Site icon Vistara News

Actor Jaggesh: ಅವಹೇಳನಕಾರಿ ಸುದ್ದಿ ಪ್ರಕಟ ಮಾಡೋರಿಗೆ ತಮ್ಮದೇ ರೀತಿಯಲ್ಲಿ ಉತ್ತರ ಕೊಟ್ಟ ಜಗ್ಗೇಶ್‌!

Jaggesh Come Up With Injunction Order Against Defendants In Publishing Any News

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ (Actor Jaggesh) ಅವರು ಸೋಷಿಯಲ್‌ ಮೀಡಿಯಾ ಮೂಲಕ ಆಗಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಕೆಲವು ಮಾಧ್ಯಮಗಳಲ್ಲಿ ಅವರ ಹೆಸರಿನಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇದೀಗ ಜಗ್ಗೇಶ್‌ ಅವರು ತಮ್ಮ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಟೀಕೆ ಮಾಡುವವರಿಗೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ.

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ. ಏಪ್ರಿಲ್ 25ಕ್ಕೆ ಮುಂದಿನ ವಿಚಾರಣೆ ಇದೆ. ಜಗ್ಗೇಶ್ ಪರ ವಕೀಲರು ಇದನ್ನು ಎಲ್ಲರ ಗಮನಕ್ಕೆ ತಂದಿದ್ದಾರೆ.

ತೇಜೋವಧೆ ಎಂದು ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ FIR!

ಕೆಲವು ದಿನಗಳ ಹಿಂದೆಯಷ್ಟೇ ಜಗ್ಗೇಶ್‌ ಅವರು ‘ರಂಗನಾಯಕ’ ಸಿನಿಮಾ ಕಾರ್ಯಕ್ರಮದಲ್ಲಿ ʻಯಾವನೋ ಕಿತ್ತೋದ್‌ ನನ್ಮಗ ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡʼ ಎಂದು ಹೇಳಿದ್ದರು. ಈ ಮಾತಿಗೆ ಸೋಷಿಯಲ್‌ ಮೀಡಿಯಾದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ವರ್ತೂರ್‌ (Varthur Santhosh) ಕೂಡ ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದಾದ ಬಳಿಕ ಕೆಲವು ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಜಗ್ಗೇಶ್‌ ಕೂಡಲೇ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ನೀಡಿದ್ದರು. ಆದರೀಗ ಆ ಕಿಡಿಗೇಡಿಗಳ ವಿರುದ್ಧ ನಟ ಜಗ್ಗೇಶ್ ಎಫ್‌ಐಆರ್‌ ದಾಖಲಿಸಿದ್ದರು. ವಿಚಾರ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಮಾತನಾಡುತ್ತಿರುವವರ ಮೇಲೆ ಜಗ್ಗೇಶ್ ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: Actor Jaggesh : ಹುಲಿಯುಗುರು ಪ್ರಕರಣದಲ್ಲಿ ಜಗ್ಗೇಶ್‌ಗೆ ಹೈಕೋರ್ಟ್‌ BIG RELIEF ; ನೋಟಿಸ್‌ ಗೆ ತಡೆ

ಜಗ್ಗೇಶ್‌ ಹಾಸ್ಯನಟನಾಗಿ ಗುರುತಿಸಿಕೊಂಡಿದ್ದಾರೆ. ‘ರಾಘವೇಂದ್ರ ಸ್ಟೋರ್ಸ್’, ‘ತೋತಾಪುರಿ 2’ ಸಿನಿಮಾಗಳು ರಿಲೀಸ್ ಆಗಿವೆ. ಈಗ ‘ರಂಗನಾಯಕ’ ಸಿನಿಮಾ ಬರುತ್ತಿದೆ. ಈ ಚಿತ್ರಕ್ಕೆ ‘ಮಠ’ ಖ್ಯಾತಿಯ ಗುರುಪ್ರಸಾದ್ ನಿರ್ದೇಶನ ಮಾಡಿದ್ದಾರೆ. ವಿಖ್ಯಾತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಮಠ , ಎದ್ದೇಳು ಮಂಜುನಾಥ ಚಿತ್ರಗಳ ಮೂಲಕ ಹೊಸ ದಾಖಲೆಯನ್ನೇ ಸೃಷ್ಟಿಸಿದ್ದ ಗುರುಪ್ರಸಾದ್ -ಜಗ್ಗೇಶ್ ಜೋಡಿ ನಗುವಿನ ಅಲೆ ಎಬ್ಬಿಸಲು ಮತ್ತೊಮ್ಮೆ ಪ್ರೇಕ್ಷಕರೆದುರು ಬರುತ್ತಿದ್ದಾರೆ. ಶಿವರಾತ್ರಿಯ ವಿಶೇಷವಾಗಿ ಮಾರ್ಚ್ 8ರಂದು ಬಿಡುಗಡೆಯಾಗುತ್ತಿದೆ.

Exit mobile version