Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ! - Vistara News

ಸ್ಯಾಂಡಲ್ ವುಡ್

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Kannada Actress: ಇಂಜಿನಿಯರಿಂಗ್‍ ಮುಗಿಸಿರುವ ಮಾನ್ಯ, ‘ಬ್ಯಾಕ್‍ ಬೆಂಚರ್ಸ್’ ಚಿತ್ರದ ನಾಯಕಿಯರಲ್ಲೊಬ್ಬರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಮಾಯ ಎಂಬ ಪಾತ್ರವನ್ನು ನಿರ್ವಹಿಸಿರುವ ಅವರು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

VISTARANEWS.COM


on

Kannada Actress Many opportunities for this actress before the release Back Benchers'!
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಶೇಖರ್ ನಿರ್ಮಿಸಿ-ನಿರ್ದೇಶಿಸಿರುವ ‘ಬ್ಯಾಕ್‍ ಬೆಂಚರ್ಸ್’ಚಿತ್ರವು ಇದೇ ಜುಲೈ 19 ರಾಜ್ಯಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಮೂಲಕ ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಕುಂಕುಮ್‍, ಅನುಷಾ ಸುರೇಶ್, ವಿಯೋಮಿ ವನಿತಾ ಸೇರಿದಂತೆ ಹಲವು ಯುವ ಪ್ರತಿಭೆಗಳು ಕನ್ನಡ ಚಿತ್ರರಂಗಕ್ಕೆ ಹೊಸದಾಗಿ ಪರಿಚಯವಾಗುತ್ತಿದ್ದಾರೆ. ಈ ಪೈಕಿ ಮಾನ್ಯ ಗೌಡ ಸಹ ಒಬ್ಬರು.

ಇಂಜಿನಿಯರಿಂಗ್‍ ಮುಗಿಸಿರುವ ಮಾನ್ಯ, ‘ಬ್ಯಾಕ್‍ ಬೆಂಚರ್ಸ್’ ಚಿತ್ರದ ನಾಯಕಿಯರಲ್ಲೊಬ್ಬರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಮಾಯ ಎಂಬ ಪಾತ್ರವನ್ನು ನಿರ್ವಹಿಸಿರುವ ಅವರು, ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.

‘ಬ್ಯಾಂಕ್‍ ಬೆಂಚರ್ಸ್’ ಚಿತ್ರದ ಕುರಿತು ಮಾತನಾಡುವ ಅವರು, ‘ಮೂರು ವರ್ಷಗಳ ಹಿಂದೆ ನಾನು ಇಂಜಿನಿಯರಿಂಗ್‍ ಮುಗಿಸಿದೆ. ನನಗೆ ಬಾಲ್ಯದಿಂದಲೂ ನಟನೆಯ ಬಗ್ಗೆ ಆಸಕ್ತಿ ಇತ್ತು. ಶಾಸ್ತ್ರೀಯ ನೃತ್ಯ ಕಲಿತಿದ್ದೇನೆ. ರಂಗಭೂಮಿಯಲ್ಲಿ ಸಕ್ರಿಯವಾಗಿದ್ದೆ. ಹೀಗಿರುವಾಗಲೇ ‘ಬ್ಯಾಕ್‍ ಬೆಂಚರ್ಸ್’ ಚಿತ್ರಕ್ಕೆ ಆಡಿಷನ್‍ ಆಗುತ್ತಿರುವ ವಿಷಯ ಗೊತ್ತಾಯಿತು. ಆ ಆಡಿಷನ್‍ನಲ್ಲಿ ಭಾಗವಹಿಸಿದ್ದೆ. ಇದರಲ್ಲಿ ಸುಮಾರು 700 ಯುವಕ-ಯುವತಿಯರು ಭಾಗವಹಿಸಿದ್ದರು. ನಿರ್ದೇಶಕರು ಕೊಟ್ಟ ಕೆಲವು ದೃಶ್ಯಗಳನ್ನು ನಾನು ನನ್ನದೇ ರೀತಿಯಲ್ಲಿ ಅಭಿನಯಿಸಿ ತೋರಿಸಿದೆ. ಅಷ್ಟೊಂದು ಜನರ ಮಧ್ಯೆ ನಾನು ಆಯ್ಕೆಯಾಗುತ್ತೀನೋ ಇಲ್ಲವೋ ಎಂಬ ಅನುಮಾನ ಇತ್ತು. ಆದರೆ, ಅಂತಿಮವಾಗಿ ಚಿತ್ರತಂಡಕ್ಕ ಆಯ್ಕೆಯಾದ 30 ಜನರಲ್ಲಿ ನಾನು ಒಬ್ಬಳಾಗಿದ್ದೆ’ ಎನ್ನುತ್ತಾರೆ ಮಾನ್ಯ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಆಡಿಷನ್‍ ಮುಗಿದ ಮೇಲೆ ನಟ-ನಿರ್ದೇಶಕ ಸುಚೇಂದ್ರ ಪ್ರಸಾದ್‍, ಆಯ್ಕೆಯಾದ 30 ಜನರಿಗಾಗಿ ಒಂದು ಕಾರ್ಯಾಗಾರ ಮಾಡಿದ್ದಾರೆ. ಅದರಲ್ಲಿ ಚಿತ್ರ ನಟನೆ ಕುರಿತು ಹಲವು ವಿಷಯಗಳನ್ನು ಹೇಳಿಕೊಟ್ಟಿದ್ದಾರೆ. ಆ ನಂತರ ಆರು ತಿಂಗಳ ಕಾಲ ಸಾಕಷ್ಟು ರಿಹರ್ಸಲ್‍ ಮಾಡಿ, ನಂತರ ಚಿತ್ರತಂಡವು ಚಿತ್ರೀಕರಣಕ್ಕೆ ಹೊರಟಿದೆ.

