Site icon Vistara News

Kiccha Sudeep: ಕಿಚ್ಚ ಸುದೀಪ್ ಸಿನಿಮಾಗೆ ‘ಜೈಲರ್’ ಸ್ಟಂಟ್ ಮಾಸ್ಟರ್ ಎಂಟ್ರಿ!

Kiccha Sudeep jailer fame kevin has composed stunt in max

ಬೆಂಗಳೂರು: ʻವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ವಿಜಯ್ ಕಾರ್ತಿಕೇಯನ್ ನಿರ್ದೇಶನದ ಈ ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಸುದೀಪ್ ಮ್ಯಾಕ್ಸ್ ಚಿತ್ರಕ್ಕೆ ಹೊಸ ಸ್ಟಂಟ್ಸ್ ಮಾಸ್ಟರ್ ಬಂದಿದ್ದಾರೆ. ಕಳೆದ ವರ್ಷ ಸೂಪರ್ ಹಿಟ್ ಆಗಿದ್ದ ರಜನಿ ‘ಜೈಲರ್’ ಚಿತ್ರಕ್ಕೆ ಸ್ಟಂಟ್ಸ್ ಕಂಪೋಸ್ ಮಾಡಿದ್ದ ಕೆವಿನ್ ಇದೀಗ ‘ಮ್ಯಾಕ್ಸ್’ ತಂಡ ಸೇರಿದ್ದಾರೆ.

ಖ್ಯಾತ ಫೈಟ್ ಮಾಸ್ಟರ್ ಸ್ಟಂಟ್‌ ಶಿವ ಪುತ್ರ ಕೆವಿನ್. ಮಾರ್ಷಲ್ ಆಟ್ಸ್ ಸೇರಿದಂತೆ ಹಲವು ಕಲೆಗಳನ್ನು ಕಲಿತಿದ್ದ ಕೆವಿನ್ ಸದ್ಯ ಕಾಲಿವುಡ್‌ನಲ್ಲಿ ಗಮನ ಸೆಳೆದಿದ್ದಾರೆ. ರಜನಿಕಾಂತ್ ನಟನೆಯ ‘ಜೈಲರ್’ ಚಿತ್ರದ ಮೂಲಕ ಸ್ಟಂಟ್ ಮಾಸ್ಟರ್ ಆಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಕೆವಿನ್ ಇದೀಗ ಕಿಚ್ಚನಿಗೆ ಫೈಟ್ ಕಂಪೋಸ್ ಮಾಡಿದ್ದಾರೆ. ನಾಲ್ಕೈದು ದಿನಗಳ ಕಾಲ ಆ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೆದಿದೆ ಎಂದು ವರದಿಯಾಗಿದೆ. ಕನ್ನಡ ಸಿನಿಮಾಗಳಲ್ಲಿ ಇತ್ತೀಚೆಗೆ ಚೇತನ್ ಡಿಸೋಜಾ ಸ್ಟಂಟ್ಸ್ ಹೈಲೆಟ್ ಆಗುತ್ತಿದೆ. ‘ಮ್ಯಾಕ್ಸ್’ ಚಿತ್ರದಲ್ಲಿ ಕೆವಿನ್ ಒಂದು ಫೈಟ್ ಮಾತ್ರ ಕಂಪೋಸ್ ಮಾಡಿದ್ದಾರೆ. ಇನ್ನುಳಿದ ಆಕ್ಷನ್ ಸೀಕ್ವೆನ್ಸ್ ಚೇತನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂದಿದೆ ಎಂದು ವರದಿಯಾಗಿದೆ. ಮಹಾಬಲಿಪುರಂನಲ್ಲಿ ಸೆಟ್ ಹಾಕಿ ‘ಮ್ಯಾಕ್ಸ್’ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗುತ್ತಿದೆ.

ಇದನ್ನೂ ಓದಿ: Kiccha Sudeep: ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ ಸುದೀಪ್‌!

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ʻಅರ್ಜುನ್ ಮಹಾಕ್ಷಯ್ʼ ಹೆಸರಿನ ಸುದೀಪ್ ಪಾತ್ರ ಸ್ಪೆಷಲ್ ಆಗಿಯೇ ಇರಲಿದೆ ಎಂದು ವರದಿಯಾಗಿದೆ. ʻಮ್ಯಾಕ್ಸ್ʼ ಸಿನಿಮಾದಲ್ಲಿ ಸುದೀಪ್ ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ʻಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Exit mobile version