Site icon Vistara News

Juni Movie: ʼಜೂನಿʼ ಚಿತ್ರದ ಟ್ರೈಲರ್‌ ಔಟ್‌; ಶೆಫ್‌ ಪಾತ್ರದಲ್ಲಿ ಪೃಥ್ವಿ ಅಂಬಾರ್

juni

juni

ಬೆಂಗಳೂರು: ʼದಿಯಾʼ ಸಿನಿಮಾ ಬಳಿಕ ಸ್ಯಾಂಡಲ್‌ವುಡ್‌ ನಟ ಪೃಥ್ವಿ ಅಂಬಾರ್ (Pruthvi Ambaar) ಒಂದರ ಹಿಂದೊಂದು ವಿಶಿಷ್ಠ ಸಿನಿಮಾಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹೊಸ ಸಿನಿಮಾವೊಂದು ಈಗ ಬಿಡುಗಡೆಗೆ ಸಿದ್ಧವಾಗಿದೆ. ಆ ಸಿನಿಮಾವೇ ‘ಜೂನಿ’ (Juni Movie). ಟೈಟಲ್‌ನಿಂದಲೇ ಗಮನ ಸೆಳೆಯುತ್ತಿರುವ ಈ ಚಿತ್ರದ ಟ್ರೈಲರ್‌ ಅನ್ನು ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆ ಮಾಡಲಾಗಿದೆ. ಸಿನಿಮಾ ಫೆಬ್ರವರಿ 9ರಂದು ತೆರೆ ಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಮಾಧ್ಯಮದರೊಂದಿಗೆ ಮಾಹಿತಿ ಹಂಚಿಕೊಂಡಿದೆ.

ಪೃಥ್ವಿ ಅಂಬಾರ್ ಮಾತನಾಡಿ, ʼʼನಿರ್ದೇಶಕ ವೈಭವ್ ಕ್ಲಾರಿಟಿಯಿಂದಲೇ ಸಿನಿಮಾ ಮಾಡಿದ್ದಾರೆ. ವಯಸ್ಸಿನಲ್ಲಿ ನನಗಿಂತ ಚಿಕ್ಕವರು. ಬುದ್ಧಿವಂತಿಕೆ ,ಅನುಭದಲ್ಲಿ ತುಂಬಾ ದೊಡ್ಡವರು. ಈ ಸಿನಿಮಾದಲ್ಲಿ ಕ್ರಿಕೆಟ್ ಟೀಂ ಎಂದುಕೊಂಡರೆ ಅತಿ ಹೆಚ್ಚು ಸ್ಕ್ರೋರ್ ಮಾಡುವವರು ವೈಭವ್. ಅವರಷ್ಟೇ ಸ್ಕ್ರೋರ್ ಮಾಡುವವರು ರಿಷಿಕಾ. ಎರಡೂವರೆ ತಿಂಗಳ ಬಹಳಷ್ಟು ರಿಹರ್ಸಲ್ ಮಾಡಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಬೇಕು ಎಂದು ತುಂಬ ಡೆಡಿಕೇಟೆಡ್ ಆಗಿ ಚಿತ್ರ ಮಾಡಿದ್ದಾರೆ. ನನ್ನದು 50% ಪರಿಶ್ರಮ ಅಷ್ಟೇ ಇರುವುದು. ಎಲ್ಲರದ್ದೂ 100ರಷ್ಟು ಇದೆʼʼ ಎಂದು ತಿಳಿಸಿದರು.

ನಾಯಕಿ ರಿಷಿಕಾ ಮಾತನಾಡಿ, ʼʼನಾವು 2022ರಲ್ಲಿ ಈ ಚಿತ್ರದ ಶೂಟಿಂಗ್ ಶುರು ಮಾಡಿದೆವು. ಆ ಸಮಯದಲ್ಲಿ ನನ್ನದು ಎರಡನೇ ಪ್ರಾಜೆಕ್ಟ್. ನನಗೆ ಈ ರೀತಿ ಕ್ಯಾರೆಕ್ಟರ್ ಸಿಕ್ಕಿರುವುದು ಖುಷಿ ಇದೆ. ತುಂಬಾ ರಿಹರ್ಸಲ್ ಮಾಡಿದ್ದೇವೆ. ಇದು ನನ್ನ ಒಬ್ಬಳ ಪ್ರಯತ್ನವಲ್ಲ. ಇಡೀ ತಂಡದ ಪ್ರಯತ್ನ. ಈ ಚಿತ್ರದಲ್ಲಿ ಒಂದೊಳ್ಳೆ ಮೆಸೇಜ್ ಇದೆʼʼ ಎಂದರು.