ಚಿತ್ರೀಕರಣದ ಅನುಭವ ಮರೆಯಲಾಗದ್ದು ಎನ್ನುವ ಮಾನ್ಯ, ‘ನಾನು ಹೊಸಬಳು. ಹಾಗಾಗಿ ಸಹಜವಾಗಿಯೇ ನರ್ವಸ್‍ ಆಗಿದ್ದೆ. ಆದರೆ, ನಮ್ಮ ನಿರ್ದೇಶಕರಾದ ರಾಜಶೇಖರ್ ಮತ್ತು ಛಾಯಾಗ್ರಾಹಕ ಮನೋಹರ್ ಜೋಷಿ ನನಗೂ ಸೇರಿದಂತೆ ಎಲ್ಲರಿಗೂ ಬಹಳ ಚೆನ್ನಾಗಿ ಗೈಡ್‍ ಮಾಡಿದ್ದಾರೆ. ನನಗೆ ತುಂಬಾ ಚೆನ್ನಾಗಿ ಹೇಳಿಕೊಟ್ಟಿರುವುದಷ್ಟೇ ಅಲ್ಲ, ನನ್ನನ್ನು ಬಹಳ ಚೆನ್ನಾಗಿ ತೆರೆಯ ಮೇಲೆ ತೋರಿಸಿದ್ದಾರೆ. ಬರೀ ನಟನೆ ಅಷ್ಟೇ ಅಲ್ಲ, ಚಿತ್ರದ ಪೋಸ್ಟ್ ಪ್ರೊಡಕ್ಷನ್‍ ಮತ್ತು ಮಾರ್ಕೆಟಿಂಗ್‍ ವಿಭಾಗಗಳಲ್ಲೂ ತೊಡಗಿಸಿಕೊಂಡಿದ್ದೇನೆ. ಒಟ್ಟಾರೆ ಈ ಚಿತ್ರದ ಮೂಲಕ ಸಾಕಷ್ಟು ವಿಷಯಗಳನ್ನು ಕಲಿತಿದ್ದೇನೆ. ಅವರಿಗೆ ನಾನು ಸದಾ ಋಣಿ’ ಎನ್ನುತ್ತಾರೆ.

ತಮ್ಮ ಪಾತ್ರದ ಬಗ್ಗೆ ಮಾತನಾಡುವ ಮಾನ್ಯ. ‘ಚಿತ್ರದಲ್ಲಿ ನಾಲ್ಕು ಪ್ರಮುಖ ನಾಯಕಿಯರ ಪಾತ್ರ ಇದೆ. ರಿಹರ್ಸಲ್‍ ಸಮಯದಲ್ಲಿ ಈ ನಾಲ್ಕೂ ಪಾತ್ರಗಳನ್ನು ಮಾಡಿದ್ದೆ. ಅದರಲ್ಲಿ ನನಗೆ ಮಾಯ ಪಾತ್ರ ಬಹಳ ಇಷ್ಟವಾದ ಪಾತ್ರ. ಈ ಪಾತ್ರ ನನಗೆ ಸೂಟ್‍ ಆಗುತ್ತದೆ, ನಾನಿದನ್ನು ನಿಭಾಯಿಸಬಲ್ಲೆ ಎಂಬ ನಂಬಿಕೆಯಿಂದ ಈ ಪಾತ್ರ ಕೊಟ್ಟಿದ್ದಾರೆ. ನಾನಿಲ್ಲಿ ಬಜಾರಿಯಾಗಿ ಕಾಣಿಸಿಕೊಂಡಿದ್ದೇನೆ. ಬಹಳ ಬೋಲ್ಡ್ ಆದ ಪಾತ್ರ ಇದು. ನನಗಿಷ್ಟವಾದ ಪಾತ್ರ ಸಿಕ್ಕ ಖುಷಿ ಇದೆ. ಅದು ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ’ ಎನ್ನುತ್ತಾರೆ ಮಾನ್ಯ.

‘ಬ್ಯಾಕ್‍ ಬೆಂಚರ್ಸ್’ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿರುವ ಮಾನ್ಯ, ಅದರ ಬಿಡುಗಡೆಗೆ ಕಾದಿದ್ದಾರೆ. ಈ ಮಧ್ಯೆ, ‘ಮಾನ್ಸೂನ್ ರಾಗ’ ಮತ್ತು ‘ವೀರಂ’ ಚಿತ್ರಗಳಲ್ಲೂ ನಟಿಸಿದ್ದಾರೆ. ಜೊತೆಗೆ ತೆಲುಗಿನಲ್ಲಿ ‘ಮಿಸಸ್ ಕರ್ನಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದಾರಂತೆ. ಈ ಮಧ್ಯೆ, ಒಂದಿಷ್ಟು ಪಾತ್ರಗಳು ಹುಡುಕಿಕೊಂಡು ಬರುತ್ತಿದ್ದು, ‘ಬ್ಯಾಕ್‍ ಬೆಂಚರ್ಸ್‍’ ಬಿಡುಗಡೆಯಾದ ಮೇಲೆ ನೋಡಿಕೊಂಡು ತೀರ್ಮಾನಿಸುವುದಾಗಿ ಮಾನ್ಯ ಹೇಳುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

