ರ ಮುಂಜಾನೆ 9 ಗಂಟೆ ವೇಳೆಗೆ) 9.2 ರೇಟಿಂಗ್ ಸಿಕ್ಕಿದೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ.ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ (Golden Star Ganesh) ಹಾಗೂ ಇನ್ಸ್ಟಾ ರೀಲ್ಸ್ ಗಳಲ್ಲಿ ಭಾರಿ ಟ್ರೆಂಡ್ ಹುಟ್ಟುಹಾಕಿದೆ.

ಇದನ್ನೂ ಓದಿ: Golden Star Ganesh: ಹೇಗಿದೆ “ಕೃಷ್ಣಂ ಪ್ರಣಯ ಸಖಿ” ಸಿನಿಮಾ? ಫ್ಯಾನ್ಸ್‌ ಹೇಳೋದೇನು?

ಯೂಟ್ಯೂಬ್‌ನಲ್ಲಿ ಎಂಟು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿರುವ ಈ ಹಾಡು ಇನ್ಸ್ಟಾ ರೀಲ್ಸ್ ನಲ್ಲಿ 2 ನೇ ಸ್ಥಾನದಲ್ಲಿದೆ. ಟ್ವಿಟರ್ ನಲ್ಲೂ ಹೊಸ ದಾಖಲೆ ಬರೆದಿದೆ. ಟ್ವಿಟರ್ ಹಾಗೂ ಇನ್ಸ್ಟಾ ರೀಲ್ಸ್ ನಲ್ಲಿ ಈ ರೀತಿಯ ಜನಪ್ರಿಯತೆ ಸಿಗುತ್ತಿರುವ ಕನ್ನಡದ ಮೊದಲ ಹಾಡು ಇದಾಗಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ. ಹಾಡು ಬರೆದಿರುವ ನಾಗೇಂದ್ರ ಪ್ರಸಾದ್ ಸಹ ಈವರೆಗೂ ನಾನು ಬರೆದಿರುವ ಹಾಡುಗಳಲ್ಲಿ ಇದು ನನ್ನ ಮೆಚ್ಚುಗೆಯ ಹಾಡು ಎನ್ನುತ್ತಾರೆ.

ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು‌ ಯಶಸ್ವಿಯಾಗಿರುವುದಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಆಡಿಯೋ ಹಕ್ಕು ಪಡಿದಿರುವ ಆನಂದ್ ಆಡಿಯೋದವರು ಆನಂದ ಪಟ್ಟಿದ್ದಾರೆ‌. ಈ ಸಂಭ್ರಮದ ಸಮಯದಲ್ಲಿ ನಿರ್ಮಾಪಕರು ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

Exit mobile version