ನಿರ್ದೇಶಕ ವೈಭವ್ ಮಹಾದೇವ್ ಮಾತನಾಡಿ, ʼʼಜೂನಿʼ ಕಥೆ ಮೇಲೆ ತುಂಬಾ ನಂಬಿಕೆ ಇದೆ. ಆ ಕಥೆ ಮೇಲೆ ಇರುವ ನಂಬಿಕೆಯಿಂದ ನಾವಿಲ್ಲಿ ಕುಳಿತುಕೊಂಡಿದ್ದೇವೆ. ನಾನೊಂದು ಕಥೆಯನ್ನು ಜನರಿಗೆ ಹೇಳುತ್ತಿದ್ದೇನೆ, ಅದು ಒಬ್ಬನಿಗೆ ಆಗಲಿ, ಅದು ಸಿನಿಮಾವಾಗಲಿ. ಅದನ್ನು ಕೋಟ್ಯಾಂತರ ಜನ ಕನ್ನಡಿಗರ ಮುಂದೆ ಇಡಬೇಕು ಎಂದರೆ ಅದಕ್ಕೆ ಲಕ್, ಹಾರ್ಡ್ ವರ್ಕ್ ಎಲ್ಲವೂ ಬೇಕು. ಈ ಚಿತ್ರ ಮಾಡಿರುವುದಕ್ಕೆ ನನಗೂ ತೃಪ್ತಿ ಇದೆ. ಸ್ಪ್ಲಿಟ್ ಪರ್ಸನಾಲಿಟಿ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಜನಕ್ಕೆ ಈ ಕಂಡಿಷನ್ ಬಗ್ಗೆ ಅರ್ಥ ಮಾಡಿಸಬೇಕು ಎನ್ನುವುದು ನನ್ನ ಪ್ರಯತ್ನʼʼ ಎಂದರು.

‘ಜೂನಿ’ ಸಿನಿಮಾದ ನಿರ್ದೇಶಕ ವೈಭವ್ ಮಹಾದೇವ್ ಈಗಾಗಲೇ ‘ಜನ್ನಿ’ ಎನ್ನುವ ಕಿರುಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ಈಗ ‘ಜೂನಿ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆಯನ್ನು ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್‌ನಲ್ಲಿ ನಿರ್ದೇಶನ ಬಗ್ಗೆ ತರಬೇತಿಯನ್ನು ಪಡೆದಿದ್ದಾರೆ. ಈಗ ‘ಜೂನಿ’ ಸಿನಿಮಾಗೆ ಕಥೆ- ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

‘ಜೂನಿ’ಯ ಕಥೆ

ʼಪ್ರೀತಿ ಯಾರ ಮೇಲೆ ಹುಟ್ಟುತ್ತೋ.. ಅವರ ಮೇಲೆ ಪ್ರೀತಿ ಆಗುತ್ತಾ?ʼ ಇಂತಹದ್ದೊಂದು ಪ್ರಶ್ನೆಯನ್ನು ಇಟ್ಟುಕೊಂಡು ಕಥೆಯನ್ನು ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ಬ್ಯಾನರ್‌ನಡಿ ಮೋಹನ್ ಕುಮಾರ್ ಎಂಬುವವರು ಹಣ ಹಾಕಿದ್ದಾರೆ. ಶ್ರೇಯಸ್ ವೈ.ಎಸ್. ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ; ಶೆಫ್ ಆದ ಪೃಥ್ವಿ ಅಂಬಾರ್!

‘ಜೂನಿ’ ಸಿನಿಮಾಕ್ಕೆ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾವನ್ನು ಚಿತ್ರತಂಡ ಫೆಬ್ರವರಿ 9ಕ್ಕೆ ಬಿಡುಗಡೆ ಮಾಡುವುಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದೆ. ‘ಲವ್ ಮಾಕ್ಟೇಲ್ 2’ ಖ್ಯಾತಿಯ ನಕುಲ್ ಅಭ್ಯಂಕರ್ ಸಂಗೀತ ನೀಡಿದ್ದಾರೆ. ಶಶಾಂಕ್ ನಾರಾಯಣ ಎಡಿಟಿಂಗ್ ಮಾಡಿದ್ರೆ, ಅಜಿನ್ ಬಿ., ಜಿತಿನ್ ದಾಸ್ ಕ್ಯಾಮರಾ ವರ್ಕ್ ಇದೆ. ನವೀನ್ ಈ ಸಿನಿಮಾಗೆ ಆರ್ಟ್ ಡೈರೆಕ್ಷನ್ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Exit mobile version