Dhruva Sarja: ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

VISTARANEWS.COM


on

Martin' movie delayed even after 3 years
Koo

ಬೆಂಗಳೂರು: ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 11ರಂದು 5 ಭಾಷೆಗಳಲ್ಲಿ ತೆರೆಗೆ ಬರಲಿರುವ ಈ ಚಿತ್ರಕ್ಕೆ ಧ್ರುವ ಅವರ ಸ್ವಂತ ಸೋದರ ಮಾವ ಅರ್ಜುನ್‌ ಸರ್ಜಾ ಕತೆ ಕೊಟ್ಟು, ʻಮಾರ್ಟಿನ್‌ʼಗೆ ಬೆಂಬಲವಾಗಿ ನಿಂತಿದ್ದಾರೆ. ನಿರ್ಮಾಪಕ ಉದಯ್‌ ಮೆಹ್ತಾ ಸಾಕಷ್ಟು ಹಣ ಸುರಿದಿದ್ದಾರೆ. ಮೂರು ವರ್ಷವಾದರೂ ಸಿನಿಮಾ ನಾನಾ ಕಾರಣಕ್ಕೆ ತಡವಾಗುತ್ತಲೇ ಬಂತು. ಆ ಕಾರಣಗಳಲ್ಲಿ ಚಿತ್ರದ ವಿಎಫ್‌ಎಕ್ಸ್‌ ಕೆಲಸ ಕೂಡ ಒಂದು. ನಿರ್ಮಾಪಕ ಉದಯ್ ಮೆಹ್ತಾ ನಿರ್ದೇಶಕರ ಸೂಚನೆ ಮೇರೆಗೆ ಈ ಚಿತ್ರದ ವಿಎಫ್ಎಕ್ಸ್​ನ ಜವಾಬ್ಧಾರಿಗಳನ್ನೆಲ್ಲ ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ಸಂಸ್ಥೆಗೆ ವಹಿಸಿದ್ದರು. ಆದರೆ ಅಲ್ಲಿ ಆಗಿದ್ದೇ ಬೇರೆ.

ಡಿಜಿಟಲ್ ಟೆರೇನ್ ಪ್ರೊಡಕ್ಷನ್ ಪ್ರೈ. ಲಿಮಿಟೆಡ್ ನ ಸತ್ಯ ರೆಡ್ಡಿ ಮತ್ತು ಸುನಿಲ್ ಕೇಳಿದಾಗೆಲ್ಲ ನಿರ್ಮಾಪಕ ಉದಯ್ ಮೆಹ್ತಾ ದುಡ್ಡು ಕೊಡುತ್ತಲೇ ಬಂದರು. ಎರಡೂವರೆ ಕೋಟಿ ಹಣವನ್ನು ಈ ಸತ್ಯ ರೆಡ್ಡಿ ಮತ್ತು ಸುನಿಲ್ ಎಂಬುವರ ಮೇಲೆ ಸುರಿದರೂ ಕೆಲಸ ಮಾತ್ರ ಆಗಲಿಲ್ಲ. ಹಣದ ವ್ಯವಹಾರದ ದಾಖಲೆ ಸಮೇತ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಮೆಟ್ಟಿಲೇರಿದ ನಿರ್ಮಾಪಕ ಉದಯ್ ಮೆಹ್ತಾ, ವಂಚಕರಾದ ಸತ್ಯ ರೆಡ್ಡಿ ಮತ್ತು ಸುನಿಲ್ ವಿರುದ್ದ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

ಉದಯ್ ಮೆಹ್ತಾ ನೀಡಿದ್ದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸದ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಲೆಮರೆಸಿಕೊಂಡಿದ್ದ ಸತ್ಯ ರೆಡ್ಡಿಯನ್ನು ಬಂಧಿಸಿದ್ದಾರೆ.

ಉದಯ್ ಮೆಹ್ತಾ, 2.5 ಕೋಟಿ ಲಾಸ್ ಆಗಿದ್ದಷ್ಟೇ ಅಲ್ಲದೇ ಸಿನಿಮಾ 6 ತಿಂಗಳಿಗೂ ಹೆಚ್ಚು ಕಾಲ ತಡವಾಗಿದೆ ಎಂದಿದ್ದಾರೆ. ಇಷ್ಟಾದರೂ ಇದೀಗ ಸಿನಿಮಾ ಅಕ್ಟೋಬರ್ ಹನ್ನೊಂದಕ್ಕೆ ಮಿಂಚಲು ರೆಡಿಯಾಗಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Vaibhavi Jagdish: ಈ ಪೋಸ್ಟ್‌ಗೆ ವೈಭವಿ ಜಗದೀಶ್ ಕಮೆಂಟ್ಸ್ ಆಫ್‌ ಮಾಡಿಟ್ಟಿದ್ದಾರೆ. ತಂದೆ ಭಯದಿಂದ ಆಫ್ ಮಾಡಿರಬೇಕು ಎಂದು ಕೆಲವರು ಹೇಳಿದ್ದರೆ.ಕೊರೋನಾ ಲಾಕ್‌ಡೌನ್‌ ಸಮಯದ ನಂತರ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಈ ಸುಂದರಿ ಸಿಕ್ಕಾಪಟ್ಟೆ ಸಣ್ಣಗಾಗಿದ್ದಾರೆ.

VISTARANEWS.COM


on

Vaibhavi Jagdish Bold Photo shoot
Koo

ಕನ್ನಡದ ಹಿರಿಯ ನಟ ಜೈ ಜಗದೀಶ್ ಪುತ್ರಿ ವೈಭವಿ ಜಗದೀಶ್ (Vaibhavi Jagdish) ಆಗಾಗ ಬೋಲ್ಡ್‌ ಫೋಟೊಶೂಟ್‌ ಮಾಡಿಸಿಕೊಳ್ಳುತ್ತಿರುತ್ತಾರೆ.

ಕೊರೋನಾ ಲಾಕ್‌ಡೌನ್‌ ಸಮಯದ ನಂತರ ಫಿಟ್ನೆಸ್‌ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದ ಈ ಸುಂದರಿ ಸಿಕ್ಕಾಪಟ್ಟೆ ಸಣ್ಣಗಾಗಿದ್ದಾರೆ. ಇದೀಗ ಬಟ್ಟೆಯ ಜಿಪ್‌ ತೆಗೆದು ಫೋಟೋ ಕೊಟ್ಟಿರುವುದು ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ.

ಇದನ್ನೂ ಓದಿ: The Birthday Boy: ಹೆಸರು ಬದಲಾಯಿಸಿ ಕದ್ದು ಮುಚ್ಚಿ ಸಿನಿಮಾ ಮಾಡಿ, ಮಾಸ್ಕ್‌ ಧರಿಸಿ ಬಂದ ನಿರ್ದೇಶಕ! ಏನು ಕಥೆ?

ವೈಭವಿ ಜಗದೀಶ್‌ ಸಹ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿರಂಗಕ್ಕೆ ಪರಿಚಯವಿರುವ ವೈಭವಿಗೆ ಬಾಲಿವುಡ್‌ನಿಂದ ಆಫರ್‌ ಬರಬಹುದು ಎನ್ನುತ್ತಿದ್ದಾರೆ ಅಭಿಮಾನಿಗಳು. ಕುರಿಗಳು ಸಾರ್ ಕುರಿಗಳು ಮತ್ತು ಕತ್ತೆಗಳು ಸಾರ್ ಕತ್ತೆಗಳು ಸಿನಿಮಾದಲ್ಲಿ ವೈಭವಿ ಜಗದೀಶ್ ಬಾಲ ನಟಿಯಾಗಿ ನಟಿಸಿದ್ದಾರೆ.

ಈ ಪೋಸ್ಟ್‌ಗೆ ವೈಭವಿ ಜಗದೀಶ್ ಕಮೆಂಟ್ಸ್ ಆಫ್‌ ಮಾಡಿಟ್ಟಿದ್ದಾರೆ. ತಂದೆ ಭಯದಿಂದ ಆಫ್ ಮಾಡಿರಬೇಕು ಎಂದು ಕೆಲವರು ಹೇಳಿದ್ದರೆ.

Continue Reading

ಸಿನಿಮಾ

Kiccha Sudeep: ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಗೆ ಕಿಚ್ಚ ಸುದೀಪ್ ಅವಮಾನ! ವಿಡಿಯೊ ನೋಡಿ

Kiccha Sudeep: ಕಿಚ್ಚ ಸುದೀಪ್‌ ಬಗ್ಗೆ ಅವರ ಅಭಿಮಾನಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಏರ್‌ಪೋರ್ಟ್‌ನಲ್ಲಿ 2 ಗಂಟೆ ಕಾದು ಸೆಲ್ಫಿ ಕೇಳಿದ್ದರೆ, 5 ಸೆಕೆಂಡ್‌ ನಿಂತು ಅಭಿಮಾನಿಗಳಿಗೆ ಫೋಟೊ ಕೊಡಲು ಆಗುವುದಿಲ್ಲ ಎಂದರೆ ಇವರೆಲ್ಲ ಯಾವ ಸೆಲೆಬ್ರಿಟಿಗಳು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

By

kiccha sudeep‌ Fans
Koo

ಬೆಂಗಳೂರು: ಪ್ರತಿಯೊಬ್ಬ ಅಭಿಮಾನಿಗೂ ತಮ್ಮ ನೆಚ್ಚಿನ ಹೀರೋ-ಹೀರೋಯಿನ್‌ ಜತೆಗೆ ಫೋಟೊ ಕ್ಲಿಕ್ಕಿಸಿಕೊಳ್ಳಬೇಕು, ಆ ಫೋಟೊವನ್ನು ಸೋಶಿಯಲ್‌ ಮೀಡಿಯಾದಲ್ಲಿ, ಹಾಗೇನೆ ಮೊಬೈಲ್‌ನ ವಾಲ್‌ಪೇಪರ್‌ನಲ್ಲಿ ಹಾಕಿಕೊಳ್ಳಬೇಕು ಎಂಬ ಮಹದಾಸೆ ಇರುತ್ತದೆ. ಇದಕ್ಕಾಗಿ ಮನೆ ಮುಂದೆ ಹೋಗೋದು, ಯಾವುದಾದರೂ ಫಂಕ್ಷನ್‌ನಲ್ಲಿ ಕಂಡರೆ ಸೆಲ್ಫಿಗಾಗಿ ಮುಗಿ ಬೀಳೋದು ಕಾಮನ್‌. ಸದ್ಯ ಸೆಲ್ಫಿಗಾಗಿ 2 ಗಂಟೆ ಕಾದ ಅಭಿಮಾನಿಯೊಬ್ಬರು ಕಿಚ್ಚ ಸುದೀಪ್‌ (Kiccha Sudeep) ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಮಾತ್ರವಲ್ಲ ಸಿನಿಮಾ ಸೆಲೆಬ್ರಿಟಿಗಳನ್ನು ನಂಬಬೇಡಿ, ಅಂಧ ಭಕ್ತರಾಗಬೇಡಿ ಎಂಬ ಧಿಕ್ಕಾರವನ್ನೂ ಕೂಗಿದ್ದಾರೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಿಚ್ಚ ಸುದೀಪ್‌ ಅವರ ಕಾರು ಇರುವುದನ್ನು ಅಭಿಮಾನಿಯೊಬ್ಬರು ಗಮನಿಸಿದ್ದರು. ಹೀಗಾಗಿ ನೆಚ್ಚಿನ ನಟನೊಂದಿಗೆ ಒಂದು ಫೋಟೋ ತೆಗೆದುಕೊಳ್ಳಬೇಕೆಂದು ಸುಮಾರು ಎರಡು ಗಂಟೆಗಳಿಂದ ಕಾದು ಕುಳಿತ್ತಿದ್ದರು. ಏರ್‌ಪೋರ್ಟ್‌ ಹೊರಗೆ ಸುದೀಪ್‌ ಬರುವುದು ಕಂಡು ಅಭಿಮಾನಿ ಸೆಲ್ಫಿ ಕೇಳಿದ್ದಾರೆ. ಆದರೆ ಸುದೀಪ್‌ ಫೋಟೋಗೆ ನಿರಾಕರಿಸಿದ್ದಾರೆ. ಮಾತ್ರವಲ್ಲ ಕಾರಿನ ಬಳಿ ಹೋಗಿ ಫೋಟೊ ತೆಗೆಯಲು ಹೋದಾಗ, ಫೋಟೊ ತೆಗೆಯಬೇಡ ಎಂಬಂತೆ ಸನ್ನೆ ಮಾಡಿದ್ದಾರೆ. ತಮ್ಮ ಬಾಡಿಗಾರ್ಡ್‌ಗೆ ಹೇಳಿ ಫೋಟೊ ತೆಗೆಯಲು ಬಿಡಬೇಡಿ ಎಂಬಂತೆ ಸೂಚಿಸಿದ್ದಾರೆ. ಸೆಲ್ಫಿಗಾಗಿ 2 ಗಂಟೆ ಕಾದಿದ್ದಕ್ಕೆ ಕಿಚ್ಚ ಸುದೀಪ್ ಅವಮಾನ ಮಾಡಿದ್ದಾರೆ. ಸೆಲೆಬ್ರಿಟಿಗಳಿಗೆ ಧಿಕ್ಕಾರ ಎಂದು ವಿಡಿಯೊ ಪೋಸ್ಟ್‌ ಮಾಡಿದ್ದಾರೆ.

https://www.instagram.com/reel/C9bo7Huv0w5/?utm_source=ig_web_button_share_sheet

ಎಲ್ಲ ಸೆಲೆಬ್ರಿಟಿಗಳು ಇದೇ ರೀತಿನೇ ತಮ್ಮ ಫ್ಯಾನ್ಸ್‌ಗಳನ್ನ ಟ್ರೀಟ್‌ ಮಾಡುವುದು. ನಾವು ಗಂಟಗಟ್ಟಲೆ ಕ್ಯೂ ನಿಂತು ನೂರಾರು ರೂ. ಖರ್ಚು ಮಾಡಿ ಮೂರು ಗಂಟೆ ಸಿನಿಮಾ ನೋಡಿ ಬರ್ತಿವಿ. ಆದರೆ 5 ಸೆಕೆಂಡ್‌ ನಿಂತು ಅಭಿಮಾನಿಗಳಿಗೆ ಫೋಟೊ ಕೊಡಲು ಆಗುವುದಿಲ್ಲ ಎಂದರೆ ಇವರೆಲ್ಲ ಯಾವ ಸೀಮೆಯ ಸೆಲೆಬ್ರಿಟಿಗಳು ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಕೆಲಸ ಮಾಡಿಕೊಂಡು ಮನೆಯವರನ್ನೆಲ್ಲ ಚೆನ್ನಾಗಿ ನೋಡಿಕೊಳ್ಳಬೇಕು ಅನ್ನೋ ಮೈಂಡ್‌ಸೆಟ್‌ನ ಇಟ್ಕೊಳ್ಳಿ.. ನಿಮ್ಗೆ ಏನಾದರೂ ಬೇಜಾರು ಆದರೆ ಟೈಂ ಪಾಸ್‌ಗಷ್ಟೇ ಸಿನಿಮಾ ನೋಡಿ. ಅದು ಬಿಟ್ಟು ಹೀರೋಗಳಿಗಾಗಿ ನಿಮ್ಮ ಮೈಮೇಲೆ ಅವರ ಹೆಸರಿನ ಟ್ಯಾಟು ಎಲ್ಲ ಹಾಕಿಸಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

https://www.instagram.com/reel/C9bo7Huv0w5/?igsh=bXZzbjdydzFzZXA3

ಇದನ್ನೂ ಓದಿ: Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

ಇಬ್ಬರಿಗೆ ಮಾತ್ರ ʻಬಾಸ್‌ʼ ಎಂದು ಕರೆಯುವೆ ಎಂದ ಕಿಚ್ಚ; ಯಾರವರು?

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ತಾವು ಬಾಸ್‌ ಎಂದು ಯಾರಿಗೆ ಕರೆಯುತ್ತೇನೆ ಎಂದು ಹೇಳಿಕೊಂಡಿರುವ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.

ʻಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಸಮರ್ಜಿತ್ ಲಂಕೇಶ್ ಅವರು ಕಿಚ್ಚ ಸುದೀಪ್‌ ಅವರಿಗೆ ಸಂದರ್ಶನ ಮಾಡಿದ್ದರು. ಈ ವೇಳೆ ನಿಮ್ಮ ನೆಚ್ಚಿನ ನಾಯಕ ಯಾರೆಂದು ? ಪ್ರಶ್ನೆ ಇಟ್ಟರು. ಆಗ ಸುದೀಪ್‌ ಮಾತನಾಡಿ ʻʻನನಗೆ ವಿಷ್ಣುವರ್ಧನ್‌ ಅವರು ತುಂಬ ಇಷ್ಟ. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ.  ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್. ಹಾಗೇ ನನ್ನ ತಂದೆ ಕೂಡ. ಇವರಿಬ್ಬರಿಗೆ ನಾನು ಬಾಸ್‌ ಎಂದು ಕರೆಯುವುದುʼʼ ಎಂದಿದ್ದಾರೆ.

ಇನ್ನು ಸುದೀಪ್‌ ಅವರು ಮುಂದಿನ ಸಿನಿಮಾದ ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ . ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ &ಗ್ಯಾಂಗ್‌ಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ; ಕಾರಣಗಳು ಹೀಗಿವೆ!

Actor Darshan: ಹಾಗೇ ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ.

VISTARANEWS.COM


on

Actor Darshan Judicial Custody Extended Till Aug 1
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ (Actor Darshan) ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಮನೆ ಊಟ, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್​ಗೆ ಜುಲೈ 19 ರಂದು ರಿಟ್ ಅರ್ಜಿ ಸಲ್ಲಿಸಿದ್ದರು. ಅಂದರೆ ಜುಲೈ 18ಕ್ಕೆ ಮುಂದೂಡಿತ್ತು. ಆದರೆ ಈಗ ರಿಟ್ ಅರ್ಜಿಯ ವಿಚಾರಣೆಯನ್ನು ಜುಲೈ 19 ಅಂದರೆ ನಾಳೆಗೆ ಮುಂದೂಡಲಾಗಿದೆ. ಹಾಗೇ ಆಗಸ್ಟ್ 1 ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ವಿಶ್ವನಾಥ‌ ಸಿ ಗೌಡರ್ ಆದೇಶವಾಗಿದೆ.

ದರ್ಶನ್ & ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆಗೆ 13 ಕಾರಣ ನೀಡಿದ ಪೊಲೀಸರು.

1) ಪ್ರಕರಣದ ಎ1 ರಿಂದ ಎ17 ಆರೋಪಿಗಳು ಅಪಹರಣ, ಕೊಲೆ, ಒಳ ಸಂಚು, ಮತ್ತು ಸಾಕ್ಷಿನಾಶಪಡಿಸಿದಂತ ಒಂದು ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಇದುವರೆಗೂ ಸಂಗ್ರಹಿಸಿದ ಪ್ರತ್ಯಕ್ಷ ಸಾಕ್ಷಿದಾರರ ಹೇಳಿಕೆ, ತಾಂತ್ರಿಕ ಮತ್ತು ಸಾಕ್ಷಾಧಾರಗಳಿಂದ ದೃಢಪಟ್ಟಿರುತ್ತದೆ.

2) ಪ್ರಕರಣದಲ್ಲಿ ಈವರೆಗೆ 83,65,500/- ರೂಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು ಸದರಿ ಹಣವನ್ನು ಆರೋಪಿಗಳಿಗೆ ನೀಡಿರುವ ಕೆಲವು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಂಡಿರುತ್ತದೆ, ಮುಂದುವರೆದು ಆರೋಪಿಗಳಿಗೆ ಹಣ ನೀಡಿದ ಇನ್ನು ಕೆಲವರನ್ನು ವಿಚಾರಣೆ ಮಾಡಿ ಹೇಳಿಕೆ ಪಡೆದುಕೊಳ್ಳುವುದು ಹಾಗೂ ಹಾಗೂ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.

3) ಪ್ರಕರಣದ ತನಿಖಾ ಕಾಲದಲ್ಲಿ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ವಾಹನಗಳ ಪೈಕಿ ಕೆಲವು ವಾಹನಗಳು ಬೇರೆ ಬೇರೆಯವರ ಹೆಸರಿನಲ್ಲಿದ್ದು ಸದರಿ ವಾಹನದ ಆರ್‌ಸಿ ಮಾಲೀಕರನ್ನು ಪತ್ತೆ ಮಾಡಿ ಹೇಳಿಕೆ ದಾಖಲಿಸಿಕೊಳ್ಳಬೇಕಾಗಿರುತ್ತದೆ.

4) ಎಲ್ಲಾ ಎ1 ರಿಂದ ಎ17 ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ವೆಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ ಮತ್ತು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

5) ಪ್ರಕರಣದ ಎ-13 ಆರೋಪಿಯ ವರ್ತಮಾನದ ಮೇರೆಗೆ ಅಮಾನತ್ತುಪಡಿಸಿಕೊಂಡ ಹೊಂಡಾ ಡಿಯೋ ಕೆ.ಎ- 51, ಹೆಚ್‌ಡಿ-9022 ಈ ವಾಹನವು ಕಳುವಾಗಿರುವ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿದ್ದು ಈ ಬಗ್ಗೆ ಸದರಿ ಪೊಲೀಸ್ ಠಾಣೆಯಿಂದ ದಾಖಲಾತಿಗಳನ್ನು ಸಂಗ್ರಹಿಸಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗಿರುತ್ತದೆ

ಇದನ್ನೂ ಓದಿ: Actor Darshan: ಇಂದು ಜಡ್ಜ್​ ಮುಂದೆ ದರ್ಶನ್ & ಟೀಂ ಹಾಜರು; ಜೈಲುವಾಸ ಮುಕ್ತಾಯವಾಗುತ್ತಾ?

6) ಆರೋಪಿಗಳ ಪೈಕಿ ಕೆಲವು ಆರೋಪಿಗಳು ಕೃತ್ಯಕ್ಕೆ ಬಳಸಿಕೊಂಡಿದ್ದ ಮೊಬೈಲ್ ಸಿಮ್ ಗಳನ್ನು ಬೇರೆಯವರ ಹೆಸರಿನಲ್ಲಿ ಖರೀದಿ ಮಾಡಿ ಉಪಯೋಗಿಸಿರುವುದು ತನಿಖೆಯಲ್ಲಿ ದೃಡಪಟ್ಟಿದ್ದು, ಸದರಿ ಸಿಮ್ಗಳು ನೊಂದಣಿಯಾದ ವ್ಯಕ್ತಿಗಳ ಮಾಹಿತಿಯನ್ನು ಸಂಗ್ರಹಿಸಿ ಹೇಳಿಕೆ ದಾಖಲಿಸಿದ್ದು ಇನ್ನು ಕೆಲವು ಸಿಮ್ ಖರೀದಿದಾರರ ವಿಳಾಸವನ್ನು ಪತ್ತೆ ದಾಖಲಿಸಿಕೊಳ್ಳಬೇಕಾಗಿರುತ್ತದೆ. ಮಾಡಿ ಅವರುಗಳನ್ನು ಮಾಡಿ ವಿಚಾರಣೆ ಹೇಳಿಕೆ.

7) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ತಜ್ಞರ ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

8) ಪ್ರಕರಣದಲ್ಲಿ ಅಮಾನತ್ತುಪಡಿಸಿಕೊಂಡ ಆರೋಪಿಗಳಿಗೆ ಸಂಬಂಧಿಸಿದ ಮೊಬೈಲ್‌ಗಳನ್ನು ಹಾಗೂ ಸಾಕ್ಷಿದಾರರಿಂದ ಅಮಾನತ್ತುಪಡಿಸಿಕೊಂಡ ಮೊಬೈಲ್ ಪೋನ್‌ಗಳಲ್ಲಿನ ಪ್ರಕರಣಕ್ಕೆ ಪೂರಕವಾದ ದತ್ತಾಂಶವನ್ನು ಸಂಗ್ರಹಿಸಲು ಮತ್ತು ದತ್ತಾಂಶದ ಅಸಲುತನದ ಪರೀಕ್ಷೆಗಾಗಿ ಸಿ.ಎಫ್.ಎಸ್.ಎಲ್ ಹೈದ್ರಾಬಾದ್‌ಗೆ ಕಳುಹಿಸಿಕೊಟ್ಟಿದ್ದು ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

9) ಪ್ರಕರಣದಲ್ಲಿ ಅಮಾನತ್ತುಪಡಿಸಿಕೊಂಡಿರುವ ಡಿ.ವಿ.ಆರ್‌ಗಳಲ್ಲಿನ ದತ್ತಾಂಶದ ರಿಟ್ರಿವ್ ಕಾರ್ಯವು ಸಿಐಡಿ ಅಧಿಕಾರಿಗಳ ಬಳಿ ಇನ್ನು ಪ್ರಗತಿಯಲ್ಲಿರುತ್ತದೆ, ಡಿವಿಆರ್‌ನಲ್ಲಿನ ದತ್ತಾಂಶವನ್ನು ಸಂಗ್ರಹಿಸಿದ ನಂತರ ಪರಿಶೀಲನೆ ಮಾಡಿ ಆರೋಪಿಗಗಳು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳನ್ನು ಸಂಗ್ರಹಿಸಿ ಎಫ್.ಎಸ್.ಎಲ್‌ಗೆ ಕಳುಹಿಸಿ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ.

10) ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಮೊದಲು ಹಾಗೂ ಕೃತ್ಯದ ಸಮಯದಲ್ಲಿ ಹಾಗೂ ಕೃತ್ಯದ ನಂತರ ಹಲವಾರು ವ್ಯಕ್ತಿಗಳನ್ನು ಸಂಪರ್ಕಿಸಿದ್ದು ಅವರ ಪೈಕಿ ಕೆಲವಾರು ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು, ಇನ್ನು ಹಲವು ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ಸಾಕ್ಷ್ಯ ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ.

11) ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷಿದಾರರುಗಳನ್ನು ವಿಚಾರಣೆ ಮಾಡಿ ಹೇಳಿಕೆಗಳನ್ನು ಹಾಗೂ ಕಲಂ 164 ಅಡಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದ್ದು ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ಪ್ರಕರಣದ ಸಾಕ್ಷಿದಾರರಿಗೆ ಹೇಳಿಕೆ ನೀಡದಂತೆ ನೇರವಾಗಿ ಮತ್ತು ಅವರ ಸಹಚರರ ಮೂಲಕ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾದ್ಯತೆ ಹೆಚ್ಚಾಗಿರುತ್ತದೆ. ಅಲ್ಲದೇ ಸಾಕ್ಷಿದಾರರಿಗೆ ಬೆದರಿಕೆ ಹಾಕಿರುವ ಬಗ್ಗೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ನಂ-315/2024 ರೀತ್ಯ ದೂರು ದಾಖಲಾಗಿರುತ್ತದೆ

12) ಪ್ರಕರಣದ ಆರೋಪಿಗಳು ಪ್ರಭಾವಿಗಳು ಹಾಗೂ ಹಣಬಲ ಮತ್ತು ಅಭಿಮಾನಿ ಬಳಗವನ್ನು ಹೊಂದಿದ್ದು ಪ್ರಕರಣದಲ್ಲಿ ಇನ್ನೂ ಹಲವಾರು ಪ್ರತ್ಯಕ್ಷ ಹಾಗೂ ಪರೋಕ್ಷ ಸಾಕ್ಷ್ಯಗಳನ್ನು ಸಂಗ್ರಹಿಸಬೇಕಾಗಿರುತ್ತದೆ. ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದ್ದಲ್ಲಿ ತಮ್ಮ ಪ್ರಭಾವಗಳನ್ನು ಬಳಸಿ ಪ್ರಕರಣದ ಸಾಕ್ಷಿದಾರರುಗಳಿಗೆ ಸಾಕ್ಷಿ ನುಡಿಯದಂತೆ ಬೆದರಿಕೆ ಹಾಕುವ ಮತ್ತು ವ್ಯವಸ್ಥಿತ ರೀತಿಯನ್ನು ಸಾಕ್ಷ್ಯನಾಶ ಪಡಿಸುವ ಸಾದ್ಯತೆಗಳು ಹೆಚ್ಚಾಗಿರುತ್ತದೆ.

13) ಪ್ರಕರಣವು ಹಾಲಿ ತನಿಖೆಯಲ್ಲಿದ್ದು ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಕೃತ್ಯದಲ್ಲಿನ ಅವರ ಸಂಪೂರ್ಣ ಪಾತ್ರದ ಬಗ್ಗೆ ಹೆಚ್ಚಿನ ವಿಷಯಗಳನ್ನು ತಿಳಿಯಬೇಕಾಗಿದ್ದು ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ.

ಈ ಮೇಲ್ಕಂಡ ಎಲ್ಲಾ ಕಾರಣಗಳಿಂದ ಎ1 ರಿಂದ ಎ17 ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡದೇ ನ್ಯಾಯಾಂಗ ಬಂಧನ ಮುಂದುವರಿಸುವಂತೆ ಮನವಿ.

Continue Reading
Advertisement
Martin' movie delayed even after 3 years
ಸ್ಯಾಂಡಲ್ ವುಡ್12 mins ago

Dhruva Sarja: 3 ವರ್ಷವಾದರೂ ʻಮಾರ್ಟಿನ್‌ʼ ಸಿನಿಮಾ ರಿಲೀಸ್‌ ಆಗಲು ತಡವಾಗಿದ್ದೇಕೆ? ನಿರ್ಮಾಪಕರಿಗೆ ಮೋಸ ಮಾಡಿದ್ಯಾರು?

lokayukta raid akhtar ali
ಪ್ರಮುಖ ಸುದ್ದಿ36 mins ago

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Microsoft Global Outage
ದೇಶ58 mins ago

Microsoft Global Outage: ವಿಶ್ವಾದ್ಯಂತ ನೆಲಕಚ್ಚಿದ ಮೈಕ್ರೋಸಾಫ್ಟ್‌; ವಿಂಡೋಸ್‌ನಲ್ಲಿ ತಾಂತ್ರಿಕ ದೋಷ

Electric Shock
ದಕ್ಷಿಣ ಕನ್ನಡ1 hour ago

Electric shock : ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ, ವೃದ್ಧ ಸೇರಿ ಶ್ವಾನಗಳು ಸಾವು

DK Shivakumar
ಕರ್ನಾಟಕ1 hour ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ1 hour ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ2 hours ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ2 hours ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ2 hours ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ22 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ24 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